AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮಾರ್ಚ್​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Mar 09, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಶಿವ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:44  ರಿಂದ 11:14 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:42 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:15 ರಿಂದ 08:15ರ ವರೆಗೆ.

ಮೇಷ ರಾಶಿ: ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಯೋಚಿಸಿ. ಕೌಟುಂಬಿಕ ವಲಯದಲ್ಲಿ ನಿಮ್ಮ ಬಗ್ಗೆ ಆದರ ಇರುವುದು. ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ನಿಮ್ಮ ಅನನುಕೂಲತೆಯನ್ನು ಯಾರ ಬಳಿಯೂ ಹೇಳಲಾರಿರಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ನಿಮ್ಮ ಮನಸೋ ಇಚ್ಛೆ ವರ್ತನೆಯು ಇತರಿಗೆ ಕಷ್ಟವಾಗುವುದು.

ವೃಷಭ ರಾಶಿ: ನೀವು ಶತ್ರುಗಳನ್ನು ಹೆಲ್ಲುವ ತಂತ್ರವನ್ನು ಮಾಡಬೇಕಾಗುವುದು. ಉದ್ಯೋಗದ ಕಾರಣಕ್ಕೆ ಪ್ರಯಾಣ ಅನಿವರ್ಯ ಎನಿಸುವುದು. ಸಾಲವನ್ನು ಪಡೆದು ಅವರ ಜೊತೆ ವಾಗ್ವಾದವನ್ನು ಮಾಡುವುದು ಬೇಡ.‌ ಸುಂದರವಾದ ಸ್ಥಳಕ್ಕೆ ಹೋಗಬೇಕು ಎನಿಸುವುದು. ನೀವು ಹಾಳುಮಾಡಿಕೊಳ್ಳುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ನಿಮಗೆ ಬೇಕಾದುದನ್ನು ಪಡೆಯಲು ನಿಮಗೆ ಇಚ್ಛೆ ಇರುವುದು. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಅಪರಿಚಿತರ ಜೊತೆಗಿನ ಮಾತುಗಳು ನಿಮಗೆ ಹಿತವೆನಿಸುವುದು. ನಿಮ್ಮ ಮಿತಿಯಲ್ಲಿ ಉಳಿತಾಯ ಮಾಡುವಿರಿ.

ಮಿಥುನ ರಾಶಿ: ನಿಮ್ಮವರ ನಿಂದನೆಯನ್ನು ಸಹಿಸುವುದು ಕಷ್ಟವಾಗುವುದು. ಪಾಲುದಾರಿಕೆಯಲ್ಲಿ ಕುತೂಹಲವು ಹೆಚ್ಚಿರುವುದು. ಯಾವುದೇ ಉದ್ವೇಗಕ್ಕೆ ಒಳಗಾಗದೇ ಕಾರ್ಯವನ್ನು ನಿರ್ವಹಿಸಿ. ನಿಮ್ಮ ಬಗ್ಗೆ ಸ್ಪಷ್ಟತೆ ಇರಲಿ. ಉಸಿರಿಗೆ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಯಂತ್ರಗಳ ಬಳಕೆಯನ್ನು ನೀವು ಕಡಿಮೆ‌ ಮಾಡುವಿರಿ. ಒಂದೇ ವಿಚಾರಕ್ಕೆ ಮತ್ತೆ ಮತ್ತೆ ಬೇಸರಿಸುವ ಅವಶ್ಯಕತೆ ಇಲ್ಲ. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಅನಗತ್ಯ ಮಾತುಗಳಿಗಿಂತ ಮೌನವೇ ಲೇಸೆನಿಸಬಹುದು.

ಕಟಕ ರಾಶಿ: ನಿಮ್ಮ ಬಗ್ಗೆ ಯಾರಾದರೂ ಕುಹಕವಾಡುವುದು ನಿಮಗೆ ಬೇಸರ ತಂದೀತು. ಸಿಟ್ಟನ್ನು ವ್ಯಕ್ತಪಡಿಸದೇ ಸುಮ್ಮನಿರುವಿರಿ. ಯಾರಿಂದಲೋ ಆಗಬೇಕಾದ ಕೆಲಸವನ್ನು ನೀವು ಮಾಡಿಕೊಡಬೇಕಾಗುವುದು. ಎಲ್ಲದಕ್ಕೂ ಅದೃಷ್ಟವೊಂದೇ ಸಾಲದು. ನಿಮ್ಮ ಶ್ರಮವೂ ಅಗತ್ಯ. ಭೂಮಿಯನ್ನು ಖರೀದಿಯನ್ನು ಸದ್ಯಕ್ಕೆ ಕೈಬಿಡಿ.‌ ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ಹೊಸ ಯಂತ್ರಗಳನ್ನು ಸ್ವೀಕರಿಸುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ನಿಮ್ಮನ್ನು ಅವಲಂಬಿಸಿದವರಿಗೆ ಕಷ್ಟ ಕೊಡುವಿರಿ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು.

ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ