Astrology: ರಾಶಿ ಭವಿಷ್ಯ: ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 23, 2024 | 12:30 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.23 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Astrology: ರಾಶಿ ಭವಿಷ್ಯ: ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು
ದಿನಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ(ಜೂನ್. 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಬ್ರಹ್ಮ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಸಂಜೆ 05:26 ರಿಂದ 07:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:35 ರಿಂದ 02:12ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:49 ರಿಂದ ಸಂಜೆ 05:26ರ ವರೆಗೆ.

ಸಿಂಹ ರಾಶಿ : ನೀವು ಅಪವಾದಗಳನ್ನು ಕೇಳುವ ಸ್ಥಿತಿ ಬರಬಹುದು. ಜಾಗರೂಕರಾಗಿ ಇರಿ. ಸಾಲವನ್ನು ಕೊಟ್ಟವರು ಇಂದು ಪೀಡಿಸಲಿದ್ದಾರೆ. ವ್ಯವಸ್ಥಾಪಕರಾಗಿದ್ದರೆ ನಿಮ್ಮ ಕೆಲಸವು ಮೇಲಧಿಕಾರಿಗಳಿಗೆ ಸಂತಸ ನೀಡುವುದು. ನಿಮ್ಮ ಮಕ್ಕಳಿಗೆ ಉಪದೇಶವನ್ನು ಮಾಡಲಿದ್ದೀರಿ. ಭವಿಷ್ಯದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವಿರಿ. ಆಸ್ತಿಯನ್ನು ಮಾರುವ ಆಲೋಚನೆ ಬರಲಿದೆ. ಕುಟುಂಬದ ಮದುವೆಗೆ ಸಿದ್ಧತೆಗಳನ್ನು ಪ್ರಾರಂಭಿಸುವಿರಿ. ನಿಮ್ಮ ಜೀವನಸಂಗಾತಿಗಾಗಿ ನೀವು ಸೌಮ್ಯಸ್ವಭಾವದವರು ಆಗಬೇಕಾಗಿಬರಬಹುದು. ಗೆಳೆಯರಿಗೆ ಅನೇಕ ದಿನಗಳ ಅನಂತರ ಸಮಯವನ್ನು ಕೊಡುವಿರಿ. ಸುಳ್ಳು ಅತಿಯಾಗಬಹುದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ನಿಮ್ಮ ಸುರಕ್ಷಿತ ತಾಣವನ್ನು ನೀವೇ ಆರಿಸಿಕೊಳ್ಳಿ. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು.

ಕನ್ಯಾ ರಾಶಿ : ಇಂದು ನಿಮ್ಮ ಸಹಾಯಕರೇ ನಿಮಗೆ ತೊಂದರೆ ಕೊಟ್ಟಾರು. ಕಲಹವನ್ನು ಮಾಡಿಕೊಳ್ಳಲಿದ್ದೀರಿ. ಚೆನ್ನಾಗಿ ಮಾತನಾಡುತ್ತೇನೆಂದು ಏನನ್ನಾದರೂ ಹೇಳಿ ಬೇರೆಯವರಿಗೆ ನೋವನ್ನು ಕೊಡಬೇಡಿ. ಉದ್ಯೋಗವು ಸಾಕೆನಸುವಷ್ಟು ಕಳೆಗುಂದಿದೆ. ಒಂದೇ ರೀತಿಯ ಕೆಲಸಕ್ಕೆ ತನಗೆ ಇಷ್ಟವಾದುದಲ್ಲ ಎಂದು ಅನ್ನಿಸಬಹುದು. ಕಛೇರಿಯಲ್ಲಿ ನಿಮ್ಮ ನಾಯಕನ ಜೊತೆಗೆ ನೀವು ಉತ್ತಮ ಬಾಂಧವ್ಯವನ್ನು ಹೊಂದಿರುತ್ತೀರಿ. ಮಹಿಳಾ ಸ್ನೇಹಿತರು ನಿಮಗೆ ಬೇಕಾದ ಸಹಾಯವನ್ನು ಮಾಡುವರು. ಅಂದುಕೊಂಡ ಮಾತ್ರಕ್ಕೆ ಎಲ್ಲ ಕಾರ್ಯವೂ ಆಗದು. ನಿಮ್ಮ ಆದಾಯವನ್ನು ಹೇಳಿಕೊಳ್ಳಲು ಹೋಗಬೇಡಿ. ನಿಮಗೇ ತೊಂದರೆಯಾದೀತು. ಹೊಸ ವ್ಯವಹಾರವನ್ನು ಪ್ರಾರಂಭಿಸಿವರು ಉತ್ಸಾಹದ ಕಾರಣ ಉತ್ತಮ ಲಾಭವನ್ನು ಪಡೆಯಬಹುದು. ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ.

ತುಲಾ ರಾಶಿ : ಇಂದು ನಿಮಗೆ ನಿಮ್ಮವರುಲೇ ಬಯಸದೇ ಇದ್ದರೂ ಸಹಾಯ ಮಾಡುವವರಿದ್ದಾರೆ. ಕಛೇರಿಯ ಕಾರ್ಯಕ್ಕೆಂದು ದೂರದ ಊರಿಗೆ ಹೋಗುವವರಿದ್ದೀರಿ‌. ವಾಹನದಿಂದ ತೊಂದರೆ ಇರಲಿದೆ. ಸ್ನೇಹಿತರು ಮಾಡಿದ ಕೆಟ್ಟ ಕೆಲಸದಿಂದ ನಿಮಗೆ ಕಂಟಕವು ಬರಬಹುದು. ಸಂಪತ್ತನ್ನು ಇಂದು ಕಳೆದುಕೊಳ್ಳುವಿರಿ. ಇಷ್ಟು ದಿನ‌ ಆಗಮನ ಮಾತ್ರ ಆಗಿತ್ತು.‌ ಇನ್ನು ಧನಗಮನವೇ ಹೆಚ್ಚಾಗುವುದು. ನಿಮ್ಮ ಆಲೋಚನೆಗಳಿಗೆ ಚೌಕಟ್ಟಿರಲಿ. ವ್ಯಾಪಾರಸ್ಥರಾಗಿದ್ದರೆ ಇಂದು ಕಲಹವೂ ಆಗಬಹುದು. ನಿಮ್ಮ ದುಃಖವು ಅಲ್ಪ ಸಮಯದಲ್ಲಿ ದೂರವಾಗಲಿದೆ. ಏನಾಗುತ್ತಿದೆ ಎಂಬ ಯಾವ ಸೂಚನೆಯೂ ನಿಮಗೆ ಸಿಗದಾಗುವುದು. ವ್ಯಾಪಾರವನ್ನು ಮುಚ್ಚಬೇಕು ಎನ್ನುವ ಸ್ಥಿತಿಯವರೆಗೆ ಹೋಗಬಹುದು. ಆಪ್ತರಾದ ಮಾತ್ರಕ್ಕೆ ಎಲ್ಲವನ್ನೂ ಸರಿಯಾಗಿ ಹೇಳುತ್ತಾರೆ ಎಂದಿಲ್ಲ. ತಂದೆಯ ಆಸೆಯನ್ನು ಪೂರ್ಣ ಮಾಡಿ, ಅವರಿಗೆ ಖುಷಿಯನ್ನು ಕೊಡುವಿರಿ.

ವೃಶ್ಚಿಕ ರಾಶಿ : ಇಂದು ನಿಮ್ಮ ಜೊತೆಗಾರರ ನಿಧಾನಗತಿಯ ಕೆಲಸವು ನಿಮ್ಮ ಮನಃಸ್ಥಿತಿಗೆ ಹೊಂದದಿರಬಹುದು. ಕಾರಣಾಂತರಗಳಿಂದ ಖರ್ಚು ಹೆಚ್ಚಾಗಬಹುದು. ಹಿತಶತ್ರುಗಳು ಕತ್ತಿಯನ್ನು ಮಸೆಯುತ್ತಲೇ ಇದ್ದಾರು. ನಿಮ್ಮವರ ಬಗ್ಗೆ ನೀವೆಲ್ಲೇ ಇದ್ದರೂ ಸಂತೋಷದ ಸುದ್ದಿಯು ಬರಲಿದೆ. ಯಾರ ಬಗ್ಗೆಯೂ ಅಸೂಯೆಪಡಬೇಕಾದ ಅವಶ್ಯಕತೆ ಇಲ್ಲ. ಮಕ್ಕಳ ಯಶಸ್ಸಿನಿಂದ ನೀವು ನಿಮ್ಮಲ್ಲಿ ಉತ್ಸಾಹವು ಅಧಿಕವಾಗುವುದು. ಹೊಸ ಯೋಜನೆಗಳು ನಿಮ್ಮನರಿಸಿ ಬರಲಿವೆ. ದಾಂಪತ್ಯದಲ್ಲಿ ಕಿರಿಕಿರಿಯ ಅನುಭವವಾದರೆ ತಟಸ್ಥರಾಗಿ. ಎಲ್ಲವೂ ತಾನಾಗಿಯೇ ತಿಳಿದು ಬರುತ್ತದೆ. ಪೂರ್ವಾಪರ ಯೋಚನೆ ಇಲ್ಲದೇ ಮಾತನಾಡಿ ಸಂಬಂಧವನ್ನು ಹಾಳುಮಾಡಿಕೊಳ್ಳಬೇಡಿ. ಸಂಶೋಧನೆಯ ವಿದ್ಯಾರ್ಥಿಗಳಿಗೆ ಹೊಸ ದಿಕ್ಕು ಸಿಗಲಿದೆ.