Horoscope: ದಿನ ಭವಿಷ್ಯ; ದಾಂಪತ್ಯದಲ್ಲಿ ಶಾಂತಿ ಬೇಕಾದರೆ ಸುಮ್ಮನಿರುವುದು ಉತ್ತಮ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 18 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದಶಮೀ, ನಿತ್ಯನಕ್ಷತ್ರ: ಮಘಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:18 ರಿಂದ 07:52 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:25 ರಿಂದ ಮಧ್ಯಾಹ್ನ 10:59ರ ವರೆಗೆ.
ಸಿಂಹ ರಾಶಿ : ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವಿರಿ. ಸಮಯ ಮುಂದುವರೆದಂತೆ ನಿಮ್ಮ ಆಲೋಚನೆಗಳನ್ನು ಅಳವಡಿಸಿಕೊಳ್ಳುವುದು ಯಶಸ್ಸಿಗೆ ಕಾರಣವಾಗುತ್ತದೆ. ಹಿರಿಯರ ಮಾತು ನಿಮ್ಮ ದೃಷ್ಟಿಯನ್ನು ಬದಲಿಸುವುದು. ಸ್ನೇಹಿತರಿಂದ ಬಾಲಿಶ ಸಲಹೆ ಪಡೆಯುವುದನ್ನು ತಪ್ಪಿಸಬೇಕು. ಇದು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ದಾರಿ ಮಾಡಿಕೊಡುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದೊರೆಯಬಹುದು. ಆಪ್ತರ ಬಗ್ಗೆ ನಿಮಗೆ ಹಲವು ಅನುಮಾನಗಳು ಇರಬಹುದು. ಕಛೇರಿಯ ಕಿರಿಕಿರಿಯಿಂದ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು. ಖುಷಿಯ ವಾತಾವರಣವಿದ್ದರೂ ನಿಮಗೆ ನಿಮ್ಮದೇ ಚಿಂತೆ ಕಾಡಬಹುದು. ಬಹಳ ದಿನಗಳ ಅನಂತರ ಪುಣ್ಯ ಸ್ಥಳಗಳಿಗೆ ಹೋಗುವಿರಿ. ಮನಸ್ಸು ಇಂದು ಒಂದೆಡೆ ಕುಳಿತುಕೊಳ್ಳಲು ಬಿಡದು.
ಕನ್ಯಾ ರಾಶಿ : ಖರೀದಿಯ ವ್ಯವಹಾರವನ್ನು ಗೌಪ್ಯವಾಗಿ ಮಾಡುವುದು ಬೇಡ. ಅನಂತರ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಬಿಡುವಿನ ವೇಳೆಯನ್ನು ಸ್ವಯಂಸೇವಕರಾಗಿ ಅಥವಾ ಇತರರಿಗೆ ಸಹಾಯ ಮಾಡಲು ಕಳೆಯಿರಿ. ಬಹಳ ದಿನಗಳ ಅನಂತರ ಹಳೆಯ ಬಂಧುಗಳ ಭೇಟಿಯಾಗುವಿರಿ. ಗೌಪ್ಯ ವಿಷಯಗಳನ್ನು ನಿಮ್ಮ ಸಂಗಾತಿಯಿಂದ ಹಂಚಿಕೊಳ್ಳುವಿರಿ. ಸ್ತ್ರೀಯರಿಗೆ ತಾಳ್ಮೆಯ ಪರೀಕ್ಷೆ ಆಗಬಹುದು. ಮನೆಯ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಸಹೋದರಿಯರ ನಡುವೆ ಕಲಹವಾಗಬಹುದು. ಅಮೂಲ್ಯವಾದ ವಸ್ತುಗಳನ್ನು ನಷ್ಟ ಮಾಡಿಕೊಳ್ಳುವ ಸಾಧ್ಯತೆ ಇದೆ. ಬಂಧುಗಳ ಆರೋಪವನ್ನು ನೀವು ನಿರಾಕರಿಸುವಿರಿ. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ಸ್ತ್ರೀಯರ ವಿಚಾರದಲ್ಲಿ ಅಧಿಕ ದುರ್ಬಲರಾಗುವಿರಿ. ಕೆಲಸವಾಗಲು ಮತ್ಯಾರನ್ನೋ ಖುಷಿಪಡಿಸುವಿರಿ.
ತುಲಾ ರಾಶಿ : ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಕಸಿದುಕೊಳ್ಳಬಹುದು. ವಾಹನದ ಖರೀಗೆ ಸಾಲ ಮಾಡಬೇಕಾಗುವುದು. ಮಕ್ಕಳಿಗೆ ಹೆಚ್ಚಿನ ಗಮನವನ್ನು ಕೊಡಬೇಕಾಗುವುದು. ಜಾಗರೂಕತೆಯ ನೆಪದಲ್ಲಿ ಅವರ ಸ್ವಾತಂತ್ರ್ಯಕ್ಕೆ ತೊಂದರೆ ಆದೀತು. ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಬಹುದು. ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ನಿಮ್ಮ ಸ್ವಭಾವಕ್ಕೆ ಯೋಗ್ಯವಾದ ವ್ಯಕ್ತಿಯ ಗೆಳೆತನವಾಗಲಿದೆ. ಪ್ರೇಮವನ್ನು ನಿಭಾಯಿಸಲಾಗದು. ಇಷ್ಟಪಟ್ಟ ವಸ್ತುವನ್ನು ಪಡೆಯಲು ಹಣದ ಅಭಾವವು ಕಾಣಿಸಬಹುದು.
ವೃಶ್ಚಿಕ ರಾಶಿ : ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ಸಿಗಲಿದೆ. ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ. ಹಠಾತ್ ಹೂಡಿಕೆ ನಿರ್ಧಾರಗಳನ್ನು ತಪ್ಪಿಸಿ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಿರಿ. ಹೆಚ್ಚು ಹಸಿವಿನಂದ ಕಷ್ಟವಾಗುವುದು. ನೀವು ಹೊಸತನ್ನು ಒಮ್ಮನಸ್ಸಿನಿಂದ ಒಪ್ಪಿಕೊಳ್ಳಲಾರಿರಿ. ಸಹೋದರ ಸಹೋದರಿಯರ ಜೊತೆ ಆಸ್ತಿಯ ವಿಷಯಕ್ಕೆ ಸಂಬಂಧಿಸಿದಂತೆ ಜಗಳಗಳು ಆಗಬಹುದು. ಹೊಸ ಉದ್ಯೋಗವನ್ನು ಹುಡುಕುವವರಿಗೆ ಹೆಚ್ಚು ಗೊಂದಲವಾಗಬಹುದು. ಇಂದು ಒಂದು ಮಿತಿಯಲ್ಲಿ ನಿಮ್ಮ ಮಾತಿರಲಿ. ತಾಯಿಯ ವಿಚಾರದಲ್ಲಿ ಕೋಪಗೊಳ್ಳುವಿರಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು. ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರುವಿರಿ.