Horoscope: ರಾಶಿ ಭವಿಷ್ಯ; ಕಠಿಣ ಪರಿಶ್ರಮವು ಕೆಲಸಕ್ಕೆ ಬಾರದು, ಯುಕ್ತಿಯಿಂದ ಸಾಧಿಸಿ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಸುಕರ್ಮಾ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಸಂಜೆ 05:16 ರಿಂದ 08:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:29 ರಿಂದ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ.
ಸಿಂಹ ರಾಶಿ: ನೌಕರರು ಇಂದು ದುಡುಕಿ ಸಿಕ್ಕ ಕೆಲಸವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಪ್ರತಿಯೊಬ್ಬರೂ ನಿಮ್ಮ ಕೆಲಸವನ್ನು ಪ್ರಶಂಸಿಸಲು ಎಂದಿಗೂ ಆಯಾಸಗೊಳ್ಳುವುದಿಲ್ಲ. ಸಾಮಾಜಿಕ ಮತ್ತು ರಾಜಕೀಯ ಮಟ್ಟದಲ್ಲಿ ನಿಮ್ಮ ಕೆಲಸವು ನಿಮ್ಮನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ನಿಯಮಿತ ಆಹಾರದಿಂದ ನಿಮಗೆ ಸೌಖ್ಯವು ಸಿಗಬಹುದು. ನೂತನ ವಾಹನದಿಂದ ಅಹ್ಲಾದಕರವಾಗಿ ಇರುವಿರಿ. ಸಂಗಾತಿಯ ಸಣ್ಣ ಮಾತೂ ನಿಮಗೆ ದೋಷವಾಗಿ ಕಾಣಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಎರಡು ದೋಣಿಯ ಮೇಲೆ ಕಾಲಿಟ್ಟು ಅತಂತ್ರವಾಗುವುದು ಬೇಡ. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ಕೃತಜ್ಞತೆಯನ್ನು ಇಟ್ಟುಕೊಳ್ಳುವುದು ಕಷ್ಟವಾದೀತು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ.
ಕನ್ಯಾ ರಾಶಿ: ವ್ಯಾಪಾರಕ್ಕೆ ಸಂಬಂಧಿಸಿದ ಹೂಡಿಕೆಯನ್ನು ಹೆಚ್ಚು ಮಾಡುವಿರಿ. ಉದ್ಯೋಗಸ್ಥರಿಗೆ ಆತುರ ಮತ್ತು ಅತಿಯಾದ ಆತ್ಮವಿಶ್ವಾಸ ಎರಡೂ ನಿಮಗೆ ಅಪಾಯಕಾರಿ. ನಿಮ್ಮ ಅಹಂಕಾರವೇ ಸೋಲಿಗೆ ಕಾರಣವಾಗುವುದು. ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯ ನಿರ್ಮಾಣಕ್ಕೆ ತಡೆ ಬಂದೀತು. ನಿಮ್ಮ ಮಾತುಗಳು ಪಾಲನೆಯಗದೇ ಇರಬಹುದು. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳುವುದು ಕಷ್ಟವಾಗಬಹುದು. ಸಮೀಪದಲ್ಲಿ ಇರುವವರನ್ನು ನಿಮ್ಮ ಕೆಲಸಕ್ಕೆ ಬಳಸಿಕೊಳ್ಳುವಿರಿ.
ತುಲಾ ರಾಶಿ: ಹಲವು ರೀತಿಯ ಒತ್ತಡದಿಂದ ನೀವು ಕೆಲಸದ ಬದಲಾವಣೆಯನ್ನು ಬಯಸುವಿರಿ. ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ. ಕುಟುಂಬ ಮತ್ತು ಸ್ನೇಹಿತರ ಜೊತೆ ಸಮಯ ಕಳೆಯಿರಿ. ಪ್ರೀತಿ ಮತ್ತು ನಗುವಿನ ಕ್ಷಣಗಳು ಹಿಂದಿನ ತೊಂದರೆಗಳನ್ನು ಮರೆಯಲು ಸಹಾಯ ಮಾಡುತ್ತದೆ. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವ್ಯಾಪಾರದಲ್ಲಿ ನಿಮ್ಮ ಮಾರ್ಗವು ಭಿನ್ನವಾಗಿರುವುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ನಿಮ್ಮ ಎಲ್ಲ ಕಾರ್ಯಗಳನ್ನೂ ಮುಂದೂಡಿ ಮನೆಯಲ್ಲಿಯೇ ಇರುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ಆತಂಕದಿಂದ ನೀವು ಮುಕ್ತರಾಗಲು ಬಯಸುವಿರಿ. ಯಾರ ಜೊತೆಗೂ ಮಾತನಾಡುವ ಮನಃಸ್ಥಿತಿ ಇರದು.
ವೃಶ್ಚಿಕ ರಾಶಿ: ಕಠಿಣ ಪರಿಶ್ರಮವು ಕೆಲಸಕ್ಕೆ ಬಾರದು. ಯುಕ್ತಿಯಿಂದ ಕಾರ್ಯವನ್ನು ನಿರ್ವಹಿಸಬೇಕಾಗವುದು. ಕೆಲಸದ ಸ್ಥಳದಲ್ಲಿ ಕೆಲವು ಬದಲಾವಣೆಗಳು ನಿಮ್ಮ ಕೆಲಸವನ್ನು ನಿಧಾನಗೊಳಿಸಬಹುದು. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಯಾರನ್ನೋ ಮೆಚ್ಚಿಸಲು ನೀವು ಸೋಲಬೇಕಾಗುವುದು. ಶತ್ರುಗಳಿಗೆ ನಿಮ್ಮ ಬಗ್ಗೆ ಸಹಾನುಭೂತಿ ಇರುವುದು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಅಸ್ವಾಭಾವಿಕ ಬೆಳವಣಿಗೆಯು ನಿಮಗೆ ಬೇಸರವನ್ನು ತರಿಸೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಪಕ್ಷಪಾತವನ್ನು ಬಿಟ್ಟು ಕಾರ್ಯವನ್ನು ಮಾಡಿ.




