
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಪರಿಘ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:14 ರಿಂದ ಮಧ್ಯಾಹ್ನ 12:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ ಸಂಜೆ 05:11ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:15 ರಿಂದ 09:45ರ ವರೆಗೆ.
ಸಿಂಹ ರಾಶಿ : ನಿಮ್ಮ ಸ್ವಂತಿಕೆಯನ್ನು ಗುರುತಿಸಿಕೊಳ್ಳಿ. ಅದನ್ನು ಬಿಟ್ಟು ವಿಚಲಿತರಾಗವುದು ಬೇಡ. ಪಾಲುದಾರಿಕೆಯನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುವಿರಿ. ನಿಮ್ಮ ಮೃದುಸ್ವಭಾವವು ಕೆಲವು ಕಡೆಗಳಲ್ಲಿ ಪ್ರಯೋಜನಕ್ಕೆ ಬಾರದು. ಪ್ರತ್ಯಕ್ಷವಾದ ವಿಚಾರವಾದರೂ ಪೂರ್ಣವಾಗಿ ನಂಬಬೇಕಿಲ್ಲ. ನೌಕರರ ಕಾರ್ಯವು ನಿಮಗೆ ಸಂತೋಷವನ್ನು ತರದು. ಪಾಲುದಾರಿಕೆಯಲ್ಲಿ ಅಸಹಜ ಮಾತುಕತೆಗಳು ಬರಬಹುದು. ಸಂಪೂರ್ಣವಾದ ಮನಸ್ಸಿನಿಂದ ಕಾರ್ಯವನ್ನು ಮಾಡಲಾಗದು. ಪ್ರತಿಷ್ಠಿತ ಸಂಸ್ಥೆಯ ಉನ್ನತ ಅಧಿಕಾರದ ಪ್ರಾಪ್ತಿಯ ಅವಕಾಶವು ಬರಬಹುದು. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಇರದು. ಕೆಲವು ವಿಚಾರದಲ್ಲಿ ನಿಮ್ಮ ಊಹೆಯು ತಪ್ಪಾದೀತು. ಯಾವುದನ್ನಾದರೂ ನಿಮಗೆ ಬೇಕಾದಷ್ಟು ಮಾತ್ರವೇ ಬಳಸಿಕೊಳ್ಳಿ. ಸಿಗದಿದ್ದುದರ ಬಗ್ಗೆ ಬೇಸರ ಬೇಡ. ಹೊಸ ಯೋಜನೆಯಲ್ಲಿ ನೀವು ಇಂದು ಹೆಚ್ಚು ಮಗ್ನರಾಗಿರುವಿರಿ.
ಕನ್ಯಾ ರಾಶಿ : ಇಂದು ನಿಮ್ಮ ಮಾತಿಗೆ ಪ್ರಶಂಸೆ ಸಿಗಬಹುದು. ಭವಿಷ್ಯದ ಬಗ್ಗೆ ಸರಿಯಾದ ನಿರ್ಧಾರವನ್ನು ಹಲವರ ಅಭಿಪ್ರಾಯದ ಮೂಲಕ ಪಡೆದುಕೊಳ್ಳುವಿರಿ. ನಿಮ್ಮ ಅಯುಸ್ಸು ವ್ಯರ್ಥವಾದಂತೆ ಅನ್ನಿಸೀತು. ಬಹಳ ದಿನದ ಬೇಸರವು ಕಡಿಮೆಯಾಗುವುದು. ಇಂದಿನ ಲಾಭವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಸುಮ್ಮನೇ ನಿಮ್ಮಷ್ಟಕ್ಕೆ ಇರಿ. ವಾಹನದ ಕಾರಣ ಕಲಹವಾಗುವುದು. ಆರೋಗ್ಯದಲ್ಲಿ ಸುಧಾರಣೆ ಇರಲಿದ್ದು ಕಾರ್ಯಕ್ಕೆ ತಯಾರಾಗುವಿರಿ. ಬೇಕಾದಷ್ಟು ಅನುಕೂಲತೆಗಳಿದ್ದರೂ ಬೇಕೆಂಬ ಆಸೆಯು ನಿಮ್ಮನ್ನು ಬಿಡದು. ಸಂಗಾರಿಯ ಮೇಲಿನ ಪ್ರೀತಿಯು ಕಡಿಮೆಯಾದಂತೆ ತೋರುವುದು. ಕೆಲವರಿಗೆ ಸೌಕರ್ಯಗಳು ಕಡಿಮೆಯಾದಂತೆ ಅನ್ನಿಸುವುದು. ಕಛೇರಿಯ ಕಾರ್ಯದ ನಿಮಿತ್ತ ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು. ಕುತರ್ಕವನ್ನು ಮಾಡಿ ಎಲ್ಲರಿಂದ ದೂರಾಗುವಿರಿ.
ತುಲಾ ರಾಶಿ : ಇಂದು ವೃತ್ತಿಯಲ್ಲಿ ಆಕಸ್ಮಿಕ ತಿರುವುಗಳು ಕಾಣಿಸಿಕೊಳ್ಳುವುದು. ವಿದ್ಯಾಭ್ಯಾಸದಲ್ಲಿ ಗಣನೀಯ ಏರಿಕೆಯಿಂದ ಖುಷಿಯಾಗಲಿದೆ. ಪ್ರಯಾಣದಿಂದ ನಿಮ್ಮ ವಸ್ತುಗಳ ನಷ್ಟವಾಗಲಿದೆ. ಯಾರನ್ನೋ ನಂಬಿ ಜವಾಬ್ದಾರಿಯನ್ನು ಕೊಡುವುದು ಬೇಡ. ಇನ್ನೊಬ್ಬರ ನೋವಿಗೆ ಸ್ಪಂದಿಸುವುದು ನಿಮಗೆ ಇಷ್ಟವಾಗಬಹುದು. ಮಾನಸಿಕ ಆಘಾತವು ಇಂದು ಅನಿರೀಕ್ಷಿತ ಆಗಬಹುದು. ಬಾಂಧವರ ನಡುವೆ ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ನಿಮ್ಮ ವರ್ತನೆಗಳು ಯಾರ ಮೇಲಾದರೂ ಪ್ರಭಾವ ಬೀರಬಹುದು. ಮೇಲಧಿಕಾರಿಗಳ ಜೊತೆ ಸಭ್ಯತೆಯಿಂದ ವರ್ತಿಸಿ. ವಿವಾಹದ ವಿಳಂಬದಿಂದ ನಿಮಗೆ ಬೇಸರವಾದೀತು. ನಿಮ್ಮ ತಪ್ಪಿನಿಂದ ಹಿರಿಯರ ಕೆಂಗಣ್ಣಿಗೆ ಗುರಿಯಾಗುವಿರಿ. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು.
ವೃಶ್ಚಿಕ ರಾಶಿ : ನಿಮ್ಮ ಉದ್ಯೋಗದ ಸ್ಥಳವನ್ನು ಬದಲಾಬಣೆ ಮಾಡುವ ಅನಿವಾರ್ಯತೆ ಬರಬಹುದು. ಒಂದು ಕಡೆ ಕುಳಿತುಕೊಳ್ಳಲು ಕಷ್ಟವಾಗುವುದು. ನಿಮ್ಮ ನಿರ್ಧಾರಕ್ಕೆ ಬೆಲೆ ಬರವ ತನಕ ಸುಮ್ಮನಿರಲಾರಿರಿ. ವಾಹನ ಖರೀದಿಸುವ ಬಗ್ಗೆ ಹೆಚ್ಚು ಆಸಕ್ತಿ ಇರುವುದು. ನೀವು ಒತ್ತಡವನ್ನು ಕಡಿಮೆ ಮಾಡಿಕೊಂಡು ಕಾರ್ಯವನ್ನು ಮಾಡಬೇಕೆಂದು ಅಂದುಕೊಳ್ಳುವಾಗಲೇ ಹಲವಾರು ಕಾರ್ಯಗಳು ಬಂದು ಸೇರಬಹುದು. ಅನಿರೀಕ್ಷಿತ ಗೆಲುವು ಸಿಗುವುದು. ಇಂದು ನಿಮ್ಮ ಪ್ರೀತಿಪಾತ್ರರ ಭೇಟಿಯಾಗಲಿದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಮಕ್ಕಳ ನಿರೀಕ್ಷೆಯಲ್ಲಿ ಇರುವವರಿಗೆ ಶುಭಸುದ್ದಿಯು ಸಿಗಬಹುದು. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು. ಭೂಸ್ವಾದೀನವನ್ನು ಮಾಡಿಕೊಳ್ಳುವ ಸಂದರ್ಭವು ಬರಬಹುದು. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ.