Horoscope: ರಾಶಿ ಭವಿಷ್ಯ; ಈ ರಾಶಿಯವರಿಗೆ ಇಂದು ಶತ್ರುಗಳು ಕಾಟ ಇರಲಿದೆ-ಎಚ್ಚರ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 01 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ12:30 ರಿಂದ 02:04ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:46 ರಿಂದ 09:21 ರ ವರೆಗೆ, ಗುಳಿಕ ಕಾಲ 10:55 ರಿಂದ 12:30ರ ವರೆಗೆ
ಸಿಂಹ ರಾಶಿ : ಮನೆಯ ನಿರ್ಮಾಣದ ಕಾರ್ಯಕ್ಕೆ ಯಾರಿಂದಲಾದರೂ ತೊಂದರೆ ಬರಬಹುದು. ಯಾರಾದರೂ ನಿಮ್ಮ ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸದೇ ತೊಂದರೆಗಳನ್ನು ಕೊಡಬಹುದು. ಅದಕ್ಕೆ ಬೇಕಾದ ಕಾನೂನಿನ ಹಾದಿಯನ್ನು ಅನುಸರಿಸಿ ಸರಿಮಾಡಿಕೊಳ್ಳಿ. ನಿಮ್ಮಿಂದಾಗದ ಕಾರ್ಯವನ್ನು ಬೇರೆಯವರು ಮಾಡಿ ತೋರಿಸುವುದು ನಿಮಗೆ ಅಪಮಾನಕರವೆನಿಸವುದು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ವಿವಾಹದ ಬಗ್ಗೆ ಎಲ್ಲರೂ ನಿಮ್ಮನ್ನು ಪ್ರಶ್ನಿಸುವರು. ಮುಜುಗರಕ್ಕೆ ಸಿಕ್ಕಿಕೊಳ್ಳಬೇಕಾದೀತು.
ಕನ್ಯಾ ರಾಶಿ : ಗೊಂದಲಗಳಿಂದ ವೃತ್ತಿಯನ್ನು ನಿರ್ಧರಿಸಲು ಕಷ್ಟವಾದೀತು. ಹೊಸ ಕೆಲಸಗಳನ್ನು ಹುಡುಕಲು ಪ್ರಯತ್ನಿಸಿ. ಸಂಗಾತಿಯಿಂದ ಅಪಮಾನವೂ ಆಗಬಹುದು. ಬೇಕಾದುದನ್ನು ಯಾರದೋ ಮೂಲಕ ಪಡೆಯುವುದು ಅನಿವಾರ್ಯವಾಗಬಹುದು. ಕಾಲಾನಂತರ ನಿಮಗೆ ಉತ್ತಮವಾದ ಫಲವನ್ನೇ ನೀಡುವುದು. ತಿಳಿದುಕೊಳ್ಳುವ ಕುತೂಹಲವು ನಿಮ್ಮಲಿಂದು ಅಧಿಕವಾಗಿರುವುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ಕೋಪದಿಂದ ಎಲ್ಲವನ್ನೂ ಸಾಧಿಸಲಾಗದು. ಅದರ ಅರಿವಿರಲಿ. ವಿದ್ಯುತ್ ಗೆ ಸಂಬಂಧಿಸಿದ ಕಾರ್ಯದಲ್ಲಿ ಲಾಭವಿರಲಿದೆ.
ತುಲಾ ರಾಶಿ : ಇಂದು ಮಕ್ಕಳ ವಿಚಾರದಲ್ಲಿ ವಾಗ್ವಾದವು ದಾಂಪತ್ಯದಲ್ಲಿ ನಡೆದು ಇಬ್ಬರೂ ವೈಮನಸ್ಸಿನಿಂದ ಇರಬೇಕಾದೀತು. ಎಲ್ಲರ ಜೊತೆ ಸಲುಗೆಯಿಂದ ಇರುವ ನಿಮ್ಮ ಬಗ್ಗೆ ಕೆಲವು ಅಪವಾದದ ಮಾತುಗಳು ಕೇಳಿಬರಬಹುದು. ನಿಮ್ಮನ್ನು ನೀವೇ ಆತ್ಮಾವಲೋಕನ ಮಾಡಿಕೊಳ್ಳಿ. ಮುಂದಿನ ಹೆಜ್ಜೆಯನ್ನು ಇಡುವಾಗ ಜಾಗರೂಕರಾಗಿರಿ. ಸೋಲಬಾರದು ಎಂಬ ಛಲವು ಇದ್ದು ಕಾರ್ಯವನ್ನು ಮಾಡುವಿರಿ. ಮಾನಸಿಕ ಸ್ಥಿತಿಯು ಶಾಂತವಾಗುವ ತನಕ ವಿರಾಮವನ್ನೂ ಪಡೆದು ಸ್ವಲ್ಪ ಆರಾಮದಾಯಕವಾದ ಸ್ಥಳಕ್ಕೆ ಹೋಗಿ ಬನ್ನಿ. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಏಕಾಂಗಿಯಾಗಿ ಸುತ್ತುವುದು ಇಷ್ಟವಾಗುವುದು. ನಂಬಿಕೆಯನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು.
ವೃಶ್ಚಿಕ ರಾಶಿ : ನೀವಿಂದು ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಲು ಯಾರಾದರೂ ಸಹಾಯ ಮಾಡುವರು. ನಿಮ್ಮೊಳಗೆ ಇಂದು ವಿಚಿತ್ರವಾದ ಕೆಲವು ಆಲೋಚನೆಗಳು ಬರಲಿದ್ದು, ನಿಮಗೇ ಆಶ್ಚರ್ಯವೆನಿಸುವಂತೆ ಮಾಡುವುದು. ತಂದೆ ಮತ್ತು ತಾಯಿಯರು ನಿಮಗೆ ಹಿತವಚನವನ್ನು ಹೇಳುವರು. ಆಲಿಸಿ ಮುಂದಿನ ಕ್ರಮವನ್ನು ಕೈಗೊಳ್ಳಿ. ರಕ್ಷಣೆಗೆ ಸಂಬಂಧಿಸಿದ ಯಾವುದಾದರೂ ಉದ್ಯೋಗವು ಸಿಗಬಹುದು. ವ್ಯವಹಾರವನ್ನು ಬಂಧುಗಳ ಜೊತೆ ಮಾಡಬೇಡಿ. ಎಲ್ಲಿಗಾದರೂ ಮಕ್ಕಳನ್ನು ಕರೆದುಕೊಂಡು ಹೋಗಲಿದ್ದೀರಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಹೊಸ ವಸ್ತುಗಳನ್ನು ನೀವು ಯಾರದೋ ಮೂಲಕ ಪಡೆದುಕೊಳ್ಳುವಿರಿ. ಅಶ್ರದ್ಧೆಯನ್ನು ತೋರಿಸುವುದು ಬೇಡ.