Horoscope: ರಾಶಿ ಭವಿಷ್ಯ; ಈ ರಾಶಿಯವರ ಮೇಲೆ ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ಈ ರಾಶಿಯವರ ಮೇಲೆ ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: May 03, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಬ್ರಹ್ಮ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ10:55 ರಿಂದ 12:30ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:14 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:45 ರಿಂದ 09:20ರ ವರೆಗೆ

ಸಿಂಹ ರಾಶಿ : ಇಂದು ವಿವಾಹಕ್ಕೆ ಸಂಬಂಧಿಸಿದ ಮಾತುಕತೆಗಳಿಂದ ಸಂತೋಷವಾಗಲಿದೆ. ಇಂದು ದಿನವಿಡೀ ದೇಹದ ಆಲಸ್ಯ, ಮನಸ್ಸಿನಲ್ಲಿ ಇರುವ ಜಾಡ್ಯದಿಂದ ಯಾವ ಕಾರ್ಯಗಳೂ ಆಗದು. ದಿವಸ ಚಟುವಟಿಕೆಗಳಿಗಿಂತ ಭಿನ್ನವಾದ ಯಾವುದಾದರೂ ಆಸಕ್ತಿಯಿರುವ ಕೆಲಸಗಳ ಬಗ್ಗೆ ಗಮನಹರಿಸಿ. ನಿಮಗೆ ಗೌರವಕ್ಕೆ ತೊಂದರೆ ಆಗಬಹುದು. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ಕೃಷಿಯಲ್ಲಿ ತೊಡಗಿಕೊಳ್ಳುವಿರಿ. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನಿಮ್ಮನ್ನು ನಿಂದಿಸುವವರನ್ನು ನೀವು ದೂರವಿರಿಸುವಿರಿ. ಪ್ರಯಾಣದಿಂದ ಆಯಾಸವಾಗಲಿದೆ. ಮಕ್ಕಳಿಲ್ಲದೇ ಬೇಸರವಾಗಲಿದೆ. ಏಕಾಂಗಿಯಾಗಿ ಇರುವುದು ಕಷ್ಟವಾಗುವುದು.

ಕನ್ಯಾ ರಾಶಿ : ನಿಮ್ಮ ಕಾರ್ಯಕ್ಷೇತ್ರವನ್ನು ಉತ್ತಮ ಮಾಡಿಕೊಳ್ಳುವುದು ನಿಮ್ಮದಾಗಿರಲಿದೆ. ಉನ್ನತಸ್ಥಾನದ ಪ್ರಸ್ತಾಪವೂ ಆಗಬಹುದು. ನಿಮ್ಮ ಜೀವನದಲ್ಲಿ ಪ್ರಮುಖರು ಯಾರೆಂಬ ಸರಿಯಾದ ಚಿತ್ರಣವು ನಿಮಗೆ ಸಿಗಲಿದೆ. ವಾತರೋಗದಿಂದ ಬಳಲುವ ಸಾಧ್ಯತಯಿದೆ. ಮನೆಯಲ್ಲಿಯೇ ಉಂಟಾದ ಜಗಳವನ್ನು ಅಲ್ಲಿಯೇ ಪರಿಹರಿಸಿಕೊಳ್ಳಿ. ಯಾರಿಗೂ ಹೇಳಿಕೊಳ್ಳದೇ ನೀವೊಬ್ಬರೇ ರೋಗವನ್ನು ಅನುಭವಿಸುವಿರಿ. ಕೆಲವರ ಸಹವಾಸದಿಂದ ನಿಮ್ಮ ದಿಕ್ಕು ತಪ್ಪಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ವಿದೇಶೀಯ ವ್ಯಾಪಾರವು ಹೆಸರಿಗಷ್ಟೇ ಇರುವುದು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿಂದಿಸಬಹುದು. ಮನಸ್ಸಿನಲ್ಲಿ ಸಾವಧಾನತೆ ಇರದು. ವಾಹನದಲ್ಲಿ ಸಂಚಾರಕ್ಕೆ ತಡೆಯಾಗಲಿದೆ.

ತುಲಾ ರಾಶಿ : ಮಕ್ಕಳ ಭವಿಷ್ಯದ ಬಗ್ಗೆ ಅತಿಯಾದ ಭಯವು ನಿಮ್ಮನ್ನು ಕಾಡಯವುದು. ನಿಮ್ಮಿಂದ ನಿಮ್ಮ ತಂದೆ, ತಾಯಿಯರು ಸಂಕಟಪಡಬಹುದು. ವಿವಾಹಯೋಗವು ನಿಮಗಿದೆ. ಯಾವುದಾದರೂ ಉಪಯೋಗಕ್ಕೆ ಬರುವ ಕೆಲಸಕ್ಕೆ ಕೈ ಹಾಕಿ.‌‌ ನಿಮ್ಮ ಮುಂದಿನ ಮಾರ್ಗಕ್ಕೆ ಉತ್ತಮ ಸಹಾಯಕನಾದೀತು. ನಿಮ್ಮದಾದ ಕೆಲವು ಜವಾಬ್ದಾರಿಯನ್ನು ಬಿಡುವುದು ಬೇಡ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ರಾಜಕೀಯದಲ್ಲಿ ವಿವಾದಸ್ಪದ ಮಾತುಗಳು ಆಡಿ ಎಲ್ಲರ ಕೆಂಗಣ್ಣಿಗೆ ಸಿಲುಕುವಿರಿ. ಮುಖಂಡರ ಜೊತೆ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಅಮೂಲ್ಯವಾದ ವಸ್ತುಗಳು ಪಡೆದುಕೊಳ್ಳುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ. ನೀವಾಡುವ ಸುಳ್ಳಿನಿಂದ ನಂಬಿಕೆ ದೂರಾಗುವುದು.

ವೃಶ್ಚಿಕ ರಾಶಿ : ನಿಮ್ಮ‌ ಮನಸ್ಸನ್ನು ಕಲಕಲೆಂದೇ ಕೆಲವರು ಹೊಂಚುಹಾಕುವ ಸಾಧ್ಯತೆ ಇದೆ. ಅವುಗಳಿಗೆ ಕಿವಿಗೊಡಬೇಡಿ. ಆರ್ಥಿಕವಾಗಿ ಇಂದು ಸಬಲರಾಗುವಿರಿ.‌ ಪ್ರೀತಿಪಾತ್ರರಾದವರ ಭೇಟಿಯು ಸಂತೋಷವನ್ನು ಹೆಚ್ಚಿಸೀತು. ಹಿರಿಯರ ಮಾತುಗಳು ನಿಮ್ಮ ಮನಸ್ಸಿಗೆ ನಾಟಿ ಇಲ್ಲಿಯವರೆಗಿನ ಕಾರ್ಯಕ್ಕೆ ಪಾಶ್ಚಾತ್ತಾಪವನ್ನು ಅನುಭವಿಸುವಿರಿ. ಸುಲಭವಾದುದನ್ನು ಕ್ಲಿಷ್ಟ ಮಾಡಿಕೊಳ್ಳುವಿರಿ. ತಾಯಿಯಿಂದ‌ ನಿಮ್ಮ ಕಾರ್ಯಕ್ಕೆ ಅನುಕೂಲವು ಒದಗಿಬರುವುದು. ಚಾಲಕರು ಸ್ವಲ್ಪ ಎಚ್ಚರಿಕೆಯಿಂದ ಚಲಾಯಿಸಿ. ಮಕ್ಕಳ‌ ಜೊತೆ ಅನ್ಯೋನ್ಯ ಸಂಬಂಧವು ಕಾಣಿಸಿಕೊಂಡೀತು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ಯಾರನ್ನೂ ಮೀರಿಸುವ ಹಂಬಲದಿಂದ ಕೆಲಸ ಮಾಡುವುದು ಬೇಡ.