Horoscope: ರಾಶಿ ಭವಿಷ್ಯ; ವೈವಾಹಿಕ ಜೀವನವು ಸುಖ ಶಾಂತಿಯಿಂದ ತುಂಬಿರುತ್ತದೆ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:44 ರಿಂದ 09:19ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:29 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:40ರ ವರೆಗೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ಸಿಂಹ ರಾಶಿ: ಇಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಕೊಂಚ ಬದಲಾವಣೆಯನ್ನು ಮಾಡಲಿದ್ದೀರಿ. ಫಲಾ ಅಪೇಕ್ಷೆ ಇಲ್ಲದೆ ಕೆಲಸ ಮಾಡಿದರೆ ಒಳ್ಳೆಯದು. ಅದರಿಂದ ಹೆಚ್ಚಿನ ಲಾಭವು ಸಿಗಲಿದೆ. ವೈವಾಹಿಕ ಜೀವನವು ಸುಖ ಶಾಂತಿಯಿಂದ ತುಂಬಿರುತ್ತದೆ. ಸಹೋದ್ಯೋಗಿ ಹಾಗೂ ಸಂಬಂಧಿಕರ ಬೆಂಬಲವನ್ನು ನೀವು ಪಡೆಯಬಹುದು. ನೀವಂದುಕೊಂಡಿದ್ದನ್ನೇ ಮಾಡುವ ಛಾತಿ ಇರುವುದು. ವಿದ್ಯಾರ್ಥಿಗಳು ಅಹಂಕಾರದ ವರ್ತನೆಯನ್ನು ತೋರಿಸಬಹುದು. ಇಂದಿನ ಓಡಾಟದ ದಣಿವು ನಿಮ್ಮ ಉತ್ಸಾಹವನ್ನು ಕುಗ್ಗಿಸೀತು. ಅಪವಾದದಿಂದ ನಿಮಗೆ ಭಯವಾಗಲಿದೆ. ತಿಳಿವಳಿಕೆಯನ್ನು ಹೇಳಬೇಕಾದೀತು. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ಕ್ಲಿಷ್ಟ ಎನಿಸದು.
ಕನ್ಯಾ ರಾಶಿ: ನೀವು ಅಧಿಕಾರವನ್ನು ಪಡೆಯಲು ಬೇರೆ ರೀತಿಯಲ್ಲಿ ಶ್ರಮಿಸುವಿರಿ. ತಪ್ಪು ತಿಳುವಳಿಕೆಯಿಂದ ಸಂಬಂಧ ಕೊನೆಗೊಳ್ಳುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಕಾಲ ಕಳೆದು ಖುಷಿಕೊಡುವಿರಿ. ಅತಿಯಾದ ಕಾರ್ಯಗಳಿಂದ ಸುಸ್ತಾಗಬಹುದು. ರಪ್ತಿನ ವಿಷಯದಲ್ಲಿ ನಿಮ್ಮನ್ನು ಹೆಚ್ಚು ಸಮಯ ಕಾಯುವಂತೆ ಮಾಡುತ್ತದೆ. ಮನೆಯಲ್ಲಿ ಇಂದು ಸಹಜ ವಾತಾವರಣ ಇರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಎಲ್ಲದಕ್ಕೂ ನೀವು ಉತ್ತರಿಸಬೇಕಾದ ಅವಶ್ಯಕತೆ ಇಲ್ಲ. ವಾಹನವನ್ನು ಚಲಾಯಿಸುವಾಗ ಸಾವಧಾನತೆ ಇರಲಿ. ಬಂಧುಗಳು ನಿಮ್ಮವರ ಬಗ್ಗೆ ಆಡಿಕೊಳ್ಳುವಾಗ ನಿಮಗೆ ಸಹಿಸಲಾಗದು. ನಿಮ್ಮ ಶ್ರಮದ ಸಾಧನೆಯನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ವಿರಾಮವನ್ನು ಪಡೆದು ಸುತ್ತಾಡಲು ಹೋಗುವಿರಿ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿಯೂ ನಿಮಗೆ ಸೋಲಾಗುವುದು. ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆಯೂ ಸಿಗದು.
ತುಲಾ ರಾಶಿ: ನೀವು ಇಂದು ಪೂರ್ವಯೋಜಿತ ವಿಷಯಗಳಿಂದ ಸಫಲತೆಯನ್ನು ಕಾಣಲಿದ್ದೀರಿ. ದಾಂಪತ್ಯದಲ್ಲಿ ಸುಖವು ಇರಲಿದೆ. ಚರ್ಚೆಗಳಿಗೆ ಆಸ್ಪದ ನೀಡದಿರಿ. ನೂತನ ಮಿತ್ರರ ಭೇಟಿ ಆಗವುದು. ಸೂಕ್ಷ್ಮ ವಿಚಾರಗಳನ್ನು ತಾಳ್ಮೆಯಿಂದ ನಿರ್ವಹಿಸುವುದು ಒಳ್ಳೆಯದು. ಮನೆಯ ನಿರ್ಮಾಣವು ಅಪೂರ್ಣವಾಗಿ ನಿಲ್ಲುವುದು. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿಯನ್ನು ವಹಿಸಬೇಕಾದೀತು. ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಪ್ರಗತಿಯು ಆಗಲಿದೆ. ನಿಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಧನವನ್ನು ಸಂಪಾದಿಸುವಿರಿ. ಮಂಗಲಕಾರ್ಯದಲ್ಲಿ ಇಂದು ನೀವು ಸಂತೋಷದಿಂದ ಪಾಲ್ಗೊಳ್ಳುವಿರಿ. ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಟ್ಟಿಯಾದ ತೀರ್ಮಾನವನ್ನು ಪಡೆಯುವುದು ಕಷ್ಟವಾಗುವುದು. ವಿವಾದವನ್ನು ಮಾಡಿಕೊಳ್ಳಲು ಮನಸ್ಸಾಗದು. ಯಾರನ್ನೂ ಅತಿಯಾಗಿ ನಂಬಿ ನೀವು ಮೋಸಹೋಗಬಹುದು.
ವೃಶ್ಚಿಕ ರಾಶಿ: ಮಕ್ಕಳ ವಿಚಾರದಲ್ಲಿ ಸಂತೋಷವಿರಲಿದೆ. ಸ್ತ್ರೀಯರು ಪುರುಷರನ್ನೂ ಪುರುಷರು ಸ್ತ್ರೀಯರನ್ನು ದ್ವೇಷಿಸುವರು. ಪಾಲುದಾರಿಕೆಯ ವ್ಯವಹಾರಗಳಲ್ಲಿ ಸಂಯಮವಿರಲಿ. ಬಂಧು ಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಗುರು ಹಿರಿಯರೊಂದಿಗೆ ಸಮಾಲೋಚನೆಯನ್ನು ಮಾಡಲಿದ್ದೀರಿ. ಪಾರದರ್ಶಕತೆಗೆ ಆದ್ಯತೆ ನೀಡುವವರು ನೀವು. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರೋತ್ಸಾಹ ಸಿಗಲಿದೆ. ಅವಿವಾಹಿತರಿಗೆ ವಿವಾಹ ಯೋಗವು ಬರಲಿದೆ. ಮಾತುಗಾರರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ. ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ಮನೆಯ ನಿರ್ಮಾಣ ಕಾರ್ಯವು ಬಹಳ ವಿಳಂಬದಂತೆ ಅನ್ನಿಸುವುದು. ನಿಮ್ಮ ನಡವಳಿಕೆಗೆ ಬಂಧುಗಳಿಂದ ಪ್ರಶಂಸೆಯು ಸಿಗಲಿದೆ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಜವಾಬ್ದಾರಿಯನ್ನು ನಯವಾಗಿ ತಳ್ಳಿಹಾಕುವಿರಿ.




