Horoscope: ದಿನಭವಿಷ್ಯ: ಇಂದು ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವವಿದೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 11 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವವಿದೆ
ದಿನಭವಿಷ್ಯ
Updated By: ಕಿರಣ್ ಹನುಮಂತ್​ ಮಾದಾರ್

Updated on: May 11, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ:
ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:18 ರಿಂದ 10:54ರ ವರೆಗೆ, ಯಮಘಂಡ ಕಾಲ 14:05 ರಿಂದ 15:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:07 ರಿಂದ 07:43ರ ವರೆಗೆ.

ಧನು ರಾಶಿ :ಸುಮ್ಮನೇ ಇನ್ನೊಬ್ಬರ ಭವಿಷ್ಯದ ಬಗ್ಗೆ ಮಾರ್ಗದರ್ಶನ ಮಾಡುವುದು ಬೇಡ. ನೀವು ಎಂದಿಗಿಂತಲೂ ನಿಮ್ಮ ಸಂಗಾತಿಗೆ ಹತ್ತಿರವಾಗಲಿದ್ದೀರಿ. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಗೃಹಿಣಿಯರು ಮನೆಯನ್ನು ಆಯೋಜಿಸುವ ಬಗ್ಗೆ ಯೋಚಿಸಬಹುದು. ನಿಮ್ಮ ಗುರಿಗಳನ್ನು ಸಾಧಿಸಲು ಯಾರಾದರೂ ನಿಮಗೆ ಅಡೆತಡೆಗಳನ್ನು ಉಂಟುಮಾಡಬಹುದು. ಬುದ್ಧಿವಂತಿಕೆಯಿಂದ ಕೆಲಸವನ್ನು ಮಾಡಿ ನಿಭಾಯಿಸಿಕೊಳ್ಳಿ. ಪರಿಚಿತ ಜನರನ್ನು ಭೇಟಿಯಾಗುವ ಸಂತೋಷವನ್ನು ಹಂಚಿಕೊಳ್ಳುವಿರಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಸ್ವಂತ ಕೆಲಸಕ್ಕೆ ಸಮಯವು ಸಿಗದೇ ಎಲ್ಲವನ್ನೂ ಉಳಿಸಿಕೊಳ್ಳುವಿರಿ.

ಮಕರ ರಾಶಿ :ಇಂದು ನಿಮಗೆ ಪ್ರೇಮವು ಸಂತೋಷವನ್ನು ಕೊಡದೇಹೊಇಗಬಹುದು. ನಿಮ್ಮ ಸಂಗಾತಿಗೆ ಈ ವಾರ ಸ್ಥಳಾವಕಾಶ ಬೇಕಾಗುತ್ತದೆ, ಅವರ ಅಭಿಪ್ರಾಯವನ್ನು ಗೌರವಿಸಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ಸಿಗುವ ಸಲಹೆಯು ನಿಮಗೆ ಪ್ರಯೋಜನಕಾರಿಯಾಗಿದೆ. ನಿಮಗೆ ಪ್ರಯೋಜನಕಾರಿಯಾಗಿದೆ. ಎಲ್ಲದೂ ನಿಮ್ಮದೇ ಎಂಬ ಮನೋಭಾವ ಬೇಡ. ಕಾಳಜಿ ವಹಿಸುವುದನ್ನು ನೋಡುವುದು ನಿಮ್ಮನ್ನು ಉತ್ತಮ ಮನಸ್ಥಿತಿಯಲ್ಲಿ ಇರಿಸುತ್ತದೆ. ಪಾಲುದಾರಿಕೆಯಲ್ಲಿ ನಿಮ್ಮ ಪಾಲುದಾರಿಕೆಯೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಹಂಚಿಕೊಳ್ಳುವ ಬಗ್ಗೆ ಸಮಾಧಾನ ಇರದು. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳುವಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ.

ಕುಂಭ ರಾಶಿ :ದಿನದ ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವಿರಿ. ಮನೆಯಲ್ಲಿಯೇ ಇದ್ದು ಮಕ್ಕಳ ಜೊತೆ ಕಾಲವನ್ನು ಕಳೆಯುವಿರಿ. ಮನೆಯ ನವೀಕರಣದ ಬಗ್ಗೆ ಯಾರನ್ನಾದರೂ ಸಂಪರ್ಕಿಸಿ ಮುಂದುವರಿಯುವಿರಿ. ನಿಮ್ಮವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿಯನ್ನು ತೋರಿಸಲಿದ್ದಾರೆ. ಆಹಾರವನ್ನು ನಿಯಂತ್ರಿಸುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಓಡಾಟದ ಕೆಲಸಕ್ಕೆ ನಿಮ್ಮನ್ನು ಬಳಸಿಕೊಳ್ಳಬಹುದು. ಉತ್ಸಾಹವೂ ಇರಲಿದೆ. ಯಾರನ್ನೋ ನಿಂದಿಸುವುದು ಅಭ್ಯಾಸ ಮಾಡಿಕೊಳ್ಳುವುದು ಬೇಡ.‌ ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ.

ಮೀನ ರಾಶಿ :ಕುಟುಂಬದಲ್ಲಿ ನಿಮ್ಮ ಯಶಸ್ಸಿನ ಎಲ್ಲರೂ ಖುಷಿಪಡುವರು. ವೃತ್ತಿಜೀವನಕ್ಕೆ ಬೇಕಾದ ಸಿದ್ಧತೆಯಲ್ಲಿ ಇರುವಿರಿ. ಕೆಲಸದಲ್ಲಿ ಪೂರ್ವಭಾವಿಯಾಗಿ ತಿಳಿದುಕೊಳ್ಳಲು ಹೋದರೆ, ಕೆಲಸಗಳನ್ನು ಅನಾಯಸವಾಗಿ ನಡೆಸಬಹುದು. ಉತ್ತಮ ಕಾರ್ಯವೊಂದನ್ನು ಪ್ರಾರಂಭಿಸಿ. ಅದು ತನ್ನಷ್ಟಕ್ಕೇ ಬೆಳೆದುಕೊಳ್ಳುತ್ತದೆ. ಇಂದು ಶುಭಸೂಚನೆಗಳು ಇರಲಿವೆ. ಅದನ್ನು ಗಮನಿಸಿಕೊಂಡು ಕಾರ್ಯದಲ್ಲಿ ಮುಂದಡಿಯಿಡಿ. ದೂರದೂರಿಗೆ ಪ್ರವಾಸಕ್ಕೆ ಹೋಗುವ ಮನಸ್ಸು ಮಾಡಲಿದ್ದೀರಿ. ನಿಮ್ಮನ್ನು ನೀವು ದುರ್ಬಲ ಮಾಡಿಕೊಳ್ಳುವುದು ಬೇಡ. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಯಾರದೋ ಬೇಸರವನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳುವಿರಿ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಅಪ್ರಯೋಜಕ ಸಂಗತಿಗಳು ಮುಖ್ಯವಾದೀತು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆ ಇರದು.

-ಲೋಹಿತ ಹೆಬ್ಬಾರ್ – 8762924271 (what’s app only)