AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಈ ರಾಶಿಯವರಿಗೆ ಇಂದು ಸವಾಲಿನ ಪರಿಸ್ಥಿತಿಗಳು ಬರಬಹುದು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 17 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರಿಗೆ ಇಂದು ಸವಾಲಿನ ಪರಿಸ್ಥಿತಿಗಳು ಬರಬಹುದು
ರಾಶಿ ಭವಿಷ್ಯ
TV9 Web
| Edited By: |

Updated on: May 17, 2024 | 12:15 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಧ್ರುವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:29ರ ವರೆಗೆ, ಯಮಘಂಡ ಕಾಲ 15:41 ರಿಂದ 17:17ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:42ರಿಂದ 09:17ರ ವರೆಗೆ.

ಮೇಷ ರಾಶಿ :ಅದೃಷ್ಟ ನಿಮ್ಮ ಕಡೆ ಇದೆ ಎಂಬುದು ಸತ್ಯದ ಮಾತಾದರೂ ಅಷ್ಟಕ್ಕೇ ಕೆಲಸಗಳು ಆಗದು. ನಿಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳು ನಿಮಗೆ ಸಹಾಯ ಮಾಡುವರು. ಸವಾಲಿನ ಪರಿಸ್ಥಿತಿಗಳು ಬರಬಹುದು. ನೀವು ಅವುಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಿದೆ. ನೀವು ಇಂದು ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ನಿಮ್ಮ ಕಠಿಣ ಪರಿಶ್ರಮ ಮೆಚ್ಚಗೆಯು ಸಿಗಲಿದೆ. ಚರ ಸ್ವತ್ತನ್ನು ನಿರ್ಲಕ್ಷಿಸುವುದು ಬೇಡ. ಸಮಯವನ್ನು ಸುಮ್ಮನೇ ವ್ಯರ್ಥ ಮಾಡುವಿರಿ. ಇಂದು ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ಅಧಿಕಾರದ ಮಾತುಗಳಿಂದ ಕೆಲಸವಾಗದು.

ವೃಷಭ ರಾಶಿ :ಕುಟುಂಬವನ್ನು ಹೊಂದಾಣಿಕೆಯಿಂದ ನಡೆಸುವ ಜವಾಬ್ದಾರಿ ಇರುತ್ತದೆ. ನಿಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮಾಡಲು ಸಾಧ್ಯವಾಗುವುದು. ನಿಮ್ಮ ಮಹಾಗುರಿಯನ್ನು ಸಾಧಿಸುವ ವಿಶ್ವಾಸವನ್ನು ಬಿಟ್ಟುಕೊಡಬೇಡಿ. ನೀವು ನಿಮ್ಮ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ಒಳ್ಳೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಬಯಸುವಿರಿ. ಭಿನ್ನಾಭಿಪ್ರಾಯಗಳನ್ನು ಮರೆತು ನಿಮ್ಮ ಸಂಬಂಧವನ್ನು ಕಾಪಾಡಿಕೊಳ್ಳಿ. ನಿಮ್ಮ ಆಲೋಚನೆಯನ್ನು ಧನಾತ್ಮಕವಾಗಿ ಇರಿಸಿದರೆ ನಿರ್ಧಾರಗಳನ್ನು ಸರಿಯಾಗಿರುತ್ತವೆ. ನಿಮ್ಮನ್ನು ನೀವು ಸರಿಮಾಡಿಕೊಳ್ಳುವ ಯೋಚನೆ ಬರಲಿದೆ. ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ಸಿಟ್ಟಾಗುವಿರಿ. ನಿಮ್ಮ ಮೂಗಿನ ನೇರಕ್ಕೆ ಎಲ್ಲವನ್ನೂ ನೀವು ಕಾಣುವುದು ಸಮಂಜಸವಲ್ಲ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ.

ಮಿಥುನ ರಾಶಿ :ನಿಮ್ಮ ಜೀವನದಲ್ಲಿ ಕೆಲವರ ಬಗ್ಗೆ ತಪ್ಪು ತಿಳುವಳಿಕೆ ಬರುವುದು. ನಿಮ್ಮ ಮಾತಿನ ಮೇಲೆ ಗಮನವಿರಲಿ. ನೀವು ಶಾಂತವಾಗಿ ಇದ್ದಷ್ಟೂ ನಿಮ್ಮ ಸಂಬಂಧವನ್ನು ಗಟ್ಟಿಯಾಗುವುದು. ಕಚೇರಿ ಸ್ವಲ್ಪ ಒತ್ತಡವನ್ನು ಅನುಭವಿಸಬೇಕಾದೀತು. ನಿಮ್ಮ ಆಲೋಚನೆಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಲು ನೀವು ಪ್ರಯತ್ನಿಸುವಿರಿ. ಅಸಾಧಾರಣ ಆಲೋಚನೆಗಳಿಂದ ತುಂಬಿದ್ದರೂ ಅವುಗಳನ್ನು ಸರಿಯಾಗಿ ವ್ಯಕ್ತಪಡಿಸಲು ನಿಮಗೆ ಸಾಧ್ಯವಾಗದು. ಕೆಲಸದ ವಿಷಯದಲ್ಲಿ ಸ್ವಲ್ಪ ಉದ್ವೇಗ ಉಂಟಾಗಬಹುದು. ಯಾವುದನ್ನೂ ನಂಬುವ ಸ್ಥಿತಿಯಲ್ಲಿ ನೀವು ಇರಲಾರಿರಿ. ಇಲ್ಲವಾದರೆ ಮುಂದೆ ನೀವು ನಷ್ಟವನ್ನು ಕಷ್ಟವನ್ನೂ ಅನುಭವಿಸಬೇಕಾಗಬಹುದು. ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ ಕಾನೂನಾತ್ಮಕ ತೊಂದರೆಗಳನ್ನು ಪರಿಹರಿಸಿಕೊಳ್ಳಿ. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ಮನೆಯ ವಾತಾವರಣ ಪ್ರಶಾಂತವಾಗಿರುವುದು.

ಕರ್ಕಾಟಕ ರಾಶಿ :ನಿಮ್ಮ ಕೋಪವನ್ನು ನಿಯಂತ್ರಿಸಲು ಪ್ರಯತ್ನಿಸದಿದ್ದರೆ ಅದು ಬೇರೆ ಸ್ವರೂಪವನ್ನು ಪಡೆಯುವುದು. ಇಂದು ನೀವು ಬಹಳ ಮುಖ್ಯವಾದ ಮತ್ತು ನಿಮಗೆ ಪ್ರಿಯವಾದ ವಸ್ತುವೊಂದನ್ನು ಪಡೆಯಬಹುದು. ಇದು ಉಡುಗೊರೆಯೂ ಆಗಿರಬಹುದು. ಅಮೂಲ್ಯವಾದ ವಸ್ತುವೂ ಆಗಿರಬಹುದು. ಅದನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಪ್ರೇಮ ವ್ಯವಹಾರಗಳು ಕುಟುಂಬ ಜೀವನಕ್ಕೆ ಸ್ವಲ್ಪ ಸವಾಲಾಗುವುದು. ನಿಮ್ಮ ಭಾವನೆಗಳಿಗೆ ಅನುಗುಣವಾಗಿ ವರ್ತಿಸುವ ನಿಮ್ಮ ಸಂಗಾತಿಯ ಬಗ್ಗೆ ಯೋಚಿಸುವುದು ಉತ್ತಮ. ನೀವು ಬಹಳ ವಿಳಂಬನೀತಿಯವರಾಗಿ ಕಾಣಿಸುವಿರಿ. ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು.‌

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ