Nitya Bhavishya: ನಿಮ್ಮ ಆದಾಯವೆಲ್ಲ ನೀರಿನಂತೆ ಖರ್ಚಾಗಬಹುದು, ಅಧಿಕ ಲಾಭಕ್ಕಾಗಿ ಶ್ರಮ ಹಾಕುವಿರಿ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಫೆಬ್ರವರಿ 09, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Nitya Bhavishya: ನಿಮ್ಮ ಆದಾಯವೆಲ್ಲ ನೀರಿನಂತೆ ಖರ್ಚಾಗಬಹುದು, ಅಧಿಕ ಲಾಭಕ್ಕಾಗಿ ಶ್ರಮ ಹಾಕುವಿರಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Feb 09, 2024 | 12:10 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವ್ಯತಿಪಾತ್, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 33 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:20 ರಿಂದ 12:47ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:40 ರಿಂದ 05:07 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:27 ರಿಂದ 09:54ರ ವರೆಗೆ.

ಮೇಷ ರಾಶಿ: ಇಂದು ನಿಮ್ಮ ಮಾತಿನಲ್ಲಿ ಕಠೋರತೆ ಇರಲಿದ್ದು, ಅದನ್ನು ಕಡಿಮೆ‌ ಮಾಡಿಕೊಳ್ಳಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕಂತೆ ಕೆಲಸ ಸಿಗುತ್ತದೆ. ಸರ್ಕಾರ ಮತ್ತು ಆಡಳಿತದ ವಿಷಯಗಳಲ್ಲಿ ನಿಮ್ಮ ಜಾಗರೂಕತೆ ಅವಶ್ಯಕ. ನಿಮ್ಮ ಆದಾಯವೆಲ್ಲ ನೀರಿನಂತೆ ಖರ್ಚಾಗಬಹುದು. ಸಂಗಾತಿಯಿಂದ ನಿಮ್ಮ ನೋವು ದೂರಾಗಬಹುದು. ಅಧಿಕಾರ ಪ್ರಾಪ್ತಿಗೆ ಓಡಾಟವನ್ನು ಮಾಡುವಿರಿ. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ಕೋಪವನ್ನು ಅಧಿಕಾರಿಗಳಿಂದ ನಿಯಂತ್ರವಿಟ್ಟು ಮಾಡನಾಡಿ ಮೆಚ್ಚುಗೆ ಗಳಿಸುವಿರಿ. ನಿಮ್ಮ ಮಕ್ಕಳ ಬಗ್ಗೆ ಗಮನ ಹೆಚ್ಚು ಬೇಕು. ತಿಳಿವಳಿಕೆ ಇಲ್ಲದವರ ಮುಂದೆ ನಿಮ್ಮ ಉದ್ಯೋಗವನ್ನು ಹೇಳಿಕೊಳ್ಳುವಿರಿ. ನಿಮ್ಮ ಮಿತಿಯನ್ನು ಮೀರಿ ವ್ಯವಹಾರ ಬೇಡ.

ವೃಷಭ ರಾಶಿ: ನೀವು ಅಪರಿಚಿತರ ಸಂಪರ್ಕವನ್ನು ಹೆಚ್ಚು ಮಾಡುವಿರಿ. ಹೂಡಿಕೆಯಲ್ಲಿ ದೀರ್ಘಾವಧಿಯ ಯೋಜನೆಗಳು ಮಾಡಿಕೊಳ್ಳಿ. ನಿಮ್ಮ ಮೇಲಿನ ವಿಶ್ವಾಸವು ದೂರವಾಗಬಹುದು. ನೀವು ಹಿರಿಯರಿಂದ ಬೆಂಬಲವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಯಾರಿಗಾದರೂ ಸಹಾಯ ಮಾಡಲು ಅವಕಾಶವು ಸಿಗಬಹುದು. ನಿರಂತರ ವೃತ್ತಿಪರತೆಯ ನಿಮ್ಮ ಖುಷಿಯನ್ನು ಹೆಚ್ಚಿಸಬಹುದು. ಪ್ರಾಮಾಣಿಕ‌ ಪ್ರಯತ್ನದಲ್ಲಿ ಯಶಸ್ಸನ್ನು ಕಾಣುವಿರಿ. ವಿನಾಕಾರಣ ಸುತ್ತಾಟದಿಂದ ಆಯಾಸವಾಗುವುದು. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಅನ್ಯಸ್ಥಳದಲ್ಲಿ ನಿಮ್ಮ ವಾಸವು ಇರಲಿದೆ. ಯಾರದೋ ಸಂತೋಷಕ್ಕಾಗಿ ನೀವು ದುಡಿಯಬೇಕಾಗಬಹುದು. ಭವಿಷ್ಯದ ಬಗ್ಗೆ ಅಸ್ಪಷ್ಟವಾದ ಚಿಂತೆಯು ಬೇಡ. ಯಂತ್ರಗಳ ವ್ಯಾಪಾರಿಗಳಿಗೆ ಲಾಭದ ದಿನ. ಆಚರಣೆಗಳನ್ನು ಮಾಡಲು ನಿಮಗೆ ಅಧಿಕ ಆಸಕ್ತಿಯು ಬರಬಹುದು. ಉತ್ಸಾಹವು ಎಷ್ಟೇ ಇದ್ದರೂ ನೆಮ್ಮದಿಯ ಮನಸ್ಸಿನಿಂದ ನಿರ್ಧಾರಿಸಿ.

ಮಿಥುನ ರಾಶಿ: ಇಂದು ನೀರಿಗೆ ಸಂಬಂಧಿಸಿದ ವ್ಯಾಪಾರದಲ್ಲಿ ಲಾಭವನ್ನು ಹೆಚ್ಚಿಸಿಕೊಳ್ಳುವಿರಿ. ಕಲಿಕೆಯ ಆಸಕ್ತಿಯು ಹೆಚ್ಚಾಗಬಹುದು. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಬೇಡ. ಆಕಸ್ಮಿಕವಾಗಿ ಜೀವನದ ದಿಕ್ಕು ಬದಲಾಗಬಹುದು. ಮಾನಸಿಕವಾಗಿ ತಯಾರಿರಬೇಕಾಗಬಹುದು. ನಿಮ್ಮ ಜವಾಬ್ದಾರಿಯನ್ನು ಇತರರು ಮಾಡಬೇಕಾಗಬಹುದು. ಸಾಮೂಹಿಕ ಕಾರ್ಯದಲ್ಲಿ ನಿಮಗೆ ಯಶಸ್ಸು ಸಿಗಬಹುದು. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ. ಸ್ವಪ್ರತಿಷ್ಠೆನ್ನಿಬ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಹಿರಿಯರೆದುರು ವಿನಯವಿರಲಿ. ದೇವತಾಕಾರ್ಯಗಳಲ್ಲಿ ಆಸಕ್ತಿಯು ಶ್ರದ್ಧೆಯಿಂದ ಭಾಗವಹಿಸುವಿರಿ. ಕಛೇರಿಯಲ್ಲಿ ಅಧಿಕಾರಿಗಳು ನಿಮ್ಮ ಕಾರ್ಯಕ್ಕೆ ಸಂಬಂಧಿಸಿದಂತೆ ವಾಗ್ವಾದ ಮಾಡಬಹುದು. ಯಾರಿಗೂ ಸಾಲವನ್ನು ಕೊಡುವುದು ಬೇಡ.

ಕರ್ಕ ರಾಶಿ: ನಿಮ್ಮ ವೈವಾಹಿಕ ಜೀವನದ ಜಟಿಲ ಸಮಸ್ಯೆಗಳು ದೂರಾಗಬಹುದು. ಸ್ಥಿರ ಚಿತ್ತವನ್ನು ನೀವು ಪ್ರಯತ್ನಪೂರ್ವಕವಾಗಿ ತಂದುಕೊಳ್ಳಬೇಕಾಗುವುದು. ನಿಮ್ಮ ಇಷ್ಟದ ವಿಷಯಗಳಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತೀರಿ. ನಿಮ್ಮವರ ವಿಶ್ವಾಸವನ್ನು ನೀವು ಸುಲಭವಾಗಿ ಗೆಲ್ಲಲು ಸಾಧ್ಯವಾಗುತ್ತದೆ. ವೃತ್ತಿಕ್ಷೇತ್ರದಲ್ಲಿ ನಿಮ್ಮ ಉತ್ತಮ ಚಿಂತನೆಯಿಂದ ಗೌರವವನ್ನು ಪಡೆಯಲು ಸಾಧ್ಯ. ಏನನ್ನಾದರೂ ಮಾಡಲು ನೀವು ಇತರರನ್ನು ಅವಲಂಬಿಸಲು ಇಚ್ಛಿಸುವುದಿಲ್ಲ. ನೀವು ಅನೇಕ ವ್ಯವಹಾರಗಳನ್ನು ನಿಭಾಯಿಸಲು ಕಷ್ಟಪಡುವರು. ಮನೆಯ ಸ್ಥಳವನ್ನು ಬದಲಾಯಿಸುವ ಅನಿವಾರ್ಯತೆ ಬಂದೀತು. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ‌ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.‌ ಉತ್ಸಾಹಕ್ಕೆ ತೊಂದರೆ ಆಗುವ ಕಡೆ ನೀವು ಇರಲಾರಿರಿ. ನಿಮ್ಮ ಕಾರ್ಯವನ್ನು ಬಿಟ್ಟು ಬೇರೆಯವರ ಕಾರ್ಯದ ಕಡೆ ಗಮನ ಇರುವುದು. ಉದ್ಯೋಗದಲ್ಲಿ ಅಧಿಕ ಲಾಭಕ್ಕಾಗಿ ಶ್ರಮಿರಿಸಿದರೂ ಲಾಭವು ಕಷ್ಟವಾದೀತು.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ