AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು-ಎಚ್ಚರ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 11 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು-ಎಚ್ಚರ
ರಾಶಿಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 11, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಪ್ರೀತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:55 ರ ವರೆಗೆ, ಗುಳಿಕ ಕಾಲ 09:28 ರಿಂದ ಬೆಳಿಗ್ಗೆ 11:01ರ ವರೆಗೆ. ಸಿಂಹ ರಾಶಿ : ನೀವು ಹೊಸತನವನ್ನು ತೆರೆದ ಮನಸ್ಸಿನಿಂದ ಸ್ವಾಗತಿಸುವಿರಿ. ವಿದೇಶಕ್ಕೆ ಹೋಗಲು ಆಲೋಚನೆ ಮಾಡಿದ್ದರೆ ಹೊರಡಬಹುದು. ಆನಾರೋಗ್ಯದಿಂದ ಮುಕ್ತಿಸಿಗಲಿದೆ. ಸಹೋದರನ ಹಾಗೂ ತಂದೆಯ ಸಹಾಯ ನಿಮಗೆ ಸಿಗಲಿದೆ. ಪ್ರತಿಭೆಯ ಅನಾವರಣಕ್ಕೆ ಸುಕಾಲ. ಸಂಪತ್ತು ಉಳಿಸಿಕೊಳ್ಳಲು ಯತ್ನಿಸಿದಷ್ಟೂ ಅಪ್ರಯಾಸವಾಗಿ ಖರ್ಚಾಗುವುದು. ಇಂದು ಮನೋರಂಜನೆಗಾಗಿಯೇ ಸಮಯವನ್ನು ಮೀಸಲಿಟ್ಟರೂ ಅದನ್ನು ಯಾರಾದರೂ ಹಾಳುಮಾಡಿಯಾರು. ಆರೋಗ್ಯದ ವ್ಯತ್ಯಾಸವನ್ನು ನೀವು ನಿರ್ಲಕ್ಷಿಸಿ ಬೇರೆ ಏನನ್ನಾದರೂ ತಂದುಕೊಳ್ಳುವಿರಿ. ಯಾರನ್ನೋ ಮೀರಿಸುವ ಧೈರ್ಯ ಮಾಡಲಾರಿರಿ. ದೈಹಿಕ ಶ್ರಮವು ಇಂದು ಹೆಚ್ಚಿರುವುದು. ನಿಮ್ಮ ಶಿಷ್ಯರಿಂದ ನಿಮಗೆ ಉಡುಗೊರೆ ಸಿಗುವ ಸಾಧ್ಯತೆ ಇದೆ. ಭೂಮಿಯನ್ನು ಮಾರಾಟ ಮಾಡುವ ಸ್ಥಿತಿಯು ಬರಬಹುದು. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ನೀವು ಕೇಳಬೇಕಾದೀತು.

ಕನ್ಯಾ ರಾಶಿ : ಇಂದು ನಿಮ್ಮ ಕಳೆದು ಹೋದ ಕಾರ್ಯಗಳನ್ನೇ ನೆನಪಿಸಿ ನಿಮ್ಮನ್ನು ಹತಾಶಗೊಳಿಸಬಹುದು. ನೀವು ಒಂಟಿಯಾಗಿರುವುದನ್ನು ಯಾರಾದರೂ ತಪ್ಪಿಸಬಹುದು.‌ ಆಪ್ತರ ಜೊತೆ‌ ಮನಸ್ಸು ಬಿಚ್ಚಿ ಮಾತನಾಡಿ. ಇಷ್ಟವಾಗುವ ಸ್ಥಳಗಳಿಗೆ ಇಷ್ಟವಾದವರನ್ನು ಕರೆದುಕೊಂಡು ಹೋಗಿ. ಕೆಲಸದ‌ ಸ್ಥಳದಲ್ಲಿ ಒತ್ತಡದ ವಾತಾವರಣವಿರಬಹುದು. ವಿದ್ಯಾರ್ಥಿಗಳು ಶ್ರಮವಹಿಸಿ ಮುಂಬರುವ ಪರೀಕ್ಷೆಗಳಿಗೆ ಸಿದ್ಧತೆಯನ್ನು ನಡೆಸಬಹುದು. ಇಂದು ಬಿಟ್ಟು ಹೋದ ಆಪ್ತರ ಬಗ್ಗೆ ಹೆಚ್ಚು ಆಲೋಚನೆ ಬರಬಹುದು. ಬರುವ ಒತ್ತಡವನ್ನು ನೀವು ಯಾವುದಾದರೂ ವಿಧಾನದ ಮೂಲಕ ಸರಿ ಮಾಡಿಕೊಳ್ಳುವಿರಿ. ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸುವಿರಿ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು. ಸಣ್ಣ ಉಳಿತಾಯಕ್ಕೆ ಇಂದು ಬೆಲೆಯು ಬಂದಂತಾಗುವುದು. ಜೀವನದ ಲಕ್ಷ್ಯವು ಬೇರೆ ಕಡೆಗೆ ಯಾರಾದರೂ ಬದಲಿಸಬಹುದು.

ತುಲಾ ರಾಶಿ : ನಿಮ್ಮ ವಿವಾಹದ ಪ್ರಸ್ತಾಪಗಳು ಬರಬಹುದು. ನೀವು ನಿಮ್ಮ ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ. ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ಎತ್ತರದ ಪ್ರದೇಶಗಳನ್ನು ಏರುವ ಸಾಹಸಕ್ಕೆ ಹೋಗಬೇಡಿ‌. ಧರ್ಮದ‌ ಕಾರ್ಯಗಳ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ಯಾವುದಾದರೂ ರೀತಿಯಲ್ಲಿ ನೋವನ್ನು ಪಡೆಯಬೇಕಾದೀತು. ಕುಟುಂಬಕ್ಕೋಸ್ಕರ‌‌ ಧನವನ್ನು ತ್ಯಾಗಮಾಡಬೇಕಾಗಿಬರಬಹುದು. ಇಂದು ನೀವು ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳದೇ ಅವರ ಜೊತೆ ಜಗಳವಾಡುವಿರಿ. ಆದಾಯದ ಗುಟ್ಟನ್ನು ಎಷ್ಟೇ ಒತ್ತಾಯ ಮಾಡಿದರೂ ಹೇಳಲಾರಿರಿ. ಹಿರಿಯರ ಪ್ರೀತಿಯು ನಿಮಗೆ ಖುಷಿಕೊಡುವುದು. ವ್ಯವಹಾರದಲ್ಲಿ ಬರುವ ಸಮಸ್ಯೆಯನ್ನು ಮೊದಲೇ ಯೋಚಿಸಿ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಮಾಡಿ. ನಿರೋದ್ಯೋಗ ಸಮಸ್ಯೆಯಿಂದ ಮಾನಸಿಕ ಹಿಂಸೆಯಾಗಬಹುದು.

ವೃಶ್ಚಿಕ ರಾಶಿ : ಇಂದು ನಿಮ್ಮ ಗೌರವಕ್ಕೆ ಯಾರಿಂದಲಾದರೂ ಚ್ಯುತಿಯಾಗಬಹುದು. ನಡೆ, ನುಡಿಗಳಲ್ಲಿ ಬಹಳ ಜಾಗರೂಕರಾಗಿರಿ. ಧನವು ಕೈಗೆಟುಕದ ದ್ರಾಕ್ಷಿಯಂತೆ ಅನ್ನಿಸಬಹುದು. ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು. ಭೂವ್ಯವಹಾರದಲ್ಲಿ ಲಾಭವನ್ನು ಪಡೆಯಲು ಅನ್ಯ ಮಾರ್ಗವನ್ನು ಆಶ್ರಯಿಸುವಿರಿ. ಹಳೆಯ ರೋಗಗಳು ಮತ್ತೆ ಬಂದರೂ ಬರಬಹುದು. ಉದ್ಯಮದ ಕಾರ್ಯಕ್ಕೆ ನೀವು ಪ್ರಯಾಣ‌ ಮಾಡುವ ಸಾಧ್ಯತೆ ಇದೆ.‌ ಮಕ್ಕಳಿಂದ ನಿಮಗೆ ಸಂತೋಷವು ಸಿಗಲಿದೆ. ಇಂದು ಕಛೇರಿಯನ್ನು ಮಹಿಳೆಯರು ನಿರ್ವಹಿಸಬೇಕಾಗುವುದು. ನೂತನ ವಸ್ತುಗಳನ್ನು ಖರೀದಿಸಲಿದ್ಸೀರಿ. ಮಾಡದ ಕಾರ್ಯಕ್ಕೆ ಅಪವಾದ ಬರುವುದು. ಇಂದು ವೃತ್ತಿಯಲ್ಲಿ ಆತಂಕವು ಬರಬಹುದು. ಪ್ರಾಣಿಗಳಿಂದ ಭೀತರಾಗುವ ಸಾಧ್ಯತೆ ಇದೆ. ಎದುರಿನವರ ಇಂಗಿತವನ್ನು ತಿಳಿದುಕೊಳ್ಳದೇ ಏನನ್ನಾದರೂ ಹೇಳುವಿರಿ. ನಿಮ್ಮ ಅನಾರೋಗ್ಯವನ್ನು ಯಾರ ಬಳಿಯೂ ಹೇಳಿಕೊಳ್ಳಲಾರಿರಿ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು