Nitya Bhavishya: ನಿಮ್ಮ ಸೋಲನ್ನು ನಿರೀಕ್ಷಿಸುವವರಿಗೆ ಆಹಾರವಾಗುವಿರಿ-ಎಚ್ಚರ
ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ 12ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಉತ್ತರಾಭಾದ್ರಾ, ಯೋಗ: ಶಿವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:26 ರಿಂದ 09:53ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:20 ರಿಂದ 12:47 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:41ರ ವರೆಗೆ.
ಧನು ರಾಶಿ : ಇಂದು ನೀವು ಕೆಲವು ವಿಷಯಗಳನ್ನು ರಹಸ್ಯವಾಗಿಡಬೇಕಾಗುತ್ತದೆ. ಸುಮ್ಮನೇ ಯಾರದೋ ಸಲಹೆಯನ್ನು ಅನುಸರಿಸುವುದರಿಂದ ಅರ್ಥವಿಲ್ಲ. ನಾಯಕತ್ವ ಕೌಶಲ್ಯಗಳು ಇತರರಿಗೆ ಗೊತ್ತಾಗುವುದು. ನಿಮ್ಮ ಭರವಸೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಪ್ರಯತ್ನಿಸಿ. ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ನೀವು ಖಾಸಗಿ ವಿಷಯಗಳಲ್ಲಿ ಸಕ್ರಿಯರಾಗಿರುತ್ತೀರಿ. ದಾಂಪತ್ಯ ಜೀವನದಲ್ಲಿ ಮಾಧುರ್ಯವಿರುತ್ತದೆ ಮತ್ತು ಕುಟುಂಬ ಸಂಬಂಧಗಳಿಗೆ ಪ್ರಾಮುಖ್ಯವನ್ನು ನೀಡುತ್ತದೆ. ಭೂಮಿಯ ಲಾಭಕ್ಕಾಗಿ ಓಡಾಟವನ್ನು ಮಾಡಬೇಕಾದೀತು. ಒಂದು ರೀತಿಯಲ್ಲಿ ನಿಮಗೆ ಆತಂಕದ ದಿನವೂ ಇದಾಗಬಹುದು. ನೀವು ಕೆಲವು ಅಪೂರ್ಣ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ದೈವದ ಬಗ್ಗೆ ನಿಮಗೆ ಅಪನಂಬಿಕೆ ಬರಬಹುದು. ಮಕ್ಕಳ ಹಠಸ್ವಭಾವವು ಇಮಗೆ ಇಷ್ಟವಾಗದು. ನೀವು ಸಹನೆಯನ್ನು ಮೀರಿ ವರ್ತಿಸುವಿರಿ.
ಮಕರ ರಾಶಿ : ಈ ದಿನ ನಿಮಗೆ ಬಹಳ ಉತ್ಸಾಹದಿಂದ ಮುನ್ನಡೆಯುವಿರಿ. ನಿಮ್ಮ ಅಗತ್ಯ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳಬಹುದು. ನೀವು ಧರ್ಮ ಕಾರ್ಯಗಳಲ್ಲಿ ಮುನ್ನಡೆಯುವುದು ಉತ್ತಮ. ಮಕ್ಕಳಿಗೆ ನೀವು ಆದರ್ಶರಾಗುವಿರಿ. ನಿಮ್ಮ ಸಂಪೂರ್ಣ ಗಮನವು ವೈಯಕ್ತಿಕ ವಿಷಯಗಳ ಮೇಲೆ ಇರುತ್ತದೆ. ಹಿರಿಯ ಸದಸ್ಯರಿಗೆ ನಿಮ್ಮ ಸಹಕಾರವು ಇರಲಿದೆ. ಕೃಷಿಯಲ್ಲಿ ಲಾಭ ಗಳಿಸಬೇಕೆಂದು ನಾನಾ ಪ್ರಯತ್ನವನ್ನು ಮಾಡುವಿರಿ. ಇಂದಿನ ಆದಾಯಕ್ಕೆ ತಕ್ಕಂತೆ ಖರ್ಚೂ ಇರಲಿದೆ. ನಿಮ್ಮ ಪ್ರೀತಿಗೆ ಇಂದು ಅಧಿಕೃತ ಮುದ್ರೆಯು ಬೀಳಲಿದ್ದು ನಿಮಗೆ ಖುಷಿಯಾಗಲಿದೆ. ನಿಮ್ಮ ವೃತ್ತಿಯ ಕುರಿತು ಯಾರಾದರೂ ಕೇಳಿಯಾರು. ಆದಾಯವನ್ನೂ ಕೇಳಬಹುದು. ಉನ್ನತ ವಿದ್ಯಾಭ್ಯಾಸವು ಯಶಸ್ವಿಯಾಗಿ ಪೂರೈಸುವಿರಿ. ವಿದೇಶದ ವ್ಯವಹಾರವು ನಿಮಗೆ ಸರಿಯಾಗಿ ಆಗಿಬರದು. ಉದರದ ತೊಂದರೆಯನ್ನು ಕಡಿಮೆ ಮಾಡಿಕೊಳ್ಳಿ.
ಕುಂಭ ರಾಶಿ : ನಿಮ್ಮ ಆದಾಯವನ್ನು ಹೆಚ್ಚಿಸುವ ಪ್ರಯತ್ನಗಳು ಪೂರ್ಣವಾಗಿ ಸಫಲವಾಗದು. ನೀವು ಸ್ನೇಹಿತರು ಮತ್ತು ಸಹೋದ್ಯೋಗಿಗಳಿಂದ ಹಣಕಾಸಿನ ಬೆಂಬಲವನ್ನು ಪಡೆಯುತ್ತೀರಿ. ಕಾರ್ಯಕ್ಷೇತ್ರದಲ್ಲಿ, ನೀವು ಬಯಸಿದ ಕೆಲಸವನ್ನು ಮಾಡುವಿರಿ. ನೀವು ಶುಭ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡುತ್ತೀರಿ. ಕಾರ್ಯನಿರ್ವಹಣೆಗೆ ಪ್ರಶಂಸೆಯು ಸಿಗಲಿದೆ. ಒಪ್ಪಂದಕ್ಕೆ ಪೂರ್ಣ ಒಪ್ಪಿಗೆ ಸಿಕ್ಕಮೇಲೆ ಮುಂದುವರಿಯುವುದು ಒಳ್ಳೆಯದು. ಗ್ರಾಹಕರಿಂದ ಮೋಸ ಹೋಗಬೇಕಾದೀತು. ಸಣ್ಣ ಉದ್ಯೋಗವನ್ನು ವಿಸ್ತರಿಸುವ ಮನೋಭಾವವಿರುವುದು. ನಿಮ್ಮನ್ನು ಕೇಳಿಕೊಂಡು ಯಾರಾದರೂ ಅಪರಿಚಿತರು ಬರಬಹುದು. ಯಾರನ್ನಾದರೂ ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮಗೇ ನೆರವು ಬೇಕಾಗಿದ್ದರೂ ಇನ್ನೊಬ್ಬರ ಸಹಾಯಕ್ಕೆ ಹೋಗುವಿರಿ. ನಿಮ್ಮ ವಿರೋಧಿಗಳ ಸಂಖ್ಯೆ ಕಡಿಮೆಯಾಗುವುದು. ನಿಮ್ಮ ದುಡಿಮೆ ನ್ಯಾಯದ ಹಾದಿಯಲ್ಲಿರಲಿ.
ಮೀನ ರಾಶಿ : ಇಂದು ನಿಮ್ಮ ಬಹುಕಾಲದಿಂದ ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸುವ ದಿನವಾಗಿದೆ. ನಿಮ್ಮ ಖರ್ಚುಗಳನ್ನು ನೀವು ನಿಯಂತ್ರಿಸಿದರೆ, ಒಳ್ಳೆಯದೇ. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದಿಂದ ಪ್ರಯೋಜನವುದೆ. ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯು ಸಿಗಬಹುದು. ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿರುವವರು ತಮ್ಮ ಪ್ರಯತ್ನವನ್ನು ಬಿಡಬಾರದು. ನಿಮ್ಮ ಸಂಗಾತಿಯಿಂದ ಮನೋಬಲವು ಹೆಚ್ಚಾಗುವುದು. ನಿರ್ಮಾಣ ಕಾರ್ಯದ ಅಗತ್ಯವನ್ನು ಪೂರೈಸುವಿರಿ.. ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು. ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಮನೆಯ ಬಗ್ಗೆ ಚಿಂತಿಸಬೇಕಾಗುವುದು. ನಿಮ್ಮನ್ನು ಸೋಲನ್ನು ನಿರೀಕ್ಷಿಸುವವರಿಗೆ ಆಹಾರವಾಗುವಿರಿ.
-ಲೋಹಿತ ಹೆಬ್ಬಾರ್ – 8762924271 (what’s app only)