Horoscope: ದಿನಭವಿಷ್ಯ;ಇಂದಿನ ನಿಮ್ಮ ಮಾತಿನಿಂದ ಇತರರು ದ್ವೇಷವನ್ನು ಸಾಧಿಸಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 22ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ;ಇಂದಿನ ನಿಮ್ಮ ಮಾತಿನಿಂದ ಇತರರು ದ್ವೇಷವನ್ನು ಸಾಧಿಸಬಹುದು
ಪ್ರಾತಿನಿಧಿಕ ಚಿತ್ರ
Edited By:

Updated on: Mar 22, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 22) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ:
ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ :ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಧೃತಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:09 ರಿಂದ ಸಂಜೆ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 15:41 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:07 ರಿಂದ 09:38 ರ ವರೆಗೆ.

ಸಿಂಹ ರಾಶಿ : ನಿಮಗೆ ಸಾಲದ ಬಗ್ಗೆ ಚಿಂತೆಯು ಅಧಿಕವಾಗಲಿದೆ. ನಿಮ್ಮ ಸ್ವಭಾವವು ಕೆಲವರಿಗೆ ಕಷ್ಟವಾಗುವುದು. ಆದಾಯದ ಮೂಲದಿಂದ ನಿಮಗೆ ಖುಷಿ ಇರಲಿದೆ. ಉತ್ತಮ ಆರ್ಥಿಕತೆಗಾಗಿ ನೀವು ವಿದೇಶದ ವ್ಯಾಪಾರದಲ್ಲಿ ಆಸಕ್ತಿ ಬರಬಹುದು. ಸತತ ಪ್ರಯತ್ನದಿಂದ ಆದಾಯ ಹಾಗೂ ಖರ್ಚನ್ನು ಸರಿಯಾಗಿ ತೂಗಿಸಲು ತಿಳಿಯುವಿರಿ. ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ಆದಾಯದ ಭಾಗವನ್ನು ದಾನ ಮಾಡುವ ಆಸೆ ಬರಬಹುದು. ಗೆಳೆಯರ ಮಾತನ್ನು ಗೌರವಿಸಿದ್ದು ಅವರಿಗೆ ಸಂತೋಷವಾಗಲಿದೆ. ಕಲಾವಿದರಿಗೆ ಪ್ರಶಂಸೆಯು ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬಗ್ಗೆ ಜಾಗರೂಕತೆ ಇರಲಿ. ಸಮಸ್ಯೆಯನ್ನು ತಿಳಿದುಕೊಳ್ಳುವಿರಿ. ಹಿತಶತ್ರುಗಳಿಂದ ನೀವು ದೂರವಿರಲು ಬಯಸುವಿರಿ.

ಕನ್ಯಾ ರಾಶಿ : ಇಂದು ನಿಮಗೆ ಕಛೇರಿಯಲ್ಲಿ ಇರುವಷ್ಟು ಹೊತ್ತ ಉದ್ವೇಗದಲ್ಲಿ ಇರುವಿರಿ. ಹಣವನ್ನು ಕೇಳಿದವರಿಗೆ ಇಂದು ಕೊಡುವುದು ಬೇಡ. ಸಹೋದರಿಯ ಜೊತೆ ಮನಸ್ತಾಪ ಮಾಡಿಕೊಳ್ಳುವಿರಿ. ಗೃಹನಿರ್ಮಾಣವು ನೀವಂದುಕೊಂಡಷ್ಟು ಸರಳವಾಗಿ ಇರದು. ಉತ್ತಮ‌ ದಿನದ ನಿರೀಕ್ಷೆಯಲ್ಲಿ ಇರುವ ನಿಮಗೆ ಬೇಸರವಾದೀತು. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದು. ಹೇಳದೇ ಮೌನದಿಂದ ಇರುವಿರಿ. ಬಿಗುಮಾನವನ್ನು ಬಿಟ್ಟು ಎಲ್ಲರ ಜೊತೆ ಬೆರೆಯುವ ಅಭ್ಯಾಸವು ಬೇಕಾಗುವುದು. ನೆಮ್ಮದಿಗಾಗಿ ಚಡಪಡಿಸುವಿರಿ. ಸಂಗಾತಿಗೆ ಬೇಕಾದ ವಸ್ತುವನ್ನು ಕೊಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡುವುದು. ಯಾರ ಮಾತನ್ನೂ ಕೇಳುವ ತಾಳ್ಮೆ ಇರದು. ನಿಮ್ಮವರ ಬಗ್ಗೆ ಕಾಳಜಿ ಇರಲಿದೆ.

ತುಲಾ ರಾಶಿ : ಇಂದು ನಿಮ್ಮ ಸಂಗಾತಿಯು ನಿಮ್ಮನ್ನು ಹೆಚ್ಚು ಇಷ್ಟಪಡಬಹುದು. ಸ್ನೇಹಿತರು ಬಂಧುಗಳಾಗುವ ಸನ್ನಿವೇಶವು ಬರಬಹುದು. ನಿಮ್ಮ ಆಲೋಚನೆಯು ವಾಸ್ತವಕ್ಕಿಂತ ಭಿನ್ನವಾಗಿ ಕಾಣಿಸುವುದು. ಕೆಟ್ಟ ಆಲೋಚನೆಯಿಂದ ದೂರವಿರುವುದು ಸುಖ. ರಾಜಕೀಯದಲ್ಲಿ ನಿಮಗೆ ಆಸಕ್ತಿಯು ಇದ್ದರೂ ಪ್ರವೇಶಕ್ಕೆ ಮಾರ್ಗವನ್ನು ಹುಡುಕುವಿರಿ. ಹಿರಿಯರಿಗೆ ಅಗೌರವದಿಂದ ಮಾತನಾಡಿ, ಅನಂತರ ಪಶ್ಚಾತ್ತಾಪಪಡುವಿರಿ. ತೀರ್ಥಯಾತ್ರೆಯ ಸಂದರ್ಭವು ಬರಬಹುದು. ಹಣಕಾಸಿನ ಕೊರತೆಯಿಂದ ಯಾವದೋ ಕಾರ್ಯವನ್ನು ಮಾಡುವಿರಿ. ಸಿಟ್ಟಿನಿಂದ ಇಂದು ಖುಷಿಯ ವಾತಾವರಣದಿಂದ ದೂರವಿರುವಿರಿ. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ.‌ ಮಕ್ಕಳ‌ ಮೇಲೆ‌ ನಿಮ್ಮ ಮೋಹವು ಅತಿಯಾಗಿದ್ದು ಅದು ಬಂಧನವೂ ಆಗಬಹುದು. ಬೇಕಾದುದನ್ನು ಪಡೆಯಲು ಸಂಕೋಚವಾಗುವುದು.

ವೃಶ್ಚಿಕ ರಾಶಿ : ನಿಮ್ಮ ಇಂದಿನ ಸುಖಕರ ಪ್ರಯಾಣವನ್ನು ಬಹಳ ಉತ್ಸಾಹದಿಂದ ಮಾಡುವಿರಿ. ಅತಿಯಾದ ಧೈರ್ಯವೂ ನಿಮಗೆ ಮುಳುವಾಗಬಹುದು. ಮನಸ್ತಾಪವನ್ನು ದೀರ್ಘಕಾಲ ಮುಂದುವರಿಸದೇ ಅಲ್ಲಿಗೇ ನಿಲ್ಲುಸುವುದು ಕ್ಷೇಮಕರ. ವಿವಾಹ ಸಮಾರಂಭದಲ್ಲಿ ಭಾಗಿಯಾಗುವಿರಿ. ಹೂಡಿಕೆಯಲ್ಲಿ ಇಂದು ಲಾಭ ಸಿಗದೇಹೋಗಬಹುದು. ಇಂದಿನ ನಿಮ್ಮ ಮಾತಿನಿಂದ ದ್ವೇಷವನ್ನು ಸಾಧಿಸಬಹುದು. ನಿಮಗೆ ನಕಾರಾತ್ಮಕ ಹಣೆಪಟ್ಟಿಯು ನಿಮಗೆ ಬೀಳಬಹುದು, ಎಚ್ಚರವಿರಲಿ. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು. ವಿದ್ಯಾದಾನವನ್ನು ಮಾಡಿದವರನ್ನು ಗೌರವಿಸುವಿರಿ. ಒರಟು ತನವನ್ನು ಬಿಟ್ಟಷ್ಟು ನಿಮಗೇ ಒಳ್ಳೆಯದು. ಓಡಾಟದ ಸಮಯದಲ್ಲಿ ನಿಮ್ಮ‌ ವಸ್ತುವು ಕಾಣೆಯಾಗಿದ್ದು ನಿಮಗೆ ಗೊತ್ತಾಗದು. ಕಳೆದುಕೊಂಡ ವಸ್ತುವಿನ ಮೌಲ್ಯವು ನಿಮಗೆ ಗೊತ್ತಾಗದೇ ಹೋಗುವುದು. ಮಕ್ಕಳನ್ನು ದೂರ ಮಾಡಿಕೊಳ್ಳುವುದು ಕಷ್ಟವಾದೀತು.