Horoscope: ನಿತ್ಯಭವಿಷ್ಯ; ಇಂದು ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ನಷ್ಟವಾಗಬಹುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 28, 2024 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 28 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ನಿತ್ಯಭವಿಷ್ಯ; ಇಂದು ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ನಷ್ಟವಾಗಬಹುದು
ದಿನ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್​​​​​ 28) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ತೃತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಹರ್ಷಣ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:09 ರಿಂದ 03:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:32 ರಿಂದ 08:03ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:35 ರಿಂದ 11:06

ಧನು ರಾಶಿ : ಇಂದು ಕೋಪದ ಬದಲಿಗೆ ತಾಳ್ಮೆಯಿಂದ ಆಗಬೇಕಾದ ಕೆಲಸವನ್ನು ಪೂರ್ಣಮಾಡಿ.‌ ಆದಾಯದ ಮೂಲದಿಂದ ಕಡಿಮೆ ಹಣವು ಸಿಗಲಿದೆ. ನೀವು ಹೂಡಿಕೆ ಮಾಡಿದ್ದರೆ, ನೀವು ಸರಿಯಾದ ಫಲಿತಾಂಶವನ್ನು ಪಡೆಯಬಹುದು. ನೀವು ಹೊಸ ಆಸ್ತಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ ನೀವು ಮುಂದುವರಿಯಬಹುದು. ಕಚೇರಿಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ಅನಗತ್ಯ ಚಿಂತೆಗಳಿಂದ ದೂರವಿರಿ. ನಿಮ್ಮ ಸಿಟ್ಟಿನ ಸ್ವಭಾವದಿಂದ ಏನನ್ನೂ ಸಾಧಿಸಲಾಗದು. ಸಾಮಾಜಿಕ ಕಾರ್ಯಗಳಿಗೆ ಬೇಕಾದ ತಂಡವನ್ನು ಕಟ್ಟುವ ಆಸೆ ಇರುವುದು. ಯಾರನ್ನೋ ನೋಡಿ ನೀವು ಅಸೂಯೆ ಪಡೆಯುವುದು ಬೇಡ.‌ ಹೊರಗಿನ ಆಹಾರದಿಂದ ಸಂತೋಷವಾಗಬಹುದು. ಉದ್ವೇಗಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು.

ಮಕರ ರಾಶಿ : ಇಂದು ವಿದ್ಯಾರ್ಥಗಳಿಗೆ ವಿದ್ಯಾಭ್ಯಾಸಕ್ಕೆ ಉತ್ತಮ‌ ದಿನವಾಗಲಿದೆ. ವ್ಯಾಪಾರದವರು ಹಣಕಾಸಿನ ನಷ್ಟವಾಗಬಹುದು. ಆತುರಾತುರವಾಗಿ ತೆಗೆದುಕೊಳ್ಳುವ ನಿರ್ಧಾರವು ಅಸ್ಪಷತಟವಾಗಿ ಇರುವುದು. ನಿಮ್ಮ ಆರ್ಥಿಕ ಸ್ಥಿತಿಯು ಇಂದು ಸಾಮಾನ್ಯವಾಗಿರುತ್ತದೆ. ಹಾಗಾಗಿ ಹೆಚ್ಚು ಹಣ ಖರ್ಚು ಮಾಡಬೇಡಿ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ. ಇಂದು ರಾಜಕೀಯದಲ್ಲಿ ಆದ ಬೆಳವಣಿಗೆಯು ನಿಮ್ಮ ಪರವಾಗಿ ಇರುವುದು. ಪ್ರಭಾವಿ ವ್ಯಕ್ತಿಗಳಿಂದ ತೊಂದರೆಯು ದೂರಾಗಬಹುದು. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ಹೊಸ ವ್ಯವಹಾರಕ್ಕೆ ಹಿಂದೇಟು ಹಾಕುವಿರಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು.

ಕುಂಭ ರಾಶಿ : ಜೀವನದಲ್ಲಿ ಏರಿಳಿತಗಳಿರಬಹುದು. ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಪ್ರೀತಿಪಾತ್ರರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ. ಬಾಕಿ ಇರುವ ಕೆಲಸದ ಹೊರೆ ಹೆಚ್ಚಾಗಬಹುದು. ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕುಟುಂಬ ಸದಸ್ಯರಿಂದ ನೀವು ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ಸತತ ಓಡಾಟದಿಂದ ಆರೋಗ್ಯದಲ್ಲಿ ಸಮಸ್ಯೆಯಾಗಬಹುದು. ಬಹಳ ದಿನಗಳಿಂದ ಬಾರದೇ ಇರುವ ಹಣಕ್ಕೆ ಚಿಂತೆ ಮಾಡಿಕೊಳ್ಳುವಿರಿ. ಮೇಲಧಿಕಾರಿಗಳ ಪ್ರಶಂಸೆಯು ನಿಮಗೆ ಮಾಡುವ ಕೆಲಸದಲ್ಲಿ ಉತ್ಸಾಹ ಹೆಚ್ಚಿಸುವುದು. ನೀವು ಕಾಲ್ಪನಿಕ ಪ್ರಪಂಚಕ್ಕೆ ಪ್ರಯಾಣಿಸುವಿರಿ. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು.

ಮೀನ ರಾಶಿ : ಇಂದು ವ್ಯಾಪಾರಸ್ಥರು ಹೊಸ ಯೋಜನೆಯಲ್ಲಿ ಕೆಲಸವನ್ನು ಆರಂಭಿಸಲು ಭಯಪಡುವರು. ನಿಮ್ಮ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮಗೆ ಸಲಹೆ ಬೇಕಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಸುಧಾರಿಸಿದ್ದು ಹೆಚ್ಚು ಅನುಕೂಲತೆ ಒದಗುವುದು. ಕುಟುಂಬ ಸದಸ್ಯರಿಂದ ನೀವು ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಸ್ನೇಹಿತರ ಒತ್ತಾಯಕ್ಕೆ ಅನವಶ್ಯಕ ವಸ್ತುವಾದರೂ ಖರೀದಿಸುವಿರಿ. ವೃತ್ತಿಯಲ್ಲಿ ಬರುವ ಸವಾಲುಗಳು ಬರಬಹುದು. ಎಲ್ಲ ಕಡೆಗಳಿಂದ ಸಕಾರಾತ್ಮಕ ಫಲಿತಾಂಶವನ್ನು ನಿರೀಕ್ಷಿಸುವಿರಿ. ಇಂದು ಬಿಡುವಿಲ್ಲದ ದಿನವಾಗಿರುವುದು. ಕೆಲವು ವಿಚಾರಕ್ಕೆ ತುಂಬಾ ಭಾವುಕರಾಗಬಹುದು. ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿಲ್ಲದೆ ಇರಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಜಲಮೂಲಗಳಿಂದ ಆದಾಯ ಸಿಗಬಹುದು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)