Horoscope: ನಿತ್ಯ ಭವಿಷ್ಯ; ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು-ಎಚ್ಚರ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 02, 2024 | 12:17 AM

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 02 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು-ಎಚ್ಚರ
ದಿನ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶುಕ್ಲ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ02:04 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:11 ರಿಂದ 07:45 ರ ವರೆಗೆ, ಗುಳಿಕ ಕಾಲ 09:20 ರಿಂದ 10:55ರ ವರೆಗೆ

ಮೇಷ ರಾಶಿ : ಸಂಗಾತಿಯು ನಿಮ್ಮ ಇಂಗಿತವನ್ನು ಅರಿತು ಕೆಲಸ ಮಾಡುವರು. ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ದುಡುಕಿನ ನಿರ್ಧಾರಗಳನ್ನು ತಗೆದುಕೊಂಡು ಸಂಕಟಪಡಬೇಕಾದೀತು. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸುತ್ತಾಡುವ ಮನಸ್ಸಿರಲಿದೆ. ಗಂಡನಿಗೆ ವಿರುದ್ಧವಾದ ಕೆಲಸವನ್ನು ಮಾಡಿ ಮಾತಿಗೆ ಗುರಿಯಾಗುವಿರಿ. ನಿಮ್ಮನ್ನು ನಿಂದಿಸಲು ಕೆಲವು ಹೊಂಚು ಹಾಕಿದ್ದು ತಿಳಿದು ಅದನ್ನು ಸರಿ ಮಾಡಿಕೊಳ್ಳುವಿರಿ. ಧನಾಭಾವದಿಂದ ಸಾಲವನ್ನು ಮಾಡುವ ಸಾಧ್ಯತೆಯಿದೆ. ವಾಹನ ಖರೀದಿಯ ವಿಚಾರದಲ್ಲಿ ಗೊಂದಲಗಳು ಇರಬಹುದು. ಕೆಲವು ಹವ್ಯಾಸಗಳು ಚಟವಾಗಿಯೂ ಪರಿವರ್ತನೆ ಆಗಬಹುದು. ಬಿಡಸಲಾಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ಆಪ್ತರ ಸಲಹೆಯನ್ನು ಪಡೆಯಿರಿ. ಉದ್ಯೋಗದ ನಿಮಿತ್ತ ಪರದೇಶಕ್ಕೆ ಪ್ರಯಾಣವನ್ನು ಮಾಡಲಿದ್ದೀರಿ.

ವೃಷಭ ರಾಶಿ : ಇಂದು ಸ್ತ್ರೀಯರು ಸ್ವಪ್ರಯತ್ನದಿಂದ ಲಾಭ ಗಳಿಸುವರು. ನಿಮ್ಮ ಶ್ರಮಕ್ಕೆ ದೈವವು ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಜಾಹೀರಾತಿಗೆ ಮನಸೋತು ಹಣವನ್ನು ಕಳೆದುಕೊಳ್ಳಬೇಕಾಗುವುದು. ಅಪರಿಚಿತ ದೂರವಾಣಿಯು ನಿಮ್ಮನ್ನು ದಿಗಿಲುಗೊಳಿಸಬಹುದು. ಸುಳ್ಳಾಡಿ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಒತ್ತಡದಿಂದ ನಿಮಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಕೆಲವರ ಮಾತು ಉತ್ಸಾಹವನ್ನು ಹಾಳು ಮಾಡುವುದು. ನೀವು ಮಾಡುವ ಕೆಲಸವು ಅಶಿಸ್ತಿನಿಂದ ಇರಬಹುದು. ದೂರದ ಬಂಧುಗಳು ನಿಮ್ಮ ಪರಿಚಯವನ್ನು ಮಾಡಿಕೊಂಡಾರು. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ.

ಮಿಥುನ ರಾಶಿ : ನಿಮ್ಮ ಅಶಕ್ತತೆಯು ಸಿಟ್ಟಾಗಿ ಬದಲಾಗುವುದು. ತಂದೆಯ ಜೊತೆ ವ್ಯವಹಾರದ ವಿಚಾರಕ್ಕೆ ಕಲಹವಾಗಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ದೈವದ ಸಹಾಯವನ್ನು ನೀವು ಪಡೆಯಬೇಕಾಗಿರುವುದು ಅನಿವಾರ್ಯ. ಆಪ್ತರ ಸಲಹೆಗಳು ನಿಮಗೆ ಅನುಕೂಲಕರವಾಗಿರಲಿವೆ. ಪುಣ್ಯಕ್ಷೇತ್ರಗಳ ಭೇಟಿಯಿಂದ ನಿಮಗೆ ಸಂತಸ ಸಿಗಲಿದೆ‌. ನಿಮ್ಮವರಿಂದಲೇ ವಂಚಿತರಾಗುವಿರಿ. ಆಪ್ತರೆಂದು ನಿಮ್ಮ ಎಲ್ಲ ವಿಚಾರಗಳನ್ನು ಯಾರ ಜೊತೆಯೂ ಹಂಚಿಕೊಳ್ಳಬೇಡಿ. ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ನಿರ್ಮಾಣ ಮಾಡಿಕೊಳ್ಳುವಿರಿ.

ಕಟಕ ರಾಶಿ : ನೀವು ದುಶ್ಚಟದಿಂದ ದೂರವಿರಲು ಮನಸ್ಸು ಮಾಡುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಇರುತ್ತದೆ. ಅಪರಿಚಿತ ವ್ಯಕ್ತಿಗಳ ಸಹವಾಸದಿಂದ ನಿಮಗೆ ವಂಚನೆಯಾಗಬಹುದು. ಕೃಷಿಯಲ್ಲಿ ನೀವು ಮಾಡಿದ ಕೆಲಸವು ಪ್ರಶಂಸೆಗೆ ಒಳಗಾಗುವುದು. ಉತ್ತಮ ಇಳುವರಿಯನ್ನು ಪಡೆಯುವಿರಿ. ವಾಹನದಲ್ಲಿ ಸಂಚಾರ ಮಾಡಿ ಖುಷಿ ಪಡುವಿರಿ. ಬಂಧುಗಳ ಮನೆಯಲ್ಲಿ ಇಂದು ನಿಮ್ಮ ವಾಸವಿರಲಿದೆ. ಮಕ್ಕಳು ಕಲಿಕೆಯಲ್ಲಿ ಆಸಕ್ತಿಯನ್ನು ತೋರಿಸದೇ ಇರುವುದರಿಂದ ಬೈಯ್ಯುವಿರಿ. ಆಲಸ್ಯದಿಂದ ಹೊರಬರಬೇಕಾದ ಸ್ಥಿತಿಯು ಇದೆ. ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ. ಅಪರಿಚಿತರನ್ನು ಆಪ್ತರನ್ನಾಗಿ ಮಾಡಿಕೊಳ್ಳಲು ಹೋಗಿ ಅನಾಹುತವಾದೀತು. ನಿಮಗಿರುವ ಖಾಯಿಲೆಯು ದೇಹಕ್ಕಿಂತ‌ ಮನಸ್ಸಿಗೇ ತೊಂದರೆ‌ಮಾಡುವುದು.