Horoscope: ನಿತ್ಯ ಭವಿಷ್ಯ; ಈ ರಾಶಿಯವರು ಇಂದು ವಾಹನವನ್ನು ನಿಧಾನವಾಗಿ ಚಲಾಯಿಸಿ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 10 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶೋಭನ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:54 ರಿಂದ 12:29ರ ವರೆಗೆ, ಯಮಘಂಡ ಕಾಲ 15:40 ರಿಂದ 17:15ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:43 ರಿಂದ 09:18ರ ವರೆಗೆ.
ಮೇಷ ರಾಶಿ :ನಿಮ್ಮ ದಾಯಾದಿ ಕಲಹವು ನ್ಯಾಯಾಲಯದ ವರಗೂ ಹೋಗಬಹುದು. ಹೋರಾಟದ ಸ್ವಭಾವವು ಎದ್ದು ತೋರುವುದು. ಪುಣ್ಯಕ್ಷೇತ್ರಗಳ ದರ್ಶನವನ್ನು ಪಡೆಯುವಿರಿ. ಅಪರಿಚಿತಸ್ಥಳವು ಆಪ್ತವೂ ಆಗಲಿದೆ. ಮನೆಯಿಂದ ದೂರದಲ್ಲಿ ಇರುವವರಿಗೆ ಮನೆಯ ಹಂಬಲವಾಗುವುದು. ಒಂಟಿಯಾಗಿ ಇರಲು ಇಷ್ಟಪಡುವಿರಿ. ತಿಳಿವಳಿಕೆಯ ಮಟ್ಟವು ಎಲ್ಲರಿಗೂ ಅರಿವಾಗುವುದು. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ದೂರ ಪ್ರಯಾಣಕ್ಕೆ ವೈದ್ಯರು ನಿರ್ಬಂಧ ಹಾಕಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಯಾವುದೇ ನಿರ್ಬಂಧಗಳನ್ನು ಕೂಡಲೇ ಒಪ್ಪುವುದಿಲ್ಲ.
ವೃಷಭ ರಾಶಿ :ನೀವು ಅದೃಷ್ಟದ ನಿರೀಕ್ಷೆಯಲ್ಲಿ ಇರುವಿರಿ. ಯಾರನ್ನಾದರೂ ಮೆಚ್ಚಿಸಿ ನಿಮ್ಮ ಕೆಲಸವನ್ನು ಪಕ್ಕಕ್ಕಿರಿಸುವಿರಿ. ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ನಿಮ್ಮ ಕುಟುಂಬ ಸದಸ್ಯರಿಗೆ ನೀವು ವಿಶ್ವಾಸದ್ರೋಹಿ ಆಗುವ ಸಾಧ್ಯತೆಯಿದೆ. ಹಳೆಯ ಸ್ನೇಹಿತನನ್ನು ಯಾವುದಾದರೂ ರೀತಿಯಲ್ಲಿ ಭೇಟಿಯಾಗುವಿರಿ. ಮಾತಿನ ಹದವು ತಪ್ಪಿ ನಿಮ್ಮ ಬಾಯನ್ನೇ ಸುಡಬಹುದು. ಕುಟುಂಬ ವ್ಯವಸ್ಥೆ ಸರಿಯಾಗಲು ಕೆಲವನ್ನು ಬಿಟ್ಟುಕೊಡಬೇಕಾದೀತು. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಶಾರೀರಿಕ ಆಯಾಸದಿಂದ ಆರೋಗ್ಯವು ಕುಗ್ಗೀತು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ಪರರ ಉಪಕಾರದ ಸ್ಮರಣೆ ಇರಲಿ.
ಮಿಥುನ ರಾಶಿ :ಇಂದು ನೀವು ಬಹಳ ಕಷ್ಟಪಟ್ಟು ಕೆಲಸ ಮಾಡಲಿದ್ದೀರಿ. ತಾತ್ಸಾರ ಮಾಡದೇ ಕ್ರಮಬದ್ಧವಾಗಿ ಶತ್ರುಗಳನ್ನು ಗೆಲ್ಲಿರಿ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ಕೃಷಿಕರು ತಮ್ಮ ಮುಂದಿನ ಯೋಚನೆಗಳನ್ನು ಮಾಡುವರು. ಸಂದರ್ಭಕ್ಕೆ ಯೋಗ್ಯವಾಗಿ ವರ್ತಿಸಿ. ಎಲ್ಲವನ್ನೂ ಮುಂಗೋಪದಿಂದ ನಾಶಮಾಡುವಿರಿ. ವಾಹನವನ್ನು ನಿಧಾನವಾಗಿ ಚಲಾಯಿಸಿ. ಬೇರೆಯವರ ತಪ್ಪಿನಿಂದ ನಿಮಗೆ ತೊಂದರೆಗಳು ಆಗಬಹುದು. ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡಲಿದೆ. ಹಿಂದಿನ ಹೂಡಿಕೆಗಳು ಬಹಳ ಆದಾಯವು ಸಿಗಲಿದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ತಾಳ್ಮೆಯ ಅಗತ್ಯತೆಯ ಮನವರಿಕೆ ಅಗತ್ಯ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು.
ಕಟಕ ರಾಶಿ :ವಿದ್ಯಾರ್ಥಿಗಳ ಒಟ್ಟಾರೆ ಕಾರ್ಯಕ್ಷಮತೆ ಗಮನಾರ್ಹ ಸುಧಾರಣೆ ಇರಲಿದೆ. ನಿಮ್ಮ ಅಂದಿನ ಸ್ಥಿತಿಯನ್ನು ನೆನೆಸಿಕೊಂಡು ಹೆಮ್ಮೆಪಡಲಿದ್ದೀರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಹವಣಿಸುವಿರಿ. ನೀವು ಆಪ್ತರಿಗೋಸ್ಕರ ಸಮಯವನ್ನು ಇಡಲಿದ್ದೀರಿ. ಹಳೆಯ ಪ್ರೇಮಪ್ರಕರಣವು ಇಂದು ಬೆಳಕಿಗೆ ಬರಬಹುದು. ನಿಮಗೆ ಬೆಲೆ ಕೊಡದೇ ಇರುವದನ್ನು ಕಂಡು ಬೇಸರಿಸುವಿರಿ. ಶತ್ರುಗಳು ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬರಬಹುದು. ಉದ್ವೇಗದಿಂದ ಏನನ್ನಾದರೂ ಮಾಡಿಕೊಂಡೀರ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಹೊಟ್ಟೆಯ ಸ್ವಾಸ್ಥ್ಯವು ಕೆಡುವ ಸಾಧ್ಯತೆಯಿದೆ. ಹಿರಿಯರ ವಿಚಾರದಲ್ಲಿ ಅನಾದರ ತೋರಿದಂತೆ ಕಾಣಿಸುವುದು. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಸಂಗಾತಿಯನ್ನು ನೀವು ಮರೆತು ವ್ಯವಹರಿಸುವಿರಿ. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ.




