Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 12ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4, 5, 6 ರವರಿಗೆ ವೃತ್ತಿ, ವ್ಯಾಪಾರ, ಹೂಡಿಕೆ ಹಾಗೂ ದೇವತಾ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ಲಾಭ ದೊರೆಯಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 12ರ ದಿನಭವಿಷ್ಯ
Numerology
Image Credit source: google
Edited By:

Updated on: Feb 12, 2026 | 12:15 AM

ದುರ್ಗಾ ಸೂಕ್ತದ ಶ್ರವಣ ಮಾಡಿದಲ್ಲಿ ಕೆಲವು ಬೆಳವಣಿಗೆಗಳು ನಿಮ್ಮ ಪರವಾಗಿ ಆಗಲಿವೆ. ಒಂದು ವೇಳೆ ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಆ ವಿಚಾರದಲ್ಲಿ ನಿಮಗೆ ಕಾಡುತ್ತಿರುವ ಅಡೆತಡೆಗಳು ದೂರ ಆಗಲಿವೆ. ಆರ್ಥಿಕ ಒತ್ತಡಗಳಿಂದ ಹೊರಬರಲು ಸಹಾಯಗಳು ಒದಗಲಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಸೇಲ್ಸ್- ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ ಅಂತಾದಲ್ಲಿ ಮೇಲಧಿಕಾರಿ ನೀಡುವ ಸಲಹೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ. ದೂರ ಪ್ರಯಾಣ ಅನಿವಾರ್ಯ ಅಂತಾದಲ್ಲಿ ಯಾವುದೇ ಹಿಂಜರಿಕೆ ಮಾಡದೆ ಹೊರಟುಬಿಡಿ. ಇದರಿಂದ ನಿಮಗೆ ಹಲವು ರೀತಿಯಲ್ಲಿ ಅನುಕೂಲಗಳು ಒದಗಿಬರಲಿವೆ. ದೇವತಾ ಕಾರ್ಯಗಳಲ್ಲಿ ಭಾಗೀ ಆಗುವುದಕ್ಕೆ ಆಹ್ವಾನ ಬಂದಲ್ಲಿ ಇಲ್ಲ ಎನ್ನದೆ ಕಡ್ಡಾಯವಾಗಿ ಭಾಗಿ ಆಗುವುದಕ್ಕೆ ಪ್ರಯತ್ನಿಸಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಸಾವಯವ ಉತ್ಪನ್ನಗಳ ಮಾರಾಟ ಮಾಡುತ್ತಾ ಇರುವವರು ವ್ಯಾಪಾರದ ವಿಸ್ತರಣೆಗೆ ಹಲವು ರೀತಿ ಪ್ರಯತ್ನಗಳನ್ನು ಮಾಡಲಿದ್ದೀರಿ. ನಿಮ್ಮ ಉಳಿತಾಯ ಹಾಗೂ ಹೂಡಿಕೆ ಮಾಡಿದ್ದ ಹಣವನ್ನು ತೆಗೆದು, ಅದನ್ನು ಈ ಉದ್ದೇಶಕ್ಕೆ ಬಳಸುವುದಕ್ಕೆ ಮುಂದಾಗಲಿದ್ದೀರಿ. ಹೊಸ ಮಾರುಕಟ್ಟೆಯಲ್ಲಿ ಈಗಷ್ಟೇ ಕೆಲಸ ಆರಂಭಿಸಿದವರು ತಾಳ್ಮೆ- ಸಂಯಮ ವಹಿಸುವುದು ಮುಖ್ಯವಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಹಣ್ಣು- ತರಕಾರಿ ಬೆಳೆಗಾರರಿಗೆ ಹೊಸ ವ್ಯಕ್ತಿಗಳ ಪರಿಚಯದಿಂದ ಲಾಭದ ಪ್ರಮಾಣ ಹೆಚ್ಚಿಸಿಕೊಳ್ಳಲು ಮಾರ್ಗೋಪಾಯ ಗೋಚರ ಆಗಲಿವೆ. ಇಷ್ಟು ದಿನ ಯಾವ ಅಡೆತಡೆಗಳು ನಿಮಗೆ ಸವಾಲಾಗಿ ಪರಿಣಮಿಸಿದ್ದವೋ ಅವುಗಳನ್ನು ದಾಟುವುದಕ್ಕೆ ಸಾಧ್ಯವಾಗಲಿದೆ. ಚಿತ್ರಮಂದಿರಗಳ ಮಾಲೀಕರು ವ್ಯವಹಾರದಲ್ಲಿ ಬದಲಾವಣೆ ಮಾಡಿಕೊಳ್ಳಲು ತೀರ್ಮಾನ ಮಾಡುತ್ತೀರಿ. ಇದಕ್ಕೆ ಕುಟುಂಬ ಸದಸ್ಯರ ಬೆಂಬಲ ಸಹ ದೊರೆಯಲಿದೆ.

ಲೇಖನ- ಸ್ವಾತಿ ಎನ್.ಕೆ.