AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ

ಜನವರಿ 24ರ ಸಂಖ್ಯಾಶಾಸ್ತ್ರ ಆಧಾರಿತ ದಿನಭವಿಷ್ಯ ಇಲ್ಲಿ ಲಭ್ಯವಿದೆ. ಜನ್ಮಸಂಖ್ಯೆ 1, 2 ಮತ್ತು 3ರವರು ತಮ್ಮ ನಿರ್ಧಾರಗಳು, ಹಣಕಾಸು ವಿಚಾರ, ವೃತ್ತಿಪರ ಸಂಬಂಧಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಪ್ರಮುಖ ಮಾಹಿತಿಗಳನ್ನು ಇದು ಒದಗಿಸುತ್ತದೆ. ನಿಮ್ಮ ದಿನವನ್ನು ಯಶಸ್ವಿಯಾಗಿ ಯೋಜಿಸಲು ಮತ್ತು ಉತ್ತಮಗೊಳಿಸಲು ಅಗತ್ಯ ಸಲಹೆಗಳನ್ನು ಪಡೆಯಿರಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
ಸ್ವಾತಿ ಎನ್​ಕೆ
| Edited By: |

Updated on: Jan 24, 2026 | 1:17 AM

Share

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ನಿರ್ಧಾರಗಳ ಬಗ್ಗೆ ನಂಬಿಕೆ ಇರುವುದು ತಪ್ಪಲ್ಲ. ಆದರೆ ಯಾವುದಾದರೂ ಅವಕಾಶ ಸಿಕ್ಕಿದೆ ಎಂಬ ಕಾರಣಕ್ಕೆ ವಿನಾಕಾರಣದ ಉದ್ವೇಗ ಯಾವುದೇ ರೀತಿಯಲ್ಲೂ ಸರಿಯಲ್ಲ. ಆದ್ದರಿಂದ ಸಾವಧಾನದಿಂದ ಆಲೋಚನೆ ಮಾಡಿದ ಮೇಲಷ್ಟೇ ಅಭಿಪ್ರಾಯವನ್ನಾಗಲೀ ಹಣಕಾಸಿನ ವಿಚಾರಗಳ ಬಗ್ಗೆ ಆಗಲೀ ಮಾತನ್ನು ಶುರು ಮಾಡಿ. ಸಹೋದ್ಯೋಗಿಗಳನ್ನು ತಮಾಷೆಗಾದರೂ ಸರಿ, ಹೀಗಳೆಯುವುದೋ ಅಥವಾ ಮೂದಲಿಸುವುದೋ ಮಾಡಬೇಡಿ. ಈಗಿರುವ ಉದ್ಯೋಗ ಬದಲಾವಣೆ ಮಾಡಲೇಬೆಕು ಎಂಬ ಸನ್ನಿವೇಶ ಉದ್ಭವಿಸಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮಗೆ ಸರಿ ಎಂದು ತಿಳಿದಿದ್ದರೂ ಒಂದಕ್ಕೆ ನಾಲ್ಕು ಬಾರಿ ಎಂಬಂತೆ ನಿರ್ಧಾರವನ್ನು ಅಳೆದು- ತೂಗಿ ನೋಡುವುದು ಉತ್ತಮ. ಅದರಲ್ಲೂ ನೀವೇ ಸರಿ ಎಂಬ ಧೋರಣೆಯಿಂದ ನಿಷ್ಠುರವಾದಿಗಳಂತೆ ನೇರಾನೇರ ಮಾತನಾಡುವುದಕ್ಕೆ ಹೋಗದಿರಿ. ನೀವು ತರ್ಕಬದ್ಧವಾಗಿಯೇ ಮಾತನಾಡಬಹುದು ಹಾಗೂ ನಿರ್ದಿಷ್ಟ ವ್ಯಕ್ತಿಯದೇ ತಪ್ಪು ಸಹ ಇರಬಹುದು. ಆದರೆ ಆ ಕಾರಣಕ್ಕಾಗಿ ಆತ್ಮವಿಶ್ವಾಸವನ್ನು ಕುಗ್ಗಿಸುವ ರೀತಿಯಲ್ಲಿ ಮಾತನಾಡಬೇಡಿ. ಸಾಮಾಜಿಕವಾಗಿ ಹೆಚ್ಚು ತೊಡಗಿಕೊಳ್ಳುತ್ತೀರಿ ಅಂತಾದಲ್ಲಿ ನಿಮ್ಮ ವರ್ಚಸ್ಸಿಗೆ ತಕ್ಕಂತೆ ನಡೆದುಕೊಳ್ಳುವುದು ಉತ್ತಮ.

ಇದನ್ನೂ ಓದಿ: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮಗೆ ಕೀರ್ತಿ- ಪ್ರತಿಷ್ಠೆಗಳು ಹೆಚ್ಚಾಗುವ ಸಮಯ ಇದು. ನೀವು ಸಮಯಸ್ಫೂರ್ತಿಯಿಂದ ತೆಗೆದುಕೊಂಡ ರಿಸ್ಕ್ ಪರಿಣಾಮವಾಗಿ ಇತರರು ಅಚ್ಚರಿಯಿಂದ ನಿಮ್ಮನ್ನು ನೋಡುವಂತೆ ಆಗುತ್ತದೆ. ಆರ್.ಡಿ., ಎಫ್.ಡಿ., ಇಂಥದ್ದನ್ನು ಮಾಡಿಸುವ ಬಗ್ಗೆ ಆಲೋಚನೆಯನ್ನು ಮಾಡಲಿದ್ದೀರಿ. ರಾಜಕಾರಣದಲ್ಲಿ ಇರುವಂಥವರು ಸಮಯಕ್ಕೆ ತೆಗೆದುಕೊಳ್ಳಬೇಕಾದ ನಾಯಕತ್ವವನ್ನು ತುಂಬ ಧೈರ್ಯವಾಗಿ ವಹಿಸಿಕೊಳ್ಳಲಿದ್ದೀರಿ. ತುಂಬ ಕಠಿಣ ಎಂದು ಇತರರು ನಿರ್ಧಾರ ಮಾಡಿಯೇ ಬಿಟ್ಟಿದ್ದ ಸಂಗತಿಗಳನ್ನು ಬಹಳ ಸರಳವಾಗಿ ವಿವರಿಸುವುದಕ್ಕೆ ನೀವು ಯಶಸ್ವಿಯಾಗಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್