AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ

ಜನವರಿ 9ರಂದು ಜನ್ಮಸಂಖ್ಯೆ 4, 5, 6ರ ದೈನಂದಿನ ಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4ರವರು ಹಠಾತ್ ಬದಲಾವಣೆಗಳನ್ನು ಎದುರಿಸಬಹುದು, 5ರವರು ವ್ಯಾಪಾರದಲ್ಲಿ ಲಾಭ ಗಳಿಸಿದರೂ ಬಾಯಿಮಾತಿನ ವ್ಯವಹಾರದಿಂದ ಎಚ್ಚರವಿರಲಿ. ಆಹಾರ ಪದ್ಧತಿ ಬಗ್ಗೆ ಗಮನವಿರಲಿ. 6ರವರಿಗೆ ಶುಕ್ರವಾರ ಶುಭ ದಿನ. ವ್ಯಾಪಾರಿಗಳಿಗೆ ಬಂಪರ್ ಲಾಭ, ಆದರೆ ಐಷಾರಾಮಿ ಖರ್ಚು ನಿಯಂತ್ರಿಸಿ. ಈ ಸಂಖ್ಯಾಶಾಸ್ತ್ರ ಭವಿಷ್ಯ ನಿಮ್ಮ ದಿನವನ್ನು ಉತ್ತಮವಾಗಿ ಯೋಜಿಸಲು ಸಹಕಾರಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 09, 2026 | 12:39 AM

Share

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಹಠಾತ್ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದೀರಿ. ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಬಹುದು, ಅದಕ್ಕೆ ಧೃತಿಗೆಡಬೇಡಿ. ಬದಲಿಗೆ ಸಿಕ್ಕ ಬಿಡುವಿನ ವೇಳೆಯನ್ನು ಬಾಕಿ ಉಳಿದ ಕೆಲಸ ಮುಗಿಸಲು ಬಳಸಿ. ತಾಂತ್ರಿಕ ದೋಷಗಳಿಂದಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ರಿಪೇರಿಗೆ ಬರಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಪೋಸ್ಟ್ ಹಾಕಿ ವಿವಾದ ಮೈಮೇಲೆ ಎಳೆದುಕೊಳ್ಳಬೇಡಿ. ಸರ್ಕಾರಿ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗಲಿವೆ, ತಾಳ್ಮೆಯೇ ಮುಖ್ಯ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ವ್ಯವಹಾರ ಹಾಗೂ ವ್ಯಾಪಾರದಲ್ಲಿ ‘ಬಾಯಿ ಮಾತಿನ ವ್ಯವಹಾರ’ ಇಂದು ಕೈಕೊಡಬಹುದು, ಎಲ್ಲವನ್ನೂ ಲಿಖಿತ ರೂಪದಲ್ಲಿ ಇಟ್ಟುಕೊಳ್ಳಿ. ದಲ್ಲಾಳಿ ಕೆಲಸ ಅಥವಾ ಕಮಿಷನ್ ಆಧಾರಿತ ಕೆಲಸ ಮಾಡುವವರಿಗೆ ದೊಡ್ಡ ಮೊತ್ತದ ಹಣ ಕೈ ಸೇರಲಿದೆ. ಪ್ರೀತಿ-ಪ್ರೇಮದ ವಿಚಾರದಲ್ಲಿ ಹೊಸ ಪ್ರಸ್ತಾವನೆ ಸಲ್ಲಿಸಲು ಇದು ಸಕಾಲವಲ್ಲ. ನಿಮ್ಮ ಆಹಾರ ಪದ್ಧತಿಯಲ್ಲಿ ಶಿಸ್ತು ತನ್ನಿ, ವಿಶೇಷವಾಗಿ ಹೊರಗಿನ ಆಹಾರ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಡಬಹುದು. ಹಳೆಯ ಸಾಲ ವಸೂಲಿಗೆ ಪ್ರಯತ್ನಿಸಿ, ಯಶಸ್ಸು ಸಿಗಲಿದೆ. ನರ್ಸರಿ ನಡೆಸುತ್ತಿರುವವರಿಗೆ ಲಾಭವಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಇಂದಿನ ವಾರದವಾದ ಶುಕ್ರವಾರ ನಿಮ್ಮ ಜನ್ಮ ಸಂಖ್ಯೆಗೆ ಹೆಚ್ಚು ಪೂರಕವಾಗಿದೆ. ಸೌಂದರ್ಯವರ್ಧಕ, ಬಟ್ಟೆ ಅಥವಾ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಿಗೆ ‘ಬಂಪರ್’ ದಿನ. ಮನೆಯನ್ನು ನವೀಕರಿಸುವ ಬಗ್ಗೆ ಸಂಗಾತಿಯೊಂದಿಗೆ ಚರ್ಚಿಸುವಿರಿ. ಐಷಾರಾಮಿ ವಸ್ತುಗಳ ಮೇಲೆ ಅತಿಯಾದ ಖರ್ಚು ಮಾಡುವುದನ್ನು ನಿಯಂತ್ರಿಸಿ, ಇಲ್ಲದಿದ್ದರೆ ತಿಂಗಳ ಅಂತ್ಯಕ್ಕೆ ಆರ್ಥಿಕ ಮುಗ್ಗಟ್ಟು ಎದುರಾಗಬಹುದು. ಕಚೇರಿಯಲ್ಲಿ ಸ್ತ್ರೀ ಸಹೋದ್ಯೋಗಿಗಳಿಂದ ಸಹಾಯ ಲಭಿಸಲಿದೆ. ಶುಭ್ರವಾದ ಬಿಳಿ ಬಟ್ಟೆ ಧರಿಸುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ