Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 27ರ ದಿನಭವಿಷ್ಯ
ಜನ್ಮಸಂಖ್ಯೆ 7, 8, 9 ರವರಿಗೆ ಜನವರಿ 27 ರ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ಹಣಕಾಸು, ಆರೋಗ್ಯ ಮತ್ತು ಸಂಬಂಧಗಳ ಕುರಿತು ಸಂಖ್ಯಾಶಾಸ್ತ್ರದ ಆಧಾರಿತ ಭವಿಷ್ಯವಾಣಿಗಳನ್ನು ತಿಳಿಯಿರಿ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ. ನಿಮ್ಮ ದೈನಂದಿನ ಯೋಜನೆಗಳಿಗೆ ಉಪಯುಕ್ತ ಮಾರ್ಗದರ್ಶನ ಪಡೆಯಿರಿ.

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಈ ದಿನ ಒಂದಲ್ಲ ಒಂದು ಕಾರ್ಯದಲ್ಲಿ ನಿರತರಾಗಿ ಇರುತ್ತೀರಿ ಹಾಗೂ ಅವುಗಳು ಫಲದಾಯಕವಾಗಿಯೂ ಇರುತ್ತವೆ. ಏನಾದರೊಂದು ಕಾರಣಕ್ಕೆ ಬಾಕಿ ಉಳಿದು ಹೋದ ಕೆಲಸಗಳನ್ನು ಮುಗಿಸಲು ಅವಕಾಶ ಸಿಗುತ್ತದೆ. ನೀವು ಈಗಾಗಲೇ ಸಾಲ ನೀಡಿದ್ದಲ್ಲಿ ಅದರ ಹಣ ವಸೂಲಿ ಮಾಡುವುದಕ್ಕೆ ಅಥವಾ ಮುಖ್ಯವಾದ ವ್ಯವಹಾರ ಒಪ್ಪಂದ ಪೂರ್ಣ ಮಾಡಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯ ಗುರುತಿಸಲಾಗುತ್ತದೆ. ಹೆಚ್ಚಿನ ಜವಾಬ್ದಾರಿಗಳನ್ನು ಸಹ ವಹಿಸಬಹುದು. ರಕ್ತದೊತ್ತಡ ಅಥವಾ ಉರಿಮೂತ್ರದ ಸಮಸ್ಯೆ ಕಂಡುಬರಬಹುದು.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಕುಟುಂಬದ ಕಡೆಯಿಂದಲೂ ಉದ್ಯೋಗ ಸ್ಥಳದಲ್ಲಿಯೂ ಈ ದಿನ ಜವಾಬ್ದಾರಿಗಳ ಒತ್ತಡ ಹೆಚ್ಚಾಗುತ್ತದೆ. ಕೆಲಸದ ಕಾರಣದಿಂದ ಬೇಸರ ಆಗಬಹುದು. ಹಣಕಾಸಿನಲ್ಲಿ ಸಾಲ, ಕಂತು, ತೆರಿಗೆ ಪಾವತಿ ವಿಚಾರಗಳಿಗೆ ವಿಶೇಷವಾದ ಗಮನ ಕೊಡಿ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ನಿಧಾನವಾಗಿರುತ್ತದೆ. ಕುಟುಂಬದ ಬೆಂಬಲ ಇದ್ದರೂ ನಿಮ್ಮ ಆಪ್ತರಿಗೆ ಅಂತ ಸಮಯ ಕೊಡಲು ಸಾಧ್ಯವಾಗದೇ ಅಸಮಾಧಾನಕ್ಕೆ ಕಾರಣ ಆಗಬಹುದು. ಕೆಲವು ಮುಖ್ಯ ವಿಚಾರಗಳನ್ನು ಪರೀಕ್ಷಿಸಿಕೊಳ್ಳುವುದು ಒಳ್ಳೆಯದು. ಸರ್ಕಾರಿ ಕೆಲಸ- ಕಾರ್ಯಗಳಲ್ಲಿ ಅತಿಯಾದ ಒತ್ತಡ ಹಾಕಬೇಡಿ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಹೆಚ್ಚು ಮಾತನಾಡದೆ, ಇತರರ ಜತೆಗೆ ಸೇರಿಕೊಳ್ಳದೆ ಏಕಾಂಗಿಯಾಗಿ ಇರುವುದಕ್ಕೆ ಬಯಸುತ್ತೀರಿ. ಈ ದಿನ ಮನಸ್ಸು ಹೆಚ್ಚು ಅಂತರ್ಮುಖಿ ಆಗಿರುತ್ತದೆ. ಒಂಟಿಯಾಗಿಯೇ ಕೆಲಸ- ಕಾರ್ಯಗಳನ್ನು ಮಾಡುವ ಆಸಕ್ತಿ ಹೆಚ್ಚಾಗುತ್ತದೆ. ಸಂಬಂಧಕ್ಕೆ ಸಂಬಂಧಿಸಿದಂತೆ ದೊಡ್ಡ ನಿರ್ಧಾರಗಳನ್ನು ಇವತ್ತಿನ ಮಟ್ಟಿಗೆ ಮುಂದೂಡುವುದು ಒಳಿತು. ಹಣಕಾಸಿನ ವಿಚಾರದಲ್ಲಿ ಷೇರು- ಮ್ಯೂಚುವಲ್ ಫಂಡ್ ಈ ರೀತಿ ಹೊಸ ಹೂಡಿಕೆ ಬೇಡ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಕಡಿಮೆ ಆಗಬಹುದು.
ಲೇಖನ- ಸ್ವಾತಿ ಎನ್.ಕೆ.
