Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 23ರ ದಿನಭವಿಷ್ಯ

ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 23ರ ಶುಕ್ರವಾರದ ದಿನ ಭವಿಷ್ಯ (horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 23ರ ದಿನಭವಿಷ್ಯ
Numerology Prediction (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Digi Tech Desk

Updated on:Dec 26, 2022 | 10:23 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 23ರ ಶುಕ್ರವಾರದ ದಿನ ಭವಿಷ್ಯ (horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

  1. ಜನ್ಮಸಂಖ್ಯೆ 1: ಈ ದಿನ ನೀರಿನಿಂದ ಬಹಳ ಎಚ್ಚರಿಕೆಯಿಂದ ಇರಬೇಕು. ಕಿರು ಪ್ರವಾಸಗಳು ಕೈಗೊಂಡಿದ್ದಲ್ಲಿ ನೀರಿನಿಂದ ಅಪಾಯ ಎದುರಾಗಬಹುದಾದ ಸಂಭವ ಇದೆ ಎನಿಸಿದರೆ ಮುಂಜಾಗ್ರತೆ ವಹಿಸಿ. ರಾಜಕಾರಣಿಗಳಿಗೆ ಹೊಸ ಹುದ್ದೆಗಳು ದೊರೆಯುವ ಸಾಧ್ಯತೆಗಳಿವೆ. ಸವಾಲು ಅಂತೆನಿಸಿದರೂ ಅದನ್ನು ಒಪ್ಪಿಕೊಳ್ಳಿ.
  2. ಜನ್ಮಸಂಖ್ಯೆ 2: ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಪ್ರಾಜೆಕ್ಟ್‌ಗಳ ಬಗ್ಗೆ ಮಾತುಕತೆ ಆಗುವ ಸಾಧ್ಯತೆ ಇದೆ. ಸ್ನೇಹಿತರು ಅಥವಾ ಸಂಬಂಧಿಕರ ಮೂಲಕವಾಗಿ ಈ ಅವಕಾಶ ಬರುವ ಸಾಧ್ಯತೆ ಇದೆ. ಕುಟುಂಬದವರ ತೀರ್ಥಯಾತ್ರೆಗಾಗಿ ಹಣ ಖರ್ಚು ಮಾಡಲಿದ್ದೀರಿ. ಮಸಾಲೆಯುಕ್ತ ಪದಾರ್ಥಗಳನ್ನು ಸೇವನೆ ಮಾಡಬೇಡಿ.
  3. ಜನ್ಮಸಂಖ್ಯೆ 3: ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸೂಕ್ತ ವಧು/ವರ ದೊರೆಯುವ ಸಾಧ್ಯತೆಗಳಿವೆ. ಸೋಷಿಯಲ್ ಮೀಡಿಯಾಗಳ ಮೂಲಕ ಪರಿಚಯವಾದವರು ಆಪ್ತರಾಗುವ, ಸ್ನೇಹವು ಸಂಬಂಧಕ್ಕೆ ತಿರುಗುವ ಸಾಧ್ಯತೆಗಳಿವೆ. ಸಬ್‌ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸ್ಟ್ಯಾಂಪ್ ವೆಂಡರ್‌ಗಳಿಗಾಗಿ ಕೆಲಸ ಮಾಡುವವರಿಗೆ ಆದಾಯದಲ್ಲಿ ಇಳಿಮುಖ ಆಗಲಿದೆ.
  4. ಜನ್ಮಸಂಖ್ಯೆ 4: ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ದೂರದ ಪ್ರದೇಶಗಳಿಗೆ ಪ್ರಯಾಣ ಮಾಡಬೇಕಾಗುತ್ತದೆ. ಬಹಳ ವರ್ಷಗಳಿಂದ ಭೇಟಿಗೆ ಸಿಗದಿದ್ದ ಸ್ನೇಹಿತರು/ಸ್ನೇಹಿತೆಯರನ್ನು ಭೇಟಿ ಆಗುವ ಸಾಧ್ಯತೆ ಇದೆ. ವಾಹನ ಚಾಲನೆ ವೇಳೆ ಎಚ್ಚರಿಕೆಯನ್ನು ವಹಿಸಿ. ಯುಪಿಐ ವ್ಯಾಲೆಟ್‌ಗಳನ್ನು ಬಳಸುವಾಗ ಸಂಖ್ಯೆಯನ್ನು ಒಂದಕ್ಕೆ ಎರಡು ಬಾರಿ ಪರೀಕ್ಷಿಸಿ.
  5. ಜನ್ಮಸಂಖ್ಯೆ 5: ಸುಮ್ಮನೆ ಹವ್ಯಾಸಕ್ಕೆ ಅಂತ ಶುರು ಮಾಡಿದ ಸಂಗತಿಯೊಂದು ನಿಮ್ಮ ಆದಾಯಕ್ಕೆ ದಾರಿ ಮಾಡಿಕೊಡುವ ಸೂಚನೆಗಳು ಕಾಣಿಸಿಕೊಳ್ಳುತ್ತವೆ. ಆದರೆ ಅದರ ಬಗ್ಗೆ ನಿಮಗೆ ಸಂಪೂರ್ಣ ನಂಬಿಕೆ ಮೂಡಬೇಕು. ಇನ್ನು ಅಡುಗೆ ಕೆಲಸ ಮಾಡುವವರು, ಪುರೋಹಿತರು, ಜ್ಯೋತಿಷಿಗಳಿಗೆ ಈ ದಿನ ಸವಾಲಿನಿಂದ ಕೂಡಿರುತ್ತದೆ.
  6. ಜನ್ಮಸಂಖ್ಯೆ 6: ದಿಢೀರನೆ ಮಂಕು ಬಡಿದವರಂತೆ ಆಗುತ್ತೀರಿ. ಒಂದು ವೇಳೆ ಮನಸ್ಥಿತಿ ಕೆಲಸಕ್ಕೆ ಸಹಕರಿಸುತ್ತಿಲ್ಲ ಎಂದಾದಲ್ಲಿ ಮುಖ್ಯವಾದ ಜವಾಬ್ದಾರಿಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ. ಅಥವಾ ಮುಖ್ಯವಾದ ಕೆಲಸಗಳು ಇದ್ದಲ್ಲಿ ಮುಂದೂಡಿ. ಶನೈಶ್ಚರನ ಗುಡಿಗೆ ಈ ದಿನ ಭೇಟಿ ನೀಡಿ. ಇದರ ಜತೆಗೆ ಗೋವಿಗೆ ಬಾಳೆಹಣ್ಣು ನೀಡಿ.
  7. ಜನ್ಮಸಂಖ್ಯೆ 7: ಈ ದಿನ ನಿಮ್ಮಲ್ಲಿ ಪಾಪ ಕರ್ಮಗಳ ಬಗ್ಗೆ ಆಸಕ್ತಿ ಹೆಚ್ಚು ಆಗುತ್ತವೆ. ಸಂಗಾತಿ ಬಗ್ಗೆ ಇಲ್ಲ ಸಲ್ಲದ ಅನುಮಾನ, ವಿವಾಹದ ಆಚೆಗಿನ ಸಂಬಂಧಗಳ ಕಡೆಗೆ ಸೆಳೆತ ಇತ್ಯಾದಿ ಅನಪೇಕ್ಷಿತ ಆಲೋಚನೆಗಳು ಬರುತ್ತವೆ. ನಿಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ಗಣಪತಿ- ಸುಬ್ರಹ್ಮಣ್ಯ ಆರಾಧನೆ ಮಾಡಿ.
  8. ಜನ್ಮಸಂಖ್ಯೆ 8: ನೀವು ಈ ಹಿಂದೆ ಹೇಳಿದ್ದ ವಿಚಾರವನ್ನು ಈಗ ಸ್ವತಃ ನೀವೇ ಮರೆತು, ಬೇರೆಯವರ ಮೇಲೆ ತಪ್ಪನ್ನು ಹೊರೆಸುವ ಸಾಧ್ಯತೆ ಇದೆ. ಆದ್ದರಿಂದ ಎದುರಿನವರು ಹೇಳಿದ ಮಾತನ್ನೂ ಸ್ವಲ್ಪ ಲಕ್ಷ್ಯ ಇಟ್ಟು ಕೇಳಿಸಿಕೊಳ್ಳಿ, ಈ ಹಿಂದೆ ಹೇಳಿದ್ದನ್ನು ನೆನಪಿಸಿಕೊಳ್ಳಿ. ಈ ದಿನ ನಿಮಗೆ ಪಾರ್ಟಿಗಳಿಗೆ, ಗೆಟ್ ಟು ಗೆದರ್‌ಗೆ ಆಹ್ವಾನ ಬರಲಿದೆ. ಅದಕ್ಕೆ ಹೋದರೂ ಸ್ವಂತ ವಾಹನದಲ್ಲಿ ಬೇಡ.
  9. ಜನ್ಮಸಂಖ್ಯೆ 9: ನಿಮ್ಮ ಮೇಲೆ ಸುಖಾಸುಮ್ಮನೆ ಇತರರು ಅನುಮಾನ ಪಡುವಂಥ ಸನ್ನಿವೇಶವನ್ನು ಸೃಷ್ಟಿ ಮಾಡಿಕೊಳ್ಳುತ್ತೀರಿ. ನೇರವಂತಿಕೆಯೊಂದೇ ಇದಕ್ಕೆ ಪರಿಹಾರ ಆಗಬಹುದು. ಪಾರದರ್ಶಕತೆ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಹಣಕಾಸು ವ್ಯವಹಾರವನ್ನು ನಿತ್ಯವೂ ಮಾಡುವಂಥವರು ಈ ದಿನ ಸಾಮಾನ್ಯಕ್ಕಿಂತ ಹೆಚ್ಚು ಜಾಗ್ರತೆ ವಹಿಸಿ.

ಲೇಖನ- ಎನ್‌.ಕೆ.ಸ್ವಾತಿ

Published On - 6:00 am, Fri, 23 December 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ