Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬಹಳ ಪ್ರೀತಿಸುವ ವ್ಯಕ್ತಿಯನ್ನ ಈ ದಿನ ತುಂಬ ನೆನಪು ಮಾಡಿಕೊಳ್ಳಲಿದ್ದೀರಿ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ವಿವರವಾದ ಒಳನೋಟಗಳನ್ನು ಕಂಡುಕೊಳ್ಳಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ಶೀತ, ಕಫ, ಕೆಮ್ಮು ಈ ರೀತಿಯ ತೊಂದರೆಗಳು ಜಾಸ್ತಿ ಆಗಲಿದ್ದು, ವೈದ್ಯರಿಗೆ ತೋರಿಸಿದ ನಂತರದಲ್ಲಿಯೂ ಹತೋಟಿಗೆ ಬಾರದೆ ಆತಂಕಕ್ಕೆ ಕಾರಣ ಆಗಲಿದೆ. ಹೆಣ್ಣುಮಕ್ಕಳ ಜೊತೆ ಮಾತನಾಡುವಾಗ, ಅದರಲ್ಲಿಯೂ ನಿಮ್ಮ ಸಹೋದ್ಯೋಗಿಗಳ ಜೊತೆಗೆ ಮಾತನಾಡುವಾಗ ಬಳಕೆ ಮಾಡುವ ಪದಗಳ ಬಗ್ಗೆ ಜಾಗ್ರತೆಯಿಂದ ಇರಿ. ಅತ್ಯುತ್ಸಾಹದಲ್ಲೋ ಅಥವಾ ತಮಾಷೆ ಎಂದುಕೊಂಡು ನೀವಾಡಿದ ಮಾತುಗಳಿಂದ ನಿಮ್ಮ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ತನಕ ಹೋಗಬಹುದು.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ನೀವು ಒಪ್ಪಿಸಿದ ಕೆಲಸಗಳನ್ನು ಆಗ- ಈಗ ಎಂದು ಮುಂದಕ್ಕೆ ಹಾಕುತ್ತಾ ಇರುವವರ ಬಳಿ ಗೆರೆ ಕೊಯ್ದಂತೆ ಮಾತನಾಡಲಿದ್ದೀರಿ. ಒಂದು ವೇಳೆ ಈಗಾಗಲೇ ಆ ಕೆಲಸದ ಸಲುವಾಗಿ ಅಡ್ವಾನ್ಸ್ ರೂಪದಲ್ಲಿ ಹಣವನ್ನು ನೀಡಿದ್ದಲ್ಲಿ ಅದನ್ನು ಹಿಂತಿರುಗಿಸುವಂತೆ ಕೇಳಲಿದ್ದೀರಿ. ನಿಮ್ಮ ಸ್ನೇಹಿತರ ಪೈಕಿ ಒಬ್ಬರು ತಮಗೆ ಸಾಲದ ಅಗತ್ಯ ಇದ್ದು, ಜಾಮೀನು ನೀವು ನೀಡಬೇಕು ಎಂದು ಕೇಳಿಕೊಂಡು ಬರಬಹುದು. ಆಟೋ ಚಾಲಕರು ಸಂಚಾರ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹೆಚ್ಚಿನ ಮೊತ್ತದ ದಂಡವನ್ನು ಪಾವತಿಸುವಂತೆ ಆಗಲಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ರಾಜಕಾರಣಿಗಳಿಗೆ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಮಹತ್ವಾಕಾಂಕ್ಷೆಯಿಂದ ನಡೆಸುವಂಥ ಸಮಾವೇಶದ ಮುಂದಾಳತ್ವ ನೀವೇ ವಹಿಸಬೇಕು ಎಂದು ತಿಳಿಸಲಿದ್ದಾರೆ. ನೀವು ಬಹಳ ಪ್ರೀತಿಸುವ ವ್ಯಕ್ತಿಗಳನ್ನು ಈ ದಿನ ತುಂಬ ನೆನಪು ಮಾಡಿಕೊಳ್ಳಲಿದ್ದೀರಿ. ಬಿಡುವೇ ಸಿಗದಷ್ಟು ಕೆಲಸಗಳಲ್ಲಿ ಮುಳುಗಿ ಹೋಗುವಂತೆ ಆಗಲಿದ್ದು, ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಸಹ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಲಿದೆ. ಮಾರ್ಕೆಟಿಂಗ್- ಜಾಹೀರಾತು ವಿಭಾಗದಲ್ಲಿ ಇರುವವರಿಗೆ ಬಡ್ತಿ ಸಿಗುವ ಮಾಹಿತಿ ಸಿಗಲಿದೆ.
ಲೇಖನ- ಸ್ವಾತಿ ಎನ್.ಕೆ.
