AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಆಸ್ತಿ ವಿವಾದ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿಯುವ ಸೂಚನೆಗಳಿವೆ

ಜನವರಿ 14ರ ಬುಧವಾರದಂದು ಜನ್ಮಸಂಖ್ಯೆ 7, 8, 9ರ ದಿನಭವಿಷ್ಯ ಇಲ್ಲಿದೆ. ಸಂಖ್ಯಾಶಾಸ್ತ್ರದ ಪ್ರಕಾರ, ಈ ಜನ್ಮಸಂಖ್ಯೆಗಳವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ ಮತ್ತು ಸಂಬಂಧಗಳ ಬಗ್ಗೆ ಮಹತ್ವದ ಮಾಹಿತಿ ನೀಡಲಾಗಿದೆ. ಪ್ರಗತಿ, ಹಣಕಾಸು ನಿರ್ವಹಣೆ, ಆರೋಗ್ಯ ಕಾಳಜಿ ಹಾಗೂ ವ್ಯವಹಾರದಲ್ಲಿ ದೃಢ ನಿರ್ಧಾರಗಳ ಬಗ್ಗೆ ಮಾರ್ಗದರ್ಶನ ಇಲ್ಲಿದೆ. ನಿಮ್ಮ ಅದೃಷ್ಟ, ಎದುರಾಗಬಹುದಾದ ಸವಾಲುಗಳು ಮತ್ತು ಅವುಗಳನ್ನು ನಿಭಾಯಿಸುವ ವಿಧಾನಗಳ ಕುರಿತು ತಿಳಿಯಿರಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಆಸ್ತಿ ವಿವಾದ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿಯುವ ಸೂಚನೆಗಳಿವೆ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 14, 2026 | 12:30 AM

Share

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ದೀರ್ಘಕಾಲದಿಂದ ನಡೆಯುತ್ತಿರುವ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಬಗ್ಗೆ ಚರ್ಚೆ ನಡೆಸುವಿರಿ. ಹಣಕಾಸಿನ ವ್ಯವಹಾರಗಳಲ್ಲಿ ಅಲ್ಪ ಲಾಭ ಇದ್ದರೂ ಭವಿಷ್ಯದ ಹೂಡಿಕೆಗೆ ಉತ್ತಮ ತಳಹದಿ ಸಿಗಲಿದೆ. ಸಾಲದ ಹೊರೆ ತಗ್ಗಿಸಲು ನೀವು ವಿಶೇಷ ಹಣಕಾಸಿನ ಯೋಜನೆ ರೂಪಿಸುವಿರಿ. ಕಚೇರಿಯಲ್ಲಿ ಗುಪ್ತ ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಕೆಲಸದ ವಿವರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ. ಧ್ಯಾನ, ಯೋಗದ ಅಭ್ಯಾಸದಿಂದ ಮಾನಸಿಕ ಒತ್ತಡ ಕಡಿಮೆ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಬಿಗಿಯಾದ ವರ್ತನೆ ಇದ್ದರೂ ನಿಮ್ಮ ಪ್ರಾಮಾಣಿಕತೆಯೇ ರಕ್ಷಿಸಲಿದೆ. ಕಲ್ಲಿದ್ದಲು ವ್ಯಾಪಾರಿಗಳಿಗೆ ಶುಭಪ್ರದವಾಗಿದೆ. ಆಸ್ತಿ ವಿವಾದಗಳು ಕೊನೆಗೂ ಸೌಹಾರ್ದಯುತವಾಗಿ ಬಗೆಹರಿಯುವ ಸೂಚನೆಗಳಿವೆ. ಮನೆಯಲ್ಲಿ ಗೃಹಿಣಿಯರಿಗೆ ಕೆಲಸದ ಒತ್ತಡ ಹೆಚ್ಚಾಗಬಹುದು, ಆರೋಗ್ಯದ ಕಾಳಜಿ ವಹಿಸಿ, ವಿಶೇಷವಾಗಿ ಮಂಡಿ ನೋವು ಅಥವಾ ಕಾಲುಗಳ ನೋವು ಕಾಡಬಹುದು. ಹೂಡಿಕೆ ಮಾಡುವ ಮೊದಲು ಮಾರುಕಟ್ಟೆಯ ಸ್ಥಿತಿಗತಿಯನ್ನು ಅಧ್ಯಯನ ಮಾಡಿ. ಶತ್ರುಗಳು ನಿಮ್ಮನ್ನು ಕೆಣಕಲು ಪ್ರಯತ್ನಿಸಬಹುದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಆರ್ಥಿಕವಾಗಿ ಅನಿರೀಕ್ಷಿತ ಧನಾಗಮನದ ಸಾಧ್ಯತೆ ಇದೆ. ಸೋದರ ಸಂಬಂಧಿಗಳೊಂದಿಗೆ ಇದ್ದ ಹಣಕಾಸಿನ ವಿಚಾರದ ಮುನಿಸು ದೂರವಾಗಲಿದೆ. ರಕ್ತದೊತ್ತಡ ಅಥವಾ ಮಧುಮೇಹ ಇರುವವರು ಆಹಾರ ಪದ್ಧತಿಯಲ್ಲಿ ಶಿಸ್ತು ಪಾಲಿಸಬೇಕು. ಸಾರ್ವಜನಿಕ ಕೆಲಸಗಳಲ್ಲಿ ತೊಡಗಿರುವವರಿಗೆ ದೊಡ್ಡ ಮಟ್ಟದ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ದೃಢ ನಿರ್ಧಾರಗಳು ವ್ಯವಹಾರದಲ್ಲಿ ಅಭಿವೃದ್ಧಿಗೆ ದಾರಿ ಮಾಡಿಕೊಡಲಿವೆ. ಲೇವಾದೇವಿ ವ್ಯವಹಾರದಲ್ಲಿ ಇರುವವರಿಗೆ ದೊಡ್ಡ ಒಪ್ಪಂದಗಳು ಕೈಗೂಡಲಿವೆ. ಪ್ರೀತಿಯಲ್ಲಿ ಇರುವವರಿಗೆ ಉಡುಗೊರೆಗಳಿಗಾಗಿ ಖರ್ಚು ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್