AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 17ರ ದಿನಭವಿಷ್ಯ

ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 17ರ ಶನಿವಾರದ ದಿನ ಭವಿಷ್ಯ (horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 17ರ ದಿನಭವಿಷ್ಯ
Numerology Prediction (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 17, 2022 | 6:00 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 17ರ ಶನಿವಾರದ ದಿನ ಭವಿಷ್ಯ (horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

  1. ಜನ್ಮಸಂಖ್ಯೆ 1: ಎಲ್ಲವನ್ನೂ ಮುಂಚೆಯೇ ಹೇಳಿಬಿಟ್ಟಿದ್ದೀರೇನೋ ಎಂಬಂತೆ ನಿಮ್ಮ ಮನಸಿನ ಮಾತುಗಳನ್ನು ಆಪ್ತರು, ಹತ್ತಿರದವರು ನಡೆದುಕೊಳ್ಳಲಿದ್ದಾರೆ. ಕುಟುಂಬದವರೊಂದಿಗೆ ಒಟ್ಟಿಗೆ ಸಮಯ ಕಳೆಯಲಿದ್ದೀರಿ. ನೀವು ಬಳಸುವ ವಾಹನದ ಸರ್ವೀಸ್ ಬಗ್ಗೆ ಕಾಳಜಿ ನೀಡಿ, ಇಲ್ಲದಿದ್ದಲ್ಲಿ ಮುಖ್ಯವಾದ ಸಮಯದಲ್ಲೇ ಕೈ ಕೊಡಬಹುದು.
  2. ಜನ್ಮಸಂಖ್ಯೆ 2: ಪ್ರೀತಿ- ಪ್ರೇಮದಲ್ಲಿ ಇರುವವರಿಗೆ ಈ ದಿನ ಖರ್ಚು ಹಾಗೂ ಸಂತೋಷ ಎರಡೂ ಒಟ್ಟೊಟ್ಟಿಗೆ ಇದೆ. ಭಾವನಾತ್ಮಕವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕ್ರಿಯೇಟಿವ್ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಒಂದಿಷ್ಟು ಒತ್ತಡ ಸೃಷ್ಟಿ ಆಗಬಹುದು. ಆದರೆ ಅದರಿಂದ ಬೇಜಾರಾಗಿ, ಅದರ ಪರಿಣಾಮ ನಿಮ್ಮ ಕೆಲಸದ ಮೇಲೆ ಆಗದಂತೆ ನೋಡಿಕೊಳ್ಳಿ.
  3. ಜನ್ಮಸಂಖ್ಯೆ 3: ಪಬ್, ರೆಸ್ಟೋರೆಂಟ್‌ಗಳು, ಮಲ್ಟಿಪ್ಲೆಕ್ಸ್‌ಗಳು ಇಂಥ ಕಡೆ ಈ ದಿನ ನಿಮಗೆ ಖರ್ಚಾಗುವ ಯೋಗ ಇದೆ. ಇನ್ನು ಬಟ್ಟೆ ವಿಚಾರದಲ್ಲೂ ಒಂದಿಷ್ಟು ಧಾರಾಳವಾಗಿ ಖರ್ಚಾಗಬಹುದು. ಕ್ರೆಡಿಟ್ ಕಾರ್ಡ್ ಬಳಸುವಂಥವರು ಖರ್ಚಿನ ಮೇಲೆ ನಿಗಾ ಇಡಿ. ದಿನದ ದ್ವಿತೀಯಾರ್ಧದಲ್ಲಿ ಸೊಗಸಾದ ಆಹಾರ ತಿನಿಸುಗಳನ್ನು ಸವಿಯುವ ಯೋಗ ಇದೆ.
  4. ಜನ್ಮಸಂಖ್ಯೆ 4: ಈ ದಿನ ಕಾಯುವಿಕೆ ನಿಮಗೆ ಬೇಸರ ತರಿಸಬಹುದು. ಇಂಥ ಸಮಯಕ್ಕೆ ಬರುತ್ತೀನಿ ಎಂದವರು ಬಾರದೇ ಇರಬಹುದು ಅಥವಾ ತಡವಾಗಬಹುದು. ಇನ್ನು ಉಪಾನ್ಯಾಸಕರು, ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ಗೌರವ- ಸಮ್ಮಾನಗಳು ದೊರೆಯುವ ದಿನ ಇದಾಗಿರಲಿದೆ. ಬೆನ್ನು ನೋವಿನ ಸಮಸ್ಯೆ ಕಾಡಬಹುದು, ಎಚ್ಚರ ಇರಲಿ.
  5. ಜನ್ಮಸಂಖ್ಯೆ 5: ಹೆಣ್ಣುಮಕ್ಕಳಿಗೆ ತವರು ಮನೆಯಲ್ಲಿನ ಕೆಲ ಬೆಳವಣಿಗೆಗಳು ಬೇಸರಕ್ಕೆ ಕಾರಣ ಆಗಬಹುದು. ಅಥವಾ ಅಲ್ಲಿನ ವಿಚಾರಗಳು ನಿಮಗೆ ಬೇರೆ ರೀತಿಯಲ್ಲಿ ತಲುಪಬಹುದು. ಸ್ಟಾರ್ ಗೇಜ್ ಮಾಡುವಂಥವರು, ಪಕ್ಷಿ ವೀಕ್ಷಣೆ ಮಾಡುವಂಥವರು, ಭಾಷೆಗಳನ್ನು ಕಲಿಸುವಂಥವರಿಗೆ ಈ ದಿನ ಹೊಸ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ.
  6. ಜನ್ಮಸಂಖ್ಯೆ 6: ಈ ದಿನ ಆಲಸ್ಯ ನಿಮ್ಮನ್ನು ಬೆನ್ನಟ್ಟಲಿದೆ. ಬೆಳಗ್ಗೆ ಹಾಸಿಗೆ ಬಿಟ್ಟು ಏಳಬೇಕಾ ಎಂಬಲ್ಲಿಂದ ಸಮಸ್ಯೆಗಳು ಶುರುವಾಗುತ್ತವೆ. ಇಷ್ಟು ದಿನದ ನಿಮ್ಮ ಶ್ರಮ ಹಾಗೂ ಪ್ರತಿಭೆಯನ್ನು ಇದೊಂದು ಕಾರಣಕ್ಕೆ ಬೇರೆಯವರು ಹೀಗಳೆಯದಂತೆ ನೋಡಿಕೊಳ್ಳಿ. ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಇರುವವರು ಸರಿಯಾದ ವೈದ್ಯರಲ್ಲಿ ಕೂಡಲೇ ಪರೀಕ್ಷಿಸಿಕೊಳ್ಳಿ.
  7. ಜನ್ಮಸಂಖ್ಯೆ 7: ನಿಮ್ಮ ಸ್ನೇಹಿತರು ತರುವ ಪ್ರಾಜೆಕ್ಟ್‌ಗಳನ್ನು ಗಂಭೀರವಾಗಿ ಪರಿಗಣಿಸಿ. ಮೇಲುನೋಟಕ್ಕೆ ಕಾಣುವುದಕ್ಕಿಂತ ಹೆಚ್ಚಿನ ಅನುಕೂಲ ಇದರಿಂದ ಆಗಲಿದೆ. ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೆಚ್ಚಿನ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ತೀರ್ಥಕ್ಷೇತ್ರ ಪ್ರಯಾಣಗಳಿಗೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ.
  8. ಜನ್ಮಸಂಖ್ಯೆ 8: ಅಯ್ಯಪ್ಪ ಸ್ವಾಮಿ ಆರಾಧನೆ ಮಾಡುವುದರಿಂದ ನಿಮಗೆ ಈ ದಿನ ನೆಮ್ಮದಿ ಸಿಗಲಿದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಶುಭ ಕಾರ್ಯಗಳಿಗೆ ಹಣ ಹೊಂದಿಸುವ ಬಗ್ಗೆ ಮನೆಯಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ. ವಾಹನ ಓಡಿಸುವಾಗ ಒಂದಿಷ್ಟು ಎಚ್ಚರ ವಹಿಸುವುದು ಮುಖ್ಯ.
  9. ಜನ್ಮಸಂಖ್ಯೆ 9: ಯಾವುದೋ ಹಳೆಯ ವಿಚಾರವೊಂದು ನಿಮ್ಮನ್ನು ಈ ದಿನ ವಿಪರೀತ ಕಾಡಲಿದೆ. ದಾಕ್ಷಿಣ್ಯಕ್ಕೆ ಸಿಲುಕಿ ಯಾರಿಗಾದರೂ ಜಾಮೀನು ನೀಡುವುದಾಗಿ ಮಾತು ನೀಡಬೇಡಿ. ಏಕೆಂದರೆ ಈ ಕಾರಣಕ್ಕೆ ನಿಮ್ಮ ಸ್ನೇಹಕ್ಕೆ ಅಥವಾ ಸಂಬಂಧಕ್ಕೆ ತಡೆಯಾಗಿ ಪರಿಣಮಿಸಬಹುದು. ಇನ್ನು ಬೆಲೆಬಾಳುವ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ.

ಲೇಖನ- ಎನ್‌.ಕೆ.ಸ್ವಾತಿ

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ