Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 16ರ ದಿನಭವಿಷ್ಯ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 16ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಪ್ರಯತ್ನಗಳಿಗೆ ದೀರ್ಘಾವಧಿಯ ಪ್ರತಿಫಲ ಸಿಗಲಿದೆ. ಹಣದ ಹೊರತಾಗಿ ಸಂತೃಪ್ತಿ ಹಾಗೂ ಆತ್ಮವಿಶ್ವಾಸ ಕಾಪಾಡಿಕೊಳ್ಳುವ ಕುರಿತು ಪ್ರಮುಖ ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಮಾಡಿ. ತೆಂಗಿನಕಾಯಿ, ಬಾಳೇಹಣ್ಣು, ಊದಿನಕಡ್ಡಿ, ಕರ್ಪೂರ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಿ ಅರ್ಪಣೆ ಮಾಡಿ. ಅಥವಾ ಮನೆಯಲ್ಲಿಯೇ ಚಂದ್ರಮೌಳೀಶ್ವರ ಸ್ವರೂಪದಲ್ಲಿ ನೆನಪಿಸಿಕೊಂಡು ಇವೆಲ್ಲವನ್ನೂ ಅರ್ಪಿಸಿ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಪರ್ಸನಾಲಿಟಿ ಡೆವಲಪ್ ಮೆಂಟ್ ಸೆಷನ್ ಗಳಲ್ಲಿ ಭಾಗವಹಿಸುವ ನಿರ್ಧಾರ ಮಾಡುತ್ತೀರಿ. ನಿಮ್ಮ ಉದ್ಯೋಗ- ವೃತ್ತಿ ಜೀವನದಲ್ಲಿನ ಬದಲಾವಣೆಗಳು ನಿಧಾನವಾದರೂ ಸ್ಥಿರವಾಗಿ ಆಗಲಿದೆ. ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಕ್ಕೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಸಂಬಂಧಗಳಲ್ಲಿನ ತಾಕಲಾಟಗಳಿಂದ ಹೊರಗೆ ಬರುವುದಕ್ಕೆ ಸಾಧ್ಯವಾಗಲಿದೆ. ಹಳೆಯ ವಿಚಾರಗಳು ಮತ್ತೆ ನೆನಪಾಗಲಿವೆ, ಆದರೆ ಅವುಗಳಿಂದ ಪಾಠ ಕಲಿಯುವ ಸಮಯ ಇದು.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಕೆಲಸದ ವಿಷಯದಲ್ಲಿ ಅತಿಯಾದ ಆತುರ ಬೇಡ; ತಾಳ್ಮೆ ಮತ್ತು ಕ್ರಮಬದ್ಧ ಪ್ರಯತ್ನದಿಂದ ಯಶಸ್ಸಿನ ದಾರಿ ತೆರೆದುಕೊಳ್ಳುತ್ತದೆ. ಕುಟುಂಬದ ಒಳಗೆ ಖರ್ಚಿನ ವಿಚಾರದಲ್ಲಿ ಸಣ್ಣ- ಪುಟ್ಟ ಮಾತುಕತೆಗಳು ಆದರೂ ಸಂಯಮದಿಂದ ವರ್ತಿಸಿದರೆ ಸಮಸ್ಯೆಗಳು ಪರಿಹಾರ ಆಗುತ್ತವೆ. ಆರ್ಥಿಕವಾಗಿ ಎಚ್ಚರಿಕೆಯ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯೇ ಈ ದಿನ ನಿಮ್ಮ ಶಕ್ತಿಯಾಗಲಿದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಕುಟುಂಬದೊಂದಿಗೆ ಉತ್ತಮವಾದ ಸಮಯವನ್ನು ಕಳೆಯುವ ಯೋಗ ಇದೆ. ನಿಮ್ಮ ಆಲೋಚನೆಗಳು ಹೆಚ್ಚು ಗಹನವಾಗಿ ಇರುತ್ತವೆ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಎರಡು ಬಾರಿ ಯೋಚಿಸುವ ನಿಮ್ಮ ಗುಣ ನಿಮಗೆ ಲಾಭ ತರುತ್ತದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯವನ್ನು ಗಮನಿಸಿ, ಪ್ರಮುಖ ಜವಾಬ್ದಾರಿ ವಹಿಸುವಂಥ ಸೂಚನೆ ಸಿಗಲಿದೆ.
ಲೇಖನ- ಸ್ವಾತಿ ಎನ್.ಕೆ.
