Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 23ರ ದಿನಭವಿಷ್ಯ
ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 23 ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 23ರ ದಿನಭವಿಷ್ಯ ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 23ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಣ್ಣ ಸಹಾಯ ತೆಗೆದುಕೊಳ್ಳಬೇಕು ಎಂಬ ನಿರ್ಧಾರ ಮಾಡಿದರೂ ವ್ಯಕ್ತಿಯ ಹಿನ್ನೆಲೆಯನ್ನು ಸಾದ್ಯಂತವಾಗಿ ಗಮನಿಸಬೇಕು. ಇಲ್ಲದಿದ್ದರೆ ಸಮಾಜದಲ್ಲಿ ನಿಮ್ಮ ಹೆಸರಿಗೆ ಮಸಿ ಅಂಟಿಕೊಳ್ಳುವಂತಾಗುತ್ತದೆ. ವಕೀಲ ವೃತ್ತಿಯಲ್ಲಿ ಇರುವವರಿಗೆ ಸಂಪರ್ಕಗಳು ವೃದ್ಧಿ ಆಗಲಿದೆ. ಪಿತ್ರಾರ್ಜಿತ ಆಸ್ತಿ ವ್ಯಾಜ್ಯಗಳು ನಡೆಯುತ್ತಿದ್ದಲ್ಲಿ ನ್ಯಾಯಾಲಯದಿಂದ ಹೊರಗೆ ಇತ್ಯರ್ಥ ಮಾಡಿಕೊಳ್ಳುವುದಕ್ಕೆ ಅವಕಾಶ ದೊರೆಯುತ್ತದೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2) ಮನೆಗೆ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವುದಕ್ಕೆ ವಿಚಾರಣೆ ನಡೆಸಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಸುವಂಥವರು ಖರ್ಚಿನ ಮೇಲೆ ಹಿಡಿತ ಇರಿಸಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಬಹಳ ನಿರೀಕ್ಷೆ ಇರಿಸಿಕೊಂಡಿದ್ದ ಫಲಿತಾಂಶವೊಂದು ಅಂದುಕೊಂಡಂತೆ ಬರುವುದಿಲ್ಲ. ಎಲ್ಲರೂ ಒಪ್ಪುವಂಥ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದುಕೊಳ್ಳಬೇಡಿ, ಯಾಕೆಂದರೆ ಎಲ್ಲರನ್ನೂ ಮೆಚ್ಚಿಸುವಂಥ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3) ಈ ದಿನ ಆಲಸ್ಯ ನಿಮ್ಮನ್ನು ಬೆನ್ನಟ್ಟಲಿದೆ. ಬೆಳಗ್ಗೆ ಹಾಸಿಗೆ ಬಿಟ್ಟು ಏಳಬೇಕಾ ಎಂಬಲ್ಲಿಂದ ಸಮಸ್ಯೆಗಳು ಶುರುವಾಗುತ್ತವೆ. ಇಷ್ಟು ದಿನದ ನಿಮ್ಮ ಶ್ರಮ ಹಾಗೂ ಪ್ರತಿಭೆಯನ್ನು ಇದೊಂದು ಕಾರಣಕ್ಕೆ ಬೇರೆಯವರು ಹೀಗಳೆಯದಂತೆ ನೋಡಿಕೊಳ್ಳಿ. ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಇರುವವರು ಸರಿಯಾದ ವೈದ್ಯರಲ್ಲಿ ಕೂಡಲೇ ಪರೀಕ್ಷಿಸಿಕೊಳ್ಳಿ. ಐಟಿ- ಬಿಪಿಒಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡದ ದಿನ ಇದಾಗಿರಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಉದ್ಯೋಗ ಸ್ಥಳದಲ್ಲಿ ಈ ದಿನ ಸಣ್ಣ ಸುಳ್ಳನ್ನು ಸಹ ಹೇಳದಿರಿ. ಹೀಗೆ ಮಾಡಿದಲ್ಲಿ ಇದಕ್ಕೆ ಭಾರೀ ಬೆಲೆಯನ್ನು ತೆರಬೇಕಾಗುತ್ತದೆ. ಈ ದಿನ ಕಾಯುವಿಕೆ ನಿಮಗೆ ಬೇಸರ ತರಿಸಬಹುದು. ಇಂಥ ಸಮಯಕ್ಕೆ ಬರುತ್ತೀನಿ ಎಂದವರು ಬಾರದೇ ಇರಬಹುದು ಅಥವಾ ತಡವಾಗಬಹುದು. ಇನ್ನು ಉಪಾನ್ಯಾಸಕರು, ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ಗೌರವ- ಸಮ್ಮಾನಗಳು ದೊರೆಯುವ ದಿನ ಇದಾಗಿರಲಿದೆ. ಬೆನ್ನು ನೋವಿನ ಸಮಸ್ಯೆ ಕಾಡಬಹುದು, ಎಚ್ಚರ ಇರಲಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5) ಯಾವುದೋ ಹಳೆಯ ವಿಚಾರವೊಂದು ನಿಮ್ಮನ್ನು ಈ ದಿನ ವಿಪರೀತ ಕಾಡಲಿದೆ. ದಾಕ್ಷಿಣ್ಯಕ್ಕೆ ಸಿಲುಕಿ ಯಾರಿಗಾದರೂ ಜಾಮೀನು ನೀಡುವುದಾಗಿ ಮಾತು ನೀಡಬೇಡಿ. ಏಕೆಂದರೆ ಈ ಕಾರಣಕ್ಕೆ ನಿಮ್ಮ ಸ್ನೇಹಕ್ಕೆ ಅಥವಾ ಸಂಬಂಧಕ್ಕೆ ತಡೆಯಾಗಿ ಪರಿಣಮಿಸಬಹುದು. ಇನ್ನು ಬೆಲೆಬಾಳುವ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಜ್ಯೋತಿಷಿಗಳು, ಪುರೋಹಿತರಿಗೆ ದೂರ ಪ್ರಯಾಣದ ಯೋಗ ಇದ್ದು, ದಿಢೀರನೆ ಹೊರಡಬೇಕಾಗಿ ಬರುವುದರಿಂದ ಕೆಲವು ಕೆಲಸ- ಕಾರ್ಯಗಳು ಅರ್ಧಕ್ಕೆ ನಿಲ್ಲಲಿವೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6) ಹೊಸ ಕಾರು ಖರೀದಿ ಮಾಡಬೇಕು ಅಂದುಕೊಂಡಿರುವವರಿಗೆ ಹಣಕಾಸಿನ ಅನುಕೂಲ, ಮನೆಯಲ್ಲಿ ಕುಟುಂಬಸ್ಥರ ಬೆಂಬಲ ದೊರೆಯುವ ಸಾಧ್ಯತೆ ಇದೆ. ಕೆಲಸ ಬದಲಾವಣೆ ಮಾಡಬೇಕು ಅಂದುಕೊಂಡಿರುವವರಿಗೆ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗಬಹುದು. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ಒಪ್ಪಿಕೊಂಡ ಕೆಲಸ ಮುಗಿಸುವುದರೊಳಗೆ ಬಹಳ ಶ್ರಮ ಪಡಬೇಕಾಗುತ್ತದೆ. ಸಹಕಾರ ಸಂಘಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಮಾಡುತ್ತಾ ಇದ್ದಲ್ಲಿ ಪ್ರಭಾವಿಗಳ ಶಿಫಾರಸು ದೊರೆತು, ಶೀಘ್ರ ಸಾಲ ಮಂಜೂರಾಗಲಿದೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಐಟಿ, ಬಿಪಿಒ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಗೊಂದಲ ಆಗಲಿದೆ. ಈಗಿನ ಕೆಲಸ ಬದಲಾವಣೆ ಮಾಡುವ ಬಗ್ಗೆ ಆಲೋಚಿಸಲಿದ್ದೀರಿ. ಕೆಲವರು ಪ್ರಾಜೆಕ್ಟ್ ಬೇರೆ ಬದಲಾಯಿಸಿಕೊಡುವಂತೆ ಮನವಿ ಮಾಡಬಹುದು. ಈ ಅವಧಿಯಲ್ಲಿ ನಿಮ್ಮ ನೆಮ್ಮದಿ ಯಾವುದರಲ್ಲಿದೆ ಎಂಬುದನ್ನು ಆಲೋಚಿಸಿ. ಏಕೆಂದರೆ ನೀವಾಗಿಯೇ ಕೇಳಿಕೊಂಡ ಹುದ್ದೆ, ಕೆಲಸ ನಿಮಗೇ ಸಮಸ್ಯೆಯಾಗಿ ಕಾಡುವ ಅವಕಾಶಗಳು ಜಾಸ್ತಿ ಇದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8) ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಕೆಲಸ ಮಾಡುವವರು ಇತರರಿಗೆ ಜಾಮೀನಾಗಿ ನಿಲ್ಲುವ ಮುನ್ನ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿ. ಏಕೆಂದರೆ ಹೀಗೆ ಜಾಮೀನಾಗಿ ನಿಲ್ಲುವ ಮೂಲಕ ಸಮಸ್ಯೆ ಸಿಲುಕಿಕೊಳ್ಳಬಹುದು. ನಿಮ್ಮಲ್ಲಿ ಕೆಲವರಿಗೆ ಸ್ವಂತ ಕಚೇರಿಗೆ ಬದಲಾವಣೆ ಆಗಬಹುದು ಅಥವಾ ಇರುವ ಕಚೇರಿಯಿಂದ ಬೇರೆ ಕಚೇರಿಗೆ ಸ್ಥಳಾಂತರ ಆಗುವ ಯೋಗ ಇದೆ. ಬ್ಯಾಂಕ್ ಲೋನ್ ಅಥವಾ ಬೇರೆ ಪ್ರಯಾಣ ಸಿದ್ಧತೆಯನ್ನು ನಡೆಸುತ್ತಿದ್ದಲ್ಲಿ ಅನುಕೂಲಗಳು ಒದಗಿಬರಲಿದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9) ಆಹಾರ- ನೀರಿನ ಬಗ್ಗೆ ಗಮನ ವಹಿಸುವುದು ಮುಖ್ಯ ಆಗುತ್ತದೆ. ಬಹಳ ಕಾಲದಿಂದ ಮುಗಿಯದ ಉಳಿದಿದ್ದ ಕೆಲಸಗಳು ಈಗ ವೇಗ ಪಡೆದುಕೊಂಡು, ಪೂರ್ಣಗೊಳ್ಳುವ ಸಾಧ್ಯತೆಗಳು ನಿಚ್ಚಳವಾಗುತ್ತವೆ. ನಿಮಗೇ ಗೊತ್ತಿಲ್ಲದಂತೆ ನಿಮ್ಮ ಬಗ್ಗೆ ಒಳ್ಳೆ ಮಾತನಾಡುವ ಮೂಲಕ ವರ್ಚಸ್ಸು ಹೆಚ್ಚಾಗಲಿದೆ. ಯಾವುದಾದರೂ ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳುತ್ತಿದ್ದೀರಿ ಅಂತಾದರೆ ಆ ಕೆಲಸದಲ್ಲಿನ ಸವಾಲುಗಳು ಮತ್ತು ನಿಮ್ಮ ಸಾಮರ್ಥ್ಯ- ಮಿತಿಗಳನ್ನು ಒಮ್ಮೆ ಅಳೆದು, ಆಲೋಚಿಸಿ ಒಪ್ಪಿಕೊಳ್ಳಿ.
ಲೇಖನ- ಎನ್.ಕೆ.ಸ್ವಾತಿ