Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 27ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 27ರ ಸೋವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 27ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರ Image Credit source: 3ho-europe.org
Follow us
ಗಂಗಾಧರ​ ಬ. ಸಾಬೋಜಿ
|

Updated on: Feb 27, 2023 | 5:30 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 27ರ ಸೋವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ವಿದೇಶ ವ್ಯಾಸಂಗಕ್ಕೆ ಪ್ರಯತ್ನಿಸುತ್ತಾ ಇರುವವರಿಗೆ ಹಣಕಾಸು ನೆರವು, ಮಾರ್ಗದರ್ಶನ ದೊರೆಯಲಿದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಸವಾಲಿನ ದಿನವಾಗಿರುತ್ತದೆ. ಬೆಳ್ಳಿ- ಬಂಗಾರ ಖರೀದಿಗಾಗಿ ಕ್ರೆಡಿಟ್ ಕಾರ್ಡ್ ಬಳಕೆ ಮಾಡಲಿದ್ದೀರಿ. ನಿಮ್ಮ ಕೈ ಕೆಳಗೆ ನಿಷ್ಠೆಯಿಂದ ದುಡಿಯುತ್ತಿರುವವರ ಬಗ್ಗೆ ಅನುಮಾನ ಪಡುವಂತಾಗುತ್ತದೆ. ಇದರಿಂದ ನೀವು ಇಷ್ಟು ಸಮಯ ಬೆಳೆಸಿಕೊಂಡಿರುವ ವಿಶ್ವಾಸಕ್ಕೆ ಧಕ್ಕೆ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಅನಿರೀಕ್ಷಿತ ಅತಿಥಿಗಳ ಆಗಮನ ಆಗುತ್ತದೆ. ಯಾವುದೋ ಕಾಲದಿಂದ ಪ್ರಯತ್ನ ಮಾಡುತ್ತಿದ್ದ ಸಾಲವು ದೊರೆಯುವ ಸೂಚನೆಗಳು ಸಿಗಲಿವೆ. ಸ್ನೇಹಿತರು- ಸ್ನೇಹಿತೆಯರ ವೈಯಕ್ತಿಕ ವಿಚಾರಗಳಿಗೆ ಮೂಗು ತೂರಿಸಬೇಡಿ. ನಿಮ್ಮ ಒಳ್ಳೆಯತನವನ್ನು ಇತರರು ದುರುಪಯೋಗ ಮಾಡಿಕೊಳ್ಳದಂತೆ ಎಚ್ಚರ ವಹಿಸಿ. ಕ್ರಿಯೇಟಿವ್ ಕ್ಷೇತ್ರದಲ್ಲಿ ತೊಡಗಿಕೊಂಡವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಮನೆಯ ಹಿರಿಯರ ಆರೋಗ್ಯದ ವಿಚಾರವು ಪ್ರಾಶಸ್ತ್ಯ ಪಡೆದುಕೊಳ್ಳಲಿದೆ. ತಾಯಿಯ ಕಡೆ ಸಂಬಂಧಿಕರ ಸಹಾಯದಿಂದ ಹೊಸ ಆದಾಯದ ಮೂಲಗಳು ತೆರೆದುಕೊಳ್ಳುವ ಅವಕಾಶಗಳಿವೆ. ಈಗಾಗಲೇ ಹಲ್ಲು ನೋವಿನಿಂದ ಬಳಲುತ್ತಿರುವವರಿಗೆ ಅದು ಉಲ್ಬಣ ಆಗಲಿದೆ. ತೀರ್ಥಕ್ಷೇತ್ರ ದರ್ಶನಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ವೈದ್ಯಕೀಯ ವೃತ್ತಿಯಲ್ಲಿ ಇರುವಂಥವರಿಗೆ ಸಾಮಾಜಿಕ ಮನ್ನಣೆ ಜಾಸ್ತಿ ಆಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಆಡಬಾರದ ಮಾತನ್ನು ಆಡಬಾರದ ಸ್ಥಳದಲ್ಲಿ ಆಡಿ, ತೊಂದರೆಗಳನ್ನು ಮೈಮೇಲೆ ಎಳೆದುಕೊಳ್ಳಲಿದ್ದೀರಿ. ಸಂತಸವೋ- ಸಂಕಟವೋ ಮನಸ್ಸಿನ ಮೇಲೆ ನಿಯಂತ್ರಣವನ್ನು ಇರಿಸಿಕೊಳ್ಳಿ. ಮಕ್ಕಳ ಆರೋಗ್ಯದ ಕಡೆ ಲಕ್ಷ್ಯ ನೀಡಿ. ಅದರಲ್ಲೂ ಹೆಣ್ಣುಮಕ್ಕಳು ಇರುವಂಥವರು ಹೆಚ್ಚಿನ ಎಚ್ಚರಿಕೆಯಿಂದ ಇರಬೇಕು. ಹಳೆಯ ಸ್ನೇಹಿತರು ಈ ದಿನ ಭೇಟಿ ಆಗುವ ಯೋಗ ಇದೆ. ಹಳೇ ಆರೋಗ್ಯ ಸಮಸ್ಯೆಗಳು ಉಲ್ಬಣ ಆಗಬಹುದು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ವ್ಯಾಪಾರ- ಉದ್ಯಮದಲ್ಲಿ ಹಣ ತೊಡಗಿಸುವವರಿಗೆ ಬಹಳ ಮುಖ್ಯವಾದ ದಿನ ಇದಾಗಿರುತ್ತದೆ. ಷೇರು ಮಾರುಕಟ್ಟೆ, ಲೋಹದ ವ್ಯಾಪಾರ, ಎಲೆಕ್ಟ್ರಿಕಲ್ ವಸ್ತುಗಳ ಮಾರಾಟ ಮಾಡುವವರಿಗೆ ಈ ದಿನ ಮಿಶ್ರ ಫಲ ಇದೆ. ನೀವೇ ಮಾಡಬೇಕಾದ ಕೆಲಸವನ್ನು ಇನ್ನೊಬ್ಬರಿಗೆ ವಹಿಸುವುದಕ್ಕೆ ಹೋಗಬೇಡಿ. ಇನ್ನು ಮಹಿಳೆಯರಿಗೆ ರಕ್ತಕ್ಕೆ ಸಂಬಂಧಿಸಿದ ಸಣ್ಣ- ಪುಟ್ಟ ಅನಾರೋಗ್ಯ ಆಗಬಹುದು. ಇನ್ನು ವಿದ್ಯಾರ್ಥಿಗಳು ಪ್ರಯಾಣದ ಮೂಲಕ ಹೊಸದನ್ನು ಕಲಿಯಲಿದ್ದಾರೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಸಂಸಾರದಲ್ಲಿ ಭಿನ್ನಾಭಿಪ್ರಾಯ ಏರ್ಪಡಬಹುದು. ಮಕ್ಕಳ ಶಿಕ್ಷಣದ ವಿಚಾರಕ್ಕೆ ಚಿಂತೆ ಎದುರಾಗಲಿದೆ. ಈಗಾಗಲೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅದು ಅರ್ಧದಲ್ಲಿ ನಿಂತುಬಿಡುವ ಸಾಧ್ಯತೆ ಇದೆ. ಇತರರ ಮಾತನ್ನು ನಂಬಿ, ನಿರ್ಧಾರ ಕೈಗೊಳ್ಳಬೇಡಿ. ವರ್ಗಾವಣೆಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಪ್ರಭಾವಿಗಳ ನೆರವು ದೊರೆಯಲಿದೆ. ರಾಜಕಾರಣಿಗಳಿಗೆ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ಶಿವನ ಆರಾಧನೆ ಮಾಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮ ಬುದ್ಧಿ ಬಹಳ ಚುರುಕಾಗಿ ಹಾಗೂ ಸಮಯೋಚಿತವಾಗಿ ಬಳಸಿ, ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಬ್ಯಾಂಕ್‌ ಕೆಲಸಗಳನ್ನು ಬೇಗ ಬೇಗ ಮುಗಿಸುವುದಕ್ಕೆ ಮಾಡುವ ಪ್ರಯತ್ನಗಳು ಸಫಲವಾಗಲಿವೆ. ರೈಲು ಪ್ರಯಾಣ ಮಾಡುವಂಥವರು ಈ ದಿನ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ಮುಖ್ಯವಾಗಿ ನಿಮ್ಮ ವಸ್ತುಗಳನ್ನು ಜೋಪಾನ ಮಾಡಿಟ್ಟುಕೊಳ್ಳಿ. ಸಾಧ್ಯವಾದಲ್ಲಿ ಪ್ರಯಾಣವನ್ನು ಮುಂದೂಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನೀವು ಯಾರನ್ನೋ ಸ್ಪರ್ಧಿ ಅಂತ ಅಂದುಕೊಂಡು ಬಿಟ್ಟಿದ್ದರೆ ಅದನ್ನು ತಲೆಯಿಂದ ತೆಗೆದು ಹಾಕಬೇಕಾದ ದಿನ ಇದು. ಏಕೆಂದರೆ, ದೊಡ್ಡ ಅವಕಾಶ ನಿಮ್ಮೆದುರು ಕಾಯುತ್ತಾ ಇದೆ. ಆ ಕಡೆಗೆ ಲಕ್ಷ್ಯ ನೀಡಬೇಕು. ಸಣ್ಣ- ಪುಟ್ಟ ವಿಚಾರಗಳು, ಅನುಮಾನಗಳು, ಕೀಳರಿಮೆ ನಿಮ್ಮ ಅವಕಾಶದಿಂದ ದೂರಕ್ಕೆ ತಳ್ಳಬಾರದು. ಈ ದಿನ ವಿಷ್ಣು ಸಹಸ್ರನಾಮ ಶ್ರವಣ ಅಥವಾ ಪಠಣ ಮಾಡಿ, ಇದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನಿಮಗೆ ಕೌನ್ಸೆಲಿಂಗ್‌ನ ಅಗತ್ಯ ಇದೆ, ಸಣ್ಣ- ಪುಟ್ಟ ವಿಚಾರಗಳಿಗೂ ವಿಪರೀತ ರಿಯಾಕ್ಟ್‌ ಮಾಡುತ್ತಿದ್ದೀರಿ ಎಂದು ಯಾರಾದರೂ ನಿಮಗೆ ಹೇಳಿದಲ್ಲಿ ಅದನ್ನು ಗಂಭೀರವಾಗಿ ಆಲೋಚಿಸಿ. ಮನಸ್ಸು ಪ್ರಶಾಂತವಾಗಿ ಇಟ್ಟುಕೊಳ್ಳುವುದಕ್ಕೆ ಪ್ರಯತ್ನಿಸಿ. ನನ್ನಿಂದ ಎಲ್ಲರೂ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ, ನನ್ನ ಸಾಮರ್ಥ್ಯ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತ ನಿಮಗೆ ಅನಿಸುವ ಸಾಧ್ಯತೆ ಇದೆ. ನಿಮ್ಮ ಕಣ್ಣಿಗೆ ಇರುವೆಗಳ ಗುಂಪು ಕಂಡರೆ ಅವುಗಳಿಗೆ ಸಕ್ಕರೆ ಹಾಕಿ.

ಲೇಖನ- ಎನ್‌.ಕೆ.ಸ್ವಾತಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ