Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 28ರ ದಿನಭವಿಷ್ಯ

|

Updated on: Feb 28, 2023 | 5:30 AM

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 28ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 28ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರ
Image Credit source: google.com
Follow us on

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 28ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮಗೆ ಈ ದಿನ ಸಾಮರ್ಥ್ಯವನ್ನು ಸಾಬೀತು ಮಾಡುವ ಅವಕಾಶ ದೊರೆಯಲಿದೆ. ನಿಮಗೆ ಈಗಿರುವ ಜವಾಬ್ದಾರಿ, ಹುದ್ದೆಯು ಹೆಚ್ಚಾಗುವ ಸೂಚನೆ ದೊರೆಯಲಿದೆ. ಮನೆ ಅಥವಾ ಸೈಟು ಖರೀದಿಗೆ ಬ್ಯಾಂಕ್ ಸಾಲಕ್ಕಾಗಿ ಪ್ರಯತ್ನ ಪಡುತ್ತಿದ್ದಲ್ಲಿ ಅದು ದೊರೆಯುವ ಅವಕಾಶಗಳಿವೆ. ಹಳೆಯ ವಸ್ತುಗಳು ಮಾರಾಟ ಮಾಡುವವರಿಗೆ ಸಂಪರ್ಕಗಳು ವಿಸ್ತರಣೆ ಆಗಲಿವೆ. ಬರಬೇಕಾದ ಆದಾಯ ಕೈ ಸೇರಬೇಕಾದಲ್ಲಿ ಹೆಚ್ಚಿನ ಶ್ರಮವನ್ನು ಹಾಕಬೇಕಾಗುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನೀವು ಅಂದುಕೊಂಡ ಕೆಲಸಗಳನ್ನು ಮುಗಿಸುವುದಕ್ಕೆ ಸರಿಯಾದ ವ್ಯಕ್ತಿಯನ್ನು ಹುಡುಕುವುದಕ್ಕೆ ಹೆಚ್ಚಿನ ಸಮಯ ಮೀಸಲಿಡಲಿದ್ದೀರಿ. ಸರ್ಕಾರಕ್ಕೆ ಸಂಬಂಧಿಸಿದ ಕಂದಾಯ, ತೆರಿಗೆ ಅಥವಾ ಶುಲ್ಕಗಳನ್ನು ಬಾಕಿ ಉಳಿಸಿಕೊಂಡಿದ್ದಲ್ಲಿ ಅದನ್ನು ಪಾವತಿಸುವುದಕ್ಕೆ ಗಮನ ನೀಡಿ. ಉದ್ಯೋಗ ಬದಲಾವಣೆ ಬಗ್ಗೆ ಆಲೋಚನೆ ಮಾಡುತ್ತಿರುವವರಿಗೆ ಅವಕಾಶಗಳು ದೊರೆಯಲಿವೆ. ಹೊಸ ವಾಹನ ಖರೀದಿಗಾಗಿ ಹಣವನ್ನು ಹೊಂದಿಸಿಕೊಳ್ಳಲಿದ್ದೀರಿ. ಕಿರು ಪ್ರವಾಸಕ್ಕೆ ತೆರಳುವ ಯೋಗ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಧಾನವೇ ಪ್ರಧಾನ ಎಂಬ ಕಡೆ ಗಮನ ಕೊಡಿ. ಏಕೆಂದರೆ, ಹೊಸಬರು ಪರಿಚಯವಾದರು ಹಾಗೂ ಅವರ ಬಗ್ಗೆ ಭಾರೀ ವಿಶ್ವಾಸದಿಂದ ಹೇಳಿಕೊಂಡ ಅಂತರಂಗದ ವಿಷಯಗಳು, ಸಮಸ್ಯೆಗಳನ್ನು ಹೇಳಿಕೊಳ್ಳದಿರಿ. ಷೇರುಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅನುಭವಿಗಳ ಸಲಹೆ, ಮಾರ್ಗದರ್ಶನವನ್ನು ಪಡೆಯಿರಿ. ಈ ದಿನ ಸಾಧ್ಯವಾದಲ್ಲಿ ದುರ್ಗಾದೇವಿಯ ದರ್ಶನ ಪಡೆದು, ಆಶೀರ್ವಾದ ಪಡೆಯಿರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಎಲ್ಐಸಿ ಏಜೆಂಟ್ ಆಗಿರುವಂಥವರು, ಕಮಿಷನ್ ವ್ಯವಹಾರಗಳನ್ನು ಮಾಡುತ್ತಿರುವವರಿಗೆ ಆದಾಯದ ಪ್ರಮಾಣ ಹೆಚ್ಚಾಗಲಿದೆ. ಹೂಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದವರ ಜತೆ ಚರ್ಚೆ ಮಾಡಲಿದ್ದೀರಿ. ಮುಖ್ಯವಾದ ಕಾಗದ- ಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಿ. ಈ ದಿನ ವಾಹನ ಚಾಲನೆ ಮಾಡುವಂಥವರು ನೋ ಪಾರ್ಕಿಂಗ್, ಒನ್ ವೇ ಇಂಥದ್ದರಿಂದ ದಂಡ ಪಾವತಿಸುವಂಥ ಸನ್ನಿವೇಶ ಸೃಷ್ಟಿ ಆಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ತವರು ಮನೆಯಿಂದ ಶುಭ ಕಾರ್ಯಗಳಿಗೆ ಆಹ್ವಾನ ಬರಲಿದೆ. ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಸಹೋದರರ ಜತೆಗೆ ಮಾತುಕತೆ ನಡೆಯುವಂಥ ಯೋಗ ಇದೆ. ಈ ಹಿಂದೆ ಯಾವಾಗಲೋ ನೀವಾಡಿದ್ದ ಮಾತನ್ನು ನೆಪ ಮಾಡಿಕೊಂಡು, ಈಗ ನಿಮ್ಮ ಮೇಲೆ ಆರೋಪಗಳನ್ನು ಹೊರಿಸುವ ಸಾಧ್ಯತೆ ಇದೆ. ಆದ್ದರಿಂದ ಎಂಥದ್ದೇ ಸನ್ನಿವೇಶವನ್ನು ತಾಳ್ಮೆಯಿಂದ ಎದುರಿಸುವುದು ಮುಖ್ಯ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಎಲ್ಲರೂ ಒಪ್ಪಿಕೊಳ್ಳುವಂಥ ಪ್ರಸ್ತಾವವನ್ನು ಮಾಡಬೇಕು ಎಂದುಕೊಂಡಲ್ಲಿ ಒತ್ತಡಕ್ಕೆ ಸಿಲುಕಿಕೊಳ್ಳುತ್ತೀರಿ. ಖಾಸಗಿ ಸಂಸ್ಥೆಗಳಲ್ಲಿ ಮ್ಯಾನೇಜ್ ಮೆಂಟ್ ಹುದ್ದೆಯಲ್ಲಿ ಇರುವವರಿಗೆ ಹೊಸ ಪ್ರಾಜೆಕ್ಟ್ ಮೇಲೆ ಕೆಲಸ ಮಾಡಬೇಕಾಗುತ್ತದೆ. ಬಡ್ತಿಗಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಕೇಳುವ ಯೋಗ ಇದೆ. ಇತರರ ವೈಯಕ್ತಿಕ ವಿಚಾರಗಳಲ್ಲಿ ನಿಮ್ಮ ಅಭಿಪ್ರಾಯವನ್ನು ಹೇಳುವ ಮುಂಚೆ ಒಂದಕ್ಕೆ ನಾಲ್ಕು ಬಾರಿ ಆಲೋಚನೆ ಮಾಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಆದಾಯದ ಮೂಲ ಹೆಚ್ಚು ಮಾಡಿಕೊಳ್ಳುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಮಕ್ಕಳ ಶಿಕ್ಷಣದ ಸಲುವಾಗಿ ಸಾಲ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಲಿದೆ. ಇತರರ ಮೇಲಿನ ಸವಾಲಿಗೋ ಅಥವಾ ಪ್ರತಿಷ್ಠೆಗಾಗಿಯೋ ಖರ್ಚು ಮಾಡುವ ಮುಂಚೆ ಸರಿಯಾದ ಲೆಕ್ಕಾಚಾರ ಇರಲಿ. ಕ್ರೆಡಿಟ್ ಕಾರ್ಡ್ ಬಳಸುವಂಥವರು ಅಥವಾ ಪರ್ಸನಲ್ ಲೋನ್ ತೆಗೆದುಕೊಳ್ಳಬೇಕು ಎಂದು ಇದ್ದಲ್ಲಿ ಈ ದಿನ ಅನಿವಾರ್ಯ ಅಲ್ಲದಿದ್ದಲ್ಲಿ ನಿರ್ಧಾರ ಮುಂದಕ್ಕೆ ಹಾಕಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮ್ಮ ಕೈಯಲ್ಲಿ ಏನು ಮೊತ್ತವಿದೆ ಅಥವಾ ನಿಮ್ಮಿಂದ ಎಷ್ಟು ಸಾಮರ್ಥ್ಯದ ತನಕ ಉಳಿತಾಯ ಮಾಡಬಹುದು ಎಂಬುದರ ಲೆಕ್ಕ ಸರಿಯಾಗಿ ಹಾಕಿಕೊಳ್ಳಿ. ಪ್ರೀತಿ- ಪ್ರೇಮದಲ್ಲಿ ಇರುವಂಥವರಿಗೆ ಮನೆಯಲ್ಲಿ ಈ ಬಗ್ಗೆ ವಿಷಯ ತಿಳಿಸುವ ಆಲೋಚನೆ ಬರಲಿದೆ. ವಿದೇಶ ಪ್ರಯಾಣಕ್ಕೆ ತೆರಳಬೇಕು ಎಂದು ಇರುವವರಿಗೆ ವೀಸಾ ಮೊದಲಾದ ಕೆಲಸಗಳು ಸಲೀಸಾಗಿ ಆಗುವಂಥ ಸಾಧ್ಯತೆ ಇದೆ. ನವದಂಪತಿಗೆ ಸಂತೋಷದಿಂದ ಸಮಯ ಕಳೆಯುವ ಯೋಗ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ವಿಪರೀತ ಆಲೋಚನೆ ಅಥವಾ ಬುದ್ಧಿವಂತಿಕೆ ಮಾಡುವುದರಿಂದ ಸಮಸ್ಯೆ ಅಥವಾ ನಷ್ಟ ತಂದುಕೊಳ್ಳುವ ಸಾಧ್ಯತೆ ಇದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಅಥವಾ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸುವವರಿಗೆ ದೈನಂದಿನ ಕೆಲಸದಲ್ಲಿ ಒತ್ತಡ ಇರಲಿದೆ. ಈ ಹಿಂದೆ ನೀವು ಮಾಡಿಕೊಟ್ಟಿದ್ದ ಕೆಲಸದಿಂದ ಮೆಚ್ಚುಗೆಯಾಗಿ, ಹೊಸದಾಗಿ ಕೆಲಸಗಳನ್ನು ವಹಿಸಬಹುದು. ದುಡ್ಡಿನ ವಿಚಾರದಲ್ಲಿ ಮುಂದಾಲೋಚನೆ ಬಹಳ ಮುಖ್ಯ ಎಂಬುದು ಗಮನದಲ್ಲಿರಲಿ.

ಲೇಖನ- ಎನ್‌.ಕೆ.ಸ್ವಾತಿ