Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 4ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 4ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 04, 2023 | 6:15 AM

ನಿಮ್ಮ ಜನ್ಮಸಂಖ್ಯೆಗೆ (Birth number) ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು (Daily Horoscope) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1

ಬಂಡೆಗೆ ತಲೆ ಚಚ್ಚಿಕೊಳ್ಳುವುದು ಬುದ್ಧಿವಂತಿಕೆಯಲ್ಲ, ಹುಂಬತನ. ನಿಮ್ಮ ಮೂಲ ಸ್ವಭಾವದಿಂದ ಹೊರಗೆ ಬಂದು ಆಲೋಚಿಸುವ ಸಮಯ ಇದು. ವೃತ್ತಿ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಸಂಗತಿಗಳನ್ನು ನಾಜೂಕಾಗಿ ನಿರ್ವಹಣೆ ಮಾಡಿ. ವೈಯಕ್ತಿಕವಾಗಿ ತೆಗೆದುಕೊಂಡು, ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಎದುರಾಳಿಯ ಸಾಮರ್ಥ್ಯವನ್ನು ಗುರುತಿಸಿ, ಮುಂದುವರಿಯಿರಿ.

ಜನ್ಮಸಂಖ್ಯೆ 2

ಮೊಬೈಲ್ ಫೋನ್, ಟ್ಯಾಬ್‌ಲೆಟ್‌ನಂಥ ಗ್ಯಾಜೆಟ್‌ಗಳನ್ನು ಖರೀದಿಸುವ ಮನಸ್ಸು ಮಾಡಲಿದ್ದೀರಿ. ಈ ವಿಷಯದಲ್ಲಿ ಯಾವುದೇ ಪ್ರಯೋಗಕ್ಕೆ ಇಳಿಯಬೇಡಿ. ಎಲ್ಲ ಸಂದರ್ಭದಲ್ಲೂ ಸಲಹೆಗಳು ಉತ್ತಮವಾಗಿ ಫಲಿತಾಂಶ ಕೊಡುತ್ತವೆ ಎನ್ನುವುದಕ್ಕೆ ಸಾಧ್ಯವಿಲ್ಲ. ಪ್ರಯಾಣದಿಂದ ಲಾಭ ಇದೆ.

ಜನ್ಮಸಂಖ್ಯೆ 3

ನಿಮಗೆ ಬರಬೇಕಾದ ಹಣವಿದ್ದಲ್ಲಿ ಒಂದೋ ತಡೆ ಆಗಬಹುದು ಅಥವಾ ಪೂರ್ಣ ಮೊತ್ತ ಬಾರದಿರಬಹುದು. ಯಾವುದೇ ವಿಚಾರವನ್ನು ಪೂರ್ಣವಾಗಿ ತಿಳಿದುಕೊಳ್ಳದೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಡಿ. ಕಲಿಕೆಗೆ ಸಹಾಯ ಆಗುವಂಥ ವ್ಯಕ್ತಿಯೊಬ್ಬರ ಪರಿಚಯ ಆಗುವಂಥ ಯೋಗ ನಿಮ್ಮ ಪಾಲಿಗಿದೆ.

ಜನ್ಮಸಂಖ್ಯೆ 4

ನೀವು ಬಹಳ ನಿರೀಕ್ಷೆ ಮಾಡುತ್ತಿರುವಂಥ ಸುದ್ದಿಯೊಂದು ಬರಲಿದೆ. ಅನಿರೀಕ್ಷಿತವಾಗಿ ಕೆಲವು ಜವಾಬ್ದಾರಿಗಳು ಹೆಚ್ಚಾಗಬಹುದು. ಆದರೆ ಇದರಿಂದ ನಿಮ್ಮ ಪ್ರಾಮುಖ್ಯ ಹೆಚ್ಚಾಗಲಿದೆ. ಎಲ್ಲರೂ ತಮ್ಮಿಂದ ಆಗದು ಎಂದು ಕೈ ಬಿಟ್ಟ ಕೆಲಸವನ್ನು ನೀವು ಪೂರ್ಣಗೊಳಿಸಿ, ಮೆಚ್ಚುಗೆಯನ್ನು ಪಡೆದುಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 5

ಒಂದು ರೀತಿಯ ನೆಮ್ಮದಿ ನೆಲೆಸಲಿದೆ. ಅಂದುಕೊಂಡಿದ್ದನ್ನು ಮಾಡಿದ, ಹೇಳಬೇಕೆಂದಿದ್ದನ್ನು ಹೇಳಿದ ಸಮಾಧಾನ ನಿಮಗೆ ದೊರೆಯಲಿದೆ. ದೂರದ ಬಂಧುಗಳು ಹೊಸ ಸಂಗತಿಯೊಂದು ತಿಳಿಸಲಿದ್ದಾರೆ. ಇದು ನಿಮಗೆ ಭವಿಷ್ಯದಲ್ಲಿ ಹೇಗಾದರೂ ನೆರವಿಗೆ ಬರಲಿದೆ. ಇಂದು ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡಿ, ಅದಕ್ಕೆ ಹಣ ಖರ್ಚು ಮಾಡಲಿದ್ದೀರಿ.

ಜನ್ಮಸಂಖ್ಯೆ 6

ನಾಲಗೆ ಮೇಲೆ ಈ ದಿನ ಹಿಡಿತ ಬಹಳ ಮುಖ್ಯ. ಒಂದೋ ಮಾತಾದರೂ ಸರಿ ಅಥವಾ ಆಹಾರವಾದರೂ ಸರಿಯೇ ಮಿತಿಯಲ್ಲಿ ಇರಲಿ. ಯಾರದೋ ಪ್ರೋತ್ಸಾಹಕ್ಕೆ ನೀವು ಉಬ್ಬಿ ಹೋಗದಿರಿ. ಕಾಲ ನೆಲದ ಮೇಲಿರಲಿ. ರಾಜಕಾರಣದಲ್ಲಿ ಇರುವವರಿಗೆ ವಿವಾದಗಳಿಗೆ ಸಿಲುಕಿಕೊಳ್ಳುವಂತಹ ದಿನ ಇದಾಗಿರಲಿದೆ.

ಜನ್ಮಸಂಖ್ಯೆ 7

ಕುಟುಂಬದವರ ಸಲುವಾಗಿ ಖರ್ಚು ಮಾಡಲಿದ್ದೀರಿ. ಮಕ್ಕಳ ಬೆಳವಣಿಗೆಯಿಂದ ಮನಸ್ಸಿಗೆ ನೆಮ್ಮದಿ, ಉಲ್ಲಾಸ ಇರಲಿದೆ. ಈ ಹಿಂದೆ ನೀವು ಪಟ್ಟ ಶ್ರಮಕ್ಕೆ ಈ ದಿನ ಮೆಚ್ಚುಗೆಯ ಮಾತುಗಳನ್ನು ಕೇಳಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ಶೀತ, ಕಫದ ಸಮಸ್ಯೆ ಕಾಡಬಹುದು. ತಂಪಾದ ಪದಾರ್ಥಗಳ ಸೇವನೆಯಿಂದ ದೂರ ಇರಿ.

ಜನ್ಮಸಂಖ್ಯೆ 8

ಹೊಸ ಪ್ರಾಜೆಕ್ಟ್‌ವೊಂದರಲ್ಲಿ ಬಹಳ ಮುಖ್ಯವಾದ ಜವಾಬ್ದಾರಿಯನ್ನು ನೀವು ವಹಿಸಬೇಕಾಗುತ್ತದೆ. ಮೇಲು ನೋಟಕ್ಕೆ ಇದು ಹೆಚ್ಚು ಸಮಯ ತೆಗೆದುಕೊಳ್ಳಲ್ಲ ಅನಿಸಬಹುದು. ಆದರೆ ಮುಂದೆ ಇದಕ್ಕಾಗಿಯೇ ಜಾಸ್ತಿ ತೊಡಗಿಸಿಕೊಳ್ಳುವಂಥ ಸನ್ನಿವೇಶ ಸೃಷ್ಟಿ ಆಗಲಿದೆ. ಆದ್ದರಿಂದ ಮೊದಲಿಗೆ ಸ್ಪಷ್ಟ ಚಿತ್ರಣ ತೆಗೆದುಕೊಳ್ಳಿ.

ಜನ್ಮಸಂಖ್ಯೆ 9

ಕ್ಲಿಷ್ಟಕರ ಸಮಸ್ಯೆಗಳನ್ನು ಈ ದಿನ ಬಗೆಹರಿಸಲಿದ್ದೀರಿ. ಉದ್ಯೋಗ ಬದಲಾವಣೆ ಮಾಡಬೇಕು ಎಂದಿರುವವರಿಗೆ ಶುಭ ಸುದ್ದಿ ಇದೆ. ಮನೆಯಲ್ಲಿ ನಿಮ್ಮ ಮೇಲೆ ಅವಲಂಬನೆ ಜಾಸ್ತಿ ಆಗಲಿದೆ. ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ಎಲ್ಲ ಭಾರವೂ ನಿಮ್ಮ ಮೇಲೆ ಬೀಳಲಿದೆ ಎಂಬುದರ ಅರಿವು ನಿಮಗಿರಲಿ.

ಲೇಖನ- ಎನ್‌.ಕೆ.ಸ್ವಾತಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ