Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 6ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 6ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 6ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರImage Credit source: allure.com
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 06, 2023 | 5:03 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 6ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಭವಿಷ್ಯದಲ್ಲಿ ಆಗಬಹುದಾದ ಬಹುಮುಖ್ಯ ಅನುಕೂಲದ ಮುನ್ಸೂಚನೆ ಈ ದಿನ ನಿಮಗೆ ಸಿಗಲಿದೆ. ಸಂಸಾರದಲ್ಲಿ ಸಂತೋಷ, ನೆಮ್ಮದಿಯ ವಾತಾವರಣ, ಹಣಕಾಸಿನ ಸಮಸ್ಯೆಗಳು ಇಳಿಮುಖ ಆಗುವುದು. ನೀವು ಅಂದುಕೊಂಡಂತೆ ಆಸ್ತಿ- ವಾಹನಗಳ ಖರೀದಿಗೆ ಅನುಕೂಲ, ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಇರುವವರ ಜತೆಗೆ ನಿಮ್ಮ ಸ್ನೇಹ- ಸಂಬಂಧ ವೃದ್ದಿ ಆಗುವುದು ಇತ್ಯಾದಿ ಶುಭ ಫಲಗಳನ್ನು ಈ ದಿನ ಕಾಣಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಹಳೇ ಚಿನ್ನ- ಬೆಳ್ಳಿ ವಸ್ತುಗಳನ್ನು ಖರೀದಿ ಮಾಡುವಂತೆ ಪರಿಚಿತರೋ ಅಥವಾ ಸ್ನೇಹಿತರೇ ನಿಮ್ಮ ಮುಂದೆ ಪ್ರಸ್ತಾವ ತರಲಿದ್ದಾರೆ. ಇನ್ನು ನಿಮ್ಮ ಸ್ವಂತ ಬಲದಿಂದ ಎಂಥ ಸವಾಲನ್ನೂ ಈ ದಿನ ದಾಟಲಿದ್ದೀರಿ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಉತ್ತಮ ಬೆಳವಣಿಗೆ ಕಾಣಲಿದೆ. ದೇವತಾರಾಧನೆ, ತೀರ್ಥಕ್ಷೇತ್ರ ದರ್ಶನವನ್ನು ಮಾಡಲಿದ್ದೀರಿ. ಮನೆಯಲ್ಲಿ ಗ್ಯಾಸ್ ಸಿಲಿಂಡರ್, ಎಲೆಕ್ಟ್ರಿಕಲ್- ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಬಳಸುವಾಗ ಎಚ್ಚರಿಕೆಯಿಂದ ಇರಬೇಕು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಪ್ರಭಾ ವಲಯ ವಿಸ್ತರಣೆ ಆಗುವುದಕ್ಕೆ ವೇದಿಕೆ ದೊರೆಯಲಿದೆ. ನಿಮ್ಮ ಸಲಹೆಗೆ ಇತರರು ಗೌರವ, ಬೆಲೆ ನೀಡಲಿದ್ದಾರೆ. ಸಂಗೀತಗಾರರು, ಸಿನಿಮಾ ಕ್ಷೇತ್ರದಲ್ಲಿ ಇರುವವರಿಗೆ ಸನ್ಮಾನಗಳಾಗುವ ಯೋಗ ಇದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡದ ದಿನವಾಗಿರುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ಈಗಾಗಲೇ ಇದ್ದಲ್ಲಿ ಅದು ಉಲ್ಬಣಿಸಲಿದೆ. ಪ್ರೀತಿಪಾತ್ರರಿಗೆ ಉಡುಗೊರೆ ನೀಡುವುದಕ್ಕೆ ಹಣದ ಖರ್ಚಾಗಲಿದೆ. ಕಿರುಪ್ರವಾಸ ಯೋಗ ನಿಮಗಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈ ದಿನ ಬಿಡುವಿಲ್ಲದಷ್ಟು ಕೆಲಸಗಳು ನಿಮ್ಮನ್ನೇ ಹುಡುಕಿಕೊಂಡು ಬರಲಿವೆ. ನೀವು ನಿರೀಕ್ಷೆ ಕೂಡ ಮಾಡದ ರೀತಿಯಲ್ಲಿ ಮನೆಯಲ್ಲಿ ಮದುವೆ ಪ್ರಸ್ತಾವ ಬರಬಹುದು. ಸಂಬಂಧದಲ್ಲಿಯೇ ಸೂಕ್ತ ವಧು/ವರ ದೊರೆಯುವ ಸಾಧ್ಯತೆಗಳಿವೆ, ಮನರಂಜನೆಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ವಾಹನ- ಮನೆ ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ, ಔತಣಕೂಟಗಳಿಗೆ ಆಹ್ವಾನ ಬರಲಿದೆ. ಸ್ವಂತ ಮನೆ ಇದ್ದಲ್ಲಿ ದುರಸ್ತಿಗೆ ಯೋಜನೆ ರೂಪಿಸುತ್ತೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಗ್ಯಾಜೆಟ್ ಗಳು, ಹೊಸ ಮೊಬೈಲ್ ಫೋನ್, ಲ್ಯಾಪ್ ಟಾಪ್ ಖರೀದಿ ಮಾಡಬೇಕಾದ ಸ್ಥಿತಿ ಸೃಷ್ಟಿ ಆಗಲಿದೆ. ಅಂದ ಹಾಗೆ ಬೇರೆ ಯಾರೋ ನಿಮಗೆ ಸಹಾಯ ಮಾಡುತ್ತಾರೆ ಎಂಬ ಅತಿಯಾದ ನಿರೀಕ್ಷೆ ಬೇಡ, ನಿಮ್ಮ ಶ್ರಮ ನಿಮಗೆ, ಅಷ್ಟೇ. ಈ ಹಿಂದಿನ ಕಹಿ ಘಟನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ದ್ವೇಷ ಸಾಧನೆ ಮಾಡದಿರಿ. ಜ್ವರ, ನೆಗಡಿ, ಕಫದಂಥ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಅಗತ್ಯ ಕಂಡುಬಂದಲ್ಲಿ ಕಡ್ಡಾಯವಾಗಿ ವೈದ್ಯರನ್ನು ಭೇಟಿಯಾಗಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ಬೆಳವಣಿಗೆಗಳು ಆಗಲಿವೆ. ಎಲ್ಲ ಬದಲಾವಣೆಗಳು ಒಟ್ಟಿಗೆ ಮಾಡಿಕೊಳ್ಳಬೇಕಾದ ಅನಿವಾರ್ಯ ಎದುರಾಗಲಿದೆ. ಅದರ ಸಕಾರಾತ್ಮಕ ಫಲವನ್ನು ಕಾಣಲಿದ್ದೀರಿ. ಒಲ್ಲದ ಮನಸ್ಸಿನಿಂದ ವ್ಯಕ್ತಿಯೊಬ್ಬರಿಗೆ ಸಹಾಯ ಮಾಡಬೇಕಾಗಬಹುದು. ಯಾರ ಮೇಲೂ ದ್ವೇಷ ಸಾಧನೆ ಮಾಡದಿರಿ. ಸರ್ಕಾರದ ಕೆಲಸಗಳ ಗುತ್ತಿಗೆ ವಹಿಸಿಕೊಳ್ಳುವವರಿಗೆ ಹಣಕಾಸಿನ ಬಿಡುಗಡೆ ಆಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮ ತಾಳ್ಮೆ, ಸಂಯಮಕ್ಕೆ ಪರೀಕ್ಷೆ ಒಡ್ಡುವ ದಿನ ಇದಾಗಿರುತ್ತದೆ. ಏಕೆಂದರೆ ಇದರಲ್ಲಿ ಮುಂದುವರಿಯಲಾ ಅಥವಾ ಬೇರೆ ಕ್ಷೇತ್ರವನ್ನು ಆರಿಸಿಕೊಳ್ಳಲಾ ಅಥವಾ ತಾತ್ಕಾಲಿಕವಾದ ಬಿಡುವು ತೆಗೆದುಕೊಳ್ಳಲಾ ಹೀಗೆ ಯೋಚನೆಗಳು ನಿಮ್ಮನ್ನು ಮುತ್ತಿಕೊಳ್ಳುತ್ತವೆ. ಕೊನೆಗೂ ಇದನ್ನು ಆಖೈರು ಎಂದು ನಿರ್ಧಾರ ಮಾಡಲಿಕ್ಕೆ ಆಗುವುದಿಲ್ಲ. ಆದ್ದರಿಂದ ದ್ವಂದ್ವದಲ್ಲಿ ಇರುವ ವಿಚಾರದ ಬಗ್ಗೆ ಈ ದಿನ ತೀರ್ಮಾನ ಮಾಡಬೇಡಿ. ಬಹಳ ದಿನಗಳಿಂದ ಬಾಕಿ ಉಳಿದಿದ್ದ ಹಣ ಬರುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನವ ವಿವಾಹಿತರಿಗೆ ಒತ್ತಡದ ಸನ್ನಿವೇಶಗಳನ್ನು ಎದುರಿಸಬೇಕಾಗುತ್ತದೆ. ನಿಮಗೆ ಅವಮಾನ ಆಗುವುದಕ್ಕೆ ಏನು ಬೇಕೋ ಅವೆಲ್ಲವನ್ನೂ ಶತ್ರುಗಳು ಮಾಡಲಿದ್ದಾರೆ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಪ್ರಗತಿ ಇದೆ. ಮೇಲಧಿಕಾರಿಗಳು ನಿಮಗೆ ವಹಿಸಿದ ಕೆಲಸವನ್ನು ಬೇರೆಯವರಿಗೆ ವರ್ಗಾಯಿಸಬೇಡಿ. ಬಡ್ತಿ, ವರ್ಗಾವಣೆ ನಿರೀಕ್ಷೆಯಲ್ಲಿ ಇರುವವರಿಗೆ ಆ ಬಗೆಗಿನ ಮಾಹಿತಿ ದೊರೆಯಲಿದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಪ್ರಭಾವಿಗಳ ಪರಿಚಯ ಆಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನಿಮ್ಮ ಸಾಮಾಜಿಕ ಪರಿಚಯಗಳ ವ್ಯಾಪ್ತಿ ವಿಸ್ತರಿಸುವ ಅವಕಾಶಗಳು ದೊರೆಯಲಿವೆ. ತುಂಬ ಆರಾಮವಾಗಿ ದಿನ ಕಳೆಯುವುದಕ್ಕೆ ಬಯಸುತ್ತೀರಿ. ಬರೀ ಅಂದುಕೊಂಡರಷ್ಟೇ ಸಾಲದು, ಅದಕ್ಕೆ ತಕ್ಕ ತಯಾರಿಯೂ ಮುಖ್ಯ. ಆ ಕಡೆಗೂ ಗಮನ ನೀಡಿ. ಇನ್ನೊಬ್ಬರ ಸಹಾಯಕ್ಕಾಗಿ ಕಾಯಲಿಕ್ಕೆ ಹೋಗದಿರಿ. ದೀರ್ಘವಾದ ಪಯಣವೊಂದು ನಿಮ್ಮನ್ನು ಕಾಯುತ್ತಾ ಇದೆ. ಹೆಸರು, ಕೀರ್ತಿ, ಹಣ ಮಾಡುವುದಕ್ಕೆ ವೇದಿಕೆ ದೊರೆಯುವ ಸೂಚನೆ ಸಿಗಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ