Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 8ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 8ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 8ರ ದಿನಭವಿಷ್ಯ
ಸಂಖ್ಯಾಶಾಸ್ತ್ರImage Credit source: Istockphoto
Follow us
TV9 Web
| Updated By: Rakesh Nayak Manchi

Updated on: Mar 08, 2023 | 5:45 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 8ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಪೋಷಕರು ಅಥವಾ ನಿಮಗೆ ತುಂಬ ಹತ್ತಿರದವರಿಗೆ ಹೆಚ್ಚಿನ ಪ್ರೀತಿ, ವಾತ್ಸಲ್ಯ, ಅಕ್ಕರೆಯ ಅಗತ್ಯ ಇದೆ ಎಂದೆನಿಸುತ್ತದೆ. ಭಾವನಾತ್ಮಕವಾಗಿ ಬಹಳ ವಿಷಯಗಳು ಈ ದಿನ ನಿಮ್ಮನ್ನು ಕಾಡಲಿವೆ. ವೈದ್ಯರು, ಶಿಕ್ಷಕರು, ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಹೊಸ ಜವಾಬ್ದಾರಿ, ವೇತನ ಹೆಚ್ಚಳದ ಸಾಧ್ಯತೆ ಇದೆ. ಮಹಿಳೆಯರಿಗೆ ರಕ್ತದ ಕೊರತೆ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಹೀಗಾದಲ್ಲಿ ಕಡ್ಡಾಯವಾಗಿ ಸೂಕ್ತ ವೈದ್ಯರನ್ನು ಭೇಟಿ ಮಾಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಬಗ್ಗೆ ಇತರರಿಗೆ ನಿರೀಕ್ಷೆಗಳು ಜಾಸ್ತಿ ಆಗುತ್ತವೆ. ಇನ್ನೂ ಮುಂದೆಲ್ಲೋ ಡೆಡ್ ಲೈನ್ ಇದೆ ಎಂದುಕೊಂಡು ಆರಾಮವಾಗಿ ಮಾಡುತ್ತಿದ್ದ ಕೆಲಸವೊಂದನ್ನು ಈ ಕೂಡಲೇ ಈ ದಿನವೇ ಅಥವಾ ಆದಷ್ಟು ಬೇಗ ಮುಗಿಸಿಕೊಡುವಂತೆ ದುಂಬಾಲು ಬೀಳಲಿದ್ದಾರೆ. ಯಾವತ್ತೋ ನಿಮಗೆ ಕಂಡಿದ್ದ ವ್ಯಕ್ತಿ ದಿಢೀರ್ ಎಂದು ಹಣಕಾಸು ಸಾಲವನ್ನು ಕೇಳಿಕೊಂಡು ಬರುವ ಸಾಧ್ಯತೆ ಇದೆ. ಸೋದರಮಾವನ ಜತೆಗೆ ಮಾತನಾಡುವಾಗ ಎಚ್ಚರಿಕೆಯಿಂದ ಪದ ಬಳಕೆ ಮಾಡಿ. ನಿಮಗೆ ಗೊತ್ತಿಲ್ಲದ ವಿಚಾರ ಆಗಿದ್ದಲ್ಲಿ ಮೌನವೇ ಒಳ್ಳೆಯದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಪುಷ್ಕಳವಾದ, ರುಚಿಕಟ್ಟಾದ ಊಟ- ತಿಂಡಿಗಳನ್ನು ಸವಿಯುವ ಯೋಗ ನಿಮ್ಮ ಪಾಲಿಗಿದೆ. ಸ್ನೇಹಿತರು, ಸಂಬಂಧಿಕರು ತಮ್ಮ ಮನೆಗೆ ಬರುವಂತೆ ನಿಮಗೆ ಆಹ್ವಾನ ನೀಡಬಹುದು. ಕಫ- ಶೀತದಂಥ ಸಮಸ್ಯೆಗಳು ಒಂದಿಷ್ಟು ಕಾಡಲಿದೆ. ಯಾವುದಾದರೂ ಮುಖ್ಯ ವಸ್ತುಗಳನ್ನು ಎಲ್ಲಾದರೂ ಇಟ್ಟು, ಅದನ್ನು ಮರೆತುಹೋಗಿ ವಿಪರೀತ ಹುಡುಕಾಡುವಂತೆ ಆಗುತ್ತದೆ. ದುಬಾರಿ ಶೂ, ವಾಚ್, ಸುಗಂಧ ದ್ರವ್ಯ ಇಂಥವುಗಳ ಖರೀದಿಗಾಗಿ ಹಣವನ್ನು ಖರ್ಚು ಮಾಡಲಿದ್ದೀರಿ. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿ ಇರುವವರಿಗೆ ಪ್ರಭಾವಿಗಳ ಸ್ನೇಹ- ಸಂಬಂಧ ಸಿಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಯಾವುದು ಸುಳ್ಳು ಹಾಗೂ ಯಾವುದರಲ್ಲಿ- ಯಾರಲ್ಲಿ ಎಷ್ಟಿದೆ ಸತ್ಯ ಎಂಬುದು ಈ ದಿನ ತುಂಬ ಸ್ಪಷ್ಟವಾಗಿ ನಿಮಗೆ ಗೊತ್ತಾಗುತ್ತದೆ. ಇನ್ನೊಬ್ಬರು ನಿಮ್ಮ ಎಲ್ಲ ವಿಚಾರಗಳಲ್ಲಿ ಮೂಗು ತೂರಿಸಿಕೊಂಡು ಬರುತ್ತಿದ್ದಾರೆ ಎಂಬ ಕಾರಣಕ್ಕೆ ಸಿಟ್ಟಾಗಲಿದ್ದೀರಿ. ಮೇಲ್ನೋಟಕ್ಕೆ ಕಂಡಿದ್ದನ್ನು ಸತ್ಯ ಎಂದು ನಂಬಬಾರದು ಎಂದು ಅನುಭವಕ್ಕೆ ಬರುತ್ತದೆ. ಮನೆಗೆ ಗೃಹೋಪಯೋಗಿ ವಸ್ತುಗಳೋ ಅಥವಾ ಪೀಠೋಪಕರಣಗಳನ್ನು ತರುವುದಕ್ಕೆ ಖರ್ಚು ಮಾಡಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಸುವಾಗ ವೆಚ್ಚದ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಸಂಗಾತಿಯ ಜವಾಬ್ದಾರಿಗಳ ಪೈಕಿ ಕೆಲವನ್ನು ನೀವು ಹಂಚಿಕೊಳ್ಳಲಿದ್ದೀರಿ. ಸ್ವಂತ ವ್ಯಾಪಾರ- ವ್ಯವಹಾರ ನಡೆಸುತ್ತಿರುವವರಿಗೆ ಅಲ್ಪಪ್ರಗತಿ ಇದೆ. ರುಚಿಕಟ್ಟಾದ ಊಟ- ತಿಂಡಿ ಸವಿಯುವ ಯೋಗ ಇದೆ. ಅನಿರೀಕ್ಷಿತವಾಗಿ ಧನಾಗಮದ ಯೋಗ ಇದ್ದು, ಅದು ಹಾಗೇ ಖರ್ಚು ಕೂಡ ಆಗಬಹುದು. ಮೈಗ್ರೇನ್ ಸಮಸ್ಯೆ ಇರುವವರಿಗೆ ಅದು ಉಲ್ಬಣ ಆಗುವ ಸಾಧ್ಯತೆಗಳಿವೆ. ಪ್ರವಚನಕಾರರು, ಸಂಶೋಧನೆಗಳಲ್ಲಿ ತೊಡಗಿಕೊಂಡವರಿಗೆ ಉತ್ತಮ ಬೆಳವಣಿಗೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಹೆಣ್ಣುಮಕ್ಕಳು ತವರುಮನೆಗೆ ಹೋಗುವ ಯೋಗ ಇದೆ. ಸೋದರ ಅಥವಾ ಸೋದರಿಯ ಆಹ್ವಾನದ ಮೇರೆಗೆ ನೀವು ತೆರಳಬಹುದು. ಆಸ್ತಿ ವಿಚಾರದಲ್ಲಿ ಮನೆಯಲ್ಲಿ ಚರ್ಚೆ ಆಗಲಿದೆ. ವೃತ್ತಿಪರರಿಗೆ ಅಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸುವ ಯೋಗ ಇದೆ. ಸ್ವಂತ ವ್ಯಾಪಾರ- ವ್ಯವಹಾರ ನಡೆಸುತ್ತಿರುವವರು ಹೊಸ ಕಚೇರಿಗೆ ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳುತ್ತೀರಿ. ಸಾಕು ಪ್ರಾಣಿಗಳನ್ನು ಮನೆಗೆ ತರುವಂಥ ಯೋಗ ಇದೆ. ಎಲೆಕ್ಟ್ರಿಕಲ್ ವಾಹನವನ್ನು ಖರೀದಿ ಮಾಡುವುದಕ್ಕೆ ಆಲೋಚನೆ ಮಾಡಲಿದ್ದೀರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ವಕೀಲರು, ಚಾರ್ಟರ್ಡ್ ಅಕೌಂಟೆಂಟ್ ಇತ್ಯಾದಿ ವೃತ್ತಿಯಲ್ಲಿ ಇರುವವರಿಗೆ ಬಹಳ ಗೊಂದಲ ಏರ್ಪಡಲಿದೆ. ಭವಿಷ್ಯದ ಯೋಜನೆಗಳ ಅನುಷ್ಠಾನವನ್ನು ಕೆಲ ಸಮಯ ಮುಂದಕ್ಕೆ ಹಾಕಿಕೊಳ್ಳಬೇಕಾಗುತ್ತದೆ. ಬಂಧುಗಳು, ಸ್ನೇಹಿತರ ಮನೆಗೆ ದೇವತಾರಾಧನೆಗೆ ಆಹ್ವಾನ ಬರಲಿದೆ. ಇನ್ನು ಈ ದಿನ ಬಹಳ ಸಮಯದಿಂದ ಭೇಟಿಯಾಗದೇ ಇದ್ದ ಬಂಧು- ಮಿತ್ರರನ್ನು ಭೇಟಿಯಾಗಿ, ತೀರ್ಥಕ್ಷೇತ್ರ ದರ್ಶನ ಮಾಡುವ ಬಗ್ಗೆ ಚರ್ಚೆ ನಡೆಸಲಿದ್ದೀರಿ. ಇತರರು ಮೆಚ್ಚುವಂತೆ ಕೆಲವು ಕೆಲಸಗಳನ್ನು ಮಾಡಲಿದ್ದೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಉದ್ಯಮದಲ್ಲಿ ಇರುವವರು, ವ್ಯಾಪಾರ- ವ್ಯವಹಾರ ನಡೆಸುತ್ತಿರುವವರು ಲಾಭ- ನಷ್ಟದ ಲೆಕ್ಕ ಹಾಕಿಕೊಳ್ಳದೆ ಉತ್ತಮ ಉದ್ದೇಶದಿಂದ ಕೆಲವು ಕೆಲಸಗಳನ್ನು ಮಾಡಲಿದ್ದೀರಿ.ಸೆಕೆಂಡ್ ಹ್ಯಾಂಡ್ ವಾಹನ ಖರೀದಿ- ಮಾರಾಟ ಮಾಡುವವರಿಗೆ ಲಾಭದ ಪ್ರಮಾಣ ಹೆಚ್ಚಾಗಲಿದೆ. ಮನೆಯಲ್ಲಿ ದೇವತಾರಾಧನೆ ಆಯೋಜಿಸುವ ಬಗ್ಗೆ ಆಲೋಚನೆ ಮಾಡುತ್ತೀರಿ. ಇದಕ್ಕಾಗಿ ಸಂಬಂಧಪಟ್ಟ ಕ್ಷೇತ್ರದಲ್ಲಿ ಹೆಸರಾದವರನ್ನು ಭೇಟಿ ಆಗಲಿದ್ದೀರಿ. ಕುಟುಂಬದಲ್ಲಿನ ಖರ್ಚಿನ ಪ್ರಮಾಣ ಹೆಚ್ಚಾಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಯಾರ್ಯಾರು ಸಾಲ ಮಾಡಿಕೊಂಡು ಅಥವಾ ವಿವಿಧ ಮೂಲಗಳಿಂದ ಹಣ ಹೊಂದಿಸಿಕೊಂಡು, ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದೀರೋ ಅಂಥವರಿಗೆ ಹಣಕಾಸಿನ ವಿಚಾರದಲ್ಲಿ ಹಿನ್ನಡೆ ಆಗಲಿದೆ. ಇನ್ನು ಕೃಷಿಕರಿಗೆ, ಡೇರಿ ವ್ಯವಹಾರ ಮಾಡುತ್ತಿರುವವರಿಗೆ ವಿಸ್ತರಣೆಗೆ ಅವಕಾಶಗಳಿವೆ. ಸ್ವ ಉದ್ಯೋಗಿಗಳಿಗೆ ಆದಾಯದ ಮೂಲದಲ್ಲಿ ಹೆಚ್ಚಳ ಆಗಲಿದ್ದು, ಮದುವೆ ಮತ್ತಿತರ ಶುಭ ಸಮಾರಂಭಗಳಿಗೆ ಓಡಾಟ ನಡೆಸಲಿದ್ದೀರಿ. ಸರ್ಕಾರಿ ಉದ್ಯೋಗಿಗಳಿಗೆ ಸಾಲ ಮಾಡಬೇಕಾದ ಅನಿವಾರ್ಯ ಸೃಷ್ಟಿ ಆಗಲಿದೆ. ಆದರೆ ದೇವತಾ ಅನುಗ್ರಹ ಇರಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ