Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 16ರ ದಿನಭವಿಷ್ಯ

Daily Horoscope Mach 16: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 16ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 16ರ ದಿನಭವಿಷ್ಯ
numerology
Image Credit source: google
Edited By:

Updated on: Mar 16, 2026 | 1:20 AM

ಈ ದಿನ ಸಂಜೆ ಮನೆಯ ಹೊಸ್ತಿಲಲ್ಲಿ ತುಪ್ಪದ ದೀಪ ಹಚ್ಚುವುದರಿಂದ ಕೌಟುಂಬಿಕ ಕಲಹಗಳು ಕಡಿಮೆಯಾಗಿ, ಮನೆಯಲ್ಲಿ ಸುಖದ ವಾತಾವರಣ ನಿರ್ಮಾಣವಾಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಸೋದರ ಸಂಬಂಧಿಗಳ ಆರ್ಥಿಕ ಸ್ಥಿತಿ ಒಂದಿಷ್ಟು ಒತ್ತಡವನ್ನು ತರಲಿದೆ. ಮಕ್ಕಳ ಆರೋಗ್ಯ ವಿಚಾರವು ಆತಂಕಕ್ಕೆ ಕಾರಣ ಆಗಲಿದೆ. ಇನ್ನು ಹಣಕಾಸನ್ನು ಹೊಂದಿಸುವುದಕ್ಕೆ ಹಾಗೂ ಇತರ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಬೇಕಾಗುತ್ತದೆ. ನಿಮ್ಮ ಮೇಲೆ ಹಗೆ ತೀರಿಸಿಕೊಳ್ಳಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಇಂಥವರಿಗೆ ಹೇಗೆ ಉತ್ತರ ಕೊಡಬೇಕು ಎಂದು ಆಲೋಚಿಸುವಂತೆ ಆಗುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕುಟುಂಬದ ಸಲುವಾಗಿಯೇ ಹೆಚ್ಚು ಸಮಯವನ್ನು ಮೀಸಲಿಡಲಿದ್ದೀರಿ. ಕಾರು ಅಥವಾ ಬೈಕ್ ಸರ್ವೀಸ್ ಮಾಡಿಸಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ಒಂದು ವೇಳೆ ಮುಖ್ಯ ವ್ಯಕ್ತಿಯನ್ನು ಭೇಟಿ ಆಗಬೇಕು ಎಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಅಲ್ಲಿರುವಂತೆ ನೋಡಿಕೊಳ್ಳಿ. ಸಂಬಂಧಿಕರು, ಸ್ನೇಹಿತರ ಮನೆಗೆ ತೆರಳಬೇಕು ಎಂದಿದ್ದಲ್ಲಿ ಅಲ್ಲಿನ ಪರಿಸ್ಥಿತಿ, ವಾತಾವರಣ ಹೇಗಿದೆ ಎಂಬುದನ್ನು ಅವಲೋಕಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಇವರು ಏನು ನನಗೆ ಹೇಳುವುದು ಎಂಬ ಧೋರಣೆ ಯಾವುದೇ ಕಾರಣಕ್ಕೂ ಬೇಡ. ಈ ದಿನ ಇತರರು ನಿಮ್ಮ ಜತೆಗೆ ಮಾತನಾಡುವಾಗ ಶ್ರದ್ಧೆಯಿಂದ ಕೇಳಿಸಿಕೊಳ್ಳಿ. ಈ ಹಿಂದೆ ಯಾವಾಗಲೋ ನಡೆದಿದ್ದ ಘಟನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು, ಯಾವುದೇ ತೀರ್ಮಾನಕ್ಕೆ ಬರಬೇಡಿ. ಇನ್ನು ಈ ದಿನ ಸೋದರ- ಸೋದರಿಯರಿಗೆ ನಿಮ್ಮ ನೆರವಿನ ಅಗತ್ಯ ಕಂಡುಬರಲಿದೆ.

ಲೇಖನ- ಸ್ವಾತಿ ಎನ್.ಕೆ.

Follow Us