Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಅಕ್ಟೋಬರ್ 25ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಅಕ್ಟೋಬರ್ 25ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಅಕ್ಟೋಬರ್ 25ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 25, 2024 | 1:02 AM

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನೀವು ಯಾರ ಜತೆಗೆ ಭಾವನಾತ್ಮಕವಾಗಿ ಬಹಳ ಹತ್ತಿರ ಆಗಿರುತ್ತೀರಿ ಅವರ ಬದುಕಿನಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಕುಗ್ಗಿಹೋಗುವ ಸಾಧ್ಯತೆಗಳಿವೆ. ಮತ್ತು ಇದೇ ದಿನ ತಂದೆ- ತಾಯಿಯ ಆರೋಗ್ಯ ವಿಚಾರ ಚಿಂತೆಗೆ ಕಾರಣ ಆಗಲಿದೆ. ನೀವು ಯಾರನ್ನು ಭೇಟಿ ಆಗಬಾರದು, ಮಾತನಾಡಬಾರದು ಅಂದುಕೊಂಡಿರುತ್ತೀರೋ ಅಂಥ ವ್ಯಕ್ತಿ ನಿರೀಕ್ಷೆಯೇ ಮಾಡದ ರೀತಿಯಲ್ಲಿ ಎದುರಾಗಿ, ಆ ವ್ಯಕ್ತಿಯ ಮುಖಾಮುಖಿಯಿಂದಾಗಿ ಮುಜುಗರ, ಮಾನಸಿಕ ಹಿಂಸೆ ಅನುಭವಿಸಬೇಕಾಗುತ್ತದೆ. ಇನ್ನು ಯಾರು- ಎಷ್ಟೇ ನಿಮ್ಮ ಸಾಮರ್ಥ್ಯಕ್ಕೆ ಮೀರಿದ ಕೆಲಸವನ್ನು ಮಾಡಿಕೊಡುವುದಾಗಿ ಒಪ್ಪಿಕೊಳ್ಳಲಿಕ್ಕೆ ಹೋಗದಿರಿ. ಮರೆತೇ ಹೋಗುವಷ್ಟು ಹಿಂದಿನ ಸ್ನೇಹಿತರು ಮತ್ತೆ ನಿಮ್ಮನ್ನು ಭೇಟಿ ಆಗಬಹುದು. ಅಂಥವರು ಹಣಕಾಸಿನ ಸಹಾಯ ಕೇಳಿದಲ್ಲಿ ಏಕಾಏಕಿ ಒಪ್ಪಿಕೊಳ್ಳದಿರುವುದು ಕ್ಷೇಮ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಹಣದ ವಿಚಾರಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡಲಿದ್ದೀರಿ. ಮುಂದಿನ ದಿನಗಳಲ್ಲಿ ಏನೇನು ಮಾಡಬೇಕು ಎಂಬ ಬಗ್ಗೆ ಯೋಜನೆಗಳನ್ನು ರೂಪಿಸಲಿದ್ದೀರಿ. ನಿಮ್ಮ ಸ್ನೇಹಿತರು- ಸಂಬಂಧಿಗಳು ನಿರುತ್ಸಾಹ ಆಗುವಂಥ ಮಾತುಗಳನ್ನು ಆಡಿದರೂ ಕೆಲವು ಕೆಲಸಗಳನ್ನು ಪಟ್ಟು ಹಿಡಿದು ಮಾಡಿ, ಮುಗಿಸುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ವಿದೇಶಗಳಲ್ಲಿ ವ್ಯವಹಾರ, ಉದ್ಯಮ ನಡೆಸುತ್ತಿರುವಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗುವುದಕ್ಕೆ ಮಾರ್ಗ ಗೋಚರ ಆಗುತ್ತದೆ. ತೀವ್ರವಾದ ಕಾಲು ನೋವು ಅನುಭವಿಸುತ್ತಿದ್ದಲ್ಲಿ ಸೂಕ್ತ ವೈದ್ಯೋಪಚಾರ ದೊರೆಯುವಂಥ ಯೋಗ ಇದೆ. ಬ್ರ್ಯಾಂಡೆಡ್ ಬಟ್ಟೆಗಳು, ಗ್ಯಾಜೆಟ್, ಶೂ, ವಾಚ್ ಇತ್ಯಾದಿಗಳನ್ನು ಖರೀದಿ ಮಾಡುವುದಕ್ಕೆ ಮನಸ್ಸು ಮಾಡಲಿದ್ದೀರಿ. ಈ ದಿನ ಸಾಧ್ಯವಾದಲ್ಲಿ ವಿಷ್ಣು ಸಹಸ್ರನಾಮ ಪಠಣ ಅಥವಾ ಶ್ರವಣವನ್ನು ಮಾಡಿದಲ್ಲಿ ಒಳ್ಳೆಯದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಯಾವುದೇ ವಿಚಾರ ಆಲೋಚನೆ ಸಹ ಮಾಡದೆ ಸುಮ್ಮನಿದ್ದು ಬಿಡಬೇಕು ಎಂದೆನಿಸದಲಿದೆ. ಇನ್ನೂ ನಿಖರವಾಗಿ ಹೇಳಬೇಕು ಅಂದರೆ ನಿಮ್ಮಷ್ಟಕ್ಕೆ ನೀವಿರುವುದಕ್ಕೆ ಈ ದಿನ ಬಹಳ ಪ್ರಾಮುಖ್ಯ ನೀಡುತ್ತೀರಿ. ಬಹಳ ಸಮಯದಿಂದ ಅಂದುಕೊಳ್ಳುತ್ತಿದ್ದ ಸ್ಥಳಕ್ಕೆ ಭೇಟಿ ನೀಡಬಹುದು ಅಥವಾ ಮುಖ್ಯ ವ್ಯಕ್ತಿಯೊಬ್ಬರ ಮನೆಗೆ ತೆರಳಬಹುದು. ಇದೆಲ್ಲವನ್ನೂ ಮೀರಿದಂಥ ವಿಚಾರ ಏನೆಂದರೆ, ಪುಸ್ತಕ ಓದುವುದು, ಸಂಗೀತ ಕೇಳುವುದು, ಧ್ಯಾನ ಮಾಡುವುದು ಇಂಥದ್ದರಿಂದ ಹೊಸ ಕೆಲಸಗಳಿಗೆ ಸಿದ್ಧವಾಗುವುದಕ್ಕೆ ಉತ್ಸಾಹ ದೊರೆಯುತ್ತದೆ. ಕಾಗದ, ಪತ್ರ ಅಥವಾ ದಾಖಲೆಗಳಿಗಾಗಿ ಹುಡುಕಾಟ ನಡೆಸುತ್ತಿದ್ದಲ್ಲಿ ಅವು ಅಚಾನಕ್ ಆಗಿ ಸಿಗುವಂಥ ಯೋಗ ಇದೆ. ಉದ್ಯಮ, ವ್ಯವಹಾರಗಳನ್ನು ನಡೆಸುತ್ತಿರುವವರು ದೀರ್ಘಾವಧಿ ಹೂಡಿಕೆ ಬಗ್ಗೆ ಚರ್ಚೆ ನಡೆಸಲಿದ್ದೀರಿ. ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಾನು ಎಲ್ಲವನ್ನೂ ಮಾಡಬಲ್ಲೆ ಎಂಬ ವಿಶ್ವಾಸ ತಪ್ಪಲ್ಲ. ಆದರೆ ಅದು ಅತಿಯಾದ ಆತ್ಮವಿಶ್ವಾಸ ಎಂದೆನಿಸಬಾರದು. ಈ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು ಮುಖ್ಯ. ಈ ದಿನ ಯಾವುದೇ ಮುಖ್ಯ ಪ್ರಯಾಣ ಅಥವಾ ಪ್ರವಾಸ ಇದ್ದಲ್ಲಿ ನಿಗದಿತ ಸಮಯಕ್ಕಿಂತ ಮುಂಚೆಯೇ ಅಲ್ಲಿರುವುದಕ್ಕೆ ಪ್ರಯತ್ನ ಮಾಡಿ. ಕೊನೆ ಕ್ಷಣದ ತನಕ ಕಾಯ್ದಲ್ಲಿ ಒತ್ತಡ ಸೃಷ್ಟಿ ಆಗಲಿದೆ. ಸ್ವಂತಕ್ಕೆ ಎಂದು ತೆಗೆದುಕೊಂಡಿದ್ದ ವಸ್ತು ಅಥವಾ ವಾಹನವನ್ನು ಇತರರಿಗೆ ತಾತ್ಕಾಲಿಕವಾಗಿ ಆದರೂ ನೀಡಬೇಕಾದಂಥ ಸನ್ನಿವೇಶ ಸೃಷ್ಟಿ ಆಗಲಿದೆ. ಇಂಥದ್ದೊಂದು ಪರಿಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಂತೆ ಆಗುತ್ತದೆ. ಈ ಹಿಂದೆ ಆತುರ ಆತುರವಾಗಿ ಮಾಡಿ ಮುಗಿಸಿದ್ದ ಅಥವಾ ಹಣ ಸಿಗುತ್ತದೆ ಎಂಬ ಕಾರಣಕ್ಕೆ ಒಲ್ಲದ ಮನಸ್ಸಿನಿಂದ ಮಾಡಿದ್ದ ಕೆಲಸದಲ್ಲಿ ತಪ್ಪುಗಳಾಗಿ, ಅದನ್ನೇ ಮತ್ತೆ ಮತ್ತೆ ಮಾಡಬೇಕಾಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಮಕ್ಕಳ ಆರೋಗ್ಯ ವಿಚಾರವು ಆತಂಕಕ್ಕೆ ಕಾರಣ ಆಗಲಿದೆ. ಇನ್ನು ಹಣಕಾಸನ್ನು ಹೊಂದಿಸುವುದಕ್ಕೆ ಹಾಗೂ ಇತರ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಬೇಕಾಗುತ್ತದೆ. ನಿಮ್ಮ ಮೇಲೆ ಹಗೆ ತೀರಿಸಿಕೊಳ್ಳಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಇಂಥವರಿಗೆ ಹೇಗೆ ಉತ್ತರ ಕೊಡಬೇಕು ಎಂದು ಆಲೋಚಿಸುವಂತೆ ಆಗುತ್ತದೆ. ಆದರೆ ಕುಟುಂಬದ ಸಲುವಾಗಿಯೇ ಹೆಚ್ಚು ಸಮಯವನ್ನು ಮೀಸಲಿಡಲಿದ್ದೀರಿ. ಕಾರು ಅಥವಾ ಬೈಕ್ ಸರ್ವೀಸ್ ಮಾಡಿಸಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ಒಂದು ವೇಳೆ ಮುಖ್ಯ ವ್ಯಕ್ತಿಯನ್ನು ಭೇಟಿ ಆಗಬೇಕು ಎಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಅಲ್ಲಿರುವಂತೆ ನೋಡಿಕೊಳ್ಳಿ. ಸಂಬಂಧಿಕರು, ಸ್ನೇಹಿತರ ಮನೆಗೆ ತೆರಳಬೇಕು ಎಂದಿದ್ದಲ್ಲಿ ಅಲ್ಲಿನ ಪರಿಸ್ಥಿತಿ, ವಾತಾವರಣ ಹೇಗಿದೆ ಎಂಬುದನ್ನು ಅವಲೋಕಿಸಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ಇತರರು ನಿಮ್ಮ ಜತೆಗೆ ಮಾತನಾಡುವಾಗ ಶ್ರದ್ಧೆಯಿಂದ ಕೇಳಿಸಿಕೊಳ್ಳಿ. ಈ ಹಿಂದೆ ಯಾವಾಗಲೋ ನಡೆದಿದ್ದ ಘಟನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು, ಯಾವುದೇ ತೀರ್ಮಾನಕ್ಕೆ ಬರಬೇಡಿ. ಇನ್ನು ಈ ದಿನ ಸೋದರ- ಸೋದರಿಯರಿಗೆ ನಿಮ್ಮ ನೆರವಿನ ಅಗತ್ಯ ಕಂಡುಬರಲಿದೆ. ಈಗಾಗಲೇ ಮಾಡಿದ್ದ ಹೂಡಿಕೆ ಅಥವಾ ಸೇವಿಂಗ್ಸ್ ಮುರಿಸಬೇಕಾಗಬಹುದು. ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಲಿದ್ದೀರಿ. ಕಾರ್ಯಕ್ರಮ ಅಥವಾ ಸಮಾರಂಭಗಳಲ್ಲಿ ಭಾಗವಹಿಸುವ ಸಲುವಾಗಿ ಪ್ರಯಾಣ ಮಾಡಬೇಕಾಗಬಹುದು. ಇದರಿಂದ ದಣಿವು ಸಹ ಆಗಲಿದೆ. ನೀವು ಲೆಕ್ಕ ಹಾಕಿಕೊಂಡಂತೆಯೇ ಕೆಲವು ವ್ಯವಹಾರಗಳ ನಡೆಯಲಿವೆ. ಮತ್ತೆ ಬಾರದು ಎಂದುಕೊಂಡಿದ್ದ ಹಣವೊಂದು ಕೈ ಸೇರುವುದಕ್ಕೆ ಏನು ಮಾಡಬೇಕು ಎಂಬ ಮಾರ್ಗ ಗೋಚರ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಈ ಹಿಂದೆ ಸಿಟ್ಟಿನಲ್ಲಿ ನೀವು ಆಡಿದ್ದ ಮಾತಿನಿಂದ ಆದ ಬೇಸರವನ್ನು ಕಡಿಮೆ ಮಾಡುವುದಕ್ಕೆ ಸರಿಯಾದ ದಿನ ಇದಾಗಿರುತ್ತದೆ. ಖರ್ಚಿನ ವಿಚಾರದಲ್ಲಿಯೂ ಉದಾರವಾಗಿ ವರ್ತಿಸಲಿದ್ದೀರಿ. ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವ ಯೋಗ ಸಹ ಇದೆ. ರೆಸಾರ್ಟ್, ರೆಸ್ಟೋರೆಂಟ್, ಸಿನಿಮಾ ಹೀಗೆ ಮನರಂಜನೆಗಾಗಿ ಹೆಚ್ಚಿನ ಸಮಯವನ್ನು ಮೀಸಲಿಡಲಿದ್ದೀರಿ. ಪ್ರೇಮಿಗಳಿಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ವಿದೇಶಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಕೆಲಸ ಬದಲಾವಣೆ ಮಾಡುವುದಕ್ಕೆ ಸ್ನೇಹಿತರ ಸಹಾಯ ದೊರೆಯಲಿದೆ. ಈ ಹಿಂದೆ ನೀವು ಪಟ್ಟ ಶ್ರಮವನ್ನು ಗುರುತಿಸಿ, ಉಡುಗೊರೆಗಳನ್ನು ನೀಡಬಹುದು. ಚಿನ್ನ- ಬೆಳ್ಳಿ ಖರೀದಿ ಮಾಡಬೇಕು ಎಂದುಕೊಂಡಿದ್ದಲ್ಲಿ ದಿನದ ಮಟ್ಟಿಗೆ ನಿರ್ಧಾರವನ್ನು ಮುಂದೆ ಹಾಕುವುದು ಉತ್ತಮ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ತುಂಬ ನಂಬಿದವರಿಂದಲೇ ವಂಚನೆ ಆಗಿದೆ ಎಂಬುದು ಈ ದಿನ ಗಮನಕ್ಕೆ ಬರಲಿದೆ. ಅದರಲ್ಲೂ ನೀವು ಹೂಡಿಕೆ ಮಾಡಿದ್ದರಲ್ಲಿ ಅಸಲು ಹಣಕ್ಕೆ ಮೋಸ ಆಗಬಹುದು ಎಂಬ ಸೂಚನೆ ದೊರೆಯಲಿದೆ. ಇನ್ನು ತಾವು ಮುಂದೆ ನಿಂತು, ಶಿಫಾರಸು ಮಾಡಿದ್ದ ಹಾಗೂ ಈ ಹಣಕಾಸು ವಿಚಾರದಲ್ಲಿ ನೀವು ಬಹಳ ನಂಬಿದ್ದ ವ್ಯಕ್ತಿಗಳೇ ನನಗೂ ಇದಕ್ಕೂ ಸಂಬಂಧವಿಲ್ಲ ಎಂದುಬಿಡಲಿದ್ದಾರೆ. ಯಾವುದೇ ನಿರ್ಣಯಕ್ಕೆ ಬರುವ ಮುನ್ನ ಸಾವಿರ ಸಲ ಆಲೋಚಿಸಿ. ನಿಮ್ಮ ಪ್ರಭಾವ ಬಳಸಿ, ಆ ಕೆಲಸವನ್ನು ಮಾಡಬಹುದು ಎಂದೆನಿಸಿದರೆ ನೆರವನ್ನು ಕೇಳುವುದಕ್ಕೆ ಹಿಂದೆ- ಮುಂದೆ ಆಲೋಚನೆ ಮಾಡಬೇಡಿ. ಸಾಮ-ದಾನ-ಭೇದ-ದಂಡ ಹೀಗೆ ಚತುರೋಪಾಯಗಳನ್ನು ಬಳಸುವ ಕಡೆ ಚಿಂತಿಸಿ. ಫಾಲೋಅಪ್ ಚೆಕಪ್ ಗಳನ್ನು ಮಾಡಿಸಬೇಕಿದ್ದಲ್ಲಿ ಅದನ್ನು ಮರೆಯದೆ ಮಾಡಿಸಿಕೊಳ್ಳುವ ಕಡೆಗೆ ಗಮನ ನೀಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ವಿಪರೀತ ಗಾಬರಿ, ಆತಂಕ ಸೃಷ್ಟಿ ಆಗಲಿದೆ. ಏಕೋ ಅಂದುಕೊಂಡಂತೆ ಏನೂ ಆಗುತ್ತಿಲ್ಲ ಅಂತಲೂ ಅನಿಸಲಿದೆ. ಇನ್ನೂ ಮುಂದುವರಿದು ಸಣ್ಣ ಸಮಸ್ಯೆಗೆ ಇಡೀ ದಿನ ತಲೆ ಕೆಡಿಸಿಕೊಳ್ಳುವಂತೆ ಆಗುತ್ತದೆ. ಆದರೆ ವಾಸ್ತವ ಹೇಗಿರುತ್ತದೆ, ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡರು ಎಂಬ ಮಾತಿದೆಯಲ್ಲಾ ಹಾಗೆ. ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು ಮಾತ್ರ ನೀಡಿ. ಮನೆಗೆ ಕೆಲವು ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸುವ ಯೋಗವಿದೆ.

ಲೇಖನ- ಎನ್‌.ಕೆ.ಸ್ವಾತಿ

ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ