AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 14ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 14ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರImage Credit source: Indianexpress.Com
TV9 Web
| Edited By: |

Updated on:Feb 14, 2023 | 6:25 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 14ರ ಮಂಗಳವಾರದ ದಿನ ಭವಿಷ್ಯ (Daily Prediction as Per Numerology) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಈ ದಿನ ನಿಮಗೆ ದೈವ ಪ್ರೇರಣೆ ದೊರೆಯಲಿದೆ. ಅದರಂತೆ ನಡೆದುಕೊಳ್ಳಿ. ಇದರರ್ಥ ಇಷ್ಟೇ, ನಿಮ್ಮ ಮನಸ್ಸಿಗೆ ಬಲವಾಗಿ ಅನಿಸುವಂಥ ಉತ್ತಮ ಕೆಲಸಗಳನ್ನು ಕೂಡಲೇ ಮಾಡಿ, ಅನುಮಾನಗಳನ್ನು ಇಟ್ಟುಕೊಳ್ಳದಿರಿ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸೂಕ್ತ ವ್ಯಕ್ತಿಯ ಪರಿಚಯ, ಸ್ನೇಹ ಆಗಲಿದೆ. ಕಾನೂನು ಮೀರುವ ಆಲೋಚನೆ ಅದೆಷ್ಟೇ ಸಣ್ಣ ಪ್ರಮಾಣದಲ್ಲೇ ಆದರೂ ಮಾಡದಿರಿ, ಸಮಸ್ಯೆಗೆ ಸಿಲುಕಿಕೊಳ್ಳುತ್ತೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2) ಕೆಲಸ ಪೂರ್ತಿ ಆಗುವ ಮುಂಚೆಯೇ ಹೇಳಿಕೊಂಡು, ಅದು ಅರೆಬರೆ ಆಗಿ, ಅವಮಾನಕ್ಕೆ ಗುರಿ ಆಗಬಹುದು. ಆದ್ದರಿಂದ ಯಾವುದೇ ಕೆಲಸ ಪೂರ್ಣಗೊಳ್ಳುವವರೆಗೆ ಹೇಳಿಕೊಳ್ಳದಿರಿ. ಸಂಗೀತಗಾರರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇರುವವರು, ವೇದ ಪಾಠ ಮಾಡುವಂಥವರಿಗೆ ಗೌರವಸನ್ಮಾನಗಳು ಆಗಲಿವೆ. ಹೊಸದಾಗಿ ಭೂಮಿ ಖರೀದಿ ಮಾಡಬೇಕು ಎಂದಿರುವವರು ಈ ದಿನದ ಮಟ್ಟಿಗೆ ಅದಕ್ಕೆ ಸಂಬಂಧಿಸಿದ ಕೆಲಸಗಳನ್ನು ಮುಂದಕ್ಕೆ ಹಾಕುವುದು ಒಳ್ಳೆಯದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3) ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವವರಿಗೆ ನಾನಾ ಗೊಂದಲಗಳು ಎದುರಾಗಬಹುದು. ಇತರರ ಸಲಹೆ ಅಗತ್ಯ ಕಂಡುಬಂದಲ್ಲಿ ಪಡೆದುಕೊಳ್ಳಿ. ನಾಟಕ, ಸಂಗೀತ ಕಛೇರಿ, ಚಿತ್ರಕಲಾ ಪ್ರದರ್ಶನದಂಥ ಕಾರ್ಯಕ್ರಮಗಳಲ್ಲಿ ಭಾಗಿ ಆಗುವಂಥ ಸಾಧ್ಯತೆ ಇದೆ. ಸ್ತ್ರೀಯರ ವಿಚಾರದಲ್ಲಿ ಈ ಸಂಖ್ಯೆಯ ಪುರುಷರು ಈ ದಿನ ಬಹಳ ಎಚ್ಚರಿಕೆಯಿಂದ ಇರಬೇಕು. ಆಡುವ ಮಾತುಗಳ ಮೇಲೆ ನಿಗಾ ಇಟ್ಟುಕೊಳ್ಳಿ. ಇಲ್ಲದಿದ್ದಲ್ಲಿ ಅವಮಾನಕ್ಕೆ ಗುರಿ ಆಗುತ್ತೀರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಸಂಬಂಧಿಕರ ಮನೆಗಳಿಗೆ ಭೇಟಿ ನೀಡುವ ಯೋಗ ಇದೆ. ಹಿಂದೆ ನಿಮಗಾಗಿದ್ದ ಅವಮಾನಕ್ಕೆ ಸರಿಯಾದ ಉತ್ತರವನ್ನು ನೀಡಲಿದ್ದೀರಿ. ಕೂದಲು ಉದುರುವಂಥ ಸಮಸ್ಯೆ ಈಗಾಗಲೇ ಕಾಡುತ್ತಿದ್ದಲ್ಲಿ ಅದು ಹೆಚ್ಚಾಗಲಿದೆ. ಮೊಡವೆ, ಚರ್ಮ ಕಾಯಿಲೆಗಳು ಕೂಡ ಜಾಸ್ತಿ ಆಗಬಹುದು. ಕುಡಿಯುವ ನೀರು ಶುದ್ಧತೆ ಕಡೆಗೆ ನಿಗಾ ಮಾಡಿ. ಯಾರದೋ ಮೇಲಿನ ಸಿಟ್ಟನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳದಿರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5) ಸಾಕು ಪ್ರಾಣಿಗಳ ಸಲುವಾಗಿ ಖರ್ಚು ಮಾಡುವ ಯೋಗ ಇದೆ. ದಾನಧರ್ಮಗಳಿಗಾಗಿ ವಸ್ತು ಅಥವಾ ಹಣವನ್ನು ನೀಡಲಿದ್ದೀರಿ. ಮನೆಗೆ ಟೀವಿ, ಲ್ಯಾಪ್ ಟಾಪ್, ಕಂಪ್ಯೂಟರ್ ಅಥವಾ ಇನ್ಯಾವುದಾದರೂ ಗ್ಯಾಜೆಟ್ ಖರೀದಿ ಮಾಡಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಿಲ್ ಅಥವಾ ಇಎಂಐ ಅನ್ನು ಸರಿಯಾದ ಸಮಯಕ್ಕೆ ಕಟ್ಟಿದ್ದೀರಾ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ. ಮಸಾಲೆಯುಕ್ತ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6) ಆಡಬಾರದ ಮಾತನ್ನು ಆಡಬಾರದ ಸ್ಥಳದಲ್ಲಿ ಆಡಿ, ತೊಂದರೆಗಳನ್ನು ಮೈಮೇಲೆ ಎಳೆದುಕೊಳ್ಳಲಿದ್ದೀರಿ. ಸಂತಸವೋಸಂಕಟವೋ ಮನಸ್ಸಿನ ಮೇಲೆ ನಿಯಂತ್ರಣವನ್ನು ಇರಿಸಿಕೊಳ್ಳಿ. ಮಕ್ಕಳ ಆರೋಗ್ಯದ ಕಡೆ ಲಕ್ಷ್ಯ ನೀಡಿ. ಅದರಲ್ಲೂ ಹೆಣ್ಣುಮಕ್ಕಳು ಇರುವಂಥವರು ಹೆಚ್ಚಿನ ಎಚ್ಚರಿಕೆಯಿಂದ ಇರಬೇಕು. ಹಳೆಯ ಸ್ನೇಹಿತರು ಈ ದಿನ ಭೇಟಿ ಆಗುವ ಯೋಗ ಇದೆ. ಹಳೇ ಆರೋಗ್ಯ ಸಮಸ್ಯೆಗಳು ಉಲ್ಬಣ ಆಗಬಹುದು.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಡಿಜಿಟಲ್ ಆಸ್ತಿಗಳ ಮೇಲೆ ಹೂಡಿಕೆ ಮಾಡಿದಂಥವರಿಗೆ ಭಾರೀ ಒತ್ತಡದ ಸುದ್ದಿ ಕೇಳಿಬರುತ್ತದೆ. ಮುಖದ ಮೇಲೆ ಗಾಯಗಳಾಗಬಹುದು. ಈ ದಿನ ದೃಷ್ಟಿ ದೋಷ ತಗುಲುವಂಥ ಸಾಧ್ಯತೆ ಇದೆ. ಆದ್ದರಿಂದ ಗಣಪತಿಯ ಆರಾಧನೆಯನ್ನು ಮಾಡಿ. ಎಷ್ಟೇ ಪರಿಚಯದವರು, ಆಪ್ತರಾದರೂ ಅಂತರಂಗದ ವಿಷಯಗಳನ್ನು ಹಂಚಿಕೊಳ್ಳದಿರಿ. ಪೌರೋಹಿತ್ಯ ಮಾಡಿಸುವಂಥವರಿಗೆ ಆದಾಯದ ಪ್ರಮಾಣವು ಕಡಿಮೆ ಆಗಲಿದೆ. ಸಾಲ ಮಾಡಬೇಕಾದ ಅನಿವಾರ್ಯ ಸೃಷ್ಟಿ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8) ಇತರರಿಗೆ ಸಹಾಯ ಮಾಡುವ ಸಲುವಾಗಿ ಹೆಚ್ಚಿನ ಸಮಯ ಹೋಗಲಿದೆ. ಕ್ರೀಡಾಪಟುಗಳು ದೂರ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಾಗಬಹುದು. ಹೊಸ ಕಾರು ಅಥವಾ ಬೈಕ್ ಖರೀದಿ ಮಾಡುವ ಕುರಿತು ಮನೆಯಲ್ಲಿ ಚರ್ಚೆ ಮಾಡಲಿದ್ದೀರಿ, ಅಡ್ವಾನ್ಸ್ ನೀಡಿ, ಬುಕ್ಕಿಂಗ್ ಮಾಡುವ ಯೋಗ ಸಹ ಇದೆ. ಮನೆಯ ಪೇಂಟಿಂಗ್, ದುರಸ್ತಿ ಇಂಥದ್ದಕ್ಕೆ ಸಾಲ ಮಾಡಲಿದ್ದೀರಿ. ಎಲೆಕ್ಟ್ರಿಕಲ್ ವಸ್ತುಗಳ ಮಾರಾಟಗಾರರಿಗೆ ಲೆಕ್ಕಪತ್ರದಲ್ಲಿ ವಂಚನೆ ಆಗಿದೆ ಎಂಬ ಗುಮಾನಿ ಕಾಡಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9) ಮನರಂಜನೆ, ರೆಸ್ಟೋರೆಂಟ್, ಹೋಟೆಲ್, ಪ್ರವಾಸ ಇಂಥದ್ದಕ್ಕೆ ಹೆಚ್ಚಿನ ಖರ್ಚು ಆಗಲಿದೆ. ಸ್ನೇಹಿತರು, ಸಂಬಂಧಿಗಳ ವಾಹನವನ್ನು ಬಳಸುವ ಆಲೋಚನೆ ಇದ್ದಲ್ಲಿ ಈ ದಿನ ಮಾಡದಿರುವುದು ಉತ್ತಮ. ಪ್ರೇಮಿಗಳಿಗೆ ಈ ದಿನ ಸವಾಲಿನಿಂದ ಕೂಡಿರುತ್ತದೆ. ಮನೆಯಲ್ಲಿ ನಿಮ್ಮ ಪ್ರೀತಿ ವಿಷಯ ಮೂರನೇ ವ್ಯಕ್ತಿಗಳಿಂದ ಗೊತ್ತಾಗಿ, ಕೂಗಾಟಕಿರುಚಾಟಕ್ಕೆ ಕಾರಣ ಆಗಬಹುದು. ಅಲರ್ಜಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಲೇಖನಎನ್‌.ಕೆ.ಸ್ವಾತಿ

Published On - 6:25 am, Tue, 14 February 23

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ