Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 01ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 31ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 01ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರImage Credit source: mypandit.com
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 01, 2023 | 6:03 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 01ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಶಿಫಾರಸು ಕೇಳಿಕೊಂಡು ಸ್ನೇಹಿತರು, ಸಂಬಂಧಿಕರ ಕಡೆಯಿಂದ ಜನರು ಬರಬಹುದು. ನಿಮ್ಮಿಂದ ಸಹಾಯ ಮಾಡುವುದಕ್ಕೆ ಸಾಧ್ಯವಾದಲ್ಲಿ ಖಂಡಿತಾ ನೆರವಾಗಿ. ಮದುವೆಗಾಗಿ ಪ್ರಯತ್ನ ಮಾಡುತ್ತಿದ್ದಲ್ಲಿ ಸೂಕ್ತ ಸಂಬಂಧ ದೊರೆಯಲಿದೆ. ಕಾರಿನಲ್ಲಿ ಪ್ರಯಾಣ ಮಾಡುವವರು ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ದೀರ್ಘ ಕಾಲದಿಂದ ಮಾಡುತ್ತಿದ್ದ ಪ್ರಯತ್ನಗಳು ಈಗ ಫಲ ನೀಡುವ ಸಮಯ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಇತರರ ವಿಚಾರಗಳಿಗೆ ನಿಮ್ಮ ಅಭಿಪ್ರಾಯದ ಅಗತ್ಯ ಇಲ್ಲದೆ ನೀವಾಗಿಯೇ ಹೇಳಬೇಡಿ. ಸ್ತ್ರೀಯರ ವಿಚಾರದಲ್ಲಿ ಪುರುಷರು ಹಾಗೂ ಪುರುಷರ ವಿಚಾರದಲ್ಲಿ ಸ್ತ್ರೀಯರು ಬಹಳ ಎಚ್ಚರಿಕೆಯಿಂದ ಇರಬೇಕು. ಹೂಡಿಕೆ, ಉಳಿತಾಯಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಲಿದ್ದೀರಿ. ಸಂಬಂಧಿಕರ ಮನೆಗಳಲ್ಲಿನ ಕಾರ್ಯಕ್ರಮಗಳಿಗೆ ನಿಮಗೆ ಆಹ್ವಾನ ಬರಲಿದೆ. ನಿಮ್ಮ ಖಾಸಗಿ ವಿಚಾರಗಳನ್ನು ಹೊಸಬರ ಮುಂದೆ ಚರ್ಚಿಸಬೇಡಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಸಣ್ಣ ಸಹಾಯ ತೆಗೆದುಕೊಳ್ಳಬೇಕು ಎಂಬ ನಿರ್ಧಾರ ಮಾಡಿದರೂ ವ್ಯಕ್ತಿಯ ಹಿನ್ನೆಲೆಯನ್ನು ಸಾದ್ಯಂತವಾಗಿ ಗಮನಿಸಬೇಕು. ಇಲ್ಲದಿದ್ದರೆ ಸಮಾಜದಲ್ಲಿ ನಿಮ್ಮ ಹೆಸರಿಗೆ ಮಸಿ ಅಂಟಿಕೊಳ್ಳುವಂತಾಗುತ್ತದೆ. ವಕೀಲ ವೃತ್ತಿಯಲ್ಲಿ ಇರುವವರಿಗೆ ಸಂಪರ್ಕಗಳು ವೃದ್ಧಿ ಆಗಲಿದೆ. ಪಿತ್ರಾರ್ಜಿತ ಆಸ್ತಿ ವ್ಯಾಜ್ಯಗಳು ನಡೆಯುತ್ತಿದ್ದಲ್ಲಿ ನ್ಯಾಯಾಲಯದಿಂದ ಹೊರಗೆ ಇತ್ಯರ್ಥ ಮಾಡಿಕೊಳ್ಳುವುದಕ್ಕೆ ಅವಕಾಶ ದೊರೆಯುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮನೆಗೆ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವುದಕ್ಕೆ ವಿಚಾರಣೆ ನಡೆಸಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಸುವಂಥವರು ಖರ್ಚಿನ ಮೇಲೆ ಹಿಡಿತ ಇರಿಸಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಬಹಳ ನಿರೀಕ್ಷೆ ಇರಿಸಿಕೊಂಡಿದ್ದ ಫಲಿತಾಂಶವೊಂದು ಅಂದುಕೊಂಡಂತೆ ಬರುವುದಿಲ್ಲ. ಎಲ್ಲರೂ ಒಪ್ಪುವಂಥ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದುಕೊಳ್ಳಬೇಡಿ, ಯಾಕೆಂದರೆ ಎಲ್ಲರನ್ನೂ ಮೆಚ್ಚಿಸುವಂಥ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ವೃಥಾ ಕಾರಣಕ್ಕೆ ಖರ್ಚು ಮಾಡಲಿದ್ದೀರಿ. ಒಂದು ರೂಪಾಯಿಯಲ್ಲಿ ಆಗುವ ಕೆಲಸಕ್ಕೆ ಮೂರು ರೂಪಾಯಿ ಕೈ ಬಿಡಲಿದೆ. ಆದ್ದರಿಂದ ನೀವು ಕೆಲವು ಕೆಲಸಗಳನ್ನು ಬೇರೆಯವರಿಗೆ ವಹಿಸುವುದೇ ಲಾಭದಾಯಕ ಎಂದೆನಿಸುತ್ತದೆ. ಕ್ಷಣ ಕಾಲದ ಮೋಹಕ್ಕೆ ಸಿಲುಕಿ, ತಪ್ಪಾದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಯಾವ ತೀರ್ಮಾನವನ್ನೇ ಆದರೂ ಕೂತು, ಸಮಾಧಾನವಾಗಿ ಆಲೋಚಿಸಿ ಆ ನಂತರ ತೆಗೆದುಕೊಳ್ಳಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ಎಲ್ಲರ ಮೇಲೂ ನಂಬಿಕೆ ಕಳೆದುಕೊಳ್ಳುವಂಥ ಸನ್ನಿವೇಶ ಎದುರಾಗುತ್ತದೆ. ಏಕಾಂಗಿ ಆಗಿಬಿಟ್ಟಿರೇನೋ ಎಂದು ಬಲವಾಗಿ ಅನಿಸಿಕೆ ಮೂಡುತ್ತದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಪದೋನ್ನತಿಯ ಸೂಚನೆ ದೊರೆಯಲಿದೆ. ಹೊಸದಾಗಿ ಕೆಲಸಗಳನ್ನು ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಸಿಟ್ಟನ್ನು ಮಾಡಿಕೊಳ್ಳದಿರಿ, ಏಕೆಂದರೆ ಭವಿಷ್ಯದಲ್ಲಿ ಇದರಿಂದ ನಿಮಗೆ ಅನುಕೂಲ ಇದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಯಾವ ಉದ್ದೇಶಕ್ಕಾಗಿ ಸಾಲ ಪಡೆಯುತ್ತೀರೋ ಅದೇ ಉದ್ದೇಶಕ್ಕಾಗಿ ಬಳಸುವ ಕಡೆಗೆ ಗಮನ ನೀಡಿ. ಇತರರು ಹೊಗಳಿದರು ಎಂಬ ಕಾರಣಕ್ಕೆ ನಿಮ್ಮ ಸಾಮರ್ಥ್ಯದ ನಿಜವಾದ ತಾಕತ್ತನ್ನು ಮೀರಿ ಆಲೋಚಿಸಬೇಡಿ. ತಮ್ಮ ಉಪಯೋಗಕ್ಕೆ ನಿಮ್ಮನ್ನು ಮೆಚ್ಚುವವರು ಯಾರು, ಹೊಗಳುವವರು ಯಾರು ಎಂಬ ಬಗ್ಗೆ ತಿಳಿವಳಿಕೆ ಇಟ್ಟುಕೊಳ್ಳಿ. ಹೊಸದಾಗಿ ವ್ಯಾಪಾರವ್ಯವಹಾರ ಆರಂಭಿಸಿರುವವರಿಗೆ ಹಣಕಾಸಿನ ಸಮಸ್ಯೆಗಳು ಎದುರಾಗಬಹುದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಹಳೇ ತಪ್ಪುಗಳನ್ನು ಮುಂದೆ ಮಾಡಿಕೊಂಡು, ಯಾರ ಮೇಲೂ ದ್ವೇಷ ಸಾಧಿಸಬೇಡಿ. ನಿಮ್ಮ ಮಾತಿಗೆ ಗೌರವ, ಮನ್ನಣೆ ದೊರೆಯುವುದು ಹೆಚ್ಚಾಗಲಿದೆ. ವಾಹನ ಖರೀದಿ ಮಾಡಬೇಕು ಎಂದಿರುವವರಿಗೆ ಹಣಕಾಸು ಹರಿವು ಸರಾಗ ಆಗಲಿದೆ. ನೀವಾಗಿಯೇ ಒಪ್ಪಿಕೊಂಡ ಕೆಲಸವೊಂದು ಸಮಯಕ್ಕೆ ಸರಿಯಾಗಿ ಮಾಡಿಕೊಡುವುದು ಕಷ್ಟ ಆಗಲಿದೆ. ಎಂಥ ಸನ್ನಿವೇಶದಲ್ಲೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಡೆಡ್ ಲೈನ್ ಇಟ್ಟುಕೊಂಡು ಕೆಲಸ ಮಾಡುವವರಿಗೆ ಈ ದಿನ ಬಿಡುವು ಸಿಗದಷ್ಟು ಕೆಲಸಗಳು ಮೈಮೇಲೆ ಬರುತ್ತದೆ. ನಿಮ್ಮ ಪ್ರಭಾ ವಲಯ ವಿಸ್ತರಿಸಿಕೊಳ್ಳುವಂಥ ಸಮಯ ಇದಾಗಿರುತ್ತದೆ. ಮನೆಯವರೊಂದಿಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಸಂಬಂಧಿಸಿದಂತೆ ಬಹಳ ಪ್ರಮುಖವಾದ ತೀರ್ಮಾನಗಳನ್ನು ಕೈಗೊಳ್ಳಲಿದ್ದೀರಿ. ಮನೆಯಲ್ಲಿನ ಹಿರಿಯರು ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ.

ಲೇಖನ- ಎನ್‌.ಕೆ.ಸ್ವಾತಿ

ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ