AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 10ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 10ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 10ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
TV9 Web
| Edited By: |

Updated on: Feb 10, 2023 | 5:16 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 10ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಅಡಿಕೆ ಕೃಷಿಕರಿಗೆ ಮನೆಯಲ್ಲಿ ಸಂತೋಷವಾದ ದಿನ. ಸ್ವಂತ ವ್ಯವಹಾರ ಮಾಡುವಂಥವರು ಹೊಸ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸುವಿರಿ. ಹೊಸದಾಗಿ ಕೆಲಸಕ್ಕೆ ತೆಗೆದುಕೊಳ್ಳಲು ತೀರ್ಮಾನ ಮಾಡಲಿದ್ದೀರಿ. ಉದ್ಯೋಗಸ್ಥರು ಪ್ರಮುಖ ಸಭೆ, ಚರ್ಚೆ ಸಂದರ್ಭದಲ್ಲಿ ನೇರವಾದ ಮಾತುಗಳಿಂದ ಇತರರ ಗಮನ ಸೆಳೆಯುತ್ತೀರಿ. ಪ್ರಮುಖವಾಗಿ ಮಾಡಿ ಮುಗಿಸಬೇಕಾದ ಕೆಲಸವನ್ನು ಇಂದು ಮಾಡಲಿಕ್ಕಾಗದೆ ಸ್ವಲ್ಪ ಮಟ್ಟಿಗೆ ದೇಹಾಲಸ್ಯ ಇರುತ್ತದೆ. ಅದಕ್ಕಾಗಿ ವಿಶ್ರಾಂತಿ ಪಡೆಯಲಿದ್ದೀರಿ. ವೃತ್ತಿಪರರಿಗೆ ಹಿನ್ನಡೆ ಇದೆ. ಪಾರ್ಟಿಗಳಿಗೆ ಆಹ್ವಾನ ಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಸ್ವಂತ ವ್ಯವಹಾರ ಮಾಡುವವರಿಗೆ, ಉದ್ಯಮಗಳನ್ನು ನಡೆಸುವವರಿಗೆ ಆದಾಯದಲ್ಲಿನ ಇಳಿಕೆ ಚಿಂತೆಗೆ ಕಾರಣ ಆಗಬಹುದು. ಹೆಣ್ಣುಮಕ್ಕಳ ಸಲುವಾಗಿಯೇ ಸಾಲ ಮಾಡಬೇಕಾಗಬಹುದು. ತಂದೆ- ತಾಯಿಗಳ ಮಾತಿಗೆ ಗೌರವ ನೀಡಿ. ಕಫ, ಶೀತ, ಜ್ವರದಂಥ ಆರೋಗ್ಯ ಸಮಸ್ಯೆಗಳು ಕಾಡಬಹುದು. ಒಲ್ಲದ ಮನಸಿನಿಂದಲೇ ಕೆಲವು ಕೆಲಸಗಳನ್ನು ಮಾಡಬೇಕಾಗಬಹುದು. ನಿಮಗೆ ಸಂಬಂಧಪಡದ ವಿಷಯಗಳನ್ನು ತಲೆಗೆ ಹಾಕಿಕೊಂಡು ಚಿಂತೆ ಮಾಡದಿರಿ. ಹೊಸ ವಾಹನಗಳ ಖರೀದಿಗೆ ಹಣ ಹೊಂದಾಣಿಕೆಗೆ ಹೆಚ್ಚಿನ ಪ್ರಯತ್ನ ಮಾಡಲಿದ್ದೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಆಹಾರ- ನೀರು ಸೇವನೆ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರುವುದು ಉತ್ತಮ. ಪ್ರಮುಖವಾದ ಕೆಲಸಗಳು ಹಾಗೂ ಜವಾಬ್ದಾರಿಯುತವಾದ ನಿಮ್ಮ ಕೆಲಸವನ್ನು ನೀವೇ ಮಾಡಿಕೊಳ್ಳುವುದು ಉತ್ತಮ. ಇನ್ನೊಬ್ಬರಿಗೆ ವಹಿಸಿದ ಜವಾಬ್ದಾರಿ ಮೇಲೆ ಅತಿಯಾದ ನಿರೀಕ್ಷೆ ಬೇಡ. ಮಾನಸಿಕ ನೆಮ್ಮದಿ ಹಾಳಾಗುತ್ತದೆ. ಆಪ್ತರ ಬಗ್ಗೆ ಅನುಮಾನ ಪಡುವುದು ಸರಿಯಲ್ಲ. ವಾಹನ ಚಾಲನೆ ಮಾಡುವವರು ಎಚ್ಚರಿಕೆಯಿಂದ ಇರಬೇಕು.ಆದ್ದರಿಂದ ಯಾವುದೇ ವಿಚಾರದಲ್ಲಿ ಆತುರ ಬೇಡ. ಹೊಸ ಬಟ್ಟೆ, ಗ್ಯಾಜೆಟ್ ಖರೀದಿಸುವ ಯೋಗ ಇದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಪ್ರೇಮಿಗಳಿಗೆ ವಿರಹದ ದಿನವಾಗಿರುತ್ತದೆ. ಮೂರನೇ ವ್ಯಕ್ತಿಗಳ ಮಾತಿನಿಂದ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ- ಮನಸ್ತಾಪಗಳು ಎದುರಾಗಬಹುದು.ಇಷ್ಟಪಡುವ ಊಟ- ತಿಂಡಿ ಮಾಡುವ ಯೋಗ ಇದೆ. ಹಣ ಉಳಿತಾಯ ಯೋಜನೆ ಬಗ್ಗೆ ಸಂಗಾತಿ ಜತೆ ಚರ್ಚೆ ನಡೆಸಲಿದ್ದೀರಿ. ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡಿ. ಇಲ್ಲದಿದ್ದರೆ ಗ್ಯಾಸ್ಟ್ರಿಕ್ ಸಮಸ್ಯೆ ಆಗಬಹುದು. ಎಲ್ಲ ವಿಚಾರಕ್ಕೂ ಅನುಮಾನ ಪಡುವುದು ಸರಿಯಲ್ಲ. ದೂರ ಪ್ರಯಾಣ ಮಾಡುವಾಗ ಸರಿಯಾದ ಸಿದ್ಧತೆಗಳನ್ನು ಮಾಡಿಕೊಂಡು ಹೋಗಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡಬಹುದು. ಅದರಲ್ಲೂ ಸ್ಥೂಲಕಾಯ ಇದ್ದು, ಮಧುಮೇಹ, ರಕ್ತದೊತ್ತಡ ಸಮಸ್ಯೆ ಇರುವವರು ಬಹಳ ಎಚ್ಚರಿಕೆಯಿಂದ ಇರಬೇಕು. ಇತರರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಬೆಂಕಿಯ ಮುಂದೆ ಹಾಗೂ ಎತ್ತರದ ಸ್ಥಳಗಳಲ್ಲಿ ಕೆಲಸ ಮಾಡಬೇಕು ಎಂದಿರುವವರು ಏಕಾಗ್ರತೆಯಿಂದ ಕೆಲಸ ಮಾಡಿ. ಸಣ್ಣ ಪುಟ್ಟ ಅಪಘಾತ ಆಗುವ ಸಾಧ್ಯತೆ ಇದೆ. ವಾಹನಗಳು ಬಳಸುವಾಗ ಅದರ ಬ್ರೇಕ್ ಇತ್ಯಾದಿ ಸರಿಯಾಗಿ ಇದೆಯೇ ಎಂದು ಪರೀಕ್ಷಿಸಿಕೊಳ್ಳಿ. ಆದ್ಯತೆ ಮೇಲೆ ಕೆಲಸ- ಕಾರ್ಯಗಳನ್ನು ಪೂರ್ಣಗೊಳಿಸಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಮನೆಯಲ್ಲಿ ಅಗತ್ಯ ಇರುವ ದುರಸ್ತಿ, ನವೀಕರಣದ ಕೆಲಸಗಳನ್ನು ಮಾಡಿಸಲು ಹೆಚ್ಚಿನ ಶ್ರಮ ಹಾಕಲಿದ್ದೀರಿ. ವೈದ್ಯರು, ಚಾರ್ಟರ್ಡ್ ಅಕೌಂಟೆಂಟ್ ಗಳು, ವಕೀಲರಿಗೆ ಖರ್ಚಿನ ಪ್ರಮಾಣ ಹೆಚ್ಚಾಗಲಿದೆ. ಸ್ನೇಹಿತರು, ಸಂಬಂಧಿಕರನ್ನು ಭೇಟಿ ಆಗಲಿದ್ದೀರಿ. ಹೂಡಿಕೆ ಬಗ್ಗೆ ಆಲೋಚನೆ ಮಾಡಲಿದ್ದೀರಿ. ರುಚಿಕಟ್ಟಾದ ಊಟ- ತಿಂಡಿ ಮಾಡುವ ಯೋಗ ಇದೆ. ಹೊಸಬರ ಜತೆ ಸಾಂಸಾರಿಕ ವಿಚಾರಗಳನ್ನು ಹಂಚಿಕೊಳ್ಳಬೇಡಿ. ನಿಮ್ಮ ವೈಯಕ್ತಿಕ ವಿಚಾರಗಳನ್ನು ವಿರೋಧಿಗಳು ಬೇಕೆಂತಲೇ ಎಳೆದು ತಂದು, ಅವಮಾನ ಮಾಡಲು ಪ್ರಯತ್ನಿಸಲಿದ್ದಾರೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮಗೆ ಎಷ್ಟೇ ಹತ್ತಿರದವರು ಹೇಳಿದರೂ ಯಾವುದೇ ಕಾರಣಕ್ಕೂ ಹೇಳಿಕೆ ಮಾತುಗಳನ್ನು ಕೇಳಬೇಡಿ. ನಿಮ್ಮ ಮೂಲಕ ಇತರರು ತಮ್ಮ ಗುರಿ ಸಾಧನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ನಿಮ್ಮ ಹೆಸರು, ವರ್ಚಸ್ಸು ದುರುಪಯೋಗ ಆಗದಂತೆ ಮೇಲಧಿಕಾರಿಗಳು ತಮ್ಮ ಮನಸ್ಸಿನಲ್ಲಿರುವ ವಿಚಾರ ನಿಮಗೆ ಹೇಳುತ್ತಿಲ್ಲ ಎಂಬುದು ನಿಮ್ಮ ಗಮನಕ್ಕೆ ಬರುತ್ತದೆ. ಮಾತಿನ ಮೇಲೆ ನಿಗಾ ಇರಬೇಕು. ಇಲ್ಲದಿದ್ದರೆ ಅನಗತ್ಯ ವಿವಾದ ಆಗಬಹುದು. ಕಾರಣವೇ ಇಲ್ಲದೆ ನಿಮ್ಮ ಮನಸ್ಸಿಗೆ ಇಂದು ಬೇಸರ ಕಾಡಲಿದೆ. ನಿಮಗೆ ಗೊತ್ತಿಲದ ವಿಚಾರದ ಬಗ್ಗೆ ಮಾತನಾಡದಿರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ದಿನಸಿ ಮಾರಾಟ, ಸಿಮೆಂಟ್ ಮಾರಾಟ ಹಾಗೂ ಉಕ್ಕಿನ ಮಾರಾಟದಂಥ ಸ್ವಂತ ವ್ಯವಹಾರ ಮಾಡುವವರಿಗೆ ಏಳ್ಗೆ ಇದೆ. ಹೊಸದಾಗಿ ಹೂಡಿಕೆಯನ್ನು ಮಾಡಿ, ವ್ಯಾಪಾರ ವಿಸ್ತರಣೆಯನ್ನು ಮಾಡುವುದಕ್ಕೆ ಆಲೋಚನೆ ಮಾಡಲಿದ್ದೀರಿ. ನಿಮ್ಮಲ್ಲಿ ಕೆಲಸವರಿಗೆ ಕಿರು ಪ್ರಯಾಣ ಮಾಡುವ ಯೋಗ ಇದೆ. ವಾಹನ ಖರೀದಿ ಬಗ್ಗೆ ಮನೆಯಲ್ಲಿ ಚರ್ಚೆ ನಡೆಸಲಿದ್ದೀರಿ. ಸಾಲ ಮಾಡಬೇಕಾದ ಸ್ಥಿತಿ ನಿರ್ಮಾಣ ಆಗುತ್ತದೆ. ಮನೆಗೆ ಗೃಹಾಲಂಕಾರ ವಸ್ತುಗಳನ್ನು ಖರೀದಿ ಮಾಡುವ ಯೋಗ ಇದೆ. ಆದರೆ ಹಾಸಿಗೆ ಇದ್ದಷ್ಟು ಕಾಲು ಚಾಚಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಪ್ರಾಪ್ತ ವಯಸ್ಕರಾಗಿದ್ದು,ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸೂಕ್ತ ವಧು/ವರ ದೊರೆಯುವ ಸಾಧ್ಯತೆಗಳಿವೆ. ನಿಮ್ಮ ಪೈಕಿ ಕೆಲವರಿಗೆ ಸೋಷಿಯಲ್ ಮೀಡಿಯಾಗಳ ಮೂಲಕ ಪರಿಚಯವಾದವರು ಆಪ್ತರಾಗುವ, ಸ್ನೇಹವು ಸಂಬಂಧಕ್ಕೆ ತಿರುಗುವ ಸಾಧ್ಯತೆಗಳಿವೆ. ಸಬ್‌ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸ್ಟ್ಯಾಂಪ್ ವೆಂಡರ್‌ಗಳಿಗಾಗಿ ಅಲ್ಪಾವಧಿ ಕೆಲಸಗಳನ್ನು ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಇಳಿಮುಖ ಆಗಲಿದೆ. ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ ಬೇಸರ ದಿನವಾಗಿರುತ್ತದೆ.

ಲೇಖನ- ಎನ್‌.ಕೆ.ಸ್ವಾತಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ