AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 13ರ ದಿನ ಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 13ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 13ರ ದಿನ ಭವಿಷ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 13, 2023 | 6:38 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನ ಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 13ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮಲ್ಲಿ ಕೆಲವರಿಗೆ ಈ ದಿನ ವಿಪರೀತ ಮರೆವಿನ ಸಮಸ್ಯೆ ಕಾಡುತ್ತದೆ. ಅದಕ್ಕೆ ಮುಖ್ಯವಾದ ಕಾರಣ ಒತ್ತಡದ ಸನ್ನಿವೇಶಗಳು ಅಥವಾ ನೀವಾಗಿಯೇ ಹಾಕಿಕೊಳ್ಳುವ ಅಸಾಧ್ಯವಾದ ಗುರಿಗಳು. ಯಾರೋ ಒಬ್ಬರ ಮೇಲಿನ ಸಿಟ್ಟಿನಿಂದ ಎಲ್ಲರಿಗೂ ಅನ್ವಯ ಆಗುವಂಥ ಕಠಿಣ ನಿಯಮಗಳನ್ನು ತರುವುದು ಸರಿಯಲ್ಲ. ನಿಶ್ಚಿತವಾದ ಗುರಿ ಇಟ್ಟುಕೊಂಡು ಮುಂದಕ್ಕೆ ಸಾಗಿ. ಊಟ- ತಿಂಡಿಯನ್ನು ಸಮಯಕ್ಕೆ ಸರಿಯಾಗಿ ಮಾಡುವುದರ ಕಡೆಗೆ ಲಕ್ಚ್ಯ ನೀಡಿ. ಈ ದಿನ ಸಾಧ್ಯವಾದಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನವನ್ನು ಮಾಡುವುದು ಉತ್ತಮ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಈ ದಿನ ಸಾಧ್ಯವಾದಲ್ಲಿ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ. ಖರ್ಚಿನ ವಿಚಾರವಾಗಿ ಮನೆಯಲ್ಲಿ ಸಿಕ್ಕಾಪಟ್ಟೆ ಚರ್ಚೆಗಳು ಆಗಲಿವೆ. ನಿಮ್ಮ ಶ್ರಮದ ಫಲವನ್ನು ಇನ್ಯಾರೋ ಪಡೆಯುತ್ತಿದ್ದಾರೆ ಎಂದು ನಿಮಗೆ ಬಲವಾಗಿ ಅನಿಸುವುದಕ್ಕೆ ಶುರು ಆಗುತ್ತದೆ. ಪ್ರಮುಖ ಸ್ಥಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮುಂದಿನ ಹಂತಕ್ಕೆ ಬಡ್ತಿ ಸಿಗುವುದು ಬಹಳ ಕಷ್ಟವಾದದ್ದು ಎಂದು ಅನಿಸುತ್ತದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಗೆ ನಿಮ್ಮಿಂದ ಕೈ ಮೀರಿದ ಭರವಸೆಗಳನ್ನು ನೀಡಲು ಹೋಗದಿರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ನಿಷ್ಠೆಯೇ ನಿಮ್ಮನ್ನು ಕಾಪಾಡಲಿದೆ. ಈ ಹಿಂದೆ ಶ್ರಮಪಟ್ಟು ಮಾಡಿದ ಕೆಲಸದ ಫಲಿತಾಂಶವನ್ನು ಕಾಣಲಿದ್ದೀರಿ. ಯಾರದಾದರೂ ದೃಷ್ಟಿ ದೋಷ ನಿಮ್ಮನ್ನು ಕಾಡಬಹುದು. ಈ ದಿನ ಕಪ್ಪು ಬಟ್ಟೆಯನ್ನು ಧರಿಸಬೇಡಿ. ಮನೆಯಿಂದ ಹೊರಡುವಾಗ ದುರ್ಗಾದೇವಿಯನ್ನು ಮನಸ್ಸಿನಲ್ಲಿ ಸ್ಮರಣೆ ಮಾಡಿದರೆ ಉತ್ತಮ. ನಿಮ್ಮ ಹೆಸರನ್ನು ಕೆಲವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಹಾಗೆ ಆಗದಂತೆ ಬಹಳ ಎಚ್ಚರಿಕೆಯನ್ನು ತೆಗೆದುಕೊಳ್ಳಿ. ನೇರವಾಗಿ ಹೇಳಬೇಕಾದ ವಿಚಾರಕ್ಕೆ ದಾಕ್ಷಿಣ್ಯ ಪಡಬೇಡಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಉನ್ನತ ವ್ಯಾಸಂಗಕ್ಕಾಗಿ ಬ್ಯಾಂಕ್ ಲೋನ್ ಗಾಗಿ ಪ್ರಯತ್ನ ಮಾಡುತ್ತಿದ್ದಲ್ಲಿ ಅದು ನಿಮಗೆ ದೊರೆಯುವ ಸಾಧ್ಯತೆ ಇದೆ. ಹಣಕಾಸು ವಿಚಾರಗಳಿಗೆ ಇತರರಿಗೆ ನಿಮ್ಮ ಮಾರ್ಗದರ್ಶನದ ಅಗತ್ಯ ಕಂಡುಬರಲಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅದು ಉಲ್ಬಣ ಆಗುವ ಸಾಧ್ಯತೆಗಳಿವೆ. ಮನೆ, ಆಸ್ತಿಗೆ ಸಂಬಂಧಿಸಿದ ಕಾಗದ- ಪತ್ರಗಳನ್ನು ಜೋಪಾನವಾಗಿ ಇರಿಸಿಕೊಳ್ಳುವ ಕಡೆಗೆ ಗಮನ ನೀಡಿ. ಬಡ್ಡಿಯ ಆಸೆಯಿಂದ ಯಾರಿಗೂ ಈ ದಿನ ಸಾಲವನ್ನು ನೀಡದಿರಿ. ಒಂದು ವೇಳೆ ಕೊಟ್ಟರೆ ವಾಪಸ್ ಸಿಗುವುದಿಲ್ಲ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ವಾಸ್ತವವಾದಿಗಳಾಗಿ ಎಲ್ಲವನ್ನೂ ಆಲೋಚನೆ ಮಾಡಲಿದ್ದೀರಿ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೊಸಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಪ್ರೇಮಿಗಳು ಈ ದಿನ ಎಲ್ಲೆಂದರಲ್ಲಿ ಓಡಾಡದಿರಿ. ಹಾಗೊಂದು ವೇಳೆ ಮಾಡಿದಲ್ಲಿ ದೊಡ್ಡ ಸಮಸ್ಯೆಗೆ ಸಿಲುಕಿಕೊಳ್ಳಲಿದ್ದೀರಿ. ಮಹಿಳೆಯರಿಗೆ ರಕ್ತಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳಲಿದೆ. ಈ ಹಿಂದೆ ನೀವು ಹೂಡಿಕೆ ಮಾಡಿದ್ದ ಹಣವು ವಾಪಸ್ ಬಾರದಿರುವಂಥ ಸನ್ನಿವೇಶ ನಿರ್ಮಾಣ ಆಗಲಿದೆ. ಆದ್ದರಿಂದ ಇದನ್ನು ಸರಿಯಾಗಿ ಫಾಲೋ ಅಪ್ ಮಾಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ದೈವಾನುಗ್ರಹ ನಿಮ್ಮ ಮೇಲೆ ಇರಲಿದೆ. ಪಾಸಿಟಿವ್ ಆದಂಥ ಪ್ರಭಾ ವಲಯವೊಂದು ನಿಮ್ಮನ್ನು ರಕ್ಷಣೆ ಮಾಡಲಿದೆ. ಬಹಳ ದೀರ್ಘ ಕಾಲದಿಂದ ಮಾಡಿಕೊಂಡು ಬರುತ್ತಿದ್ದ ಪ್ರಾಜೆಕ್ಟ್ ಅಂತಿಮ ರೂಪು- ರೇಷೆಯನ್ನು ಪಡೆದುಕೊಳ್ಳಲಿದೆ. ನಿರ್ದಾಕ್ಷಿಣ್ಯವಾದ ಮಾತಿನ ಮೂಲಕ ಕೆಲವರ ವಿರೋಧವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದ್ದು, ನಿಮ್ಮ ವಿರುದ್ಧ ಷಡ್ಯಂತ್ರ ಕೂಡ ಮಾಡಲಿದ್ದಾರೆ. ಆದರೆ ಯಾವುದಕ್ಕೂ ಚಿಂತಿಸುವ ಅಗತ್ಯ ಇಲ್ಲ. ಏಕೆಂದರೆ ಶತ್ರುಗಳ ವಿರುದ್ಧ ನಿಮ್ಮ ಕೈ ಮೇಲಾಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬಿಡುವಿಲ್ಲದಂಥ ಕೆಲಸಗಳಿಂದ ನಿಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ಹೆಚ್ಚಿನ ನಿಗಾ ಮಾಡುವುದಕ್ಕೆ ಸಾಧ್ಯವಾಗದೇ ಹೋಗಬಹುದು. ಆದ್ದರಿಂದ ಕೆಲವು ಸಣ್ಣ- ಪುಟ್ಟ ಬೇಸರಕ್ಕೆ ಕಾರಣ ಆಗಲಿದೆ. ಆದರೆ ಇದಕ್ಕೆ ಉಪಶಮನ ಕೂಡ ದೊರೆಯಲಿದೆ. ಸ್ವತಂತ್ರವಾಗಿ ಕೆಲಸ ಮಾಡಬೇಕು ಎಂದು ಬಯಸುವವರಿಗೆ ಕೆಲವು ಅಡತಡೆಗಳು ಎದುರಾಗಲಿದೆ. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ, ಇದು ತಾತ್ಕಾಲಿಕವಾದ ಹಿನ್ನಡೆ ಮಾತ್ರ. ಇತರರ ಸಲಹೆಗಳನ್ನು ಪಾಲಿಸುವ ಮುನ್ನ ಅಳೆದು- ತೂಗಿ ನೋಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಒಂದು ಸಲ ತೆಗೆದುಕೊಂಡ ನಿರ್ಧಾರವನ್ನು ಬದಲಿಸಿಕೊಳ್ಳಲಿಕ್ಕೆ ಹೋಗಬೇಡಿ. ಹಾಗೊಂದು ವೇಳೆ ಅನಿವಾರ್ಯ ಅಂತಾದಲ್ಲಿ ಅದನ್ನು ಸಂಬಂಧಪಟ್ಟವರ ಗಮನಕ್ಕೆ ತಕ್ಷಣವೇ ತನ್ನಿ. ಇಲ್ಲದಿದ್ದಲ್ಲಿ ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗುವಂಥ ಸನ್ನಿವೇಶ ಸೃಷ್ಟಿ ಆಗಬಹುದು. ಹೊಸದಾಗಿ ವಸ್ತುಗಳನ್ನು ಖರೀದಿ ಮಾಡಬೇಕು ಎಂದಾದರೆ ಅದರ ಅಗತ್ಯ ಎಷ್ಟಿದೆ ಎಂಬ ಬಗ್ಗೆ ಒಂದಕ್ಕೆ ನಾಲ್ಕು ಬಾರಿ ಆಲೋಚನೆ ಮಾಡಿ, ನಿರ್ಧಾರವನ್ನು ಕೈಗೊಳ್ಳುವುದು ಉತ್ತಮ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಪ್ರಯಾಣದಲ್ಲಿ ಸಮಸ್ಯೆಗಳಾಗುವಂಥ ಸಾಧ್ಯತೆಗಳಿವೆ. ನಿಮ್ಮದಲ್ಲದ ತಪ್ಪಿಗೆ ಇತರರು ನಿಮ್ಮ ಮೇಲೆ ನಿಂದೆ ಹೊರೆಸಲಿದ್ದಾರೆ. ಸಾಧ್ಯವಾದಷ್ಟು ಸಾಲವನ್ನು ಮಾಡದೇ ಇರುವುದು ಉತ್ತಮ. ಕಡಿಮೆ ಬಡ್ಡಿ ಅಥವಾ ದೀರ್ಘಾವಧಿಗೆ ಸಾಲ ಸಿಗುತ್ತದೆ ಹೀಗೆ ಏನೇ ಕಾರಣಗಳಿರಬಹುದು, ಸಾಲದ ಅಗತ್ಯ ಇಲ್ಲ ಎಂದಾದರೆ ಮಾಡದಿರುವುದು ಉತ್ತಮ. ಗಂಡು ಮಕ್ಕಳಿರುವವರು ಅವರು ಯಾರ ಜತೆಗೆ ಸ್ನೇಹ ಮಾಡುತ್ತಿದ್ದಾರೆ ಎಂಬ ಬಗ್ಗೆ ನಿಗಾ ಮಾಡುವುದು ಉತ್ತಮ. ಲೇಖನ- ಎನ್‌.ಕೆ.ಸ್ವಾತಿ

Published On - 6:35 am, Mon, 13 February 23

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ