Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 18ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 18ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 18ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರImage Credit source: onmanorama.com
Follow us
ರಮೇಶ್ ಬಿ. ಜವಳಗೇರಾ
|

Updated on: Feb 18, 2023 | 6:00 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 18ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಸ್ವಂತ ಕೆಲಸಗಳನ್ನು ಮಾಡಿಕೊಳ್ಳುವುದಕ್ಕೆ ನಿಮಗೆ ಹೆಚ್ಚಿನ ಸಮಯ ದೊರೆಯುವುದಿಲ್ಲ. ಬಹುತೇಕ ಇತರರ ಕೆಲಸಗಳು ಮಾಡುವುದಕ್ಕೆ, ಕುಟುಂಬದಲ್ಲಿ ಕೆಲವು ಮುಖ್ಯ ಸಂಗತಿಗಳನ್ನು ಪೂರ್ಣ ಮಾಡುವುದರೊಳಗೆ ಹೆಚ್ಚಿನ ಸಮಯ ಹೋಗುತ್ತದೆ. ಮನರಂಜನೆ, ರೆಸ್ಟೋರೆಂಟ್ ಇಂಥವುಗಳಿಗೆ ಹೆಚ್ಚಿನ ಖರ್ಚಾಗಲಿದೆ. ಆದರೆ ಕುಟುಂಬದವರು, ಪ್ರೀತಿಪಾತ್ರರ ಜತೆಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ಮುಖ್ಯ ಕಾಗದ- ಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ದುಡಿಮೆ ಎಷ್ಟಾಗಿದೆ ಹಾಗೂ ಉಳಿತಾಯ ಏನು ಮಾಡಿದ್ದೀರಿ ಎಂಬ ಬಗ್ಗೆ ಲೆಕ್ಕಾಚಾರ ಹಾಕಿಕೊಳ್ಳುವಂಥ ಸಮಯ ಇಂದಿನದಾಗಿರುತ್ತದೆ. ರಾಜಕಾರಣದಲ್ಲಿ ನಾಯಕತ್ವದ ಸ್ಥಾನದಲ್ಲಿ ಇರುವವರಿಗೆ ಒತ್ತಡದ ದಿನವಾಗಿರುತ್ತದೆ. ನಿಮ್ಮ ಒಪ್ಪಿಗೆ ಇಲ್ಲದೆ ಕೆಲವು ಕೆಲಸಗಳನ್ನು ಇತರರು ಮಾಡುವುದರಿಂದ ಬೇಸರ ಮೂಡುತ್ತದೆ. ವಾಹನ ಖರೀದಿ ಮಾಡಬೇಕು ಎಂದಿರುವವರಿಗೆ ನಾನಾ ಬಗೆಯಲ್ಲಿ ಅಡೆತಡೆಗಳು ಎದುರಾಗುತ್ತವೆ. ಇತರರ ಮಾತುಗಳಿಂದ ಮನಸ್ಸಿಗೆ ಖೇದ ಆಗುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಮದುವೆಗಾಗಿ ಸೂಕ್ತ ವಧು ಅಥವಾ ವರರಿಗಾಗಿ ಹುಡುಕಾಟ ನಡೆಸುತ್ತಿದ್ದಲ್ಲಿ ಪ್ರಯತ್ನಕ್ಕೆ ಫಲ ದೊರೆಯಲಿದೆ. ಕೃತಕ ಗರ್ಭಧಾರಣೆ ಮೂಲಕ ಸಂತಾನಕ್ಕಾಗಿ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ದೊರೆಯಲಿದೆ. ಪ್ರೀತಿಪಾತ್ರರಿಗೆ ಉಡುಗೊರೆ ನೀಡುವ ಸಲುವಾಗಿ ಹಣವನ್ನು ಖರ್ಚು ಮಾಡುವಂಥ ಯೋಗ ಇದೆ. ದೇವತಾ ಕಾರ್ಯಗಳಿಗೆ ನಿಮಗೆ ಆಹ್ವಾನ ಬರಲಿದೆ. ದೇವಾಲಯ ಪಾರುಪತ್ಯೆದಾರರಿಗೆ ಜವಾಬ್ದಾರಿಗಳು ಹೆಚ್ಚಿರುತ್ತವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಹೂವು, ಹಣ್ಣು ಮಾರಾಟ ಮಾಡುವಂಥವರಿಗೆ ಹೊಸದಾಗಿ ದೊಡ್ಡ ಪ್ರಮಾಣದ ಆರ್ಡರ್ ದೊರೆಯಲಿದೆ. ಸೆಕೆಂಡ್ ಹ್ಯಾಂಡ್ ವಾಹನ ಖರೀದಿ ಮಾಡಬೇಕು ಎಂದಿರುವವರಿಗೆ ಕೊಳ್ಳುವುದಕ್ಕೆ ಯೋಗ ಇದೆ. ಅಥವಾ ಮಾತುಕತೆಯಾದರೂ ಅಂತಿಮ ಆಗಲಿದೆ. ಮನೆ ನಿರ್ಮಾಣಕ್ಕಾಗಿ ಸಾಲಕ್ಕೆ ಪ್ರಯತ್ನಿಸುತ್ತಿರುವವರಿಗೆ ಇತರರಿಂದ ನೆರವು ದೊರೆಯಲಿದೆ. ವಸ್ತ್ರಾಭರಣ ಖರೀದಿಗಾಗಿ ಖರ್ಚಾಗಲಿದೆ. ಕ್ರೆಡಿಟ್ ಕಾರ್ಡ್ ಬಳಕೆ ಮಾಡುವಂತಿದ್ದಲ್ಲಿ ಜಾಗ್ರತೆ ಅಗತ್ಯ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಈ ಹಿಂದೆ ನೀವು ಮಾಡಿದ ಕೆಲಸ, ಆಡಿದ ಮಾತುಗಳಿಗೆ ಇಂದು ಬಹಳ ಬೇಸರ ಮೂಡುತ್ತದೆ. ನಿಮ್ಮಿಂದ ಮಾಡಲಿಕ್ಕೆ ಆಗುವಂಥ ಕೆಲಸಗಳನ್ನು ಮಾತ್ರ ಒಪ್ಪಿಕೊಳ್ಳಿ. ಸಾಮರ್ಥ್ಯಕ್ಕೆ ಮೀರಿದ, ಸಮಯದೊಳಗೆ ಮಾಡಲಾಗದ್ದನ್ನು ಒಪ್ಪಿಕೊಂಡಲ್ಲಿ ಅದು ಪೂರ್ಣಗೊಳಿಸಲಿಕ್ಕೆ ಆಗದೆ ಒತ್ತಡ ಸೃಷ್ಟಿ ಆಗಲಿದೆ. ಸಂಗೀತ, ನಾಟಕ, ಚಿತ್ರ ಪ್ರದರ್ಶನದಂಥ ಕಾರ್ಯಕ್ರಮಗಳಲ್ಲಿ ಭಾಗೀ ಆಗುವಂಥ ಯೋಗ ಇದೆ. ಮನೆಗೆ ಪೀಠೋಪಕರಣಗಳನ್ನು ಖರೀದಿಸುವ ಯೋಗ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ತೆಗೆದುಕೊಳ್ಳಿ. ಜ್ವರ, ಹೊಟ್ಟೆನೋವು ಮತ್ತಿತರ ಆರೋಗ್ಯ ಸಮಸ್ಯೆಗಳು ಕಾಡಬಹುದು. ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವವರು ಹೊಸ ಕೆಲಸಗಳನ್ನು ನಿರೀಕ್ಷೆ ಮಾಡಬಹುದು. ಹಳೇ ಸ್ನೇಹಿತರು- ಗೆಳತಿಯರನ್ನು ಈ ದಿನ ಭೇಟಿ ಆಗುವ ಯೋಗ ಇದೆ. ಶುಭ ಕಾರ್ಯಗಳಿಗಾಗಿ ಓಡಾಟ ಹೆಚ್ಚಾಗಲಿದೆ. ಹೊಸ ವ್ಯಾಪಾರ- ವ್ಯವಹಾರ ಆರಂಭಿಸಬೇಕು ಎಂದುಕೊಂಡಿರುವವರು ಹೂಡಿಕೆಗೆ ಬೇಕಾದ ಹಣದ ಮೂಲ ಹೊಂದಿಸುವುದಕ್ಕೆ ಪ್ರಯತ್ನಿಸಲಿದ್ದೀರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಅನಿರೀಕ್ಷಿತವಾಗಿ ಹೊಸ ಜನರ ಪರಿಚಯ ಆಗಲಿದೆ. ಇದು ದೀರ್ಘಾವಧಿಯಲ್ಲಿ ಅನುಕೂಲ ಆಗಲಿದೆ. ಈಗಾಗಲೇ ಕೆಲಸ ಆರಂಭಿಸಿ, ಅದು ಅರ್ಧಂಬರ್ಧ ಆಗಿ ನಿಂತಿದ್ದಲ್ಲಿ ಅದನ್ನು ಮುಂದುವರಿಸಿಕೊಂಡು ಹೋಗುವ ಅವಕಾಶ ಇದೆ. ಇತರರ ಕೆಲಸಗಳಿಗಾಗಿ ನಿಮ್ಮ ಕೈಯಾರೆ ಹಣ ಹಾಕಿಕೊಂಡು, ಖರ್ಚು ಮಾಡುವಂಥ ಸಾಧ್ಯತೆ ಇದೆ. ಖಾಸಗಿ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡದ ದಿನ ಇದಾಗಿರುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಅಡ್ವರ್ಟೈಸ್ ಮೆಂಟ್ ಏಜೆನ್ಸಿ, ಸಾರ್ವಜನಿಕ ಸಂಪರ್ಕಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮುಖ್ಯ ವ್ಯಕ್ತಿಗಳ ಸಂಪರ್ಕ ಅಥವಾ ಭೇಟಿಗೆ ದಿನ ನಿಗದಿ ಆಗುವಂಥ ಸಾಧ್ಯತೆ ಇದೆ. ಮನೆ ಅಥವಾ ಸೈಟು ಮಾರಾಟಕ್ಕೆ ಇಟ್ಟಿರುವವರಿಗೆ ಸೂಕ್ತ ಬೆಲೆ ದೊರೆಯುವಂಥ ಪ್ರಸ್ತಾವ ಬರಲಿದೆ. ಗ್ರಂಥಿಗೆ ಅಂಗಡಿ ನಡೆಸುತ್ತಿರುವವರಿಗೆ ಲಾಭದಲ್ಲಿ ದೊಡ್ಡ ಪ್ರಮಾಣ ಯಾರದೋ ಪಾಲಾಗುವ ಸಾಧ್ಯತೆ ಇದೆ. ಆದ್ದರಿಂದ ಯಾವ ಸಣ್ಣ ಅಂಶವನ್ನೂ ನಿರ್ಲಕ್ಷಿಸಬೇಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನಿಮ್ಮ ಕೆಲಸ ಹಾಗೂ ತೆಗೆದುಕೊಂಡ ಜವಾಬ್ದಾರಿಯನ್ನು ತುಂಬ ಅಚ್ಚುಕಟ್ಟಾಗಿ ಮಾಡಿ ಮುಗಿಸಲಿದ್ದೀರಿ. ಕಾಲು ಹಾಗೂ ಬೆನ್ನು ನೋವು ನಿಮ್ಮನ್ನು ಕಾಡಬಹುದು. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರು ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರು ಆದಾಯ ಹೆಚ್ಚು ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಿದ್ದೀರಿ. ಆದರೆ ಕುಟುಂಬಸ್ಥರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿ.

ಲೇಖನ- ಎನ್‌.ಕೆ.ಸ್ವಾತಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ