Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 7ರ ದಿನಭವಿಷ್ಯ

ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 7ರ ದಿನಭವಿಷ್ಯ
Numerology Prediction
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 07, 2023 | 6:10 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಅನಿರೀಕ್ಷಿತ ಅತಿಥಿಗಳು ನಿಮ್ಮ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿನ ಒತ್ತಡ ಮನೆಯೊಳಗೂ ವ್ಯಾಪಿಸುತ್ತದೆ. ಪಿತ್ತ ಸಮಸ್ಯೆ ಕೆಲವರನ್ನು ಕಾಡಲಿದೆ. ಕುಟುಂಬದ ಜತೆಗೆ ಹತ್ತಿರದ ಸ್ಥಳಕ್ಕಾದರೂ ಪ್ರವಾಸ ತೆರಳಳುವಂಥ ಯೋಗ ಇದೆ. ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಇಳಿಕೆ ಕಂಡುಬಂದು, ಆತಂಕದ ಸನ್ನಿವೇಶವು ಸೃಷ್ಟಿ ಆಗಲಿದೆ. ಇತರರ ಸನ್ನಿವೇಶದ ಬಗ್ಗೆ ದಯೆ ಇರಿಸಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಮನೆಯ ಹಿರಿಯರ ಆರೋಗ್ಯದ ವಿಚಾರವು ಪ್ರಾಶಸ್ತ್ಯ ಪಡೆದುಕೊಳ್ಳಲಿದೆ. ತಾಯಿಯ ಕಡೆ ಸಂಬಂಧಿಕರ ಸಹಾಯದಿಂದ ಹೊಸ ಆದಾಯದ ಮೂಲಗಳು ತೆರೆದುಕೊಳ್ಳುವ ಅವಕಾಶಗಳಿವೆ. ಈಗಾಗಲೇ ಹಲ್ಲು ನೋವಿನಿಂದ ಬಳಲುತ್ತಿರುವವರಿಗೆ ಅದು ಉಲ್ಬಣ ಆಗಲಿದೆ. ತೀರ್ಥಕ್ಷೇತ್ರ ದರ್ಶನಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ವೈದ್ಯಕೀಯ ವೃತ್ತಿಯಲ್ಲಿ ಇರುವಂಥವರಿಗೆ ಸಾಮಾಜಿಕ ಮನ್ನಣೆ ಜಾಸ್ತಿ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಪಾರ್ಟಿ ಅಥವಾ ಔತಣ ಕೂಟಗಳಿಗೆ ಆಹ್ವಾನ ಬರುವ ಸಾಧ್ಯತೆ ಇದೆ. ಬಹಳ ಜನ ಇರುವ ಕಡೆ ನೀವಿದ್ದೀರಿ ಅಂತಾದರೆ ನಿಮಗೆ ಗೊತ್ತಿಲ್ಲದ ಅಥವಾ ಅರೆಬರೆ ಮಾಹಿತಿ ಇರುವ ಸಂಗತಿಗಳ ಬಗ್ಗೆ ಮಾತನಾಡಬೇಡಿ. ಇನ್ನು ಗ್ಯಾಜೆಟ್, ಮೊಬೈಲ್ ಅಥವಾ ಲ್ಯಾಪ್ ಟಾಪ್ ರಿಪೇರಿಗಾಗಿ ಖರ್ಚು ಮಾಡಬೇಕಾಗುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡದಿಂದ ಕೂಡಿರುವಂಥ ದಿನ ಇದಾಗಿರಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಹಣಕಾಸಿನ ಹರಿವು ಉತ್ತಮ ಮಾಡಿಕೊಳ್ಳುವುದಕ್ಕೆ ಅವಕಾಶಗಳು ಒದಗಿಬರಲಿವೆ. ದೀರ್ಘ ಕಾಲದ ಪ್ರಾಜೆಕ್ಟ್‌ಗಳನ್ನು ಕೈಗೆತ್ತಿಕೊಳ್ಳುವುದಕ್ಕೆ ಇದೀಗ ಸಮಯ ಬಂದಿದೆ. ಆದರೆ ಇದರಲ್ಲಿ ಸ್ಥಿರತೆ ತಂದುಕೊಳ್ಳುವುದು ತುಂಬ ಮುಖ್ಯ. ಈ ದಿನ ನೀವು ಧರಿಸುವ ಪಾದರಕ್ಷೆಗಳ ಗುಣಮಟ್ಟ, ಅಳತೆ ಮತ್ತು ಅನುಕೂಲದ ಕಡೆ ಲಕ್ಷ್ಯ ವಹಿಸಿ. ಅದರಲ್ಲೂ ಕಾಲಿನ ಸಮಸ್ಯೆ ಪದೇಪದೇ ಕಾಣಿಸಿಕೊಳ್ಳುತ್ತಿದ್ದಲ್ಲಿ ಇದು ಮುಖ್ಯ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಹಳೇ ಹೂಡಿಕೆಗಳು ಫಲ ನೀಡಲಿದೆ. ಶ್ರಮವನ್ನು ಇತರರು ಗುರುತಿಸಿ, ಮೆಚ್ಚುಗೆ ಸೂಚಿಸಲಿದ್ದಾರೆ. ವ್ಯಾಲೆಟ್‌, ಡಿಜಿಟಲ್ ಕರೆನ್ಸಿಗಳನ್ನು ಬಳಸುವವರು ಸೈಬರ್ ಸೆಕ್ಯೂರಿಟಿ ಬಗ್ಗೆ ಜಾಗ್ರತೆ ವಹಿಸಿ. ಡಯಟಿಷಿಯನ್ ವೃತ್ತಿಯಲ್ಲಿ ಇರುವವರಿಗೆ ಏಳ್ಗೆ ಇದೆ. ಹೋಟೆಲ್ ಉದ್ಯಮದಲ್ಲಿ ಇರುವವರಿಗೆ ಲಾಭದ ಪ್ರಮಾಣ ಕಡಿಮೆ ಆಗಲಿದೆ. ಟ್ರಾವೆಲ್‌ ಏಜೆಂಟ್‌ಗಳಿಗೆ ಹೊಸ ಜನರ ಸಂಪರ್ಕ ದೊರೆಯಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ನಿಮಗೆ ಬಹಳ ಮೂಡ್‌ ಸ್ವಿಂಗ್‌ಗಳಿರುತ್ತವೆ. ಒಂದು ವೇಳೆ ಈಗಾಗಲೇ ಮಾನಸಿಕ ಸಮಸ್ಯೆಗಳು ಇದ್ದಲ್ಲಿ ಪರಿಸ್ಥಿತಿ ಉಲ್ಬಣಿಸುವ ಸಾಧ್ಯತೆಗಳಿರುತ್ತವೆ. ಯಾವುದಾದರೂ ನಿಯಮಿತವಾದ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದಲ್ಲಿ ಅದನ್ನು ಯಾವ ಕಾರಣಕ್ಕೂ ಮರೆಯದಿರಿ. ಒಂದು ವೇಳೆ ಈಗಿನ ವೈದ್ಯರಿಗಿಂತ ಬೇರೆಯವರಲ್ಲಿ ತೆರಳಬೇಕು ಎಂದಾದಲ್ಲಿ ಒಂದಕ್ಕೆ ಎರಡು ಬಾರಿ ಆಲೋಚನೆ ಮಾಡಿ. ಪ್ರಯತ್ನಪಟ್ಟಾದರೂ ಸ್ವಲ್ಪ ಸಮಯ ಧ್ಯಾನ ಮಾಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮ ಕ್ರೆಡಿಟ್ ಕಾರ್ಡ್ ಬಿಲ್, ಇಎಂಐ ಪಾವತಿ, ಸರ್ಕಾರಕ್ಕೆ ಬಾಕಿ ಉಳಿಸಿಕೊಂಡ ಯಾವುದೇ ಶುಲ್ಕವನ್ನು ನೀವು ಪಾವತಿ ಮಾಡಿದ್ದೀರಾ ಎಂಬುದನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಇನ್ನು ಕಟ್ಟಡ ಕಾರ್ಮಿಕರು ಸ್ವಲ್ಪ ಎಚ್ಚರಿಕೆಯಿಂದಲೇ ಕಾರ್ಯ ನಿರ್ವಹಿಸಿ, ಯಾರ ಜತೆಗೂ ಮನಸ್ತಾಪ ಸಲ್ಲದು. ಗ್ಯಾಸ್ಟ್ರಿಕ್ ಸಮಸ್ಯೆ ಇರುವಂಥವರು ಖಾರದ, ಮಸಾಲೆಯುಕ್ತ ಪದಾರ್ಥಗಳನ್ನು ಸೇವನೆ ಮಾಡದಿರಿ. ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡುವುದು ಮುಖ್ಯ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕೈ ಮಣಿಕಟ್ಟಿನ ನೋವು ಕಾಣಿಸಿಕೊಳ್ಳಬಹುದು. ಲ್ಯಾಪ್‌ಟಾಪ್‌ ಮುಂದೆ ಹೆಚ್ಚು ಕೆಲಸ ಮಾಡುವಂಥವರು ಇದನ್ನು ನಿರ್ಲಕ್ಷ್ಯ ಮಾಡದಿರಿ. ಬೇರೆಯವರಿಗೆ ಚೆಕ್ ಬರೆದುಕೊಡುತ್ತಿದ್ದೀರಿ ಎಂದಾದರೆ ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ. ದೊಡ್ಡ ದೊಡ್ಡ ಯೋಜನೆಗಳನ್ನು ಏಕಾಏಕಿ ಹೇಳಿಕೊಂಡು ಬಿಡಬೇಡಿ. ಅಂತಿಮ ರೂಪುರೇಷೆ ಪೂರ್ತಿ ಆಗುವ ಸಮಯಕ್ಕೆ ಕಾಯಿರಿ, ಅವುಗಳು ಇನ್ನೊಂದಿಷ್ಟು ಗಟ್ಟಿ ಆಗಲಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನಿಮ್ಮ ತಾಳ್ಮೆಗೆ ಈ ದಿನ ಪರೀಕ್ಷೆ ಇರಲಿದೆ. ಹೇಳಿದ್ದನ್ನೇ ಅದೆಷ್ಟು ಸಲ, ಅದೆಷ್ಟು ಜನರ ಮುಂದೆ ಹೇಳಬೇಕು ಎಂದು ಸಿಟ್ಟಾಗಬೇಡಿ. ಇದು ನಿಮ್ಮ ಸಾಮರ್ಥ್ಯದ ಪರೀಕ್ಷೆ ಅಲ್ಲ, ಅದೃಷ್ಟದ ಪರೀಕ್ಷೆ. ಆದ್ದರಿಂದ ತಾಳ್ಮೆ ಇರಲಿ. ಮನೆಯ ದುರಸ್ತಿ ಮಾಡುವ ಸಲುವಾಗಿ ಸಂಬಂಧಪಟ್ಟವರನ್ನು ಕರೆಸಿ, ಮಾತನಾಡುವ ಅವಕಾಶಗಳಿವೆ. ಈ ದಿನ ನಿಮ್ಮ ವಾಟ್ಸಾಪ್ ಡಿಪಿಯಲ್ಲಾಗಲೀ ಅಥವಾ ಸ್ಕ್ರೀನ್ ಸೇವರ್ ಆಗಿಯಾಗಲೀ ವೆಂಕಟೇಶ್ವರನ ಚಿತ್ರವನ್ನು ಹಾಕಿಕೊಳ್ಳಿ.

ಲೇಖನ- ಎನ್‌.ಕೆ.ಸ್ವಾತಿ

ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ