Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜ.9ರ ನಿಮ್ಮ ಭವಿಷ್ಯ ನೋಡಿ

| Updated By: ರಮೇಶ್ ಬಿ. ಜವಳಗೇರಾ

Updated on: Jan 09, 2023 | 6:07 AM

ನಿಮ್ಮ ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 9 ಸೋಮವಾರದ ದಿನ ಭವಿಷ್ಯ ಹೇಗಿದೆ? ಯಾವ ರಾಶಿಗೆ ಏನು ಫಲ? ಎನ್ನುವುದನ್ನು ತಿಳಿದುಕೊಳ್ಳಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜ.9ರ ನಿಮ್ಮ ಭವಿಷ್ಯ ನೋಡಿ
ಸಂಖ್ಯಾಶಾಸ್ತ್ರ
Follow us on

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 9ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Yearly Horoscope 2023: 12 ರಾಶಿಗಳ ವರ್ಷ ಭವಿಷ್ಯ ಹೇಗಿದೆ? ಯಾರಿಗಿದೆ ಅದೃಷ್ಟ?

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಸಂಸಾರದಲ್ಲಿ ಭಿನ್ನಾಭಿಪ್ರಾಯ ಏರ್ಪಡಬಹುದು. ಮಕ್ಕಳ ಶಿಕ್ಷಣದ ವಿಚಾರಕ್ಕೆ ಚಿಂತೆ ಎದುರಾಗಲಿದೆ. ಈಗಾಗಲೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅದು ಅರ್ಧದಲ್ಲಿ ನಿಂತುಬಿಡುವ ಸಾಧ್ಯತೆ ಇದೆ. ಇತರರ ಮಾತನ್ನು ನಂಬಿ, ನಿರ್ಧಾರ ಕೈಗೊಳ್ಳಬೇಡಿ. ವರ್ಗಾವಣೆಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಪ್ರಭಾವಿಗಳ ನೆರವು ದೊರೆಯಲಿದೆ. ರಾಜಕಾರಣಿಗಳಿಗೆ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ಶಿವನ ಆರಾಧನೆ ಮಾಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಪಾರ್ಟನರ್ ಆಗಿ ವ್ಯವಹಾರ ಅಥವಾ ಉದ್ಯಮ ಮಾಡುತ್ತಿರುವವರಿಗೆ ವಿಸ್ತರಣೆಗೆ ಅವಕಾಶ ಇದೆ. ತಾಯಿ ಅಥವಾ ತಾಯಿ ಸಮಾನರಾದವರಿಗೆ ಅನಾರೋಗ್ಯ ಕಾರಣಗಳಿಂದಾಗಿ ಹಣ ಖರ್ಚಾಗಲಿದೆ. ವಿದೇಶ ಪ್ರವಾಸಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವವರು ಹೊಸದಾಗಿ ಕ್ಲೈಂಟ್ ಪಡೆಯಲಿದ್ದೀರಿ. ಸರ್ಕಾರಿ ನೌಕರರಿಗೆ ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಮರೆವಿನ ಸಮಸ್ಯೆ ಕಾಡಲಿದೆ.

ಇದನ್ನೂ ಓದಿ: Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜ.8ರಿಂದ 14ರ ವರೆಗಿನ ವಾರಭವಿಷ್ಯ, ಯಾವ ರಾಶಿಗೆ ಏನು ಫಲ?

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಶತ್ರುಗಳ ಕೈ ಮೇಲಾಗಬಹುದು. ಸಿಟ್ಟನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಿ. ಸಾರ್ವಜನಿಕರ ಮುಂದೆ ಮಾತನಾಡುವಾಗ ಬಳಸುವ ಪದಗಳ ಬಗ್ಗೆ ಲಕ್ಷ್ಯ ಇರಲಿ. ನೀರು ಸೇವನೆ ಬಗ್ಗೆ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದಲ್ಲಿ ಅಲರ್ಜಿ ಆಗಬಹುದು.ಈಗಾಗಲೇ ಸರ್ಕಾರಿ ಕೆಲಸಗಳನ್ನು ಮಾಡಿದ್ದು, ಬಿಲ್ ಬಾಕಿ ಬರಬೇಕಿದ್ದಲ್ಲಿ ಅದು ಬರುವ ಸಾಧ್ಯತೆ ಇದೆ. ವಿದೇಶಗಳಿಂದ ಶುಭ ಸುದ್ದಿ ಕೇಳಿಬರುವ ಅವಕಾಶಗಳು ಇವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮನೆಯಲ್ಲಿ ಶುಭ ಕೆಲಸಗಳಿಗಾಗಿ ಮುಂದಾಳತ್ವ ವಹಿಸಬೇಕಾಗುತ್ತದೆ. ಆದಾಯ ಮೂಲಗಳು ಹೆಚ್ಚಾಗಲಿವೆ. ದೀರ್ಘ ಕಾಲದ ಹೂಡಿಕೆಗಾಗಿ ಪರಿಣತರನ್ನು ಭೇಟಿ ಆಗಿ, ಚರ್ಚೆ ನಡೆಸಲಿದ್ದೀರಿ. ದೇಹದ ತೂಕದ ಬಗ್ಗೆ ಗಮನ ವಹಿಸಿ. ರುಚಿಕಟ್ಟಾದ ಊಟ- ತಿಂಡಿ ಸವಿಯುವಂಥ ಯೋಗ ಇದೆ. ಆದರೆ ಮಸಾಲೆಯುಕ್ತ ಪದಾರ್ಥಗಳಿಂದ ದೂರ ಇರಿ. ಸಾಕು ಪ್ರಾಣಿಗಳನ್ನು ಮನೆಗೆ ತರುವಂಥ ಯೋಗ ಇದೆ. ಈಗಾಗಲೇ ಅರ್ಧ ಮುಗಿದಿರುವ ಕೆಲಸ ಮೊದಲಿಂದ ಶುರು ಮಾಡಬೇಕಾಗಬಹುದು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಷೇರುಪೇಟೆ, ಡಿಜಿಟಲ್ ಸ್ವತ್ತುಗಳಲ್ಲಿ ಹೂಡಿಕೆ ಮಾಡಿದ್ದವರಿಗೆ ಉತ್ತಮ ರಿಟರ್ನ್ ದೊರೆಯಲಿದೆ. ಉಪನ್ಯಾಸಕರು, ಪ್ರಾಧ್ಯಾಪಕರು ಹೆಚ್ಚಿನ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾಗುತ್ತದೆ. ಡಿಜಿಟಲ್ ಪೇಮೆಂಟ್ ಬಳಸುವಂಥವರು ಸಂಖ್ಯೆಗಳನ್ನು ಸರಿಯಾಗಿ ಗಮನಿಸಿ. ತೀರ್ಥಕ್ಷೇತ್ರಗಳಿಗೆ ತೆರಳುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ವಾಹನಗಳನ್ನು ಓಡಿಸುವಾಗ ಏಕಾಗ್ರತೆಯಿಂದ ಚಲಾಯಿಸಿ. ಕುಟುಂಬದವರ ಜತೆಗೆ ಹೆಚ್ಚು ಸಮಯ ಕಳೆಯಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಸಿನಿಮಾ ರಂಗದಲ್ಲಿ ಇರುವವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಬಿಪಿಒ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುವವರು ಮೇಲಧಿಕಾರಿಗಳ ಜತೆಗೆ ಭಿನ್ನಾಭಿಪ್ರಾಯ ಎದುರಿಸಬೇಕಾಗುತ್ತದೆ. ನಿಮ್ಮದು ತಪ್ಪು ಎಂದು ದಾಖಲೆಯ ಸಮೇತ ಮುಂದಿಟ್ಟಲ್ಲಿ ವಿತಂಡ ವಾದವನ್ನು ಹೂಡದಿರಿ. ಈಗಿನ ಸಮಸ್ಯೆಯಿಂದ ಹೇಗೆ ಹೊರಗೆ ಬರಬೇಕು ಎಂದು ಆಲೋಚನೆ ಮಾಡಿ. ಚರ್ಮದ ಆರೋಗ್ಯದ ಬಗ್ಗೆ ನಿಗಾ ಮಾಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಈ ದಿನ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗುತ್ತದೆ. ಇಷ್ಟು ಸಮಯ ತೆಗೆದುಕೊಂಡ ನಿರ್ಧಾರವನ್ನು ಒಂದೊಂದಾಗಿ ಅಳೆದು- ತೂಗಿ ನೋಡುತ್ತೀರಿ. ವಿಮಾನದಲ್ಲಿ ಪ್ರಯಾಣ ಮಾಡಬೇಕಾದವರು ದಾಖಲೆಗಳನ್ನು ಸರಿಯಾಗಿ ಇರಿಸಿಕೊಂಡಿದ್ದೀರಾ ಎಂಬುದನ್ನು ಒಂದಕ್ಕೆ ಎರಡು ಬಾರಿ ಪರೀಕ್ಷಿಸಿಕೊಳ್ಳಿ. ಗಾರ್ಡನಿಂಗ್, ಹಾಡುಗಳನ್ನು ಕೇಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಇತರರನ್ನು ಒಂದೇ ಸಲಕ್ಕೆ ನಂಬಿಬಿಡುವುದು ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ ಎಂಬುದು ನೆನಪಿರಲಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ವ್ಯಾಪಾರ- ಉದ್ಯಮದಲ್ಲಿ ಇರುವವರಿಗೆ ಆದಾಯ ಮೂಲ ಹೆಚ್ಚು ಮಾಡಿಕೊಳ್ಳುವುದಕ್ಕೆ ದಾರಿ ಗೋಚರ ಆಗಲಿದೆ. ಈ ದಿನ ಯಾರನ್ನು ಭೇಟಿ ಆಗಬೇಕೋ ಸಮಯಕ್ಕೆ ಸರಿಯಾಗಿ ತೆರಳುವುದಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳಿ, ಇಲ್ಲದಿದ್ದಲ್ಲಿ ಅವಕಾಶ ಕಳೆದುಕೊಳ್ಳುವಂತಾಗುತ್ತದೆ. ಹೊಸ ಬಟ್ಟೆ, ವಸ್ತ್ರಾಭರಣಗಳನ್ನು ಖರೀದಿ ಮಾಡುವ ಯೋಗ ಇದೆ. ಕೃಷಿ ಭೂಮಿ ಖರೀದಿ ಮಾಡಬೇಕು ಎಂದಿರುವವರಿಗೆ ಹುಡುಕುತ್ತಿರುವ ರೀತಿಯಲ್ಲೇ ಭೂಮಿ ಸಿಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಬಹಳ ಸಮಯದಿಂದ ನಿರೀಕ್ಷೆ ಮಾಡುತ್ತಿರುವ ಸುದ್ದಿಯೊಂದು ಈ ದಿನ ಬರಲಿದೆ. ಮಕ್ಕಳ ಸಲುವಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಕಾಲು ನೋವಿನ ಸಮಸ್ಯೆ ಈಗಾಗಲೇ ಅನುಭವಿಸುತ್ತಿದ್ದಲ್ಲಿ ಅದು ಉಲ್ಬಣ ಆಗುವ ಸಾಧ್ಯತೆ ಇದೆ. ಈ ರೀತಿ ಆದಲ್ಲಿ ಕೂಡಲೇ ವೈದ್ಯರನ್ನು ಭೇಟಿ ಮಾಡಿ, ಸ್ವಯಂ ವೈದ್ಯ ಮಾಡಿಕೊಳ್ಳಬೇಡಿ. ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವವರು ಇಂದು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗ್ರತೆ ವಹಿಸಿ.

ಲೇಖನ- ಎನ್‌.ಕೆ.ಸ್ವಾತಿ