ದಿನ ಭವಿಷ್ಯ: ಇಂದು ಈ ರಾಶಿಯವರ ದಾಂಪತ್ಯದಲ್ಲಿ ಬಿರುಕು, ವಿಕೋಪಕ್ಕೆ ಹೋಗುವ ಸಾಧ್ಯತೆ
ಶಾಲಿವಾಹನ ಶಕ ವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಆಶ್ವಯುಜ ಮಾಸದ ಶುಕ್ಲ ಪಕ್ಷದ ಏಕಾದಶೀ ತಿಥಿಯ ಗುರುವಾರದಂದು ವಿದ್ಯಾಭ್ಯಾಸಕ್ಕೆ ಸಾಲ, ಪರರ ಮೆಚ್ಚುಗೆ, ಅನ್ಯರ ವಸ್ತುವಿನ ದುರುಪಯೋಗ, ಸಮಯ ಹೊಂದಿಕೆ, ದಾಖಲೆ ಸೃಷ್ಟಿ, ಮಾತಿನಲ್ಲಿ ಮರ್ಮ, ಇವೆಲ್ಲ ಇಂದಿನ ಭವಿಷ್ಯ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಆಶ್ವಯುಜ, ಸೌರ ಮಾಸ : ತುಲಾ, ಮಹಾನಕ್ಷತ್ರ : ಚಿತ್ರಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ವೃದ್ಧಿ, ಕರಣ : ಬವ, ಸೂರ್ಯೋದಯ – 06 – 11 am, ಸೂರ್ಯಾಸ್ತ – 05 – 55 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:32 – 15:00, ಯಮಗಂಡ ಕಾಲ 06:12 – 07:40, ಗುಳಿಕ ಕಾಲ 09:08 – 10:36.
ಮೇಷ ರಾಶಿ: ಸರಿ ಎನಿಸಿದರೆ ಒಪ್ಪಿ, ಇಲ್ಲವಾದರೆ ಮುನ್ನಡೆಯಿರಿ. ನಿಮ್ಮ ನಡವಳಿಕೆಯೇ ಸಮೀಪಕ್ಕೆ ಜನರು ಬರುವಂತೆ ಮಾಡಿದೆ. ನಿಮಗೆ ಇಂದು ನೀವು ಮಾಡುವ ಕೆಲಸದಲ್ಲಿ ತೃಪ್ತಿಯು ಸಿಗಲಿದೆ. ಸಂಗಾತಿಯ ಪ್ರೀತಿಯೂ ನಿಮಗೆ ಲಭ್ಯವಾಗುವುದು. ಅಬಾಧಿತ ಸತ್ಯವನ್ನು ಹೇಳುವುದು ಕಷ್ಟ. ಅಮೂಲ್ಯ ಸಂಪತ್ತನ್ನು ಪ್ರದರ್ಶಿಸುವುದು ಬೇಡ. ಗಂಭೀರ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳುವುವುದು ಬೇಡ. ಉದ್ಯೋಗಕ್ಕೆ ಸೇರಿ ನಿಮಗೆ ತೊಂದರೆಯಾಗಬಹುದು. ವಿದ್ಯಾರ್ಥಿಗಳು ಮನೆಗೆ ಗೊತ್ತಿಲ್ಲದೇ ಸಾಲ ಮಾಡುವರು.
ವೃಷಭ ರಾಶಿ: ಸಂಗಾತಿಯ ವಿಚಾರದಲ್ಲಿ ನಿಮಗೆ ಬೇಸರವಾಗಬಹುದು. ನೀವಾಡುವ ಮಾತುಗಳಿಗೆ ಕುಟುಂಬವು ಉತ್ತರಿಸಬೇಕಾದೀತು. ಕೆಲವು ತೀರ್ಮಾನಗಳನ್ನು ಅನಿವಾರ್ಯವಾಗಿ ತೆಗೆದುಕೊಳ್ಳಬೇಕಾಗುವುದು. ನೀವು ಇಂದು ನಿಮ್ಮ ಬಳಿ ಇರುವ ಸಂಪತ್ತನ್ನು ತೋರಿಸುವುದು ಬೇಡ. ಸ್ನೇಹಿತರಿಗಾಗಿ ಧನವು ನಷ್ಟವಾಗುವುದು. ಯಾರನ್ನೂ ಸಣ್ಣವರನ್ನಾಗಿ ತಿಳಿಯುವುದು ಬೇಡ. ಯಾರದೋ ಮೇಲಿನ ಭಯದಿಂದ ಗೌಪ್ಯ ವಿಚಾರವನ್ನು ಹೇಳುವಿರಿ.
ಮಿಥುನ ರಾಶಿ; ನಿಮ್ಮ ಆಲೋಚನೆಗಳಿಂದ ನಿಮಗೆ ಯೋಗ್ಯ ಸ್ಥಾನವು ಲಭಿಸುವುದು. ಆರ್ಥಿಕತೆಯ ಕಾರಣಕ್ಕಾಗಿ ನೀವು ಹೆಚ್ಚು ಆತಂಕ ಪಡುವಿರಿ. ಯಂತ್ರೋಪಕರಣಗಳ ದುರಸ್ತಿಯನ್ನು ಮಾಡಿಸುವಿರಿ. ದಾಯದಿದಗಳ ಕಲಹವೂ ನಿಮ್ಮ ಅನಾರೋಗ್ಯಕ್ಕೆ ಪೂರಕವಾಗಿರುವುದು. ಸ್ಮರಣಶಕ್ತಿಗೆ ಬಾಧೆಯುಂಟಾಗುವುದು. ನಿಮ್ಮ ಅರೋಗ್ಯ ಸಮಸ್ಯೆಯನ್ನು ಆಪ್ತರ ಜೊತೆ ಹೇಳಿಕೊಳ್ಳಿ. ನಿಮ್ಮದೇ ಆದ ಯೋಜನೆಯನ್ನು ಮೊದಲೇ ಸಿದ್ಧಪಡಿಸಿಕೊಳ್ಳಿ. ದಾಂಪತ್ಯದ ಸುಖದಲ್ಲಿ ಮಕ್ಕಳನ್ನು ಮರೆಯದಿರಿ.
ಕರ್ಕಾಟಕ ರಾಶಿ: ಎಲ್ಲ ಸಮಸ್ಯೆಗಳಿಗೂ ಒಂದೇ ರೀತಿಯ ಪರಿಹಾರವಿರದು. ದುರಭ್ಯಾಸದ ಕಾರಣದಿಂದ ಎಲ್ಲರ ಎದುರು ಮಾನವನ್ನು ಕಳೆದುಕೊಳ್ಳಬೇಡಿ. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದವು ಬರಬಹುದು. ನಿಮ್ಮ ನಿರುದ್ಯೋಗದ ಸಮಸ್ಯೆಯನ್ನು ಸರಿ ಮಾಡಿಕೊಳ್ಳುವಿರಿ. ವಿದ್ಯಾಭ್ಯಾಸದ ಬಗ್ಗೆ ನಿಮಗೆ ಬಹಳ ಆಸ್ಥೆಯು ಅಧಿಕವಾಗಿದ್ದು ಮಾರ್ಗವನ್ನು ನೀವು ನಿರೀಕ್ಷಿಸುವಿರಿ. ಯಾವುದನ್ನೂ ಅತಿಯಾಗಿ ಮಾಡಿಕೊಳ್ಳುವುದು ಬೇಡ.
ಸಿಂಹ ರಾಶಿ: ವಾಹನವನ್ನು ಚಲಿಸುವಾಗ ಯಾವದೇ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ಯಾರಾದರೂ ಬೇಡ ಎಂದು ಹೇಳಿದ ಕೆಲಸವನ್ನು ಹಠದಿಂದ ಅವರ ಮಾತನ್ನು ವಿರೋಧಿಸಿ ಮಾಡುವುದು ಬೇಡ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳುವಿರಿ. ಸಾಲವಾಗಿ ನೀಡಿದ ಹಣವನ್ನು ಹಿಂಪಡೆಯಲು ಕಷ್ಟವಾದೀತು. ಸಂಗಾತಿಯನ್ನು ನೀವು ಅಲಕ್ಷಿಸುವಿರಿ. ಹಣವನ್ನು ಗಳಿಸಬೇಕು ಎಂಬ ಹಂಬಲವು ಅಧಿಕವಾಗಿರುವುದು. ನಿಮ್ಮ ಮಾತು ನಡೆಯದ ಕಡೆ ಮೌನದಿಂದ ಇರುವುದು ಒಳ್ಳೆಯದು.
ಕನ್ಯಾ ರಾಶಿ: ನಿಮ್ಮ ಉದ್ಯಮದ ಮೇಲೆ ಯಾರದ್ದಾದರೂ ದೃಷ್ಟಿಯು ಬೀಳಲಿದೆ. ಸಮಾಜಮುಖೀ ಕಾರ್ಯಗಳನ್ನು ಯಾವದೇ ಫಲಾಪೇಕ್ಷೆ ಇಲ್ಲದೆ ಮಾಡುವಿರಿ. ತಲೆ ಗಟ್ಟಿ ಇದೆ ಎಂದು ಬಂಡೆಗೆ ಕುಟ್ಟಲಾಗದು. ನಿಮ್ಮ ತಾಳ್ಮೆಯು ಕಡಿಮೆ ಆದಂತೆ ತೋರುವುದು. ನಿಮ್ಮ ಗುಣಗಳನ್ನು ದುರುಪಯೋಗ ಮಾಡಿಕೊಳ್ಳಬಹುದು. ಸೋಮಾರಿತನವು ನಿಮ್ಮ ಶತ್ರುವಾಗಬಹುದು. ಸರ್ಕಾರಿ ಉದ್ಯೋಗಿಗಳ ಆದಾಯವು ಹೆಚ್ಚಾಗಲಿದೆ. ನಿರಾಧಾರವಾದ ನಿಮ್ಮ ದೂರು ಬಿದ್ದು ಹೋಗುವುದು.
ತುಲಾ ರಾಶಿ: ಸ್ಥಾನಮಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗವೇ ಸಾಕು ಎಂದು ಅನ್ನಿಸುವಷ್ಟು ಮಾನಸಿಕ ಸ್ಥಿತಿಯು ಬರಬಹುದು. ಹೊಸ ಮನೆಗೆ ಸ್ಥಳಾಂತರ ಮಾಡಿಕೊಳ್ಳುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಮನೆಯಲ್ಲಿ ಹಿರಿಯರಾದ ಕಾರಣ ನೀವು ಹೆಚ್ಚು ಬೈಗಳುಕ್ಕೆ ಸಿಲುಕುವಿರಿ. ಹಿರಿಯರ ಮಾತನ್ನು ನಿರ್ಲಕ್ಷಿಸದೇ ಪಾಲಿಸಿ. ಮೋಜಿನ ಹೆಚ್ಚಿನ ಸಮಯ ಕಳೆದುಹೋಗಲಿದೆ. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಕಳ್ಳರಿಂದ ಭೀತಿಯು ನಿಮಗೆ ಆಗುವುದು.
ವೃಶ್ಚಿಕ ರಾಶಿ: ಇಂದು ನೀವು ಬೇರೆಯವರ ಮುಖಾಂತರ ಪುಣ್ಯಸ್ಥಳಗಳಿಗೆ ಹೋಗಿಬರುವಿರಿ. ನೀವು ನೋಡಲಷ್ಟೇ ಸುಂದರವಗಿದ್ದರೆ ಸಾಲದು. ಕುಟುಂಬದಲ್ಲಿ ಪರಸ್ಪರ ಸಹಬಾಳ್ವೆಯು ಎದ್ದು ತೋರುವುದು. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿಯು ಇರುವುದು. ಹಣದ ಕಾರಣಕ್ಕೆ ವಂಚನೆಯಲ್ಲಿ ಬೀಳುವಿರಿ. ಕ್ರಯ ಹಾಗೂ ವಿಕ್ರಯಗಳ ವಿಚಾರದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನನುಕೂಕತೆ ಸೃಷ್ಟಿ.
ಧನು ರಾಶಿ; ಯಾವುದೂ ನೀವಂದುಕೊಂಡಷ್ಟು ಸುಲಭವಾಗಿ ಆಗದು ಎಂಬುದರ ಮನವರಿಕೆ ಆಗುವುದು. ಬೇರೆಯವರ ಮೇಲೆ ದೋಷಗಳ ಪಟ್ಟಿಯನ್ನೇ ಮಾಡುವಿರಿ. ನಿಮ್ಮ ಮಾತುಗಳೇ ನಿಮಗೆ ಪುನಃ ಬರಲಿದೆ. ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಮನೆಯ ಬಾಗಿಲಿಗೆ ಅಪರಿಚಿತರ ಹಾವಳಿ ಹೆಚ್ಚಾಗುವುದು. ರಕ್ಷಣೆಯ ಕ್ರಮವೂ ಗೊತ್ತಿರಲಿ. ಸುಲಭವೆಂದು ಕೆಲಸವು ಕಷ್ಟವೆನಿಸಬಹುದು. ನಿಮಗೆ ಬೇಕಾದವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುವಿರಿ.
ಮಕರ ರಾಶಿ: ಹರಿತವಾದ ಶಸ್ತ್ರಗಳಿಂದ ಘಾಸಿಯಾಗುವ ಸಾಧ್ಯತೆ ಇದೆ. ಪ್ರೇಮಕ್ಕೆ ಮಿತ್ರರಿಂದ ಸಹಕಾರವು ಸಿಗಲಿದೆ. ಸಹೋದ್ಯೋಗಿಗಳಿಂದಲೂ ಸಾಲಾವನ್ನು ಪಡೆಯಬೇಕಾಗಬಹುದು. ಸ್ನೇಹ ಸಂಬಂಧವನ್ನು ಹೆಚ್ಚು ಆಪ್ತವಾಗಸಿಕೊಳ್ಳುವಿರಿ. ನಿಮ್ಮ ಪರಿಶ್ರಮಕ್ಕೆ ಯೋಗ್ಯವಾದ ಗೌರವವು ಸಿಗಬಹುದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು.
ಕುಂಭ ರಾಶಿ: ಕಛೇರಿಯ ಕೆಲಸವು ನಿಮಗೆ ಸಾಕೆನಿಸಬಹುದು. ಸಮಾಧಾನದ ಚಿತ್ತವು ಅನೇಕ ಸಂಗತಿಗಳಿಗೆ ಪೂರಕವಾಗಲಿದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷಿಸುವುದು ಸೂಕ್ತವಲ್ಲ. ನಿಮ್ಮ ಬಲದ ಪ್ರದರ್ಶನವನ್ನು ಮಾಡಬೇಕಾದೀತು. ಕಾರ್ಯಸ್ಥಾನದಲ್ಲಿ ಯಾವುದೇ ಕಾರಣಕ್ಕೂ ಸಡಿಲಿಕೆ ಬೇಡ. ನಿಮ್ಮ ಗುರಿಯು ಬದಲಾಗಬಹುದು. ಆಲಸ್ಯವು ನಿಮ್ಮನ್ನು ಅನ್ಯ ಕಾರ್ಯಕ್ಕೆ ಪ್ರೇರಿಸುವುದು. ವೃತ್ತಿಶೀಲರು ತಮ್ಮನ್ನು ಅತಿಮಾನುಷರಂತೆ ತೋರ್ಪಡಿಸುವರು.
ಮೀನ ರಾಶಿ: ನೀವು ಇಂದು ಅಕಾರಣವಾಗಿ ಚಿಂತೆ ಮಾಡುವಿರಿ. ಉನ್ನತ ಶಿಕ್ಷಣಕ್ಕಾಗಿ ಮನೆಯಿಂದ ಹೊರಗೆ ಇರಬೇಕಾಗುವುದು. ನಿಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಸೃಷ್ಟಿಸುವರು. ಸೌಂದರ್ಯಕ್ಕೆ ಇಂದು ಬೆಲೆಕೊಡಲಿದ್ದೀರಿ. ನಿಮ್ಮಿಂದ ಉಪಕಾರವನ್ನು ಪಡೆದು ಶತ್ರಗಳಾಗುವರು. ಮಾತು ನೇರವಾಗಿದ್ದರೂ ಮೃದುವಾಗಿರಲಿ. ಏನೇ ರಾಜಕೀಯದ ದಾಳ ಬಿಟ್ಟರೂ ಹಿರಿತನದ ಆಧಾರದ ಮೇಲೆ ಅಧಿಕಾರ ಪ್ರಾಪ್ತಿಯಾಗುವುದು. ವ್ಯವಹಾರದಲ್ಲಿ ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ.
ಲೋಹಿತ್ ಹೆಬ್ಬಾರ್ – 8762924271 (what’s app only)
