AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಸಣ್ಣ ತಪ್ಪಿಗೆ ದೊಡ್ಡ ಶಿಕ್ಷೆ ಅನುಭವಿಸಬೇಕಾಗಬಹುದು

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಆಶ್ವಯುಜ ಮಾಸದ ಶುಕ್ಲ ಪಕ್ಷದ ದ್ವಾದಶೀ ತಿಥಿಯ ಶುಕ್ರವಾರದಂದು ಹೊಣೆಗಾರಿಕೆ, ದುರ್ಘಟನೆ, ಏಕಾಂತಕ್ಕೆ ಒತ್ತು, ನಿರರ್ಗಳತೆ, ದಾನ, ಅಧಿಕಾರಕ್ಕೆ ಸಮರ, ನೂತನ ನಿರ್ಮಾಣ, ದಾಂಪತ್ಯ ಕಲಹ, ಅಪಘಾತ ಭೀತಿ ಇವೆಲ್ಲ ಇಂದಿನ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರು ಸಣ್ಣ ತಪ್ಪಿಗೆ ದೊಡ್ಡ ಶಿಕ್ಷೆ ಅನುಭವಿಸಬೇಕಾಗಬಹುದು
ದಿನ ಭವಿಷ್ಯ Image Credit source: Getty images
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Oct 23, 2026 | 1:02 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಆಶ್ವಯುಜ, ಸೌರ ಮಾಸ : ತುಲಾ, ಮಹಾನಕ್ಷತ್ರ : ಚಿತ್ರಾ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಉತ್ರಾಭಾದ್ರ, ಯೋಗ : ಧ್ರುವ, ಕರಣ : ಕೌಲವ, ಸೂರ್ಯೋದಯ – 06 – 12 am, ಸೂರ್ಯಾಸ್ತ – 05 – 55 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:36 – 12:04, ಯಮಗಂಡ ಕಾಲ 15:00 – 16:28, ಗುಳಿಕ ಕಾಲ 07:40 – 09:08.

ಮೇಷ ರಾಶಿ: ನಿಮ್ಮ ಇಂದಿನ ಕೆಲಸಗಳು ಅಡೆತಡೆ ಇಲ್ಲದೇ ಸಾಗುವುದು. ವಾಹನ ಖರೀದಿಗೆ ಹಣವನ್ನು ಹೊಂದಿಸುವಿರಿ. ಅಪಘಾತ ಭೀತಿಯು ನಿಮ್ಮನ್ನು ಹೆಚ್ಚು ಕಾಡುವುದು. ಎಂತಹ ನಷ್ಟವನ್ನೂ ನೀವು ಆತ್ಮಸ್ಥೈರ್ಯದಿಂದ ಎದುರಿಸಬಲ್ಲಿರಿ. ನಿಮಗೆ ಸಂಬಂಧವಿಲ್ಲದೇ ಇರುವ ವಿಚಾರಕ್ಕೆ ಯೋಚಿಸುವಿರಿ. ಪರಿಚಿತರ ಬೆಳವಣಿಗೆಯನ್ನು ಸಹಿಸಲಾಗದು. ಮೇಲಧಿಕಾರಿಗಳ ಭೇಟಿಯಾಗವ ಸಾಧ್ಯತೆ ಇದೆ.

ವೃಷಭ ರಾಶಿ: ನೀವು ಸಾಲಗಾರರ ಕಾಟದಿಂದ ಮುಕ್ತರಾಗುವಿರಿ. ನಿಮ್ಮವರು ನಿಮ್ಮ ಕೆಲಸವನ್ನು ಸರಿಯಾಗಿ ಮಾಡಲು ಬಿಡರು. ನಿಮ್ಮ ಮಾತು ಇನ್ನೊಬ್ಬರಿಗೆ ಬೇಸರವನ್ನು ತರಿಸೀತು. ಮಕ್ಕಳ ವಿಚಾರದಲ್ಲಿ ನೀವು ಸಹಕಾರ ಕೊಡುವಿರಿ. ನಿಮ್ಮನ್ನು ನಿಮಗಿಂತ‌ ಮೇಲಿನವರು ಪರೀಕ್ಷಿಸಬಹುದು. ಏಕಾಂತಕ್ಕೆ ನೀವು ಹೆಚ್ಚಿನ ಒತ್ತನ್ನು ಕೊಡುವಿರಿ. ಸಹೋದರರ ನಡುಯವೆ ವಾಗ್ವಾದವು ಆಗಬಹುದು. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು.

ಮಿಥುನ ರಾಶಿ: ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಿ ಅವುಗಳನ್ನು ಸರಿಮಾಡಿಕೊಳ್ಳುವಿರಿ. ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳಿ. ಬಹಳ ಜಾಣ್ಮೆಯಿಂದ ಕಾರ್ಯವನ್ನು ಸಾಧಿಸುವಿರಿ. ನಿರೀಕ್ಷಿತ ಸ್ಥಾನವನ್ನು ನೀವು ಪಡೆದುಕೊಳ್ಳುವಿರಿ. ನಿಮಗೆ ಇಷ್ಟವಾದ ಸ್ಥಳಗಳಿಗೆ ಹೋಗುವಿರಿ. ಬೇಡದ ಮಾತುಕತೆಯಲ್ಲಿ ಇಂದಿನ‌ ದಿನ‌ವು ಕಳೆಯುವುದು.‌ ನಿಮ್ಮದೇ ವಸ್ತುವಾದರೂ ನಿಮಗೆ ಬೇಕಾದ ಸಮಯಕ್ಕೆ ಲಭ್ಯವಾಗದು ಕಛೇರಿಯಲ್ಲಿ ಒತ್ತಡವಿರಲಿದ್ದು ಎಲ್ಲರನ್ನೂ ನೀವು ದೂರುವಿರಿ.

ಕರ್ಕಾಟಕ ರಾಶಿ: ಸಹೋದರಿಯ ಸಹಾಯವು ನಿಮಗೆ ಸಿಗಲಿದ್ದು ನಿಮ್ಮ‌ ಜವಾಬ್ದಾರಿಯೂ ಹೆಚ್ಚಾಗಲಿದೆ. ಭೂಮಿಯ ವ್ಯವಹಾರವು ಸುಗಮವಾಗಿ ಸಾಗುವುದು. ಆರ್ಥಿಕ ಸಮಸ್ಯೆಯನ್ನು ನೀವು ದೂರ ಮಾಡಿಕೊಳ್ಳುವಿರಿ. ಬೆಚ್ಚಗಿನ ವಾತಾವರಣದಿಂದ ಹೊರಬಂದಾಗಲೇ ಗೊತ್ತಾಗುವುದು. ಶುಭವಾರ್ತೆಯ ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ನಿಮ್ಮವರ ಕಷ್ಟಗಳ ಮುಂದೆ ನಿಮ್ಮ ಕಷ್ಟ ಅಲದಪವೆನಿಸಬಹುದು. ನಿಮಗೆ ರೋಗಗಳು ಹೋದಂತೆ ಅನಿಸಬಹುದು.

ಸಿಂಹ ರಾಶಿ: ನೀವು ಮನೆಯವರ ಬಗೆಗಿನ ಅಪವಾದಗಳನ್ನು ಕೇಳುವ ಸ್ಥಿತಿ ಬರಬಹುದು. ವಾಸಸ್ಥಳದ ಬದಲಾವಣೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರಬಹುದು. ಎಲ್ಲ ಸಂದರ್ಭದಲ್ಲಿಯೂ ನಿಮ್ಮ ಮಾತೇ ನಡೆಯುತ್ತದೆ ಎಂದು ಇಟ್ಟುಕೊಳ್ಳಬಾರದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ಮುಖಂಡರು ಬಹಳ ನಾಜೂಕಿನಿಂದ ಮುಂದುವರಿಯಬೇಕು.

ಕನ್ಯಾ ರಾಶಿ: ಸಂಗಾತಿಗೆ ನಿಮ್ಮ ಕಾರಣದಿಂದ ಉತ್ತಮ ಕೆಲಸವು ಸಿಗಲಿದೆ. ಕಛೇರಿಯಲ್ಲಿ ನೀವು ಪ್ರಶಂಸೆಗೆ ಪಾತ್ರರಾಗುವಿರಿ. ಕೆಟ್ಟ ಆಲೋಚನೆಗಳು ಬಂದರೂ ಅದನ್ನು ದೂರ ಮಾಡಿಕೊಳ್ಳುವ ತಂತ್ರವನ್ನು ನೀವು ತಿಲಕಿದಿರುವಿರಿ. ಸಾಮಾಜಿಕ ಸೇವಾಕಾರ್ಯದಲ್ಲಿ ಭಾಗಿಯಾಗುವಿರಿ. ನಿಮ್ಮನ್ನು ಯಶಸ್ಸನ್ನು ಕಂಡು ಅದನ್ನು ನಿಯಂತ್ರಿಸಲು ಸಹೋದ್ಯೋಗಿಗಳು ಮೇಲಧಿಕಾರಿಗೆ ದೂರನ್ನು ಕೊಡಬಹುದು. ಸ್ನೇಹಿತರ ಜೊತೆ ಹರಟೆಯಲ್ಲಿ ಕಾಲಕಳೆಯುವಿರಿ.

ತುಲಾ ರಾಶಿ: ನಿಮಗೆ ನಿಮ್ಮವರುಲೇ ಬಯಸದೇ ಇದ್ದರೂ ಸಹಾಯ ಮಾಡುವವರಿದ್ದಾರೆ. ಮನಸ್ಸಿನಲ್ಲಿ ಹತಾಶೆ, ಗೊಂದಲ, ಸಿಟ್ಟು ಎಲ್ಲವೂ ಕೂಡಿಕೊಂಡು ಯಾವುದನ್ನೂ ಮಾಡಲಾಗದ ಸ್ಥಿತಿಯು ನಿಮ್ಮದಾಗಲಿದೆ. ಅನ್ಯಾಯಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನಿಮ್ಮದಲ್ಲದ ಕೆಲಸಕ್ಕೂ ನೀವೇ ಜವಾಬ್ದಾರರಾಗಬೇಕಾಗಬಹುದು. ಸುಮ್ಮನೇ ಕುಳಿತರೇ ಹತ್ತಾರು ಆಲೋಚನೆಗಳು ಇನ್ನಷ್ಟು ನಿಮ್ಮ ಮನಸ್ಸನ್ನು ದುರ್ಬಲಗೊಳಿಸುವುದು.

ವೃಶ್ಚಿಕ ರಾಶಿ: ನಿಮ್ಮ ಜೊತೆಗಾರರ ನಿಧಾನಗತಿಯ ಕೆಲಸವು ನಿಮ್ಮ ಮನಃಸ್ಥಿತಿಗೆ ಹೊಂದದಿರಬಹುದು. ಸಾಲದಿಂದ ನೀವು ತಲೆ ಮರೆಸಿಕೊಳ್ಳುವ ಸ್ಥಿತಿಯೂ ಬರಬಹುದು.‌ ಅದಕ್ಕೆ ಬೇಕಾದ ಸಿದ್ಧತೆಯನ್ನು ಇಂದೇ ಮಾಡಿಕೊಳ್ಳುವುದು ಉತ್ತಮ. ಸ್ಥಿರಾಸ್ತಿಯನ್ನು ನಿಮ್ಮದಾಗಿಸಿಕೊಳ್ಳಲು ಸಾಹಸಮಾಡಬೇಕಾದೀತು. ನೀವು ಜಾಣ್ಮೆಯಿಂದ ತಪ್ಪನ್ನು ಸರಿ ಮಾಡಿಕೊಳ್ಳಿ. ಅನಾರೋಗ್ಯದಿಂದ ನಿಮಗೆ ಉತ್ಸಾಹ ಕಡಿಮೆಯಾಗುವುದು. ಎಲ್ಲವೂ ತಾನಾಗಿಯೇ ತಿಳಿದು ಬರುತ್ತದೆ. ದೂರದ ಬಂಧುಗಳ ಭೇಟಿಯ ನಿರೀಕ್ಷೆಯಲ್ಲಿ ಇರುವಿರಿ.

ಧನು ರಾಶಿ: ನೀವು ಹಾಕಿಕೊಂಡ ಯೋಜನೆಗೆ ಕುಟುಂಬದ ಸಹಾಯವು ಲಭ್ಯವಾಗಲಿದೆ. ವಿದ್ಯಾರ್ಥಿಗಳ ಪ್ರಗತಿಯ ವಿಷಯವು ಮಂದಗತಿಯಲ್ಲಿಯೇ ಇರುವುದು. ಸಕಾರಾತ್ಮಕ ಚಿಂತನೆಯನ್ನೇ ಮಾಡಿಕೊಳ್ಳಿ. ನಂಬಿಕೆಯನ್ನು ಉಳಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಕಷ್ಟವಾದೀತು. ಕಾರ್ಯದ ಸ್ಥಳದಲ್ಲಿ ಅಪವಾದ ಬರಬಹುದು. ಕಛೇರಿಯಲ್ಲಿ ನಿಮಗೆ ಆಗದವರ ಸಂಗವು ನಿರ್ಮಾಣವಾಗಲಿದೆ. ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳಬೇಕಾದೀತು.

ಮಕರ ರಾಶಿ: ನಿಮ್ಮ ಕುಶಲ ಕಾರ್ಯಗಳು ಇತರರಿಗೂ ಗೊತ್ತಾದೀತು. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ನಿಮ್ಮ ಕಡೆಯಿಂದ ಅಮೂಲ್ಯವಾದ ಕೊಡುಗೆ ಕೊಡುವಿರಿ. ನಿಮ್ಮ ಸಭ್ಯತೆಯನ್ನು ಇತರರು ಬಳಸಿಕೊಳ್ಳುವರು. ಸಂಗಾತಿಯ ಜೊತೆ ಸಂತೋಷದಿಂದ ಇರಲು ಆಗದು. ಸಂಪತ್ತಿನ ಉಳಿತಾಯದ ಮಾರ್ಗವನ್ನು ನೀವು ಕಂಡುಕೊಳ್ಳುವಿರಿ. ನಿಮಗೆ ಸಿಗದೇ ಇರುವ ಜವಾಬ್ದಾರಿಯ ಬಗ್ಗೆ ನಿಮಗೆ ಸ್ವಲ್ಪ ಅಸಮಾಧನ ಇರಬಹುದು. ಅಪರಿಚಿತರು ನಿಮ್ಮನ್ನು ಹಳಿಯಬಹುದು.

ಕುಂಭ ರಾಶಿ: ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಇರಲಿದೆ. ಬರುವ ಅಲ್ಪ ಆದಾಯವನ್ನು ನೀವು ರಕ್ಷಿಸಿಕೊಳ್ಳಲು ಪ್ರಯತ್ನಿಸುವಿರಿ. ಕುಟುಂಬಕ್ಕೆ ನಿಮ್ಮ ಮೇಲೆ ಪ್ರೀತಿಯು ಅಧಿಕವಾಗಲಿದೆ. ಓಡಾಟದಿಂದ ಆಯಾಸಗೊಳ್ಳುವಿರಿ. ಬಂಧುಗಳಿಂದ ಸಲ್ಲದ ಮಾತುಗಳು ಕೇಳಿಬರಬಹುದು. ಆಸ್ತಿಯ ವಿಚಾರದಲ್ಲಿ ವಾದಗಳು ಆಗಬಹುದು. ಆಲಸ್ಯದಿಂದ ನಿಮ್ಮ ಎಲ್ಲ ಕೆಲಸಗಳೂ ಹಾಗೆಯೇ ಉಳಿಯಬಹುದು. ಯಾವುದನ್ನೂ ನೀವು ಅತಿಯಾಗಿ ಇಷ್ಟಪಡದೇ ಇರುವುದು ಉತ್ತಮ.

ಮೀನ ರಾಶಿ: ನಿಮ್ಮ ಸ್ವಂತ ಉದ್ಯಮದಲ್ಲಿ ನಿಮಗೆ ಲಾಭವಿದೆ. ಸಾಮಾಜಿಕ ಕಾರ್ಯಗಳು ನಿಮಗೆ ಪ್ರಶಂಸೆಯನ್ನು ತಂದುಕೊಡುವುದು. ಅಂದುಕೊಂಡ ಕಾರ್ಯವು ಪೂರ್ಣವಾಗಿ ಆಗುವುದಿಲ್ಲ. ಮಾತುಗಳನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ಎಂದೋ ಆಗುವ ತೊಂದರೆಯನ್ನು ಇಂದು ನೆನೆಯುವುದು ಬೇಡ. ಸಂಪತ್ತಿನ‌ ನಿರ್ವಹಣೆಯನ್ನು ಮಾಡಲು ನೀವು ಸಮರ್ಥರಾಗುವಿರಿ. ನಿಮ್ಮನ್ನು ನೇರವಾಗಿ ಕೇಳಿದ್ದಕ್ಕೆ ಮಾತ್ರ ಉತ್ತರಿಸುವುದು ಒಳ್ಳೆಯದು.

ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ