Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ಹಳೆಯ ಯೋಜನೆಗಳನ್ನು ಇಂದು ಕಾರ್ಯಕ್ಕೆ ತರುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ, ಮಂಗಳವಾರ ಉಪಕರಣದಿಂದ ತೊಂದರೆ, ಪ್ರಿತಿಯ ಹದ ತಪ್ಪುವುದು, ಗೆಲವುವಿಗೆ ಸಂಭ್ರಮ, ಅತಿಥಿ ಸತ್ಕಾರ ಇವೆಲ್ಲ ಇರುವುದು ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಈ ರಾಶಿಯವರು ಹಳೆಯ ಯೋಜನೆಗಳನ್ನು ಇಂದು ಕಾರ್ಯಕ್ಕೆ ತರುವರು
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 01, 2025 | 1:05 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಭರಣೀ, ಯೋಗ : ವಿಷ್ಕಂಭ, ಕರಣ : ಕೌಲವ, ಸೂರ್ಯೋದಯ – 06 – ,29 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:40 – 17:12, ಯಮಘಂಡ ಕಾಲ 09:33 – 11:05, ಗುಳಿಕ ಕಾಲ 12:37 – 14:08

ಮೇಷ ರಾಶಿ: ನಿಮ್ಮ ಅನುಕಂಪದಿಂದ ಇನ್ನೊಬ್ಬರಿಗೆ ದಕ್ಕಿಸಿಕೊಳ್ಳಲಾಗದು. ಭೂಮಿಯ ಖರೀದಿಯಿಂದ ನಿಮ್ಮ ಓಡಾಟ ಹೆಚ್ಚಾಗುವುದು. ಅದಕ್ಕೆ ಸಂಬಂಧಿಸಿದ ವಿವಾದಗಳು ಬಗೆಹರಿಯುತ್ತವೆ. ನಿಮ್ಮ ಆತ್ಮವಿಶ್ವಾಸದಿಂದ ಆಗಬೇಕಾದ ಕಾರ್ಯವನ್ನು ಸಾಧಿಸಿಕೊಳ್ಳಬಹುದು.‌ ಹಳೆಯ ಯೋಜನೆಗಳನ್ನು ಇಂದು ಕಾರ್ಯಕ್ಕೆ ತರುವಿರಿ. ವಿದೇಶ ಪ್ರವಾಸವು ನಿಶ್ಚಯವಾಗಲಿದೆ. ನಿಷ್ಠುರವಾಗಿ ವರ್ತಿಸುವುದು ಅವಶ್ಯಕವಾಗಿದೆ. ನಿಮ್ಮವರನ್ನು ಭಿನ್ನಾಭಿಪ್ರಾಯ ಬರದಂತೆ ಇಟ್ಟುಕೊಳ್ಳುವುದೂ ನಿಮ್ಮ ಮುಖ್ಯ. ನೀವು ಕೆಲವು ಪ್ರಮುಖ ವಿಷಯಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಸ್ತ್ರೀಯರು ನಿಮ್ಮ ಮೇಲೆ ಏನಾದರೂ ಆರೋಪ ಮಾಡಿಯಾರು. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ಮಾನಸಿಕ ನೋವಿನಿಂದ ಹೊರಬರಲು ನಿಮಗೆ ಕಷ್ಟವಾದೀತು. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ನಿಮ್ಮ ಮನಸ್ಸು ಬಹಳ ದುರ್ಬಲವಾಗಿದ್ದು ಬಲಮಾಡಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿ.

ವೃಷಭ ರಾಶಿ: ಮಾಡಬೇಕಾದ ಮುಖ್ಯ ಕಾರ್ಯವು ನೆನಪಾಗದೇ ಇರಬಹುದು. ನಿಮ್ಮ ಕೆಲಸದಲ್ಲಿ ಇನ್ನೊಬ್ಬರಿಗೆ ಪ್ರವೇಶವನ್ನು ಕೊಡುವುದು ಬೇಡ. ಶುಭ ಕಾರ್ಯಗಳು ಅನುಕೂಲಕರವಾಗಿರುತ್ತವೆ. ಯಾವುದೋ ಕಾರಣಕ್ಕೆ ಮಾಡಿದ ಪ್ರಯಾಣ ಇನ್ನಾವುದೋ ವಿಚಾರಕ್ಕೆ ಅನುಕೂಲವಾಗಿರುವುದು. ಉತ್ತಮ ಫಲಿತಾಂಶಗಳನ್ನು ಪರೀಕ್ಷೆಯಲ್ಲಿ ಪಡೆಯುತ್ತೀರಿ. ವ್ಯವಹಾರದಲ್ಲಿ ಒಂದು ಹೆಜ್ಜೆ ಮುಂದಿಡು ಧೈರ್ಯ ಮಾಡುವಿರಿ. ಆರ್ಥಿಕ‌ ಸ್ಥಿತಿಯನ್ನು ಯಾರ ಜೊತೆಗೂ ಹಂಚಿಕೊಳ್ಳಲಾರಿರಿ. ಕಾನೂನಿನ ನಿಯಮಗಳನ್ನು ಉಲ್ಲಂಘನೆ ಮಾಡುವುದು ಬೇಡ. ಸ್ತ್ರೀಯರನ್ನು ಲಾಭದಾಯಕ ವ್ಯವಹಾರಕ್ಕೆ ಯೋಜಿಸುವಿರಿ. ಇಂದಿನ‌ ಸ್ನೇಹಿತರ ಭೇಟಿಯಿಂದ ನಿಮ್ಮಲ್ಲಿ‌ ಉತ್ಸಾಹವನ್ನು ಜಾಗರೂಕಗೊಳಿಸುವುದು. ಕಛೇರಿಯಲ್ಲಿ ನಿಮ್ಮ ಶ್ರಮವು ಲೆಕ್ಕಕ್ಕೆ ಬಾರದೇ ಹೋದೀತು. ಶ್ರಮಕ್ಕೆ ಫಲವನ್ನು ನಿರೀಕ್ಷಿಸುತ್ತ‌ ಸಮಯವನ್ನು ವ್ಯರ್ಥ ಮಾಡುವಿರಿ. ಮಾತಿನಲ್ಲಿ ಮಾರ್ದವವು ಇಲ್ಲವಾಗುವುದು. ಅತಿಯಾದ ಭಾರದ ವಸ್ತುಗಳನ್ನು ಒಯ್ಯುವಿರಿ. ನಿಮ್ಮ ಚೌಕಟ್ಟನ್ನು ಮೀರಿ ವರ್ತಿಸದೇ ಇರುವುದು ಒಳಿತು.

ಮಿಥುನ ರಾಶಿ: ವ್ಯಾಪಾರದಲ್ಲಿ ನೀವು ಸುಲಭವಾಗಿ ಪ್ರಗತಿಯನ್ನು ಕಾಣುವಿರಿ. ನೀವು ಕೊಟ್ಟ ಆಶ್ವಾಸನೆಯನ್ನು ವೇಗವಾಗಿ ಪೂರೈಸಲು ಸಾಧ್ಯವಾಗುತ್ತದೆ. ಸರ್ಕಾರಿ ಕೆಲಸಗಳಿಗೆ ಖರ್ಚು ಬೇಡವೆನಿಸುವುದು. ಆರ್ಥಿಕವಾಗಿ ಆದ ಬೆಳವಣಿಗೆ ತೃಪ್ತಿ ನೀಡುವುದು. ಪ್ರಯೋಜನವಾಗದ ವಿವಾದಗಳಿಂದ ಸುಮ್ಮನಿರುವಿರಿ. ಅಧ್ಯಾತ್ಮಿಕಕ್ಕೆ ಹೆಚ್ಚು ಒತ್ತುಕೊಡುವಿರಿ. ಭೂ ಮಾರಾಟದಿಂದ ಲಾಭಪ್ರದ. ನಿಮ್ಮ ಕೆಲವು ವಿರೋಧಿಗಳು ನಿಮಗೆ ತೊಂದರೆ ಕೊಡಲು ಪ್ರಯತ್ನಿಸಬಹುದು. ನಿಮ್ಮ ಜಾಣ್ಮೆಯಿಂದ ನೀವು ಸುಲಭವಾಗಿ ಏನನ್ನಾದರೂ ಸಾಧಿಸುವಿರಿ. ದೇಹಾರೋಗ್ಯವು ಸರಿಯಾಗಿ ಇಲ್ಲದ ಕಾರಣ ಮನಸ್ಸು ಸರಿಯಾಗಿ ಕೆಲಸ ಮಾಡದು. ಉದ್ಯೋಗದ ಕಾರಣದಿಂದ ಬೇರೆ ಕಡೆ ಇದ್ದರೂ ಮನೆಯ ನೆನಪು ಕಾಡುವುದು. ನಿಮ್ಮ ನಡತೆ ಇತರರಿಗೆ ಇಷ್ಟವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಓದು ಹೆಚ್ಚು ಸಿದ್ಧಿಸುವುದು.

ಕರ್ಕಾಟಕ ರಾಶಿ: ನಿಮಗೆ ಇತರರ ಹಿತಾಸಕ್ತಿಯ‌ ಬಗ್ಗೆ ಗಮನವಿರಲಿದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ಗೌರವವನ್ನು ಪಡೆಯುವರು. ಹೊಸ ಉದ್ಯೋಗಕ್ಕೆ ಸಂಬಂಧಿಸಿದ ಪ್ರಯತ್ನಗಳು ಫಲಿಸುವುದು. ಆರೋಗ್ಯದಲ್ಲಿ ಸ್ಥಿರತೆ ಇರಲಿದೆ. ಹಿರಿಯರ ಮಾತನ್ನು ಪಾಲಿಸುವುದು ಅವಶ್ಯಕ. ಒಳ್ಳೆಯ ಕಾರ್ಯಗಳಿಗೆ ಪ್ರಯತ್ನ ಮುಂದುವರಿಯಲಿ. ವಿವಾಹದ ಮಾತುಕತೆಗೆ ಸಂಬಂಧಿಕರ ಮತ್ತು ಸ್ನೇಹಿತರ ಬೆಂಬಲವಿರಲಿದೆ. ನೀವು ಅವಕಾಶಗಳತ್ತ ಗಮನ ಹರಿಸಬೇಕು. ಮಕ್ಕಳ ವಿಚಾರದಲ್ಲಿ ನಿಮಗೆ ಸಮಾಧಾನವು ಸಿಗದೇ ಇರಬಹುದು. ತಮ್ಮ ಶಿಕ್ಷಣವನ್ನು ಪಡೆಯಲು ವಿದೇಶಕ್ಕೆ ಹೋಗಲು ಬಯಸುವರು ವಿದ್ಯಾರ್ಥಿಗಳು. ಸಮಯೋಚಿತ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮ್ಮ ಕೆಲಸವಾಗಲಿದೆ. ಕೆಟ್ಟವರ ಸಹವಾಸ ಸಿಗುವ ಸಾಧ್ಯತೆ ಇದೆ. ಬೇಡವೆಂದರೂ ಕೆಟ್ಟವರ ಸಹವಾಸವೇ ಸಿಗುವುದು. ನಂಬಿಕೆಯನ್ನು ಕಳೆದುಕೊಳ್ಳಬಹುದು. ನಿಮಗೆ ಸಂಬಂಧಿಸದ ವಿಚಾರದಲದಲಿ ಹೆಚ್ಚು ಮಾತನಾಡುವಿರಿ.

ಸಿಂಹ ರಾಶಿ: ನಿಮ್ಮ ಕೆಲವು ಪ್ರಮುಖ ಕೆಲಸವನ್ನು ನಿರ್ವಹಣೆ ಮಾಡಲಾಗದೇ ಕೈ ಬಿಡುವಿರಿ. ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ದೊರೆತು ಹರ್ಷವಾಗುತ್ತದೆ. ದೀರ್ಘ ಪ್ರಯಾಣಗಳನ್ನು ಮುಂದೂಡದೇ ಮಾಡುವಿರಿ. ವಿದ್ಯಾರ್ಥಿಗಳು ತಮ್ಮ ವಿಶೇಷ ವಿಚಾರದ ಅಧ್ಯಯನದತ್ತ ಗಮನ ಹರಿಸುವಿರಿ. ಬೇಡವೆಂದರೂ ಸಹಾಯವನ್ನು ಕೇಳಿ ನಿಮ್ಮ ಬಳಿಬರಬಹುದು. ನೀವು ಇಂದು ನಿಮ್ಮ ಶಕ್ತಿಯನ್ನು ಒಳ್ಳೆಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಸರ್ಕಾರಿ ಕೆಲಸದಲ್ಲಿ ಬಡ್ತಿಯಿಂದಾಗಿ ಸ್ಥಳದಿಂದ ಸ್ಥಳಕ್ಕೆ ಹೋಗಬೇಕಾಗಬಹುದು. ಮನೆಯಲ್ಲಿ ಬಂಧುಗಳ ಸಮಾಗಮದಿಂದ ಸಂತೋಷವಾಗುವುದು. ದಿನ ಮಾನಸಿಕ ಒತ್ತಡದಿಂದ ನೀವು ಹೊರಬರಲು ಕಷ್ಟವಾದೀತು. ಮನೋರಂಜನೆಯಲ್ಲಿ ನೀವು ಪಾಲ್ಗೊಳ್ಳುವಿರಿ. ಖರ್ಚಿನ ಮೇಲೆ‌‌ ನಿಯಂತ್ರಣ ಸಾಧಿಸಬೇಕೆಂದಿದ್ದರೂ ಮತ್ತೆಲ್ಲೋ ಹರಿದು ಹೋಗುವುದು. ಅನವಶ್ಯಕ ಮಾತುಗಳನ್ನು ನಿಲ್ಲಿಸಿ. ವೈವಾಹಿಕ ಜೀವನದ ಸುಖವು ಸಪ್ಪೆ ಎನಿಸಬಹುದು. ಭೂಮಿಯ ವ್ಯವಹಾರಕ್ಕೆ ತಿಳಿವಳಿಕೆಯ ಕೊರತೆಯಿಂದ ಯಾರ ಜೊತೆಗಾದರೂ ಸೇರಿ.

ಕನ್ಯಾ ರಾಶಿ: ನೀವು ದಿನಚರಿಯನ್ನು ಅನಿವಾರ್ಯವಾಗಿ ಬದಲಾಯಿಸಿದರೆ, ಅದು ನಿಮಗೆ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ವೃತ್ತಿಯ ಜೊತೆಗೆ ಅರೆಕಾಲಿಕ ಕೆಲಸವನ್ನು ಮಾಡಲು ಸಹ ನೀವು ಯೋಜಿಸಬಹುದು. ಕಾನೂನು ಸಮಸ್ಯೆಗಳು ಬಗೆಹರಿಯಲಿವೆ. ಎಚ್ಚರಿಕೆಯಿಂದ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕುಟುಂಬದ ವಾತಾವರಣದಿಂದ ನೀವು ಉತ್ತೇಜನಗೊಳ್ಳುವಿರಿ. ಇತರರಿಗೆ ಸಹಾಯ ಮಾಡುವ ಮನಸ್ಥಿತಿ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಧೈರ್ಯವನ್ನು ಬೆಳೆಸಿಕೊಳ್ಳಿ. ನೀವು ಯಾವುದೇ ದೊಡ್ಡ ಗುರಿಯನ್ನು ಸಾಧಿಸಬಹುದು. ಜಾಣತನವು ಇಂದು ನಿಮ್ಮ ಉಪಯೋಗಕ್ಕೆ ಬರುವುದು. ಸ್ತ್ರೀಯರು ತಮಗೆ ಬೇಕಾದುದನ್ನು ಬಹಳ ನಾಜೂಕಿನಿಂದ ಮಾಡಿಸಿಕೊಳ್ಳುವರು. ಸಾರ್ವಜನಿಕ ಕ್ಷೇತ್ರದಲ್ಲಿ ಇಂದು ಹೆಚ್ಚು ಕಾಣಿಸಿಕೊಳ್ಳುವಿರಿ. ವ್ಯಾಪರದಲ್ಲಿ ಗ್ರಾಹಕರ ಜೊತೆ ಕಲಹವಾಗುವ ಸಾಧ್ಯತೆ ಇದೆ. ಅತಿಯಾದ ಪ್ರೀತಿಯಿಂದ ನಿಮಗೇ ತೊಂದರೆಯಾಗುವುದು. ಹಣದ ಸಂಪಾದನೆಗೆ ವಿವಿಧ ಮಾರ್ಗಗಳು ಇದ್ದರೂ ಅದಾವುದೂ ನಿಮಗೆ ಸರಿ ಕಾಣಿಸದು.

ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ