Horoscope 01 Feb: ದಿನಭವಿಷ್ಯ; ಬೇಡವೆಂದರೂ ಕೆಟ್ಟವರ ಸಹವಾಸವೇ ಸಿಗುವುದು, ನಂಬಿಕೆಯನ್ನು ಕಳೆದುಕೊಳ್ಳಬಹುದು
ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ (ಫೆಬ್ರವರಿ 01) ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 30 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:12 ರಿಂದ 03:38ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:02 ರಿಂದ 08:ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ.
ಮೇಷ ರಾಶಿ : ನೀವು ತೋರಿಸುವ ಅನುಕಂಪವು ಇನ್ನೊಬ್ಬರಿಗೆ ಅರಗಿಸಿಕೊಳ್ಳಲು ಕಷ್ಟವಾದೀತು. ಭೂಮಿ ಖರೀದಿಸುವ ನಿಮ್ಮ ಕೆಲಸವು ಹೆಚ್ಚಾಗಬಹುದು. ಕುಟುಂಬದ ಸದಸ್ಯರಿಗಾಗಿಯೂ ನೀವು ಸ್ವಲ್ಪ ಸಮಯವನ್ನು ಮೀಸಲಿಡಬೇಕು. ನಿಮ್ಮವರನ್ನು ಚೆನ್ನಾಗಿ ಇಟ್ಟುಕೊಳ್ಳುವುದೂ ನಿಮ್ಮ ಮುಖ್ಯ ಕೆಲಸವಾಗಬಹುದು. ನೀವು ಕೆಲವು ಪ್ರಮುಖ ವಿಷಯಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಸ್ತ್ರೀಯರು ನಿಮ್ಮ ಮೇಲೆ ಏನಾದರೂ ಆರೋಪ ಮಾಡಿಯಾರು. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ನೋವಿನಿಂದ ಹೊರಬರಲು ನಿಮಗೆ ಕಷ್ಟವಾದೀತು. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ. ನಿಮ್ಮ ಮನಸ್ಸು ಬಹಳ ದುರ್ಬಲವಾಗಿದ್ದು ಬಲಮಾಡಿಕೊಳ್ಳು ಮಾರ್ಗವನ್ನು ಕಂಡುಕೊಳ್ಳಿ. ಮಾತಿನಲ್ಲಿ ಕುಚೋದ್ಯ ಮಾಡುವುದನ್ನು ಕಡಿಮೆ ಮಾಡಿ.
ವೃಷಭ ರಾಶಿ : ನೀವು ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳುವುದು ಕಷ್ಟವಾಗಬಹುದು. ನಿಮ್ಮ ಕೆಲಸದಲ್ಲಿ ಇನ್ನೊಬ್ಬರಿಗೆ ಪ್ರವೇಶವನ್ನು ಕೊಡುವುದು ಬೇಡ. ಹಣಕಾಸಿನ ಪರಿಸ್ಥಿತಿಯನ್ನು ನೆನೆದು ಚಿಂತಿತರಾಗಬಹುದು. ಆರ್ಥಿಕಸ್ಥಿತಿಯನ್ನು ಯಾರೊಂದಿಗೂ ಹಂಚಿಕೆ ಮಾಡಿಕೊಳ್ಳುವುದು ಬೇಡ. ಸರ್ಕಾರಿ ನಿಯಮಗಳ ಉಲ್ಲಂಘನೆ ಬೇಡ. ಸ್ತ್ರೀಯರಿಂದ ಲಾಭವನ್ನು ಪಡೆಯುವಿರಿ. ಇಂದಿನ ಸ್ನೇಹಿತರ ಭೇಟಿಯಿಂದ ನಿಮ್ಮಲ್ಲಿ ಉತ್ಸಾಹವನ್ನು ಜಾಗರೂಕಗೊಳಿಸುವುದು. ಕಛೇರಿಯಲ್ಲಿ ನಿಮ್ಮ ಶ್ರಮವು ಲೆಕ್ಕಕ್ಕೆ ಬಾರದೇ ಹೋದೀತು. ಶ್ರಮಕ್ಕೆ ಫಲವನ್ನು ನಿರೀಕ್ಷಿಸುತ್ತ ಸಮಯವನ್ನು ವ್ಯರ್ಥ ಮಾಡುವಿರಿ. ಮಾತಿನಲ್ಲಿ ಮಾರ್ದವವು ಇಲ್ಲವಾಗುವುದು. ಅತಿಯಾದ ಭಾರದ ವಸ್ತುಗಳನ್ನು ಒಯ್ಯುವಿರಿ. ನಿಮ್ಮ ಚೌಕಟ್ಟನ್ನು ಮೀರಿ ವರ್ತಿಸದೇ ಇರುವುದು ಒಳಿತು.
ಮಿಥುನ ರಾಶಿ : ವ್ಯಾಪಾರ ವ್ಯವಹಾರಗಳಲ್ಲಿ ನೀವು ಸುಲಭವಾಗಿ ಪ್ರಗತಿಯನ್ನು ಕಾಣುವಿರಿ. ನೀವು ಕೊಟ್ಟ ಆಶ್ವಾಸನೆಯನ್ನು ಸುಲಭವಾಗಿ ಪೂರೈಸಲು ಸಾಧ್ಯವಾಗುತ್ತದೆ. ಅದರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಕೆಲವು ಹೊಸ ಮೂಲಗಳನ್ನು ವ್ಯಾಪಾರದಲ್ಲಿ ಸೇರಿಸಿಕೊಳ್ಳಬಹುದು. ಯಾರಾದರೂ ನಿಮ್ಮನ್ನು ರೇಗಿಸಬಹುದು. ನಿಮ್ಮ ಕೆಲವು ವಿರೋಧಿಗಳು ನಿಮಗೆ ತೊಂದರೆ ಕೊಡಲು ಪ್ರಯತ್ನಿಸಬಹುದು. ನಿಮ್ಮ ಜಾಣ್ಮೆಯಿಂದ ನೀವು ಸುಲಭವಾಗಿ ಏನನ್ನಾದರೂ ಸಾಧಿಸುವಿರಿ. ದೇಹಾರೋಗ್ಯವು ಸರಿಯಾಗಿ ಇಲ್ಲದ ಕಾರಣ ಮನಸ್ಸು ಸರಿಯಾಗಿ ಕೆಲಸ ಮಾಡದು. ಉದ್ಯೋಗದ ಕಾರಣದಿಂದ ಬೇರೆ ಕಡೆ ಇದ್ದರೂ ಮನೆಯ ನೆನಪು ಕಾಡುವುದು. ಉದ್ಯೋಗವು ಸಾಕು ಎನಿಸಬಹುದು. ನಿಮ್ಮ ಆಚರಣೆಯು ಇತರರಿಗೆ ಇಷ್ಟವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಓದು ಹೆಚ್ಚು ಫಲಿಸುವುದು.
ಕಟಕ ರಾಶಿ : ನೀವು ಇತರರ ಹಿತಾಸಕ್ತಿಯ ಬಗ್ಗೆ ಹೆಚ್ಚು ಗಮನವಿರಲಿದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ಗೌರವವನ್ನು ಪಡೆಯುವರು. ಕೃತಜ್ಞತೆಯ ಭಾವವು ನಿಮ್ಮೊಳಗೆ ಬೇರೂರಲಿ. ನೀವು ಅವಕಾಶಗಳತ್ತ ಗಮನ ಹರಿಸಬೇಕು. ಮಕ್ಕಳ ವಿಚಾರದಲ್ಲಿ ನಿಮಗೆ ಸಮಾಧಾನವು ಸಿಗದೇ ಇರಬಹುದು. ತಮ್ಮ ಶಿಕ್ಷಣವನ್ನು ಪಡೆಯಲು ವಿದೇಶಕ್ಕೆ ಹೋಗಲು ಬಯಸುವರು ವಿದ್ಯಾರ್ಥಿಗಳು. ಸಮಯೋಚಿತ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಕೆಟ್ಟವರ ಸಹವಾಸ ಸಿಗುವ ಸಾಧ್ಯತೆ ಇದೆ. ಬೇಡವೆಂದರೂ ಕೆಟ್ಟವರ ಸಹವಾಸವೇ ಸಿಗುವುದು. ನಂಬಿಕೆಯನ್ನು ಕಳೆದುಕೊಳ್ಳಬಹುದು. ನಿಮಗೆ ಸಂಬಂಧಿಸದ ವಿಚಾರದಲದಲಿ ಹೆಚ್ಚು ಮಾತನಾಡುವಿರಿ. ಹೂಡಿಕೆಯ ಬಗ್ಗೆ ಗಂಭೀರವಾಗಿ ಚಿಂತಿಸುವ ಅಗತ್ಯವಿದೆ.
ಸಿಂಹ ರಾಶಿ : ನಿಮ್ಮ ಕೆಲವು ಪ್ರಮುಖ ಯೋಜನೆಗಳು ಬಲವನ್ನು ಕೈ ಬಿಡುವ ಇಚ್ಛೆಯು ಉಂಟಾಗಬಹುದು. ನಿಮ್ಮ ಪ್ರಕ್ಷುಬ್ಧ ವ್ಯವಹಾರವನ್ನು ನಿರ್ವಹಿಸಲು ನೀವು ನಿರತರಾಗಿರುತ್ತೀರಿ. ಇಂದು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಮಾಡಿದರೆ, ಅದು ನಿಮಗೆ ಒಳ್ಳೆಯದು. ನೀವು ಇಂದು ನಿಮ್ಮ ಶಕ್ತಿಯನ್ನು ಒಳ್ಳೆಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರು ಬಡ್ತಿಯಿಂದಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಬೇಕಾಗಬಹುದು. ಮನೆಯಲ್ಲಿ ಬಂಧುಗಳ ಸಮಾಗಮದಿಂದ ಸಂತೋಷವಾಗುವುದು. ದಿನ ಮಾನಸಿಕ ಒತ್ತಡದಿಂದ ನೀವು ಹೊರಬರಲು ಕಷ್ಟವಾದೀತು. ಮನೋರಂಜನೆಯಲ್ಲಿ ನೀವು ಪಾಲ್ಗೊಳ್ಳುವಿರಿ. ಖರ್ಚಿನ ಮೇಲೆ ನಿಯಂತ್ರಣ ಸಾಧಿಸಬೇಕೆಂದಿದ್ದರೂ ಮತ್ತೆಲ್ಲೋ ಹರಿದು ಹೋಗುವುದು. ಅನವಶ್ಯಕ ಮಾತುಗಳನ್ನು ನಿಲ್ಲಿಸಿ. ವೈವಾಹಿಕ ಜೀವನದ ಸುಖವು ಸಪ್ಪೆ ಎನಿಸಬಹುದು. ಭೂಮಿಯ ವ್ಯವಹಾರಕ್ಕೆ ಯಾರ ಜೊತೆಗಾದರೂ ಸೇರಿಕೊಳ್ಳುವಿರಿ.
ಕನ್ಯಾ ರಾಶಿ : ನೀವು ನಿಮ್ಮ ದಿನಚರಿಯನ್ನು ಅನಿವಾರ್ಯವಾಗಿ ಬದಲಾಯಿಸಿದರೆ, ಅದು ನಿಮಗೆ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ವೃತ್ತಿಯ ಜೊತೆಗೆ ಅರೆಕಾಲಿಕ ಕೆಲಸವನ್ನು ಮಾಡಲು ಸಹ ನೀವು ಯೋಜಿಸಬಹುದು. ನೀವು ಕೆಲವು ಇನ್ನೊಬ್ಬರಿಗೆ ತೊಂದರೆಯಾಗುವಂತಹ ಚಟುವಟಿಕೆಗಳನ್ನು ತಡೆಯಬೇಕು. ವ್ಯವಹಾರದಲ್ಲಿ ಧೈರ್ಯವನ್ನು ಬೆಳೆಸಿಕೊಳ್ಳಿ. ನೀವು ಯಾವುದೇ ದೊಡ್ಡ ಗುರಿಯನ್ನು ಸಾಧಿಸಬಹುದು. ಜಾಣತನವು ಇಂದು ನಿಮ್ಮ ಉಪಯೋಗಕ್ಕೆ ಬರುವುದು. ಸ್ತ್ರೀಯರು ಅವರಿಗೆ ಬೇಕಾದ ಕಾರ್ಯವನ್ನು ಬಹಳ ನಾಜೂಕಿನಿಂದ ಮಾಡಿಸಿಕೊಳ್ಳುವರು. ಸಾರ್ವಜನಿಕ ಕ್ಷೇತ್ರದಲ್ಲಿ ಇಂದು ಹೆಚ್ಚು ಕಾಣಿಸಿಕೊಳ್ಳುವಿರಿ. ವ್ಯಾಪರದಲ್ಲಿ ಗ್ರಾಹಕರ ಜೊತೆ ಕಲಹವಾಗುವ ಸಾಧ್ಯತೆ ಇದೆ. ಅತಿಯಾದ ಪ್ರೀತಿಯಿಂದ ನಿಮಗೇ ತೊಂದರೆಯಾಗುವುದು. ಹಣದ ಸಂಪಾದನೆಗೆ ವಿವಿಧ ಮಾರ್ಗಗಳು ಇದ್ದರೂ ಅದಾವುದೂ ನಿಮಗೆ ಸರಿ ಕಾಣಿಸದು. ಇಡೀ ದಿನದ ನಿಮ್ಮ ಶ್ರಮವು ವ್ಯರ್ಥವಾಗಬಹುದು.
ತುಲಾ ರಾಶಿ : ಇಂದು ನಿಮ್ಮ ಜವಾಬ್ದಾರಿಯನ್ನಷ್ಟೇ ಮುಂದುವರಿಸುವುದು ನಿಮಗೆ ಒಳ್ಳೆಯದು. ಕ್ರಮಬದ್ಧವಾದ ಆಲೋಚನೆಗಳು ನಿಮಗೆ ಸ್ಫೂರ್ತಿಯನ್ನು ಕೊಡಬಹುದು. ಪರಸ್ಪರ ಸಹಕಾರದ ಭಾವನೆ ನಿಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ನೀವು ಉತ್ತಮ ವೃತ್ತಿ ಅವಕಾಶಗಳನ್ನು ಪಡೆಯಬಹುದು. ಮಕ್ಕಳ ಕಡೆಯಿಂದ ನಿರಾಶಾದಾಯಕ ಸಲಹೆಗಳನ್ನು ಕೇಳಬೇಕಾಗಬಹುದು. ವಿದ್ಯಾರ್ಥಿಗಳು ಬೌದ್ಧಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕು. ನಿಮ್ಮ ಬಗ್ಗೆ ಸುಳ್ಳು ವದಂತಿಗಳು ಹರಡಬಹುದು. ನಿರ್ಮಾಣ ವ್ಯವಸ್ಥೆಯಲ್ಲಿ ಇರುವವರಿಗೆ ಸ್ವಲ್ಪ ಹಿನ್ನಡೆಯಾಗಲಿದೆ. ಸಂಬಂಧವಿಲ್ಲದ ವಿಚಾರದಲ್ಲಿ ನೀವು ಹಣವನ್ನು ಕಳೆದುಕೊಳ್ಳುವಿರಿ. ದುರಭ್ಯಾಸವು ಅತಿಯಾಗಿ ಮನೆಯಲ್ಲಿ, ಬಂಧುಗಳಿಂದ ನಿಮಗೆ ನಿಂದನೆಯಾಗಲಿದೆ. ಯಾರದೋ ಮಾತನ್ನು ಕೇಳಿ ಇಂದು ಕುಟುಂಬದವರ ಜೊತೆ ಕಲಹವಾಡುವಿರಿ. ಮನೆಯ ಆಡಳಿತವನ್ನು ನೋಡಿಕೊಳ್ಳುವ ಸಂದರ್ಭವು ಬರಬಹುದು.
ವೃಶ್ಚಿಕ ರಾಶಿ : ಇಂದು ನೀವು ಹೊಸ ಆಸ್ತಿಯನ್ನು ಖರೀದಿಸಬಹುದು. ಆರ್ಥಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರು ತಮ್ಮ ಕೆಲಸದ ಮೇಲೆ ಕೇಂದ್ರೀಕರಿಸಬೇಕು. ನಿಮ್ಮ ಆದಾಯವನ್ನು ಹೆಚ್ಚಿಸುವ ಪ್ರಯತ್ನಗಳಲ್ಲಿ ನೀವು ತೊಡಗಿಸಿಕೊಳ್ಳುತ್ತೀರಿ. ರಾಜಕೀಯದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ನಿಮ್ಮ ದೀರ್ಘಾವಧಿಯ ಯೋಜನೆಗಳು ವೇಗವನ್ನು ಪಡೆಯಲಿ. ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ತಯಾರಿಯಲ್ಲಿ ಶ್ರಮಿಸಬೇಕಾಗುತ್ತದೆ. ನಿಮ್ಮವರ ಆರೋಗ್ಯದ ಬಗ್ಗೆ ನೀವು ಚಿಂತಿತರಾಗಬಹುದು. ವಾಹನದ ಕಾರಣಕ್ಕೆ ಮನೆಯಲ್ಲಿ ಕಲಹವಾಗಬಹುದು. ಹೂಡಿಕೆಯಿಂದ ನಿಮಗೆ ಲಾಭಾಂಶವು ಸಿಗುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಆಸಕ್ತಿ ಇದ್ದರೂ ಓದಿ ಜೀರ್ಣಿಸಿಕೊಳ್ಳಲು ಆಗದು. ಲೆಕ್ಕಪತ್ರದ ವಿಚಾರದಲ್ಲಿ ಪಾರದರ್ಶಕತೆ ಇರಲಿ. ಯಾರನ್ನೋ ಸಂಶಯಿಸುತ್ತ ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಹೇಳಬೇಕಾದಲ್ಲಿ ಮಾತ್ರ ಹೇಳಿ.
ಧನು ರಾಶಿ : ನೀವು ಯಾರಿಗಾದರೂ ಕೊಟ್ಟ ಭರವಸೆಯನ್ನು ಪೂರೈಸುವಿರಿ. ಎಲ್ಲರ ಸಹಕಾರವನ್ನು ನಿರೀಕ್ಷಿಸುತ್ತ ಇರಬೇಡಿ. ನಿಮ್ಮ ಸಂಗಾತಿಯ ವೃತ್ತಿಜೀವನದ ಬಗ್ಗೆ ನೀವು ದೊಡ್ಡ ಮುಖ್ಯ ನಿರ್ಧಾರವನ್ನು ತೆಗೆದುಕೊಳ್ಳಬಹುದು. ನೀವು ಸಣ್ಣ ಪ್ರವಾಸಕ್ಕೆ ಹೋಗಬಹುದು. ವೃತ್ತಿಯನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದು ಬೇಡ. ನೀವು ಬಹಳ ಸಮಯದ ಅನಂತರ ಹಳೆಯ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಭಿನ್ನಾಭಿಪ್ರಾಯವನ್ನು ಮಾತನಾಡಿ ಪರಿಹರಿಸಬಹುದು. ನಿಮ್ಮ ಹಳೆಯ ತಪ್ಪುಗಳಿಂದ ನೀವು ಕಲಿಯಬೇಕು. ನಿಮ್ಮ ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವ ಆಸೆ ಇರಲಿದೆ. ಆಹಾರ ವ್ಯತ್ಯಾಸದಿಂದ ಹೊಟ್ಟೆಯಲ್ಲಿ ಶೂಲೆ ಕಾಣಿಸಿಕೊಳ್ಳಬಹುದು. ದೇಹದಂಡನೆಯು ಹೊಸ ಖಾಯಿಲೆಯನ್ನು ತರಿಸಬಹುದು. ಮನೆಯ ಔಷಧಿಯಿಂದ ಅದನ್ನು ಸರಿ ಮಾಡಿಕೊಳ್ಳಿ. ನಿಮಗೆ ಸಂಸ್ಥೆಯಲ್ಲಿ ಕಾರ್ಯವನ್ನು ನಿರ್ವಹಿಸಲು ಕರೆ ಬರಬಹುದು. ನಿಮ್ಮ ಕಳೆದ ಜೀವನವನ್ನು ಮೆಲುಕುಹಾಕುವಿರಿ.
ಮಕರ ರಾಶಿ : ಇಂದು ಕೆಲವು ಸಂದರ್ಭದಲ್ಲಿ ಸುಳ್ಳು ಹೇಳಬೇಕಾಗಬಹುದು. ಯಾವುದೇ ಕೆಲಸದಲ್ಲಿ ನೈತಿಕತೆಯನ್ನು ಬಿಟ್ಟು ಮುನ್ನಡೆಯುವುದು ಬೇಡ. ಸಣ್ಣ ವಿಚಾರಗಳಿಗೆ ಕೊಡಬೇಕಾದುದಷ್ಟೇ ಮಹತ್ತ್ವವನ್ನು ಕೊಡಿ. ವೃತ್ತಿ ಕ್ಷೇತ್ರದಲ್ಲಿ ನೀವು ಉತ್ತಮ ಸ್ಥಾನವನ್ನು ಪಡೆಯಬಹುದು. ನಿಮ್ಮ ಸಂಪೂರ್ಣ ಗಮನವು ವೈಯಕ್ತಿಕ ವಿಷಯಗಳ ಮೇಲೆ ಇರುತ್ತದೆ. ನಿಮ್ಮ ಸಂತೋಷಕ್ಕಾಗಿ ನಿಮ್ಮ ಸ್ಥಾನ ಇರುವುದಿಲ್ಲ. ಮಕ್ಕಳ ಪಕ್ಷದಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ನಿಮ್ಮ ಜೀವನ ಸಂಗಾತಿಯಿಂದ ನೀವು ಸಾಕಷ್ಟು ಬೆಂಬಲ ಪಡೆಯುವಿರಿ. ಆಪ್ತರಿಂದ ನಿಮಗೆ ಇಷ್ಟವಾದ ವಸ್ತುವು ಪ್ರಾಪ್ತವಾಗುವುದು. ಆಕಸ್ಮಿಕವಾಗಿ ಅನಾರೋಗ್ಯವು ಕಾಣಿಸಿಕೊಳ್ಳಬಹುದು. ಸಾಲಪಡೆದವರು ನಿಮ್ಮನ್ನು ಪೀಡಿಸಬಹುದು. ಪಾಲುದಾರಿಕೆಯಲ್ಲಿ ಇಂದು ಸಣ್ಣ ವಿಚಾರಕಗಕೇ ಕಲಹವಾಗುವುದು. ಇಂದು ಅಗತ್ಯವಿರುವಷ್ಟು ಮಾತ್ರವೇ ಮಾತನಾಡಿ.
ಕುಂಭ ರಾಶಿ : ನಿಮ್ಮ ತಪ್ಪು ಮಾತುಗಳಿಗೆ ಇತರರಿಂದ ಅನುಮೋದನೆ ಸಿಗಬಹುದು. ಸರ್ಕಾರದಿಂದ ಸಿಗುವ ಯೋಜನೆಯ ಫಲವನ್ನು ಪಡೆಯುವಿರಿ. ಎದುರಾಳಿಯು ನಿಮ್ಮ ವಿರುದ್ಧ ಸಂಚು ಮಾಡಬಹುದು. ಮನೆಯನ್ನು ನವೀಕರಿಸಲು ಸಹ ನೀವು ಹೆಚ್ಚು ಗಮನಹರಿಸುತ್ತೀರಿ. ನಿಮ್ಮ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ಕುಟುಂಬದ ಯಾವುದೇ ಸದಸ್ಯರಿಗೆ ನೀಡಿದ ಭರವಸೆಯನ್ನು ನೀವು ಪೂರೈಸಬೇಕಾಗುತ್ತದೆ. ಇಲ್ಲದಿದ್ದರೆ ಅವರು ನಿಮ್ಮ ಜೊತೆ ಅಸಮಾಧಾನಗೊಳ್ಳಬಹುದು. ಆಕಸ್ಮಿಕ ಧನಲಾಭದಿಂದ ಸಂತಸವು ಇರಲಿದೆ. ಮನಸ್ಸು ಬಹಳ ಉತ್ಸಾಹದಿಂದ ಇರಲಿದೆ. ಮನೆಯ ಹಿರಿಯರ ಸೇವೆಯನ್ನು ಮಾಡುವಿರಿ. ನಿಮ್ಮ ಪ್ರೀತಿಗೆ ಬೆಲೆ ಸಿಗದೇಹೋದೀತು. ಸಂಗಾತಿಯು ನಿಮಗೆ ಒಂದೇ ವಿಚಾರಗಳನ್ನು ಮತ್ತೆ ಮತ್ತೆ ಹೇಳಿ ಬೇಸರ ತರಿಸುವರು. ಮೈ ಚಳಿಯನ್ನು ಬಿಟ್ಟು ಧೈರ್ಯದಿಂದ ಮುನ್ನಡೆಯಿರಿ. ನಿಮಗಾದ ಸಹಾಯವನ್ನು ನೀವು ಸ್ಮರಿಸಿಕೊಳ್ಳುವಿರಿ.
ಮೀನ ರಾಶಿ : ಇಂದು ಆರ್ಥಿಕ ವಿಷಯದಲ್ಲಿ ನಿಮಗೆ ಸ್ಪಷ್ಟತೆ ಇರಲಿ. ಯಾವುದೇ ಕೆಲಸದಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ನಿಮ್ಮ ಕಠಿಣ ಪರಿಶ್ರಮವು ಫಲ ನೀಡುತ್ತದೆ. ನೀವು ಇಂದಿನ ಗುರಿಯನ್ನು ಸುಲಭವಾಗಿ ಸಾಧಿಸುವಿರಿ. ನಿಮ್ಮ ವ್ಯಾಪಾರ ಚಟುವಟಿಕೆಯು ಎಂದಿಗಿಂತ ಚುರುಕಾಗಿರುತ್ತದೆ. ವ್ಯವಹಾರದಲ್ಲಿ ನಿಮ್ಮ ಪ್ರಯತ್ನಗಳನ್ನು ಅಲ್ಪವಿದ್ದರೂ ಸಾಕು. ವಹಿವಾಟಿನ ವಿಷಯಗಳಲ್ಲಿ ನೀವು ಅನಾದರ ತೋರಿಸುವುದು ಬೇಡ. ಸಂತಾನ ಸುದ್ದಿಯು ನಿಮಗೆ ಖುಷಿ ಕೊಟ್ಟೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಸಹೋದರನಿಂದ ಆರ್ಥಿಕ ಸಹಕಾರವನ್ನು ನಿರೀಕ್ಷಿಸುವಿರಿ. ಆರೋಗ್ಯವು ಉತ್ತಮವಾಗಲಿದ್ದು, ಮೊದಲಿನ ಸ್ಥಿತಿಗೆ ಮರಳುವಿರಿ. ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಆಸ್ತಿಯನ್ನು ಮಾರಾಟಮಾಡುವ ಆಲೋಚನೆ ಇರಲಿದೆ. ನಿಮ್ಮ ಸ್ನೇಹಿತರಲ್ಲಿ ಇಂದು ದೊಡ್ಡ ಸಾಲವನ್ನು ಕೇಳುವಿರಿ. ಸ್ವೋದ್ಯೋಗವನ್ನು ಮಾಡುತ್ತಿದ್ದರೆ ಸ್ವಲ್ಪ ನಷ್ಟವಾಗಬಹುದು.
-ಲೋಹಿತ ಹೆಬ್ಬಾರ್-8762924271 (what’s app only)