Horoscope 30 Jan: ದಿನಭವಿಷ್ಯ; ಈ ರಾಶಿಯವರು ಯಾವುದೇ ಕೆಲಸ ಕೈಗೊಂಡರೂ ಅದೃಷ್ಟದ ಬೆಂಬಲ ಸಿಗಲಿದೆ
ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ (ಜನವರಿ 30) ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಜನವರಿ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಅತಿಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:38 ರಿಂದ 05:04ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:54 ರಿಂದ ಮಧ್ಯಾಹ್ನ 11:20ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:46 ರಿಂದ 02:12ರ ವರೆಗೆ.
ಮೇಷ ರಾಶಿ: ಇಂದು ನಿಮ್ಮ ಕೆಲಸದಲ್ಲಿ ಆತುರಗೊಂಡರೆ, ಅಸ್ತವ್ಯಸ್ತವೇ ಆಗಬಹುದು. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ತಮ್ಮ ಕೆಲಸಕ್ಕೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಸಮಸ್ಯೆಗಳು ಉದ್ಭವಿಸಬಹುದು. ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನೀವು ಕೆಲವು ಹೊಸ ಒಪ್ಪಂದಗಳ ಲಾಭವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಪ್ರಯತ್ನಗಳಲ್ಲಿ ನೀವು ತೊಡಗಿರುವಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದೋ ಕೆಲಸವನ್ನು ಮಾಡಿಕೊಡಬೇಕಾಗುವುದು. ಯಾರದೋ ಕೋಪಕ್ಕೆ ಇನ್ಯಾರನ್ನೋ ದೂರುವಿರಿ. ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಆತಂಕ ಪಡುವಿರಿ. ಕುಟುಂಬದ ಸದಸ್ಯರ ಪ್ರೀತಿಯು ಸಿಕ್ಕಿ ಹರ್ಷಿಸುವಿರಿ. ಆಕಸ್ಮಿಕ ವಾರ್ತೆಯಿಂದ ಉದ್ವೇಗಕ್ಕೆ ಒಳಗಾಗುವಿರಿ.
ವೃಷಭ ರಾಶಿ: ಸೃಜನಾತ್ಮಕ ಪ್ರಯತ್ನಗಳಿಂದ ನಿಮಗೆ ಮೊದಲಿನಂತೆ ಖುಷಿ ಸಿಗದು. ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸುತ್ತೀರಿ. ವ್ಯಾಪಾರ ಯೋಜನೆಯನ್ನು ಪೂರ್ಣಗೊಳಿಸಲು ನೀವು ಹೆಚ್ಚು ಗಮನ ಹರಿಸಬೇಕು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ಪರಸ್ಪರ ಸಹಕಾರದ ಭಾವನೆ ನಿಮ್ಮೊಳಗೆ ಉಳಿಯುತ್ತದೆ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ಸಾಮಾಜಿಕ ಕಾರ್ಯವನ್ನು ಮಾಡಲು ಒತ್ತಡವು ಬರಬಹುದು. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನೆಮ್ಮದಿಗೆ ನಿಮ್ಮದೇ ಮಾರ್ಗವನ್ನು ಅನುಸರಿಸಿ. ಇನ್ನೊಬ್ಬರನ್ನು ಸರಿ ಮಾಡಲು ಹೋಗಿ ನೀವೇ ಹಾಳಾಗಬಹುದು. ಸ್ನೇಹಿತರ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು ಎಂದಿದ್ದರೂ ಆಗದು. ಸಂಸಾರವನ್ನು ಮುನ್ನಡೆಸುವ ಚಾತುರ್ಯವನ್ನು ನೀವು ತಿಳಿದುಕೊಳ್ಳುವಿರಿ.
ಮಿಥುನ ರಾಶಿ: ನಿಮ್ಮ ದೈಹಿಕ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ. ಅದು ಅನಂತರ ದೊಡ್ಡ ಸಮಸ್ಯೆಯಾಗಿ ಬದಲಾಗಬಹುದು. ನೀವು ಕೆಲಸದ ನಿಮಿತ್ತ ಪ್ರವಾಸಕ್ಕೆ ಹೋಗಬಹುದು. ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಯಾವುದೇ ಹೊರಗಿನವರಿಗೆ ಬಹಿರಂಗಪಡಿಸುವುದು ಬೇಡ. ಯಾರಾದರೂ ಲಾಭ ಪಡೆಯಲು ಪ್ರಯತ್ನಿಸಬಹುದು. ನೀವು ಶುಭ ಸಮಾರಂಭಗಳಲ್ಲಿ ಭಾಗವಹಿಸಬಹುದು. ನಿಮ್ಮ ಆದಾಯ ಹೆಚ್ಚಾದಂತೆ ನಿಮ್ಮ ಸಂತೋಷಕ್ಕೆ ಮಿತಿಯಿಲ್ಲ, ಆದರೆ ನೀವು ಭವಿಷ್ಯಕ್ಕಾಗಿ ಸ್ವಲ್ಪ ಹಣವನ್ನು ಉಳಿಸಿದರೆ ಅದು ನಿಮಗೆ ಉತ್ತಮ. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳದೇ ನಿಮ್ಮದೇ ವಾದ ಮಾಡುವಿರಿ. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ಕೊಡುವುದು. ನಿಮಗೆ ಅಭದ್ರತೆಯು ಕಾಡಬಹುದು. ಸಂಗಾತಿಯು ನಿಮಗೆ ಬೇಕಾದ ಹಣವನ್ನು ನೀಡುವರು. ಸಂಶೋಧನೆಯು ನಿಮಗೆ ಖುಷಿ ಕೊಡುವುದು.
ಕಟಕ ರಾಶಿ: ಅಪರಿಚಿತ ಜನರ ಜೊತೆ ಬಾಂಧವ್ಯವನ್ನು ಹೆಚ್ಚುಮಾಡಿಕೊಳ್ಳುವಿರಿ. ನೀವು ಸಾಮಾಜಿಕ ಹೆಚ್ಚು ಚಟುವಟಿಕೆಯಿಂದ ಇರುವಿರಿ. ಧಾರ್ಮಿಕ ಕಾರ್ಯಗಳಿಗೆ ಶ್ರದ್ಧೆಯು ಕಡಿಮೆ ಆದಂತೆ ತೋರುವುದು. ನೀವು ದೂರದ ಪ್ರಯಾಣವನ್ನು ಮಾಡುವುದಾದರೆ, ಅದು ನಿಮಗೆ ಅನುಕೂಲಕರವೇ. ಕೆಲವು ಪ್ರಮುಖ ಚರ್ಚೆಯಲ್ಲಿ ಭಾಗವಹಿಸಬಹುದು. ವ್ಯವಹಾರದಲ್ಲಿ ಕೆಲವು ಹಳೆಯ ಯೋಜನೆಗಳಿಂದ ನೀವು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವೈಯಕ್ತಿಕ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಕಷ್ಟವಾದೀತು. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಸೂಚಿಸುವುದು ಬೇಡ. ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು. ಇದ್ದ ನಿಮ್ಮ ಸ್ವಭಾವದಲ್ಲಿ ಪರಿವರ್ತನೆ ಕಾಣಿಸಿಕೊಳ್ಳುವುದು. ನಿಮ್ಮ ವಸ್ತುಗಳ ಉಪಯೋಗವನ್ನು ನೀವು ಬಹಳ ನಿರ್ಲಕ್ಷ್ಯದಿಂದ ಮಾಡುವಿರಿ.
ಸಿಂಹ ರಾಶಿ: ಕುಟುಂಬದ ಸದಸ್ಯರ ವಿವಾಹದ ಸಂಭ್ರಮದಲ್ಲಿ ಇರುವಿರಿ. ನಿಮ್ಮ ಸೌಕರ್ಯಗಳಿಗೆ ನೀವು ಸಂಪೂರ್ಣ ಒತ್ತು ನೀಡುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗಬಹುದು. ನೀವು ಕೆಲಸಕ್ಕೆ ಯೋಗ್ಯವಾದ ಗೌರವವನ್ನೂ ಪಡೆಯಬಹುದು. ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವುದು. ನಿಮ್ಮ ವಿರೋಧಿಗಳು ನಿಮಗೆ ತೊಂದರೆ ನೀಡಲು ಪ್ರಯತ್ನಿಸುತ್ತಾರೆ. ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಸೋಲಿಸಲು ಸಾಧ್ಯವಾಗುತ್ತದೆ. ಗೃಹೋದ್ಯಮದಲ್ಲಿ ನೀವು ಲಾಭವನ್ನು ಗಳಿಸುವಿರಿ. ನಿಮ್ಮ ಶಾಂತವಾದ ಮನಸ್ಸೇ ಹಲವು ಸಮಸ್ಯೆಗಳನ್ನು ದೂರ ಮಾಡುವುದು. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಅಪರೂಪದ ವ್ಯಕ್ತಿಗಳ ಭೇಟಿಯಾಗಲಿದೆ. ನಿಮ್ಮ ಸರಳತೆಯು ನಿಮಗೆ ಧನಾತ್ಮಕ ಅಂಶಗಳಿಗೆ ಕಾರಣವಾಗುವುದು. ಯಾರ ಮೇಲಾದರೂ ಮುನಿಸು ತಾತ್ಕಾಲಿಕವಾಗಿ ಇರುವುದು. ಸ್ತ್ರೀಯರಿಂದ ನಿಮಗೆ ಸಂತೋಷವು ಸಿಗುವುದು.
ಕನ್ಯಾ ರಾಶಿ: ಇಂದು ನಿಮ್ಮ ಹಣಕಾಸಿನ ಪರಿಸ್ಥಿತಿಯ ಬಗ್ಗೆ ಸ್ವಲ್ಪ ಚಿಂತಿತರಾಗಿರುವಿರಿ. ಅಧ್ಯಾತ್ಮದ ಕಡೆಗೆ ನಿಮ್ಮ ಸೆಳೆತವು ಇರುವಂತೆ ತೋರುತ್ತದೆ. ನೀವು ಚಿಂತನಶೀಲವಾಗಿ ಕೆಲಸ ಮಾಡಿದರೆ, ಅದು ನಿಮಗೆ ಉತ್ತಮ. ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸಿದ್ದರೆ, ನಿಮ್ಮ ಆಸೆಯೂ ಈಡೇರಬಹುದು. ನಿಮ್ಮ ಮಗುವಿಗೆ ನೀವು ಹೊಸ ವಾಹನವನ್ನು ಮನೆಗೆ ತರಬಹುದು. ನೀವು ಸ್ನೇಹಿತನೊಂದಿಗೆ ಯಾವುದೇ ವಿವಾದವನ್ನು ಹೊಂದಿದ್ದರೆ, ಅವರು ನಿಮ್ಮನ್ನು ಸಮಾಧಾನಪಡಿಸಲು ಬರಬಹುದು. ಹಳೆಯ ತಪ್ಪಿನಿಂದ ಪಾಠ ಕಲಿಯಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆಯು ಕಡಿಮೆ ಆಗುವುದು. ಕಳೆದುಹೋದ ವಿಚಾರಕ್ಕೆ ಸಂಗಾತಿಯ ಜೊತೆ ಪುನಃ ಜಗಳವಾಡುವಿರಿ. ಆದಷ್ಟು ಒಬ್ಬರಾದರೂ ಸುಮ್ಮನಿದ್ದರೆ ಕಲಹವು ಶಾಂತವಾಗುವುದು. ನಿಮ್ಮ ಆಲೋಚನೆಯನ್ನು ಕೆಲವಷ್ಟಕ್ಕೆ ಸೀಮಿತಗೊಳಿಸಿಕೊಳ್ಳುವಿರಿ. ಉತ್ತಮ ವಸ್ತುಗಳು ಸಿಕ್ಕರೂ ಅದನ್ನು ಉಳಿಸಿಕೊಳ್ಳಲು ಕಷ್ಟಪಡುವಿರಿ.
ತುಲಾ ರಾಶಿ: ಇಂದು ನೀವು ಹೊಸ ಉದ್ಯಮಕ್ಕೆ ಬೇಕಾದ ಸ್ಥಳದ ಅನ್ವೇಷಣೆಯಲ್ಲಿ ತೊಡಗುವಿರಿ. ದಾನ ಧರ್ಮದ ಕಾರ್ಯಗಳಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತೀರಿ. ಎಲ್ಲ ಸನ್ನಿವೇಶಗಳನ್ನು ನಿಯಂತ್ರಣದಲ್ಲಿ ನಿಭಾಯಿಸಲು ಪ್ರಯತ್ನಿಸಬೇಕಾಗುತ್ತದೆ. ಮನೆಯ ಅಲಂಕಾರದ ಬಗ್ಗೆಯೂ ನೀವು ಸಂಪೂರ್ಣ ಗಮನ ಹರಿಸುತ್ತೀರಿ. ಕುಟುಂಬದ ಸದಸ್ಯರಿಂದ ನೀವು ಆಶ್ಚರ್ಯಕರ ಉಡುಗೊರೆಯನ್ನು ಪಡೆಯಬಹುದು. ಹೆತ್ತವರ ಆಶೀರ್ವಾದವು ನಿಮಗೆ ಉತ್ಸಾಹವನ್ನು ಕೊಡಬಹುದು. ಇದರಿಂದ ನಿಮ್ಮ ಮೇಲಿರುವ ಭಾವನೆಯು ಬದಲಾಗುವುದು. ನಿಮಗೆ ನಿರೀಕ್ಷೆಗೆ ತಕ್ಕ ಗೌರವ ಸಿಗದೇ ಬೇಸರವಾಗುವುದು. ಇಂದು ಕೆಲಸಕ್ಕಾಗಿ ಓಡಾಡುವುದು ವ್ಯರ್ಥವೇ ಆಗುವುದು. ನಿಮ್ಮ ಅಧ್ಯಯನವು ಕಡಿಮೆಯಾಗಲಿದೆ. ನಿಮ್ಮ ನಿರ್ಧಾರವನ್ನು ಮತ್ತೋಬ್ಬರಿಗೆ ಹೇರುವುದು ಬೇಡ. ಅನುಭವಿಗಳ ಮಾರ್ಗದರ್ಶನದಲ್ಲಿ ಮುನ್ನಡೆಯುವಿರಿ. ಆದಷ್ಟು ಸಮಾಧಾನದಿಂದ ಶತ್ರುಗಳನ್ನು ಗೆಲ್ಲಲು ಪ್ರಯತ್ನಿಸಿ.
ವೃಶ್ಚಿಕ ರಾಶಿ: ನೀವು ಯಾವುದೇ ಕೆಲಸವನ್ನು ಕೈಗೊಂಡರೂ, ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗುತ್ತದೆ. ನೀವು ವ್ಯವಹಾರದಲ್ಲಿ ಪಾಲುದಾರರಾಗುವುದು ಉತ್ತಮ, ಇದು ನಿಮ್ಮ ವ್ಯವಹಾರವನ್ನು ಇನ್ನಷ್ಟು ವಿಸ್ತರಿಸುತ್ತದೆ. ನೀವು ಕುಟುಂಬದ ಸದಸ್ಯರೊಂದಿಗೆ ಎಲ್ಲೋ ಹೊರಗೆ ಹೋಗಲು ಯೋಜಿಸಬಹುದು, ಆದರೆ ನಿಮ್ಮ ಕುಟುಂಬದ ಸಮಸ್ಯೆಗಳನ್ನು ಒಟ್ಟಿಗೆ ಪರಿಹರಿಸಲು ನೀವು ಪ್ರಯತ್ನಿಸಬೇಕು, ಇಲ್ಲದಿದ್ದರೆ ಅದು ನಿಮ್ಮ ಸಂಬಂಧಗಳಲ್ಲಿ ಬಿರುಕು ಉಂಟುಮಾಡಬಹುದು. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ. ಹೊರದೇಶಕ್ಕೆ ನೀವು ಹೋಗಬೇಕಾದ ಸ್ಥಿತಿಯು ಬರಬಹುದು. ನಿಮ್ಮ ಉದ್ಯಮದ ಅಭಿವೃದ್ಧಿಗೆ ತುರ್ತು ಸಭೆಯನ್ನು ಮಾಡಬೇಕಾದೀತು. ಹೊಸ ವಾಹನ ಖರೀದಿಯ ಪ್ರಸ್ತಾಪವನ್ನು ಸದ್ಯ ತಳ್ಳಿಹಾಕುವಿರಿ. ಆರ್ಥಿಕ ಬಲವನ್ನು ನೋಡಿ ಖರ್ಚಿನ ನಿರ್ಧಾರವನ್ನು ಮಾಡಿ. ಸ್ನೇಹಿತರು ನಿಮ್ಮ ಬಳಿ ಆರ್ಥಿಕ ಸಹಾಯವನ್ನು ಕೇಳುವರು.
ಧನು ರಾಶಿ: ನಿಮ್ಮ ಮಾತಿನಲ್ಲಿ ಮಾಧುರ್ಯವನ್ನು ಕಾಪಾಡಿಕೊಳ್ಳಿ. ನೀವು ಯಾರಿಗಾದರೂ ಭರವಸೆ ನೀಡಿದ್ದರೆ, ಅದನ್ನು ಪೂರೈಸಲು ಪ್ರಯತ್ನಿಸುವಿರಿ. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ನಿಮ್ಮ ಕೆಲಸದಲ್ಲಿ ನೀವು ಅನಿರೀಕ್ಷಿತ ಭಡ್ತಿಯನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಮಕ್ಕಳ ವೃತ್ತಿಜೀವನದ ಬಗ್ಗೆ ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ನಿಮ್ಮ ಸಂಗಾತಿಯ ಜೊತೆ ಚರ್ಚಿಸಿದರೆ ಅದು ನಿಮಗೆ ಉತ್ತಮವಾಗಿರುತ್ತದೆ. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ನಿಮ್ಮ ಇಂದಿನ ಮಾತು ಕೇಳುಗರಿಗೆ ಹೃದ್ಯವಾಗುವುದು. ಅಗ್ನಿಯ ಭೀತಿಯು ನಿಮಗೆ ಅಧಿಕವಾಗಿ ಕಾಡುವುದು. ಮಕ್ಕಳನ್ನು ತಿದ್ದುವುದು ನಿಮಗೆ ಕಷ್ಟವಾದೀತು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳುವರು. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡಾಡುವುದು.
ಮಕರ ರಾಶಿ: ಇಂದು ನೀವು ಕೆಲವು ಹೊಸಬರನ್ನು ಭೇಟಿ ಮಾಡುವಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ತಾಯಿಯ ಕಡೆಯಿಂದ ಆರ್ಥಿಕ ಲಾಭವನ್ನು ಪಡೆಯುತ್ತಿರುವಿರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಕೈಲಾದಷ್ಟು ಪ್ರಯತ್ನಿಸುತ್ತೀರಿ. ನಿಮ್ಮ ಸಹೋದರನ ಜೊತೆ ನಿಮ್ಮ ಆಪ್ತತೆಯು ಹೆಚ್ಚಾಗುತ್ತದೆ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನೀವು ಒಳ್ಳೆಯ ಸುದ್ದಿಯನ್ನು ಕೇಳಬಹುದು. ನಿಮ್ಮ ತಂದೆಯು ಕಣ್ಣಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿಂದ ತೊಂದರೆಗೊಳಗಾಗಬಹುದು. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗುವುದು. ಆಹಾರವು ಸರಿಯಾಗಿ ಸಿಗದೇ ನಿಮಗೆ ಸಂಕಟವಾಗಬಹುದು. ದುಡಿಮೆಯ ಬೆನ್ನೇರಿ ಸಂಬಂಧಗಳನ್ನು ಸಡಿಲಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಒಮ್ಮನಸ್ಸು ಬರುವುದು ಕಷ್ಟವಾಗುವುದು.
ಕುಂಭ ರಾಶಿ: ಇಂದು ನಿಮಗೆ ಅಗತ್ಯವಿರುವ ವಸ್ತುಗಳಿಗೆ ಸಾಕಷ್ಟು ಹಣವನ್ನು ಖರ್ಚು ಮಾಡುತ್ತೀರಿ. ಆದರೆ ನೀವು ನಿಮ್ಮ ಹಿರಿಯರ ಸಲಹೆಯನ್ನು ಅನುಸರಿಸಿದರೆ ಉತ್ತಮವಾದುದನ್ನು ಪಡೆಯುವಿರಿ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ನೀವು ವೈಯಕ್ತಿಕ ವಿಷಯಗಳ ಮೇಲೆ ಸಂಪೂರ್ಣ ಗಮನವನ್ನು ಹೊಂದಿದ್ದರೆ ನಿಮಗೆ ಒಳ್ಳೆಯದು. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಸಡಿಲಬಿಡುವುದು ಬೇಡ. ನಿಮ್ಮ ವಿರೋಧಿಗಳಲ್ಲಿ ಒಬ್ಬರು ನಿಮಗೆ ಕಿರುಕುಳ ನೀಡಲು ಪ್ರಯತ್ನಿಸಬಹುದು. ಆರ್ಥಿಕ ತೊಂದರೆಯನ್ನು ನೀವು ಮನೆಯಲ್ಲಿ ಹೇಳಿಕೊಳ್ಳುವಿರಿ. ಬಂಧುಗಳಿಂದ ಕೆಲಸವು ಹಾಳಾಗಬಹುದು. ಕಾನೂನಿಗೆ ವಿದ್ಧವಾದ ಕಾರ್ಯವನ್ನು ಸಮರ್ಥಿಸಿಕೊಳ್ಳುವಿರಿ. ಸಂಗಾತಿಯ ಮಾತುಗಳು ಘಟನೆಯಿಂದ ನಿಮಗೆ ಬಹಳ ಬೇಸರ ತರಿಸಬಹುದು.
ಮೀನ ರಾಶಿ: ನಿಮ್ಮ ಸ್ನೇಹಿತರ ಜೊತೆ ನೀವು ಮನೋರಂಜನಾ ಕಾರ್ಯಕ್ರಮಗಳಿಗೆ ಹಾಜರಾಗಬಹುದು. ವಿದ್ಯಾರ್ಥಿಗಳು ಯಾವುದಾದರೂ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸಬಹುದು. ನೀವು ಇಂದು ಹೊರಗಿನವರಿಗೆ ಯಾವುದೇ ಆಂತರಿಕ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಬಾರದು. ರಕ್ತ ಸಂಬಂಧಗಳು ಮೊದಲಿಗಿಂತ ಉತ್ತಮವಾಗಿರುತ್ತವೆ. ನಿಮ್ಮ ಯೋಜನೆಗಳನ್ನು ನೀವು ವೇಗಗೊಳಿಸುತ್ತೀರಿ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಅದರಲ್ಲಿ ಹಣವನ್ನು ಹೂಡಿಕೆ ಮಾಡುವುದು ಉತ್ತಮ. ನಿಮ್ಮ ಬಗ್ಗೆ ಸರಿಯಾಗಿ ತಿಳಿಹೇಳುವರು. ಇಂದು ನೀವು ದೇವರ ಆರಾಧನೆಯಲ್ಲಿ ಮಗ್ನರಾಗುವಿರಿ. ಸಿಟ್ಟಾಗುವ ಸ್ಥಿತಿಯಲ್ಲಿಯೂ ನೀವು ಶಾಂತರಾಗುವಿರಿ. ಮನೆಯ ಕೆಲಸವೆಲ್ಲವೂ ಹಾಗೆಯೇ ಇರಿಸಿಕೊಂಡು ಬಂಧುಗಳ ಮನೆಗೆ ಹೋಗಲಿದ್ದೀರಿ.
-ಲೋಹಿತ ಹೆಬ್ಬಾರ್-8762924271 (what’s app only)
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ