Horoscope 31 Jan: ದಿನಭವಿಷ್ಯ; ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು, ಅಪರಿಚಿತರು ಭೇಟಿ

ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ (ಜನವರಿ 31) ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.

Horoscope 31 Jan: ದಿನಭವಿಷ್ಯ; ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು, ಅಪರಿಚಿತರು ಭೇಟಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on:Jan 31, 2024 | 6:17 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಜನವರಿ​​​​ 31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಸುಕರ್ಮಾ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:46 ರಿಂದ 02:012ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:28 ರಿಂದ 09:54ರ ವರೆಗೆ, ಗುಳಿಕ ಕಾಲ 11:20 ರಿಂದ ಮಧ್ಯಾಹ್ನ 12:46ರ ವರೆಗೆ.

ಮೇಷ ರಾಶಿ: ಇಂದು ನಿಮ್ಮ ವ್ಯಾಪಾರದಿಂದ ಖ್ಯಾತಿಯು ಹೆಚ್ಚಾಗಬಹುದು. ವೈವಾಹಿಕ ಸುಖವನ್ನು ಆನಂದದಿಂದ ಅನುಭವಿಸುವಿರಿ. ಸ್ನೇಹಿತರ ಜೊತೆ ಮೋಜಿನ ಸಮಯವನ್ನು ಕಳೆಯುವಿರಿ. ಧಾರ್ಮಿಕ ಕಾರ್ಯಗಳಲ್ಲಿ ತೋರ್ಪಡಿಕೆ ಬೇಡ. ನಿಮ್ಮ ವೃತ್ತಿಜೀವನದಲ್ಲಿ ದೊಡ್ಡ ಅವಕಾಶಗಳನ್ನು ಪಡೆಯಬಹುದು. ಜಾಣ್ಮೆಯ ವ್ಯವಹಾರದಿಂದ ಇಂದು ವ್ಯಾಪಾರದಲ್ಲಿ ಲಾಭ ಪಡೆಯುವಿರಿ. ಅನಿರೀಕ್ಷಿತವಾಗಿ ಸಿಕ್ಕ ಸಂಪತ್ತನ್ನು ಯಾರಿಗಾದರೂ ಕೊಡುವಿರಿ. ದುರ್ವ್ಯಸನವು ನಿಮ್ಮನ್ನು ಅಂಟಿಕೊಳ್ಳಬಹುದು. ಬಹಳಷ್ಟು ಕಾರ್ಯಗಳಿದ್ದರೂ ಎಲ್ಲವನ್ನೂ ಬಿಟ್ಟು ಆರಾಮಾಗಿ ಇರುವಿರಿ. ಕಳೆದ ಸಮಯವನ್ನು ನೀವು ಮೆಲುಕು ಹಾಕಿಕೊಂಡು ಸಂತೋಷಪಡುವಿರಿ. ನೀವು ತೆಗೆದುಕೊಳ್ಳುವ ನಿರ್ಧಾರವು ಸ್ಪಷ್ಟವಾಗಿ ಇರಲಿದೆ. ಸಮಯಸ್ಫೂರ್ತಿಯಿಂದ ಕೆಲಸವನ್ನು ಮಾಡುವಿರಿ. ಬೇಕಾದಷ್ಟನ್ನೇ ಮಾತನಾಡಿ.

ವೃಷಭ ರಾಶಿ: ಇಂದು ಯಾವುದೇ ಕಾರ್ಯದಲ್ಲಿ ನಿರತರಾಗಿದ್ದರೂ, ನಿಮ್ಮ ಮನಸ್ಸು ಮರ್ಯಾವುದರಮೇಲೋ ಇರಬಹುದು. ಯಾರೊಂದಿಗೂ ಅನಗತ್ಯ ವಿಚಾರಗಳನ್ನು ಚರ್ಚಿಸಬೇಡಿ. ಇತರರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದು ಬೇಡ. ವೈವಾಹಿಕ ಸುಖವು ಕ್ಷೀಣಿಸಬಹುದು. ಇಂದು ಕುಟುಂಬದವರ ಮಾತುಗಳು ನಿಮ್ಮ ಮನಸ್ಸಿಗೆ ನಾಟಬಹುದು. ವಿದ್ಯಾರ್ಥಿಗಳು ಶುಭ ಫಲಿತಾಂಶದಿಂದ ಸಂತೋಷಗೊಳ್ಳುವರು. ನಿಮ್ಮ ಅಪೂರ್ಣ ಕಾರ್ಯಗಳನ್ನು ಇಂದು ಪೂರ್ಣಮಾಡಿಕೊಳ್ಳುವಿರಿ. ಪೂರ್ವಪುಣ್ಯವು‌ ನಿಮ್ಮನ್ನು ಕಾಪಾಡಲಿದೆ. ಕೆಲವು ಅಪರಿಪೂರ್ಣವಾದ ಕಾರ್ಯವನ್ನು ಮಾಡಿ ಮುಗಿಸುವಿರಿ. ನಿಮ್ಮನ್ನು ಅಪಹಾಸ್ಯ ಮಾಡಲಿದ್ದು ನಿಮಗೆ ಕೋಪ ಬರುವುದು. ಕೋಪವನ್ನು ಕೋಪದಿಂದಲೇ ತೆಗೆಯಲು ಪ್ರಯತ್ನಿಸುವಿರಿ.

ಮಿಥುನ ರಾಶಿ: ಧಾರ್ಮಿಕ ಆಚರಣೆಯು ನಿಮಗೆ ಬಾಲಿಶ ಎನಿಸಬಹುದು. ಉನ್ನತ ಶಿಕ್ಷಣದಲ್ಲಿ ಸಾಧನೆ ಮಾಡುವಿರಿ. ಉದ್ಯಮವನ್ನು ಚುರುಕುಗೊಳಿಸುವ ಅಗತ್ಯವಿದೆ. ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಸಿಗಬಹುದು. ಇಂದು ನೀವು ಅನುಭವಸ್ಥರ ಮಾರ್ಗದರ್ಶನವನ್ನು ತೆಗೆದುಕೊಳ್ಳಬೇಕು. ಯಾರನ್ನೋ ದೂರುತ್ತ ನಿಮ್ಮ ಕೆಲಸದ ಅವಧಿಯನ್ನು ವ್ಯರ್ಥ ಮಾಡುವುದು ಬೇಡ. ವೈವಾಹಿಕ ಜೀವನದ ಬಗ್ಗೆ ಮಾತನಾಡುತ್ತಾ ಹಳೆಯದನ್ನು ನೆನಪಿಸಿಕೊಳ್ಳುವಿರಿ. ಶಿಸ್ತಿಗೆ ಹೆಚ್ಚು ಗಮನವನ್ನು ಇಂದು ಕೊಡುವಿರಿ. ನಿಮ್ಮ ಪ್ರೇಮಪ್ರಕರಣವು ದುಃಖಾಂತವಾಗಲಿದೆ. ಸೃಜನಾತ್ಮಕ ಕೆಲಸದಿಂದ ಹೆಚ್ಚಿನ ಯಶಸ್ಸನ್ನು ಸಾಧಿಸುವಿರಿ. ಸಂಗಾತಿಗಳಿಬ್ಬರೂ ದೂರಾಗುವ ಯೋಚನೆ ಮಾಡಬಹುದು. ನಿಮ್ಮ ಮಾತು ನಿಷ್ಪಕ್ಷಪಾತದಿಂದ ಇರಲಿ.

ಕಟಕ ರಾಶಿ: ಇಂದು ಪ್ರಯಾಣವು ಕಾರ್ಯಸಿದ್ಧಿಗೆ ಪೂರಕವಾದೀತು. ನಿಮ್ಮ ನಿರ್ಧಾರಗಳು ಇತರರಿಗೆ ಒಪ್ಪಿಗೆಯಾಗದೇ ಹೋಗಬಹುದು. ಮಕ್ಕಳ ಶಿಕ್ಷಣಕ್ಕಾಗಿ ಹಣವನ್ನು ಹೊಂದಿಸಬೇಕಾದೀತು. ನೀವು ಹೂಡಿಕೆಯಿಂದ ಆರ್ಥಿಕವಾಗಿ ಬಲವುಳ್ಳವರಾಗಲು ಯೋಚಿಸುವಿರಿ. ಪ್ರೇಮ ಜೀವನದಲ್ಲಿ ಪ್ರೀತಿ ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಯಾರಾದರೂ ತಪ್ಪು ತಿಳಿದಾರು ಎಂಬ ಭಾವವು ನಿಮ್ಮನ್ನು ಕಾಡಬಹುದು. ನೀವು ಹೊಸ ವಾಹನವನ್ನು ಸ್ನೇಹಿತರ ಒತ್ತಾಯಕ್ಕೆ ಖರೀದಿ ಮಾಡುವಿರಿ. ಒಂದೇ ತರದ ಜೀವನವು ನಿಮಗೆ ಬೇಸರವಾಗುವುದು. ಇಂದು ಹೆಚ್ಚು ಖರ್ಚು ಮಾಡುವ ಅನಿವಾರ್ಯತೆ ಬರಬಹುದು. ನಿಮ್ಮ ಕಾರ್ಯಗಳನ್ನು ವೇಗವಾಗಿ ಮುಗಿಸಿಕೊಂಡು ನಿಶ್ಚಿಂತೆಯಿಂದ ಇರುವಿರಿ.

ಸಿಂಹ ರಾಶಿ: ಇಂದು ನಿಮ್ಮ ಪ್ರೇಮಿಯನ್ನು ವಿವಾಹವಾಗಲು ಕುಟುಂಬದಿಂದ ಒಪ್ಪಿಗೆ ಸಿಗಬಹುದು. ನಿಮ್ಮ ವಿರೋಧಿಗಳು ನಿಮ್ಮ ಸಾಹಸವನ್ನು ಮೆಚ್ಚಬಹುದು. ನೀವು ಇಂದು ನಿಮ್ಮ ಕುಟುಂಬದ ಜೊತೆ ಸಮಯ ಕಳೆಯಬೇಕು ಎಂದುಕೊಂಡವರು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು, ಅವರ ಸಾಧನೆಗಾಗಿ ಸಮ್ಮಾನಿಸಬಹುದು. ಮಾರುಕಟ್ಟೆ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರುತ್ತದೆ. ಸಿಕ್ಕ ಯಶಸ್ಸನ್ನು ಲಾಭವಾಗಿಸಿಕೊಳ್ಳುವಿರಿ. ಸಂಗಾತಿಯ ಪ್ರೀತಿಯು ನಿಮಗೆ ಅಚ್ಚರಿಯನ್ನು ಉಂಟುಮಾಡೀತು. ತೆಗಳಿಕೆಗಳನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ ಕಾರಣ ಸಿಟ್ಟಾಗಬಹುದು. ಆದಾಯದ ಮೂಲಗಳ ಸಂಖ್ಯೆ ಹೆಚ್ಚಾಗುವುದು.‌ ಬಹಳ ದಿನಗಳಿಂದ ಮರೆತುಹೋಗಿದ್ದ ಸಂಗತಿಯನ್ನು ನೆನಪಿಸಿಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಯನ್ನು ಕೇಳುವ ಒತ್ತಾಯವಿದ್ದರೂ ಧೈರ್ಯ ಸಾಲದು.

ಕನ್ಯಾ ರಾಶಿ: ಈ ದಿನದ ಆರಂಭವು ನಿಮಗೆ ನಕಾರತ್ಮಕ ಮಾತಿನಿಂದ ಅಸರಂಭವಾಗಬಹುದು. ಇಂದು ಯಾವುದಾದರೂ ಪ್ರಮುಖ ಕೆಲಸದಲ್ಲಿ ನಿಮ್ಮನ್ನು ತೊಡಗಿಸಿಕೊಂಡು ನಿಶ್ಚಿಂತರಾಗಿ. ಬೇರೆ ವಿಚಾರಗಳ ಬಗ್ಗೆ ಯಾವುದೇ ಚಿಂತೆ ಬೇಡ. ಪ್ರೇಮ ಸಂಬಂಧಗಳಲ್ಲಿ ಭಾವುಕರಾಗಬಹುದು. ಇತರರ ಬಗ್ಗೆ ಅಸ್ವಾಭಾವಿಕ ಆಲೋಚನೆ ಮಾಡುವುದನ್ನು ಬಿಡಿ. ತಂದೆಯ ಜೊತೆ ಹಣಕಾಸಿನ ವಿಚಾರಕ್ಕೆ ಜಗಳವಾಗಬಹುದು. ಕೋಪದಿಂದ ಶಾಂತವಾಗಲು ಹಲವಾರು ದಾರಿಗಳನ್ನು ಕಂಡುಕೊಳ್ಳುವಿರಿ. ಬಂಧುಗಳ ಜೊತೆ ಆತ್ಮೀಯ ಒಡನಾಟ ಮಾಡುವಿರಿ. ಇನ್ನೊಬ್ಬರ ಅಹಂಕಾರಕ್ಕೆ ಸೊಪ್ಪು ಹಾಕುವುದು ಬೇಡ. ನಿರ್ಲಕ್ಷ್ಯದಿಂದ ಎಲ್ಲವೂ ಸಾಧ್ಯ. ಹೂಡಿಕೆಯ ವಿಚಾರವಾಗಿ ಚರ್ಚಿಸುವಿರಿ. ಮಿತ್ರರನ್ನು ಅನುಮಾನದಿಂದ ಕಾಣಬೇಕಾಗುವುದು. ಸಹಾಯ ಮಾಡಲು ಹೋಗಿ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ನೂತನ ಗೃಹದ ಖರೀದಿಯ ಬಗ್ಗೆ ಸದ್ಯ ಮಾತುಕತೆ ಬೇಡ. ಯಾವ ವಸ್ತುವನ್ನೂ ಒತ್ತಾಯದಿಂದ ಪಡೆಯಬೇಡಿ.

ತುಲಾ ರಾಶಿ: ಇಂದು ಉಂಟಾದ ನಿಮ್ಮ ಹಣಕಾಸಿನ ಸಮಸ್ಯೆಯು ಯಾರಿಂದಲೋ ಬಗೆಹರಿಯುತ್ತವೆ. ನಿಮ್ಮ ಇಚ್ಛೆಯನ್ನು ಪೂರ್ಣ ಮಾಡಿಕೊಳ್ಳುವಿರಿ. ರಂಗಭೂಮಿಗೆ ಸಂಬಂಧಿಸಿದ ಕೆಲವು ಪ್ರಮುಖ ಅವಕಾಶಗಳು ಆಸಕ್ತರಿಗೆ ಸಿಗಬಹುದು. ನೀವು ಅನಿರೀಕ್ಷಿತವಾಗಿ ಕೆಲವು ದೊಡ್ಡ ಯೋಜನೆಗಳನ್ನು ಪಡೆಯಬಹುದು. ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ನಿಮ್ಮ ತಪ್ಪನ್ನು ಎಲ್ಲರೆದು ಒಪ್ಪಿಕೊಳ್ಳಲು ಆಗದು. ಅಧಿಕ ಆಸ್ತಿಯೇ ನಿಮಗೆ ತೊಂದರೆಯನ್ನು ಉಂಟುಮಾಡಬಹುದು. ನಿದ್ರೆಯಿಲ್ಲದೇ ಚಿಂತೆ ಆರಂಭವಾಗುವುದು. ಮಾತನ್ನು ಕಡಿಮೆ ಮಾಡಿ ಕಾರ್ಯದಲ್ಲಿ ತೋರಿಸಿ. ಅನಪೇಕ್ಷಿತ ವಿಚಾರದ ಬಗ್ಗೆ ಚರ್ಚೆ ಬೇಡ. ಸುಮ್ಮನೇ ಸಮಯವನ್ನು ಹಾಳು ಮಾಡಿಕೊಳ್ಳುವಿರಿ. ಉದ್ಯಮದಲ್ಲಿ ಕಡಿಮೆ ಲಾಭವು ಸಮಾಧಾನ ತರದು. ಉದ್ಯೋಗದಲ್ಲಿ ಒತ್ತಡವನ್ನು ನಿಭಾಯಿಸಲು ಒದ್ದಾಡುವಿರಿ.

ವೃಶ್ಚಿಕ ರಾಶಿ: ಇಂದು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯವಾಗಿರುವುದು. ನಿಮ್ಮ ಆದಾಯದ ಮೂಲಗಳಿಂದ ಆದಾಯವು ಕಡಿಮೆಯಾಗಬಹುದು. ಆತುರದಲ್ಲಿ ಯಾವುದೇ ದೊಡ್ಡ ಮೊತ್ತದ ಹೂಡಿಕೆಯನ್ನು ಮಾಡುವುದು ಬೇಡ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಲ್ಲಿ ದೋಷಗಳನ್ನು ಪರಿಶೀಲಿಸಬಹುದು. ಅನಗತ್ಯ ಚಟುವಟಿಕೆಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ಮನೆಯವರ ಜೊತೆ ವಾಗ್ವಾದಕ್ಕೆ ನಿಲ್ಲುವಿರಿ. ಸಂತಾನ ಸಂತೋಷವನ್ನು ನೀವು ಇಂದು ಅನುಭವಿಸುವಿರಿ. ಆಪ್ತರ ವಿಯೋಗವು ನಿಮ್ಮನ್ನು ಕುಗ್ಗಿಸಬಹುದು. ಅಧಿಕ ಖರ್ಚಿನಂತೆ ಕಾಣುವ ವ್ಯವಹಾರವನ್ನು ನೀವು ಬಿಡುವಿರಿ. ನೀವು ಕಷ್ಟದಲ್ಲಿ ಸುಖವನ್ನು ಕಾಣುವ ಮಾರ್ಗವನ್ನು ಹುಡುಕಿಕೊಳ್ಳುವಿರಿ. ಅಮೂಲ್ಯ ವಸ್ತುಗಳ ಸಂಪಾದನೆಯಾಗಲಿದೆ. ನಿಮ್ಮ ಸುಳಿವು ಸಿಗದೇ ಮನೆಯಲ್ಲಿ ಆತಂಕವಾಹಬಹುದು.

ಧನು ರಾಶಿ: ಇಂದು ಅವಿವಾಹಿತರು ವಿವಾಹದ ಬಗ್ಗೆ ಅಧಿಕ ಚಿಂತಿತರಾಗುವರು. ನಿಮ್ಮ ವೇತನದ ಬಗ್ಗೆ ಮೇಲಧಿಕಾರಿಗಳ ಜೊತೆ ಚರ್ಚೆ ಮಾಡುವಿರಿ. ನಿಮ್ಮ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಿ ಸಂತೋಷಪಡುವಿರಿ. ನಿಮ್ಮ ಮಾತುಗಳು ಇತರರಿಗೆ ಇಷ್ಟವಾಗುವುದು. ಸಮಾರಂಭದಲ್ಲಿ ಭಾಗವಹಿಸಿ ಅನೇಕ ಅಪರೂಪದ ಸ್ನೇಹಿತರ ಜೊತೆ ಸಮಯವನ್ನು ಕಳೆಯುವಿರಿ. ಇಂದು ನೀವಂದುದುಕೊಂಡಷ್ಟು ಸಫಲತೆಯನ್ನು ಸಾಧಿಸಲಿದ್ದೀರಿ. ಆರ್ಥಿಕವಾದ ಸಂತೃಪ್ತಿಯು ನಿಮ್ಮ ಮುಖದಲ್ಲಿ ಇರಲಿದೆ. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ಇಷ್ಟವಾಗದು. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು. ಹಳೆಯ ನೆನಪುಗಳು ನಿಮ್ಮ ಕಾಡುವುವು. ಇಂದು ನೀವು ಆಕರ್ಷಕ ವ್ಯಕ್ತಿಗಳಾಗಿ ಕಾಣುರುವಿರಿ. ಕೃಷಿಯ ಕೆಲಸದಲ್ಲಿ ನಿಮ್ಮ ಉತ್ಸಾಹ ಕಡಿಮೆಯಾಗಲಿದೆ. ಕುಶಲ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಿರುವುದು.

ಮಕರ ರಾಶಿ: ನೀವು ಇಂದು ನಿಮ್ಮ ಕಾರ್ಯಗಳು ಅನುಭವ ರಹಿತವಾಗಿ ಇರಬಹುದು. ಇದು ನಿಮ್ಮ ಕಾರ್ಯವನ್ನು ಅಸಹಜವಾಗಿ ಪೂರೈಸುವುದು. ನಿಮ್ಮ ವೈಯಕ್ತಿಕ ಸಂಬಂಧಗಳಲ್ಲಿ ಆಪ್ತತೆಯು ದೂರವಾಗಬಹುದು. ನಿಮ್ಮ ಬಗ್ಗೆ ನೀವು ಹೆಚ್ಚು ಗಮನ ಕೊಡುವಿರಿ. ಭೋಗವಸ್ತುಗಳಿಂದ ಅಧಿಕ ಸಂತೋಷವಾಗಲಿದೆ. ಇಂದು ದೂರ ಪ್ರಯಾಣಕ್ಕೆ ಅನುಕೂಲಕರವಾಗಿಲ್ಲ. ಅಪರಿಚಿತರ ಮಾತು ನಿಮಗೆ ಸಮಾಧಾನವನ್ನು ಕೊಡಬಹುದು. ಯಾರ ಮಾತನ್ನೂ ನೀವು ಕೇಳಲಾರಿರಿ. ಉದ್ಯೋಗದಲ್ಲಿ ನಿಮ್ಮ ಸ್ಥಾನವು ಬದಲಾಗುವುದು. ಉದ್ಯೋಗದಲ್ಲಿ ಸಿಗುವ ಉನ್ನತ ಸ್ಥಾನಮಾನವನ್ನು ತಳ್ಳಿಹಾಕುವಿರಿ. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ಬಂಧುಗಳು ನಿಮ್ಮ ಕಷ್ಟಕ್ಕೆ ನೆರವಾಗುವರು. ಹೊಸ ಪರಿಚಯದಲ್ಲಿ ಆತ್ಮೀಯತೆ ಬೆಳೆಯುವುದು. ಅತಿಯಾದ ಆಸೆಯಿಂದಾಗಿ ದುಃಖಿಸಬೇಕಾದೀತು.

ಕುಂಭ ರಾಶಿ: ಇಂದು ನಿಮ್ಮ ಮಕ್ಕಳ ಯಶಸ್ಸು ನಿಮಗೆ ಸಂತೋಷವನ್ನು ಕೊಡಬಹುದು. ನಿಮ್ಮ ಪ್ರಮುಖ ವ್ಯಾಪಾರ ಸಂಪರ್ಕಗಳನ್ನು ಅಭಿವೃದ್ಧಿ ಮಾಡಿಕೊಳ್ಳುವಿರಿ. ನಿಮ್ಮ ಸಂಗಾತಿಯ ಜೊತೆ ನೀವು ಎಲ್ಲಿಗಾದರೂ ದೂರದ ಪ್ರದೇಶಗಳಿಗೆ ವಿಹಾರಕ್ಕೆ ಹೋಗಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಮೇಲಧಿಕಾರಿಗಳ ವರ್ತನೆಯು ನಿಮ್ಮನ್ನು ಅಸಮಾಧಾನಗೊಳಿಸಬಹುದು. ನಿಮ್ಮ ತಂದೆಯ ಜೊತೆ ಸೌಹಾರ್ದ ಸಂಬಂಧವನ್ನು ಕಾಪಾಡಿಕೊಳ್ಳಲು ಬಯಸುವಿರಿ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಜವಾಬ್ದಾರಿಗಳಿಂದ ನೀವು ಮುಕ್ತರಾಗಿ ಸಂತೋಷಿಸುವಿರಿ. ಅಪರಿಚಿತರು ನಿಮಗೆ ಸಮಸ್ಯೆಯನ್ನು ಕೊಡುವರು. ಭೇಟಿಯಾಗದ ಜನರು ಅಪರೂಪಕ್ಕೆ ಸಿಕ್ಕಿಯಾರು. ನಿಮ್ಮ ನಡವಳಿಕೆಯು ನಿಮ್ಮನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯುವುದು. ಕಛೇರಿಯ ಕೆಲಸಗಳನ್ನು ಯಾವುದೇ ನಿರ್ಬಂಧವಿಲ್ಲದೇ ಮಾಡುವಿರಿ.

ಮೀನ ರಾಶಿ: ನೀವು ಇಂದು ನಿಮ್ಮ ಪ್ರತಿಸ್ಪರ್ಧಿಗಳ ಎದುರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ಇಂದಿನ ನಿಮ್ಮ ಆಲಸ್ಯದಿಂದ ಪ್ರಮುಖ ಕಾರ್ಯಗಳು ಪೂರ್ಣವಾಗದೇ ಹಾಗೆಯೇ ಉಳಿದುಕೊಳ್ಳಬಹುದು. ನಿಮ್ಮ ತಾಯಿಯ ಕಡೆ ಯಾರಿಗಾದರೂ ಅನಾರೋಗ್ಯವು ಅಧಿಕವಾಗಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗಮನಾರ್ಹವಾದ ತಯಾರಿ ಬೇಕಾದೀತು. ಕೆಲವು ಪ್ರಮುಖ ವ್ಯಕ್ತಿಗಳ ಯಶಸ್ಸು ನಿಮಗೆ ಹೆಚ್ಚು ಸ್ಫೂರ್ತಿ ನೀಡುತ್ತದೆ. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು. ನಿಮಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ. ಇಷ್ಟವಿಲ್ಲದಿದ್ದರೂ ನೀವು ಹಿರಿಯರ ಮಾತನ್ನು ಕೇಳಬೇಕಾಗುವುದು. ಪ್ರೇಮಜೀವನಕ್ಕೆ ನಿಮಗೆ ಒಗ್ಗದು. ಬಂಧನದಂತೆ ಅನ್ನಿಸಬಹುದು. ಸಂಗಾತಿಯ ಆಲೋಚನೆಗಳು ನಿಮಗೆ ಇಷ್ಟವಾಗಬಹುದು. ಇನ್ನೊಬ್ಬರಿಗೂ ಸಂತೋಷವಾಗುವಂತೆ ಇರುವಿರಿ.

ಲೋಹಿತ ಹೆಬ್ಬಾರ್-8762924271 (what’s app only)

Published On - 12:02 am, Wed, 31 January 24

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ