AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಅತಿಯಾದ ಆತ್ಮವಿಶ್ವಾಸವು ನಿಮ್ಮ ಕಾರ್ಯವನ್ನು ಹಾಳುಮಾಡಬಹುದು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 17 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಅತಿಯಾದ ಆತ್ಮವಿಶ್ವಾಸವು ನಿಮ್ಮ ಕಾರ್ಯವನ್ನು ಹಾಳುಮಾಡಬಹುದು
ದಿನಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 17, 2024 | 12:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಶೂಲಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:32 ರಿಂದ ಸಂಜೆ 02:06ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:52 ರಿಂದ 09:25 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 10:59 ರಿಂದ ಮಧ್ಯಾಹ್ನ 12:32ರ ವರೆಗೆ.

ಮೇಷ ರಾಶಿ : ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಅದನ್ನು ಕೊಡಿ. ಸಂತೋಷದಿಂದ ಇರುತ್ತಾರೆ. ಬೆಚ್ಚಗಿನ  ವಾತಾವರಣವು ನಿಮಗೆ ಇಂದು ಹಿತವಾಗಲಿದೆ. ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ನಿಧಾನವಾಗಿ ಸಾಗುತ್ತಿದ್ದ ನಿಮ್ಮ ಕೆಲಸಕ್ಕೆ ವೇಗ ಸಿಗಲಿದೆ. ಸ್ವಲ್ಪ ಪ್ರಯಾಣದ ಅನಿವಾರ್ಯತೆ ಬರಬಹುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟಪಡುವಿರಿ. ವಾಹನ ಚಾಲನೆಯಿಂದ ಆಯಾಸವಾದೀತು. ಸಂಬಂಧವಿಲ್ಲದ ವಿಚಾರದ ಬಗ್ಗೆಯೂ ಇಂದು ಹೆಚ್ಚು ಮಾತನಾಡುವಿರಿ. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡುವುದು. ಗೊಂದಲದಲ್ಲಿ ನೀವು ಇರಬೇಕಾದೀತು. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ. ಇಂದು ಗಳಿಸಿದ ಹಣವು ಇಂದೇ ಖಾಲಿಯಾಗುವುದು. ನಿಮ್ಮನ್ನು ಕೆಲಸಕ್ಕೋಸ್ಕರ ಪ್ರಶಂಸಿಸಬಹುದು.

ವೃಷಭ ರಾಶಿ : ನಿಮ್ಮ ಆಲೋಚನಗಳನ್ನು ಸ್ನೇಹಿತರ ಮೇಲೆ ಹೇಳುವಿರಿ. ಬಂಧುಗಳು‌ ನಿಮ್ಮ ವ್ಯಕ್ತಿತ್ವದ ಬಗ್ಗೆ ಮಾತನಾಡುವರು. ಸಂಪತ್ತಿನ ಅನಿರೀಕ್ಷಿತವಾಗಿ ಖರ್ಚಾಗಲಿದೆ. ತಿಳಿವಳಿಕಯಿಂದ‌ ಕೂಡಿದ ನಿಮ್ಮ ಜೀವನ ಸುಗಮವಾಗಲಿದೆ. ಅಪರಿಚಿತರು ನಿಮ್ಮ ಸಖ್ಯವನ್ನು ಬಯಸಿ ಬರಬಹುದು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರದಲ್ಲಿ ಗೊಂದಲವಿರುವುದು. ನಿಮ್ಮವರನ್ನು ಕಂಡು ನೀವು ಅಸೂಯೆಪಡಬಹುದು. ಕಾರ್ಯದ ಆರಂಭದಲ್ಲಿ ಒತ್ತಡವು ಹೆಚ್ಚು ಇರುವುದು. ಉಪಕಾರದ ಕೃತಜ್ಞತೆ ಇರಲಿ. ನಿಮ್ಮ ಇಂದಿನ ಖರ್ಚಿಗೆ ಕಡಿವಾಣ ಹಾಕುವುದು ಅಸಾಧ್ಯವಾಗಬಹುದು. ದುರ್ಬಲರ ಮೇಲೆ ನೀವು ಸಿಟ್ಟಾಗುವಿರಿ. ಸಂಗಾತಿ ಮತ್ತು ಮಕ್ಕಳನ್ನು ಅವರಷ್ಟಕ್ಕೆ ಬಿಟ್ಟು ನೀವು ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ.

ಮಿಥುನ ರಾಶಿ : ನಿಮಗಿಂದು ಒತ್ತಾಯದ ಮೇರೆಗೆ ಸಭೆ, ಸಮಾರಂಭಗಳಲ್ಲಿ ಮಾತನಾಡುವ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಸ್ವ ಆಸಕ್ತಿಯಿಂದ ತೊಡಗಿಕೊಳ್ಳುವರು. ಆಯಾಸವಿದ್ದರೂ ಇನ್ನೊಬ್ಬರ ಒತ್ತಾಯಕ್ಕೆ ಅವರೊಂದಿಗೆ ವಾತುವಿಹಾರಕ್ಕೆಂದು ಹೋಗುವಿರಿ. ಇಂದು ಯಾರಿಂದಲಾದರೂ ನಿಮಗೆ ಬೇಕಾದುದನ್ನು ಪಡೆದುಕೊಳ್ಳುವಿರಿ. ಸದಾ ದೂರವುದನ್ನು ಬಿಟ್ಟು ಮರೆಯುವ ಅಭ್ಯಾಸವನ್ನು ಮಾಡಿಕೊಳ್ಳಿ. ಹಲವರ ಮಾತಿನಿಂದ ನಿಮ್ಮ ನಿರ್ಧಾರವು‌ ಗೊಂದಲವಾಗಿಯೇ ಉಳಿಯುವುದು. ನೀವು ಹೊಗಳಿಕೆ ನಾಚಿಕೊಳ್ಳುವಿರಿ. ಏನಾದರೊಂದು ಕಾರ್ಯವನ್ನು ನೀವು ಮಾಡುತ್ತಲೇ ಇರುವುದು ನಿಮಗೆ ಇಷ್ಟವಾಗುವುದು. ಕಛೇರಿಯಲ್ಲಿ ಸ್ತ್ರೀಯರಿಂದ ಅಪಮಾನವಾಗಬಹುದು. ನಿಮ್ಮ ತಪ್ಪುಗಳು ನಿಮಗೆ ಗೊತ್ತಾಗದೇ ಇನ್ನೊಬ್ಬರು ತಿಳಿಸಬೇಕಾಗುವುದು. ಪ್ರಯಾಣವು ಅನಿವಾರ್ಯವಾದರೂ ಅದರಿಂದ ಶುಭ ಸುದ್ದಿಯು ನಿಮಗೆ ಇರುವುದು.

ಕರ್ಕ ರಾಶಿ : ನೀವು ವಿದ್ಯಾಭ್ಯಾಸಕ್ಕೆಂದು ಉತ್ತಮ‌ವಾದ ವಿದ್ಯಾಕೇಂದ್ರವನ್ನು ಹುಡುಕುತ್ತಿದ್ದರೆ ಸಿಗಲಿದೆ. ಜನಜಾಗೃತಿಯ ಕಾರ್ಯಕ್ರಮಗಳಿಗೆ ಹೋಗಲಿದ್ದೀರಿ. ಉತ್ತಮ ಆಹಾರವನ್ನು ಸೇವಿಸುವ ದಿನವಿಂದು. ವಿದ್ಯುದುಪಕರಣಗಳಿಂದ ಹಣವು ಖರ್ಚಾಗಬಹುದು. ನಿಮ್ಮ ಮೇಲೆ ಅನುಮಾನದ ಹುತ್ತಗಳು ಇರುತ್ತವೆ. ನಿಮ್ಮ ಆಲಸ್ಯದಿಂದ ಇತರರಿಗೆ ಕೋಪ ಬರಬಹುದು. ಸ್ಥಿರಾಸ್ತಿಯ ವಿಚಾರಕ್ಕಾಗಿ ಕುಟುಂಬದ ಹಿರಿಯರ ಜೊತೆ ಮಾತುಕತೆ ನಡೆಸುವಿರಿ. ನಿಮ್ಮಮೇಲೇ‌ ನಿಮಗೆ ಅಪನಂಬಿಕೆ ಉಂಟಾಗಬಹುದು. ಉದ್ಯೋಗದಲ್ಲಿ ವರ್ಗಾವಣೆ ಆಗುವ ಸಾಧ್ಯತೆ ಇದ್ದು, ಮನೆಯಿಂದ ದೂರವಿರಬೇಕಾದೀತು. ಇಷ್ಟಾರ್ಥವು ನಿನಗೆ ಸಿದ್ಧಿಯಾಗುವ ಬಗ್ಗೆ ನಿಮಗೆ ಅನುಮಾನವಿರಲಿದೆ. ಇನ್ನೊಬ್ಬರ ಬಗ್ಗೆ ಸದಾ ಅಸಮಾಧಾನವಿರಲಿದೆ. ಕೋಪಗೊಂಡ ಸಂಗಾತಿಯನ್ನು ನೀವು ಸಮಾಧಾನ ಮಾಡಬೇಕಾದೀತು. ಅತಿಯಾದ ಆತ್ಮವಿಶ್ವಾಸವು ನಿಮ್ಮ ಕಾರ್ಯವನ್ನು ಹಾಳುಮಾಡಬಹುದು.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್