Horoscope: ನಿತ್ಯಭವಿಷ್ಯ, ಏಕಾಂಗಿತನ ನಿಮ್ಮನ್ನು ಅತಿಯಾಗಿ ಕಾಡಬಹುದು, ಪ್ರೇಮಿಗಳು ವಿವಾಹಕ್ಕೆ ಮುಂದಡಿ ಇಡಬಹುದು

|

Updated on: Jan 19, 2024 | 12:10 AM

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 19) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Horoscope: ನಿತ್ಯಭವಿಷ್ಯ, ಏಕಾಂಗಿತನ ನಿಮ್ಮನ್ನು ಅತಿಯಾಗಿ ಕಾಡಬಹುದು, ಪ್ರೇಮಿಗಳು ವಿವಾಹಕ್ಕೆ ಮುಂದಡಿ ಇಡಬಹುದು
ಪ್ರಾತಿನಿಧಿಕ ಚಿತ್ರ
Follow us on

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 19) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಸಾಧ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ 11:18 ರಿಂದ 12:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:34 ರಿಂದ 04:59ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:28ರಿಂದ 09:53ರ ವರೆಗೆ.

ಸಿಂಹ ರಾಶಿ: ನಿಮ್ಮ ಸಹಾಯವು ಇಂದು ಯಾವುದಾದರೊಂದು ರೀತಿಯಲ್ಲಿ ಹಿಂದಿರುಗಬಹುದು. ಯಂತ್ರಗಳ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಕಾಣುವಿರಿ. ಪುಣ್ಯ ಸ್ಥಳಗಳ ದರ್ಶನವನ್ನು ಮಾಡುವಿರಿ. ರಾಜಕೀಯ ಪ್ರೇರಿತದಿಂದ ನಿಮ್ಮ ಬಗ್ಗೆ ಸುಳ್ಳು ಸುದ್ದಿಗಳು ಬರಬಹುದು. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ಪ್ರೇಮಿಗಳು ವಿವಾಹಕ್ಕೆ ಮುಂದಡಿ ಇಡಬಹುದು. ಏಕಾಂಗಿ ಎಂಬ ಭಾವವು ನಿಮ್ಮನ್ನು ಅತಿಯಾಗಿ ಕಾಡಬಹುದು.‌ ನಿಂದನೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ. ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗುವುದು. ಪರರ ವಸ್ತುವನ್ನು ಅವರಿಗೆ ಹಿಂತಿರುಗಿಸಲು ನಿಮಗೆ ಆಗದೇ ಹೋಗುವುದು.

ಕನ್ಯಾ ರಾಶಿ: ಅಪೂರ್ಣವಾದ ಕೆಲಸಗಳಿಂದ‌ ಚಿಂತೆ ಹೆಚ್ಚಾದೀತು. ಉನ್ನತವಾದ ಆಲೋಚನೆಗಳು ನಿಮ್ಮನ್ನು ದಡ ಸೇರಿಸುವುದು. ಹಳೆಯ ವಸ್ತುಗಳನ್ನು ಮಾರಾಟ ಮಾಡಬೇಕಾದೀತು. ಸ್ತ್ರೀಯರು ಸಂಗಾತಿಯ ಜೊತೆ ಮನಸ್ತಾಪವನ್ನು ಮಾಡಿಕೊಳ್ಳುವರು. ಪ್ರಯಾಣವು ಅವಸರವಸರವಾಗಿ ಇರುವುದು. ಸ್ವಾಭಿಮಾನವನ್ನು ಬಿಟ್ಟು ಇರುವುದು ಅಸಾಧ್ಯ ಎನಿಸಬಹುದು. ಕೆಲವರಿಂದ ತಪ್ಪಿಸಿಕೊಳ್ಳಲು ನೋಡುವಿರಿ. ಅನಾರೋಗ್ಯವು ನೆಪವಾಗಬಹುದು. ಸ್ತ್ರೀಯರಿಗೆ ಸಹಾಯ ಮಾಡಲು ಹೋಗಿ ಹಾಸ್ಯಕ್ಕೆ ಒಳಗಾಗುವಿರಿ. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು. ನೌಕರರಿಗೆ ಕೆಲಸವನ್ನು ಹೇಳುವ ರೀತಿಯಲ್ಲಿ ಹೇಳಿ, ಮಾಡಿಸಿಕೊಳ್ಳಿ. ನಿಮ್ಮ ದಿವಸದ ವ್ಯವಸ್ಥೆಯನ್ನು ಕ್ರಮಬದ್ಧ ಮಾಡಿಕೊಳ್ಳಿ. ಮಾತಿನಿಂದ ಅಳೆದ ನಿಮ್ಮ ಮಾಪನವು ಸರಿಯಾಗದೇ ಇರುವುದು.

ತುಲಾ ರಾಶಿ: ತಪ್ಪು ಗ್ರಹಿಕೆಯಿಂದ ನಿಮ್ಮ ಕೆಲಸಗಳು ಅಸ್ತವ್ಯಸ್ತವಾಗಬಹುದು. ಒಂದೇ ಕೆಲಸವನ್ನು ಮತ್ತೆ ಮತ್ತೆ ಮಾಡಬೇಕಾದೀತು. ಅಂದುಕೊಂಡಿದ್ದನ್ನು ಸಾಧಿಸಲು ಸರಿಯಾದ ಮಾರ್ಗವು ಕಾಣಬಹುದು. ದೇವರ ಮೇಲೆ ನಂಬಿಕೆ ಇಟ್ಟ ಕಾರಣ ನಿಮ್ಮ ಮನೋರಥವು ಪೂರ್ತಿಯಾಗಿದ್ದು ನಿಮಗೆ ಅತಿಶಯ ಸಂತೋಷವಾಗಲಿದೆ. ಇನ್ನೊಬ್ಬರ ಭಾವನೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲಾರಿರಿ. ಭೂಮಿಯನ್ನು ಖರೀದಿಸುವ ಸಂದರ್ಭ ಬಂದರೂ ಪೂರ್ತಿ ಹಣವನ್ನು ಸೇರಿಸಲು ಆಗದು. ಯಾರ ಬಳಿಯೂ ಕೆಲಸವಿಲ್ಲ ಎಂದು ಹೇಳಬೇಡಿ. ನಿಮ್ಮ ಘನತೆಗೆ ಧಕ್ಕೆ ಬರುವುದು. ಸಮಯಪಾಲನೆಗೆ ಪ್ರಶಂಸೆಯು ಸಿಗುವುದು. ನೀವು ಕಾರ್ಯಕ್ಕೆ ಸಂಬಂಧಪಟ್ಟಂತೆ ನಿಮ್ಮದೇ ಆದ ಚೌಕಟ್ಟನ್ನು ರಚಿಸಿಕೊಳ್ಳುವುದು ಕ್ಷೇಮ.‌ ಇಲ್ಲವಾದರೆ ಎಲ್ಲವೂ ನಿಮ್ಮ ಬುಡಕ್ಕೇ ಬರುವುದು. ವಿಷಮಸ್ಥಿತಿಯನ್ನು ಎದುರಿಸಲಾರಿರಿ. ಮಹಾಗೌರಿಯ ಆರಾಧನೆಯನ್ನು ಮಾಡಿ.

ವೃಶ್ಚಿಕ ರಾಶಿ: ನಿಮ್ಮ‌ ನಿರ್ಧಾರಗಳನ್ನು ಬೇರೆ ಯಾರಾದರೂ ಬದಲಿಸಬಹುದು. ಇದು ನಿಮ್ಮ ಅಪಕ್ವತೆಯನ್ನು ತಿಳಿಸಿಬಹುದು. ಉದ್ಯಮದಲ್ಲಿ ಚಿಂತಿತ ಲಾಭ ಕಾಣದೇ ಮನಸ್ಸು ಕುಗ್ಗಬಹುದು. ಉತ್ಸಾಹದಿಂದ ಇರಲು ನಿಮಗೆ ಮಾರ್ಗಗಳೂ ಕಡಿಮೆ‌ ಇರಬಹುದು. ಇಷ್ಟವಿಲ್ಲದಿದ್ದರೂ ಉದ್ಯೋಗಕ್ಕೆ ತೆರಳಬೇಕಾದೀತು. ಮೇಲಧಿಕಾರಿಗಳ ಮಾತು ಕಿರಿಕಿರಿ ಎನಿಸಬಹುದು. ಉದ್ಯೋಗವನ್ನು ಬದಲಿಸುವ ಮೊದಲು ಸ್ನೇಹಿತರ ಸಲಹೆಯನ್ನು ಪಡೆಯುವಿರಿ. ಸಣ್ಣ ಕೆಲಸವಾದರೂ ಶ್ರದ್ಧೆಯಿಂದ ಮಾಡುವಿರಿ. ಯಾವುದೋ ಗುಂಗಿನಲ್ಲಿ ಇಂದಿನ ಕೆಲಸವನ್ನೆಲ್ಲ ಹಾಳುಮಾಡಿಕೊಳ್ಳುವಿರಿ. ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನು ನಡೆಸಿ. ಸ್ವಾರ್ಥದಿಂದ ನಿಮಗೇ ತೊಂದರೆಯಾಗುವುದು ಎಂದು ಮನವರಿಕೆ ಆಗುವುದು. ದೂರದಲ್ಲಿ ಇರುವ ನಿಮಗೆ ಕುಟುಂಬದ ವಾರ್ತೆಯು ಖಷಿಯನ್ನು ಕೊಡುವುದು. ಅಪರೂಪದ ಪ್ರೀತಿಗೆ ಶರಣಾಗುವಿರಿ.