ದಿನಭವಿಷ್ಯ: ಈ ರಾಶಿಯವರು ಹೊಸ ಸ್ನೇಹಿತರನ್ನು ಅನಿರೀಕ್ಷಿತವಾಗಿ ಪಡೆಯುವಿರಿ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 08 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

ದಿನಭವಿಷ್ಯ: ಈ ರಾಶಿಯವರು ಹೊಸ ಸ್ನೇಹಿತರನ್ನು ಅನಿರೀಕ್ಷಿತವಾಗಿ ಪಡೆಯುವಿರಿ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 08, 2024 | 12:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜೂನ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಶೂಲಿ, ಕರಣ: ಬವ , ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:18 ರಿಂದ 10:55ರ ವರೆಗೆ, ಯಮಘಂಡ ಕಾಲ 14:09 ರಿಂದ ಸಂಜೆ 15:46ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ.

ಮೇಷ ರಾಶಿ :ಇಂದು ನಿಮ್ಮ ಆತ್ಮವಿಶ್ವಾಸವೇ ಎಲ್ಲ ಕಾರ್ಯಗಳು ಮೂಲವಾಗುವುದು. ಹೊಸ ಸ್ನೇಹಿತರನ್ನು ಅನಿರೀಕ್ಷಿತವಾಗಿ ಪಡೆಯುವಿರಿ. ಪ್ರೀತಿಪಾತ್ರರ ಜೊತೆ ಇಂದು ವಿಹಾರ ಮಾಡುವಿರಿ. ವಿದ್ಯಾರ್ಥಿಗಳು ಯಂತ್ರೋಪಕರಣಗಳನ್ನು ಪಡೆದು ಆನಂದಿಸುವರು. ನಿಮ್ಮ ಸಂಕಷ್ಟಕ್ಕೆ ಇತರರ ಸಹಾಯವನ್ನು ಪಡೆದುಕೊಳ್ಳುವಿರಿ. ಸಮಾಜಮುಖೀ ಕಾರ್ಯಗಳ ಕಡೆ ಗಮನಹರಿಸುವಿರಿ. ಬಂಧುಗಳು ತಾವು ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು ಎಚ್ಚರದಿಂದಿರಿ. ವೃತ್ತಿಯಲ್ಲಿ ಬರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದು. ಅದರಲ್ಲಿ ಉತ್ತಮ ಫಲಿತಾಂಶ ಬರುವ ಯೋಗವಿದೆ. ಕೊನೆಯ ಕ್ಷಣದವರೆಗೂ ನಿಮ್ಮ ಛಲವನ್ನು ಬಿಡಬೇಡಿ. ರಾಜಕಾರಣದ ಸ್ಪರ್ಶದಿಂದ ನಿಮ್ಮ ವ್ಯವಹಾರಕ್ಕೆ ಹೊಸ ದಿಕ್ಕನ್ನು ಸಿಗಬಹುದು. ಹಳೆಯ ಯಂತ್ರಗಳು ದುರಸ್ತಿಗೆ ಬರುವ ಸಾಧ್ಯತೆ ಇದೆ.

ವೃಷಭ ರಾಶಿ :ಇಂದು ನಿಮಗೆ ಅನ್ಯರ ಕಾರ್ಯದ ಸಹವಾಸ ಬೇಡ. ನೀವು ನಿಮ್ಮ ಅಂತರಂಗವನ್ನು ಮುಚ್ಚಿಡಲು ಪ್ರಯತ್ನಿಸಿದರೂ ಅದು ನಿಲ್ಲದು. ಬರಬೇಕಾದ ಹಳೆಯ ಬಾಕಿಗಳು ಇಂದು ಬಂದು ಸೇರಲಿದೆ. ನಿಮ್ಮ ಕೆಲಸಗಳಿಗೆ ಇಂದು ಹೆಚ್ಚು ಪ್ರಾಮುಖ್ಯ ನೀಡಿ. ಸಾಹಸ ಮಾಡಲು ಹೋಗಿ ಮುಖಭಂಗವಾದೀತು. ಆಪ್ತರಿಂದ ಏನಾನ್ನಾದರೂ ನಿರೀಕ್ಷಿಸಿ, ಪಡೆದುಕೊಳ್ಳುವಿರಿ. ವಿಸ್ಮೃತಿಯಿಂದ ಕಷ್ಟವಾಗುವುದು. ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರವಿರಬೇಕಸದೀತು. ವ್ಯಾಪಾರದಲ್ಲಿ ಚೇತರಿಕೆ ಕಂಡು ಸಂತಸವಾದೀತು. ವೃತ್ತಿಯಲ್ಲಿ ಬಹಳ ಜಾಣ್ಮೆಯಿಂದ ಕೆಲಸವನ್ನು ನಿಭಾಯಿಸುವಿರಿ. ಹೊಸ ಯೋಜನೆಯನ್ನು ರೂಪಿಸುವಿರಿ. ಪತ್ನಿಯ ಸಹಾಯ ನಿಮಗೆ ಸಿಗಲಿದೆ. ವ್ಯಾಪಾರ ವಲಯದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ನೌಕರರ ನಿರ್ಲಕ್ಷ್ಯದಿಂದ ಆಗುವ ಹೊಣೆಯನ್ನೂ ಹೊರಬೇಕಾಗುವುದು. ಕೆಲವು ರೀತಿಯ ಹಾನಿಯ ಬಗ್ಗೆಯೂ ಚಿಂತಿಸುವುದು ಅಗತ್ಯ.

ಮಿಥುನ ರಾಶಿ :ಇಂದು ನಿಮ್ಮ ಸಂಗಾತಿಯ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಸೋಲಬಹುದು. ಮನೆಯ ಕಾರ್ಯಗಳಲ್ಲಿ ಮಗ್ನರಾಗಿ ಆಯಾಸವನ್ನು ತರಿಸಿಕೊಳ್ಳುವಿರಿ. ಅಧಿಕಾರಿಗಳ ಭೇಟಿಯಿಂದ ನಿಮ್ಮ ಉದ್ಯೋಗದಲ್ಲಿ ಆದಾಯ, ಪ್ರಭಾವಗಳು ಹೆಚ್ಚಾಗಲಿದೆ‌. ಯಾರಾದರೂ ತಟಸ್ಥರಾದರೆ ಶಾಂತವಾಗಲಿದೆ. ದೇಹದ ಕೆಲವು ಭಾಗಗಳಲ್ಲಿ ನೋವುಗಳು ಕಾಣಿಸಬಹುದು. ಕೃಷಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಸ್ವಲ್ಪ ಹಿನ್ನಡೆ ಆಗಬಹುದು. ಸರ್ಕಾರಿ ಉದ್ಯೋಗದಲ್ಲಿ ಹೊಸ ಸ್ಥಾನ ದೊರೆಯುವ ಸಾಧ್ಯತೆ ಇದೆ. ಆಪ್ತ ಸ್ನೇಹಿತರ ಬೆಂಬಲವೂ ನಿಮ್ಮ ಮನಸ್ಥಿತಿಯನ್ನು ಹೆಚ್ಚಿಸುತ್ತದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಕೆಲವೊಮ್ಮೆ ಸ್ವಭಾವದಲ್ಲಿ ಭ್ರಮೆಯಿಂದ ಕೋಪದ ಸ್ಥಿತಿ ಇರಬಹುದು. ನಿಮ್ಮಲ್ಲಿರುವ ನ್ಯೂನತೆಗಳನ್ನು ನೀವೇ ತಿಳಿದು ಸರಿಪಡಿಸಿಕೊಳ್ಳಿ. ಇನ್ನೊಬ್ಬರು ಹೇಳುವ ತನಕ ಕಾಯುವುದು ಬೇಡ‌.

ಕರ್ಕ ರಾಶಿ :ಇಂದು ನಿಮ್ಮ ಇಷ್ಟದವರ ಜೊತೆ ಸಂತೋಷದಿಂದ ವ್ಯವಹರಿಸುವಿರಿ. ಕೆಲವು ಮಾತುಗಳಿಂದ ಅವರಿಗೆ ನೋವಾಗಬಹುದು.‌ ನ್ಯಾಯಾಲಯಕ್ಕೆ ಸಂಬಂಧಿಸಿದ್ದನ್ನು ತುರ್ತಾಗಿ ಮಾಡುವಿರಿ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮಲ್ಲಿಗೆ ಬರುವರು. ಕಾರ್ಯದ ಒತ್ತಡದ ನಡುವೆಯೂ ಕುಟುಂಬದಲ್ಲಿನ ಆಗು ಹೋಗುಗಳತ್ತ ಗಮನಹರಿಸುವುದು ಒಳ್ಳೆಯದು. ಹೂಡಿಕೆಯ ವ್ಯವಹಾರಗಳಲ್ಲಿ ಏಳಿಗೆಯು ಅಷ್ಟಾಗಿ ಇರುವುದಿಲ್ಲ. ಸೂಕ್ತ ವೈವಾಹಿಕ ಸಂಬಂಧ ದೊರೆಯುವ ಸಾಧ್ಯತೆ ಇದೆ, ಪ್ರಯತ್ನಶೀಲರಾಗಿ. ಹಿರಿಯರಿಂದ ನಿಮ್ಮ ವಂಶದದವರ ಬಗ್ಗೆ ತಿಳಿದುಕೊಳ್ಳುವಿರಿ. ಭೂಮಿ ಅಥವಾ ವಾಹನಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ. ಯಾವುದೇ ರೀತಿಯ ವ್ಯವಹಾರಕ್ಕೆ ನಿಮ್ಮ ಕೆಲಸದ ಗುಣಮಟ್ಟಕ್ಕೆ ಹೆಚ್ಚಿನ ಗಮನ ಬೇಕಾಗುತ್ತದೆ. ಈ ಸಮಯದಲ್ಲಿ ಸಾಲದ ವ್ಯವಹಾರವನ್ನು ಮಾಡಬೇಡಿ.

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ